ನಟ ವಿಜಯ್ ದೇವರಕೊಂಡ(Vijay Deverakonda) ಮತ್ತು ನಟಿ ರಶ್ಮಿಕಾ ಮಂದಣ್ಣ(Rashmika Mandanna )ಅವರ ಮದುವೆ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿದೆ. ಕುಟುಂಬದವರು ಹಾಗೂ ಆಪ್ತರು ಮಾತ್ರ ಈ ಮದುವೆಗೆ ಹಾಜರಾಗಿದ್ದರು.

ಅಭಿಮಾನಿಗಳನ್ನು ಆಹ್ವಾನಿಸಲು ಸಾಧ್ಯವಾಗದ ಕಾರಣ, ತಮ್ಮ ಸಂತೋಷವನ್ನು ಫ್ಯಾನ್ಸ್ ಜೊತೆ ಹಂಚಿಕೊಳ್ಳಲು ಈ ಜೋಡಿ ವಿಶೇಷ ನಿರ್ಧಾರ ಕೈಗೊಂಡಿದೆ. ಮಾರ್ಚ್ 1ರಂದು ದೇಶಾದ್ಯಂತ ಮಿಠಾಯಿ ತುಂಬಿದ ಟ್ರಕ್‌ಗಳನ್ನು ಕಳುಹಿಸಿ ಸಿಹಿ ವಿತರಣೆ ಮಾಡಲಾಗುತ್ತದೆ ಎಂದು ನಟ ವಿಜಯ್ ದೇವರಕೊಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ, ದೇಶದ ವಿವಿಧ ದೇವಸ್ಥಾನಗಳಲ್ಲಿ ಅನ್ನದಾನ ಮಾಡಲು ದೇಣಿಗೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಬೆಂಗಳೂರಿನ ಶಿವೋಹಂ ದೇವಸ್ಥಾನ, ಕೊಡಗಿನ ಪಾದಿ ಇಗ್ಗುತ್ತಪ್ಪ ದೇವಸ್ಥಾನ, ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನ ಮತ್ತು ಬೆಂಗಳೂರಿನ ರಾಧಾಕೃಷ್ಣ ದೇವಸ್ಥಾನಗಳಲ್ಲಿ ಅನ್ನದಾನ ನಡೆಯಲಿದೆ.

ಕರ್ನಾಟಕದ ಮೈಸೂರು, ಕೊಡಗು ಮತ್ತು ಬೆಂಗಳೂರಿನಲ್ಲಿ ಸಿಹಿ ಹಂಚಿಕೆ ಮಾಡಲಾಗುತ್ತದೆ. ಇತರ ರಾಜ್ಯಗಳಲ್ಲಿಯೂ ಕೆಲವು ದೇವಸ್ಥಾನಗಳಲ್ಲಿ ಅನ್ನದಾನ ಹಾಗೂ ಪ್ರಮುಖ ನಗರಗಳಲ್ಲಿ ಸಿಹಿ ವಿತರಣೆ ನಡೆಯಲಿದೆ. ಈ ನಿರ್ಧಾರಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ, ನೂತನ ದಂಪತಿಗೆ ಶುಭಾಶಯ ತಿಳಿಸಿದ್ದಾರೆ.







