• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಾನಪದದ ಹೆಸರಲ್ಲಿ ಅಶ್ಲೀಲ, ಅಸಭ್ಯ ಗೀತೆ ರಚಿಸಿ, ಹಾಡುವವರೇ ಎಚ್ಚರ..! : ಕಠಿಣ ಕ್ರಮ ಫಿಕ್ಸ್..

ಯಾವುದೇ ಸೆನ್ಸಾರ್ ಇಲ್ಲದೆ, ಶಾಲಾ ವಿದ್ಯಾರ್ಥಿನಿಯರನ್ನು, ಹರೆಯದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅಶ್ಲೀಲ, ಅಸಭ್ಯ ಶೀರ್ಷಿಕೆ ಮತ್ತು ಗೀತೆಗಳನ್ನು ರಚಿಸುತ್ತಿದ್ದಾರೆ ಎಂದು ದೂರು ನೀಡಿದ್ದ ಮೋಹನ್‌ ಕುಮಾರ್‌ ದಾನಪ್ಪ..

ಪ್ರತಿಧ್ವನಿ by ಪ್ರತಿಧ್ವನಿ
March 5, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜಾನಪದದ ಹೆಸರಲ್ಲಿ ಅಶ್ಲೀಲ, ಅಸಭ್ಯ ಗೀತೆ ರಚಿಸಿ, ಹಾಡುವವರೇ ಎಚ್ಚರ..! : ಕಠಿಣ ಕ್ರಮ ಫಿಕ್ಸ್..
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ಕಾನೂನು ಬಾಹಿರ ಅಶ್ಲೀಲ, ಅಸಭ್ಯ ಗೀತೆಗಳನ್ನು ರಚಿಸಿ ಸಾರ್ವಜನಿಕ ಸ್ಥಳಗಳಲ್ಲಿ ಹಾಡಿ ಮಹಿಳೆಯರ, ಮಕ್ಕಳ ಗೌರವಕ್ಕೆ ಹಾಗೂ ನಾಡಿನ ಸಂಸ್ಕೃತಿಗೆ ಧಕ್ಕೆ ಉಂಟು ಮಾಡುವ ಚಟುವಟಿಕೆಗಳು ನಡೆಯುತ್ತಿವೆ. ಈ ರೀತಿಯಾಗಿ ಅಸಭ್ಯ ಗೀತೆಗಳ ರಚನೆಕಾರರು ಹಾಗೂ ಗಾಯಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾ ನೀರೀಕ್ಷಕರಿಗೆ ಪತ್ರ ಬರೆದು ಆಗ್ರಹಿಸಿದ್ದರು.

ADVERTISEMENT
HD Kumaraswamy : ನಿಮ್ಗೆ ಕಾರ್ಖಾನೆ ಬೇಕು ಅಂದ್ರೆ ಪ್ರಮಾಣಿಕವಾಗಿ ನಡೆದುಕೊಳ್ಳಿ  #pratidhvani

ಆದರೆ ಇದೀಗ ಈ ಮನವಿ ಪತ್ರದಲ್ಲಿನ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ. ಸಲೀಂ ಅವರು ಇಂತಹ ಪ್ರಕರಣಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಘಟಕಾಧಿಕಾರಿಗಳಿಗೆ, ಪೊಲೀಸ್ ಠಾಣೆಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಹಾಗೂ ಹೆಚ್ಚಿನದ್ದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಕೆಲವು ವ್ಯಕ್ತಿಗಳು ಕನ್ನಡ ಭಾಷೆ, ಶಬ್ದಗಳನ್ನು ಕೆಟ್ಟದಾಗಿ ಬಳಸುತ್ತಿದ್ದರು. ಕಾನೂನು ಬಾಹಿರವಾಗಿ ಯಾವುದೇ ಸೆನ್ಸಾರ್ ಇಲ್ಲದೆ, ಶಾಲಾ ವಿದ್ಯಾರ್ಥಿನಿಯರನ್ನು, ಹರೆಯದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅಶ್ಲೀಲ, ಅಸಭ್ಯ ಶೀರ್ಷಿಕೆ ಮತ್ತು ಗೀತೆಗಳನ್ನು ರಚಿಸುತ್ತಿದ್ದಾರೆ.

ಅವುಗಳಲ್ಲಿ ಧ್ವಂದಾರ್ಥ ಸಂಭಾಷಣೆಗಳನ್ನು ರಚಿಸಿ ರಸ ಮಂಜರಿ ಕಾರ್ಯಕ್ರಮಗಳ ನೆಪದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ, ಜಾತ್ರೆ, ಉತ್ಸವ, ಧಾರ್ಮಿಕ ಮತ್ತು ಸಾಂಸ್ಕೃತಿಕ ಸಭೆ ಸಮಾರಂಭಗಳಲ್ಲಿ ಹಾಗೂ ಟಿವಿ ಮಾಧ್ಯಮಗಳಲ್ಲಿ ರಿಯಾಲಿಟಿ ಶೋ ಕಾರ್ಯಕ್ರಮಗಳಲ್ಲಿ ಅಶ್ಲೀಲತೆ ಪ್ರದರ್ಶಿಸಿ ಮಹಿಳೆಯರ ಮತ್ತು ಮಕ್ಕಳ ಘನತೆ ಗೌರವಕ್ಕೆ ಚ್ಯುತಿ ಉಂಟು ಮಾಡುತ್ತಿದ್ದಾರೆ.

ಮಹಿಳೆಯರ ತೇಜೋವಧೆ ಮಾಡುವುದು, ಯುವಜನತೆಯ ದಾರಿ ತಪ್ಪಿಸುತ್ತಾ, ಶಿಕ್ಷಣ ಪಡೆಯುವ ವಿದ್ಯಾರ್ಥಿಗಳ ಕಲಿಕೆಯ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತಿರುತ್ತಾರೆ, ಜಾನಪದ ಹೆಸರಿನಲ್ಲಿ ತಾಯಿ ಭಾಷೆಯನ್ನ ಅಶ್ಲೀಲಗೊಳಿಸಿ ರಚಿಸಿದ ಗೀತೆಗಳನ್ನು ಟ್ರ್ಯಾಕ್ಟ‌ರ್ ಹಾಗೂ ಇತರೆ ವಾಹನಗಳಲ್ಲಿ ಅಕ್ರಮವಾಗಿ ಧ್ವನಿವರ್ಧಕಗಳ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಹಾಕುವುದು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಮುಜುಗರ ಉಂಟು ಮಾಡಲಾಗುತ್ತಿದೆ.

ಇದನ್ನೂ ಓದಿ : ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

ಈ ಮೂಲಕ ಕನ್ನಡ ಭಾಷೆಯನ್ನು ಕನ್ನಡ ಸಂಸ್ಕೃತಿಯನ್ನು ಅವಮಾನಿಸಿದಂತಾಗುತ್ತಿರುತ್ತದೆ, ಇಂತಹ ಅಶ್ಲೀಲ ಭಾಷೆಗಳಿಂದ ಯುವಕರು ಪ್ರೇರಣೆಗೊಂಡು ಮಹಿಳೆಯರನ್ನು ಕೆಟ್ಟ ದೃಷ್ಟಿಯಿಂದ ನೋಡುವುದು. ಅತ್ಯಾಚಾರದಂತಹ ಅಪರಾಧಗಳಿಗೆ ಪ್ರಚೋದನೆ ನೀಡಿದಂತಾಗುತ್ತಿದೆ.

ರಾಜ್ಯದ ಯುವಜನತೆಯನ್ನು ದಿಕ್ಕು ತಪ್ಪಿಸಿ, ಸಾಮಾಜಿಕ ಸ್ವಾಸ್ಥ್ಯ, ಕನ್ನಡನಾಡು, ನುಡಿ ಭಾಷೆ, ಸಂಸ್ಕೃತಿಯನ್ನು ಹಾಳು ಮಾಡುತ್ತಿರುವ ಹಾಗೂ ಅಶ್ಲೀಲ ಗೀತೆಗಳನ್ನು ರಚಿಸುವ ವ್ಯಕ್ತಿಗಳ ವಿರುದ್ಧ ಬಿ.ಎನ್.ಎಸ್ ಕಾಯ್ದೆಯ ಸೆಕ್ಷನ್ 296 ರಡಿಯಲ್ಲಿ ಹಾಗೂ ಐಟಿ ಕಾಯ್ದೆ-2000 ಸೇರಿದಂತೆ ವಿವಿಧ ಕಾನೂನಿಡಿಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.

ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ವಿಡಿಯೋಗಳನ್ನು ಅಳಿಸಿ ನಾಡಿನ ಸಂಸ್ಕೃತಿ, ಭಾಷೆಯನ್ನು ಹಾಗೂ ಮಹಿಳೆಯರ ಮತ್ತು ಮಕ್ಕಳ ಗೌರವ, ಅವರ ಹಕ್ಕುಗಳನ್ನು ರಕ್ಷಿಸುವಂತೆ ಬಿ.ಎನ್.ಎಸ್. 296 ರಡಿಯಲ್ಲಿ ಆಯಾ ಠಾಣೆ ವ್ಯಾಪ್ತಿಯಲ್ಲಿ ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಮೋಹನ್‌ ಕುಮಾರ್‌ ದಾನಪ್ಪ ಬರೆದ ಪತ್ರದಲ್ಲಿ ಈ ಎಲ್ಲ ಅಂಶಗಳನ್ನು ಉಲ್ಲೇಖಿಸಿ ರಾಜ್ಯದ ಡಿಜಿ ಮತ್ತು ಐಜಿಪಿರವರಿಗೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರು ಪತ್ರ ಬರೆದಿದ್ದರು.

ಈ ಪ್ರತದಲ್ಲಿನ ಎಲ್ಲ ಅಂಶಗಳನ್ನು ಗಂಭೀರವಾಗಿ ಪರಿಗಣಿಸಿರುವ ಡಿಜಿ ಹಾಗೂ ಐಜಿಪಿ ಸುತ್ತೋಲೆ ಹೊರಡಿಸುವ ಮೂಲಕ ಜಾನಪದದ ಹೆಸರಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿ ಹಾಗೂ ಭಾಷೆಯನ್ನು ಅವಹೇಳನ ಮಾಡುವವರಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

Tags: BNSDGP M A SalimGovernment of Karnatakakannada folk songskannada janapada songsKarnataka PoliceKarnataka PoliceStationslegal actionMohan Kumar DanappaPolice Complaint Authority memberPratidhvaniSchool Childernssinging obsceneUttarakarnatak Newsvulgar songs
Previous Post

ಖಮೇನಿ ಹತ್ಯೆ ಖಂಡಿಸಿದ ಭಾರತ : ಇರಾನ್‌ ರಾಯಬಾರಿ ಕಚೇರಿ ಬುಕ್‌ನಲ್ಲಿ ವಿಕ್ರಂ ಮಿಸ್ರಿ ಬರೆದಿದ್ದೇನು..?

Next Post

ರಾಜ್ಯಸಭೆ ಸ್ಪರ್ಧೆಯಲ್ಲಿ ಸಿಎಂ ನಿತೀಶ್‌ ಕುಮಾರ್ : ಬಿಜೆಪಿ ನಾಯಕರ ಮಾಸ್ಟರ್‌ ಪ್ಲ್ಯಾನ್‌ ಏನು..?

Related Posts

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ
ರಾಜಕೀಯ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

by ಪ್ರತಿಧ್ವನಿ
May 2, 2026
0

ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಸರ್ಕಾರ ಅಧಿಕೃತವಾಗಿ ಅಮಾನ್ಯಗೊಳಿಸಿರುವುದು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ...

Read moreDetails
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
Next Post
ರಾಜ್ಯಸಭೆ ಸ್ಪರ್ಧೆಯಲ್ಲಿ ಸಿಎಂ ನಿತೀಶ್‌ ಕುಮಾರ್ : ಬಿಜೆಪಿ ನಾಯಕರ ಮಾಸ್ಟರ್‌ ಪ್ಲ್ಯಾನ್‌ ಏನು..?

ರಾಜ್ಯಸಭೆ ಸ್ಪರ್ಧೆಯಲ್ಲಿ ಸಿಎಂ ನಿತೀಶ್‌ ಕುಮಾರ್ : ಬಿಜೆಪಿ ನಾಯಕರ ಮಾಸ್ಟರ್‌ ಪ್ಲ್ಯಾನ್‌ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada