ದಿವಂಗತ ಜೆ ಜಯಲಲಿತಾ ಅವರ ಮಾಜಿ ಆಪ್ತರಾಗಿದ್ದ ಶಶಿಕಲಾ ಅವರು ಫೆಬ್ರವರಿ 24 ರಂದು ಜಯಲಲಿತಾ ಅವರ 78 ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ರಾಮನಾಥಪುರಂ ಜಿಲ್ಲೆಯ ಕಮುತಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಹೊಸ ಪಕ್ಷದ ಧ್ವಜವನ್ನು ಅನಾವರಣಗೊಳಿಸಿದ್ದಾರೆ. ರಾಮನಾಥಪುರದ ಕಾರ್ಯಕ್ರಮದಲ್ಲಿ ಅವರು ಪ್ರದರ್ಶಿಸಿದ ಹೊಸ ಪಕ್ಷದ ಧ್ವಜವು ಕಪ್ಪು, ಬಿಳಿ ಮತ್ತು ಕೆಂಪು ಬಣ್ಣದ ಅಡ್ಡ ಪಟ್ಟೆಗಳನ್ನು ಹೊಂದಿದೆ, ದ್ರಾವಿಡ ಐಕಾನ್‌ಗಳಾದ ಸಿ ಎನ್ ಅಣ್ಣಾದೊರೈ, ಎಂ ಜಿ ರಾಮಚಂದ್ರನ್ ಮತ್ತು ಜೆ ಜಯಲಲಿತಾ ಅವರ ಭಾವಚಿತ್ರಗಳನ್ನು ಹೊಂದಿದೆ.

ಒಂದು ವಾರದೊಳಗೆ ಹೊಸ ಪಕ್ಷದ ಹೆಸರನ್ನು ಬಹಿರಂಗಪಡಿಸಲಾಗುವುದು. ನಾವು ಮೈತ್ರಿಗೆ ಸಂಬಂಧಿಸಿದಂತೆ ಮಾತುಕತೆ ನಡೆಸುತ್ತಿದ್ದೇವೆ ಮತ್ತು ಅದು ಉತ್ತಮ ನಿರ್ಧಾರದಲ್ಲಿ ಕೊನೆಗೊಳ್ಳುತ್ತದೆ.ಇದೇ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ನಿರ್ಣಾಯಕ ಪಾತ್ರ ವಹಿಸಲಿದೆ.ಎಂದು ಶಶಿಕಲಾ ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಕೆಲವೇ ತಿಂಗಳುಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಚುನಾವಣೆ ಸಮಯದಲ್ಲಿ ಹೊಸ ಪಕ್ಷ ಕಟ್ಟುವುದಾಗಿ ಘೋಷಿಸಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಶಶಿಕಲಾ, ತಮಿಳುನಾಡಿನ ಜನರಿಗೆ ನನ್ನ ಬಗ್ಗೆ ಚೆನ್ನಾಗಿ ತಿಳಿದಿದೆ. ಮತದಾರರನ್ನು ತಲುಪಲು ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.

ಚುನಾವಣೆ ಸಮೀಪಿಸುತ್ತಿದ್ದಂತೆ ಇನ್‌ಸ್ಟಂಟ್ ಇಡ್ಲಿ, ಇನ್‌ಸ್ಟಂಟ್ ಸಾಂಬಾರ್‌ನಂತೆ ಅನೇಕ ಹೊಸ ಪಕ್ಷಗಳು ಸ್ಥಾಪನೆಯಾಗುತ್ತಿವೆ. ರಾಜ್ಯದಲ್ಲಿ ಅಮ್ಮನ(ಜಯಲಲಿತಾ) ಆಡಳಿತವನ್ನು ಸ್ಥಾಪಿಸುತ್ತೇವೆ ಎಂದು ಹೇಳಿಕೊಳ್ಳುತ್ತಿರುವವರ ನಿಜವಾದ ಬಣ್ಣ ಈಗ ಬಯಲಾಗಿದೆ ಎಂದು ಎಎಂಎಂಕೆ ಪಕ್ಷದ ನಾಯಕ ಟಿ.ಟಿ.ವಿ. ದಿನಕರನ್ ವ್ಯಂಗಮಾಡಿದ್ದಾರೆ.






