• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ನಟಿಯರ ಅಸಭ್ಯ ವೀಡಿಯೊಗಳನ್ನು ಮಾಡಿ ಅದನ್ನು ಝೂಮ್ ಮಾಡಿ ಪ್ರಸಾರ ಮಾಡುವುದು ತಪ್ಪೆಂದು ಸಪ್ತಮಿ ಗೌಡ ಅಭಿಯಾನವನ್ನು ಆರಂಭ..

ಪ್ರತಿಧ್ವನಿ by ಪ್ರತಿಧ್ವನಿ
March 4, 2026
in Top Story, ಇದೀಗ, ಕರ್ನಾಟಕ, ಸಿನಿಮಾ
0
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!
Share on WhatsAppShare on FacebookShare on Telegram

ಬೆಂಗಳೂರು : ನಟಿಯರ ವೀಡಿಯೊ ಹಾಗೂ ಫೋಟೋಗಳನ್ನು ಅಸಭ್ಯವಾಗಿ ಚಿತ್ರೀಕರಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವುದು ಇತ್ತೀಚೆಗೆ ಹೆಚ್ಚಾಗಿದೆ.ಅಂತಹವರ ವಿರುದ್ಧ ʼಕಾಂತಾರʼ ಸಿನಿಮಾದ ನಟಿ ಸಪ್ತಮಿ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT
Belagavi holi Celebration : ಬೆಳಗಾವಿಯಲ್ಲಿ ರಂಗೇರಿದ ಹೋಳಿ ಹಬ್ಬ..! #happyholi #pratidhvani

 

ವಿಡಿಯೋ ಹಾಗೂ ಫೋಟೋಗಳನ್ನು ಅಸಭ್ಯವಾಗಿ ಚಿತ್ರೀಕರಿಸುವುದರ ವಿರುದ್ಧ ನಟಿ ಸಪ್ತಮಿ ಗೌಡ ಹೋರಾಟಕ್ಕೆ ಸ್ಯಾಂಡಲ್ ವುಡ್ ನಟ-ನಟಿಯರು ಬೆಂಬಲ ವ್ಯಕ್ತಪಡಿಸಿದ್ದಾರೆ. ನಟಿಯರ ಅಸಭ್ಯ ವೀಡಿಯೊಗಳನ್ನು ಮಾಡಿ ಅದನ್ನು ಝೂಮ್ ಮಾಡಿ ಪ್ರಸಾರ ಮಾಡುವುದು ತಪ್ಪೆಂದು ಸಪ್ತಮಿ ಗೌಡ ಅಭಿಯಾನವನ್ನು ಆರಂಭಿಸಿದ್ದಾರೆ.

Shreyas Patel Vs HD Revanna : ಲಕ್ಷ್ಮ್ಮಿ ನರಸಿಂಹಸ್ವಾಮಿ ರಥಕ್ಕೆ ಅಲಂಕಾರ ವಿಚಾರ #pratidhvani

ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಸಪ್ತಮಿ ಗೌಡ, “ಚಿತ್ರರಂಗದಲ್ಲಿರುವ ಮಹಿಳೆಯರಿಗಾಗಿ ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ” ಎಂದು ಹೇಳಿದ್ದಾರೆ. ಸಪ್ತಮಿಗೌಡ ಅವರ ಅಭಿಯಾನಕ್ಕೆ ಕನ್ನಡ ಚಿತ್ರರಂಗದ ನಟ-ನಟಿಯರು ಸಾಥ್ ಕೊಡುತ್ತಿದ್ದಾರೆ.

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವೀಡಿಯೊಗಳು ಮತ್ತು ಫೋಟೋಗಳನ್ನು ಅಸಭ್ಯ ಕೋನಗಳಿಂದ ಚಿತ್ರೀಕರಿಸಿ, ನಮ್ಮ ಕಲೆಗಿಂತ ನಮ್ಮ ದೇಹದ ಮೇಲೆ ಅನವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಮತ್ತೆ ಮತ್ತೆ ನಡೆಯುತ್ತಿದೆ. ಇಂತಹ ವರ್ತನೆ ಕೆಲವರಿಂದ ನಡೆಯುತ್ತಿರುವುದಾದರೂ ಅದು ಅಸಭ್ಯ, ಅವಮಾನಕಾರಿ ಮತ್ತು ಸಂಪೂರ್ಣವಾಗಿ ಅಸ್ವೀಕಾರಾರ್ಹವಾಗಿದೆ ಎಂದು ಫೋಸ್ಟ್ನಲ್ಲಿ ಅವರು ಬರೆದಿದ್ದಾರೆ.

 

Laxmi Hebbalkar  :  ಯಡಿಯೂರಪ್ಪಾ, ಅಪ್ಪಾಜಿ ಎಂದು ಹೊಗಳಿದ ಲಕ್ಷ್ಮಿ ಹೆಬ್ಬಾಳ್ಕರ್... #pratidhvani

ನಾವು ಇಲ್ಲಿ ಕಲೆಗಾಗಿ ಬಂದಿದ್ದೇವೆ. ನಾವು ಇಲ್ಲಿ ನಮ್ಮ ಸಿನಿಮಾಗಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್ ಮಾಡುವುದು ಮತ್ತು ಅಸಭ್ಯ ಕೋನಗಳಿಂದ ಬಳಸುವುದು ನಮ್ಮ ಗೌರವಕ್ಕೆ ಸ್ಪಷ್ಟ ಧಕ್ಕೆ. ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ ಮತ್ತು ಸಹಿಸುವುದಿಲ್ಲ. ಕಾರ್ಯಕ್ರಮಗಳನ್ನು ವರದಿ ಮಾಡುವವರು ವೃತ್ತಿಪರತೆ, ಮೂಲಭೂತ ಗೌರವ ಮತ್ತು ಶಿಸ್ತನ್ನು ಕಾಪಾಡಬೇಕು ಎಂದು ನಾವು ನಿರೀಕ್ಷಿಸುತ್ತೇವೆ. ಈ ಗಡಿರೇಖೆಯನ್ನು ಸ್ಪಷ್ಟವಾಗಿ ಎಳೆದು, ನಾವು ಒಟ್ಟಾಗಿ ನಿಂತಿದ್ದೇವೆ. ಇಂತಹ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೂ ನಾವು ಐಕ್ಯತೆಯಲ್ಲಿ ನಿಂತಿದ್ದೇವೆ. ಗೌರವವನ್ನು ಬೇಡುವ ನಮ್ಮ ಧ್ವನಿ ಮುಂದುವರೆಯುತ್ತದೆ ಎಂದು ತಮ್ಮ ಪೋಸ್ಟ್ ನಲ್ಲಿ ಹೇಳಿದ್ದಾರೆ.

Israel-Iran War : ಅಮೆರಿಕ ಜಗತ್ತಿನಲ್ಲೇ ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮಿದೆ..! #pratidhvani

 

ಅಭಿಯಾನ ಆರಂಭಿಸಿರುವ ಸಪ್ತಮಿ ಗೌಡ ಅವರ ಜೊತೆಗೆ ಚಿತ್ರರಂಗದ ನಟಿಯರೆಲ್ಲಾ ಒಂದಾಗಿ ಪ್ರತಿಭಟಿಸುವ ನಿರ್ಧಾರ ಮಾಡಿದ್ದಾರೆ. ನಟಿಯರಾದ ರಮ್ಯಾ, ರಕ್ಷಿತಾ ಪ್ರೇಮ್, ನಟ ಯುವ ರಾಜ್‌ಕುಮಾರ್ ಸೇರಿ ಹಲವರು ಪೋಸ್ಟ್ ಹಂಚಿಕೊಂಡು ಸಪ್ತಮಿ ಗೌಡ ಅವರಿಗೆ ಬೆಂಬಲ ಸೂಚಿಸಿದ್ದಾರೆ.

 

ನಟಿ ಸಪ್ತಮಿ ಗೌಡ ಹಂಚಿಕೊಂಡ ಪೋಸ್ಟ್‌ ಅನ್ನು ನಟಿಯರಾದ ಬೃಂದಾ ಆಚಾರ್ಯ, ಆಶಿಕಾ ರಂಗನಾಥ್, ರಿತನ್ಯಾ ವಿಜಯ್, ರಮ್ಯಾ, ರಕ್ಷಿತಾ ಪ್ರೇಮ್, ಸಂಜನಾ ಆನಂದ್, ಚೈತ್ರಾ ಜೈ ಆಚಾರ್, ವಾಸುಕಿ ವೈಭವ್, ನಟಿ ಅನುಪಮಾ ಗೌಡ, ನಟ ಯುವರಾಜ್‌ ಕುಮಾರ್ ಅವರು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹಂಚಿಕೊಂಡು ಅಂಥವರ ವಿರುದ್ಧ ಕಿಡಿ ಕಾರುತ್ತಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

Tags: Ashika RanganathCasting CautchKannada ActresspaparajiphotoPratidhvanipressmeetRakshitha Premramyasandalwood newsSapatami gowadavideoVideoography
Previous Post

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

Next Post

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada