• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬ್ರ್ಯಾಂಡ್ ಕರ್ನಾಟಕ ಮೂಲಕ 4,000 ಎಂಎಸ್‌ಎಂಇಗಳಿಗೆ ಬ್ರ್ಯಾಂಡಿಂಗ್–ಮಾರುಕಟ್ಟೆ ಬೆಂಬಲ: ರೋಹಿಣಿ ಸಿಂಧೂರಿ

ಪ್ರತಿಧ್ವನಿ by ಪ್ರತಿಧ್ವನಿ
March 5, 2026
in ಕರ್ನಾಟಕ
0
ಬ್ರ್ಯಾಂಡ್ ಕರ್ನಾಟಕ ಮೂಲಕ 4,000 ಎಂಎಸ್‌ಎಂಇಗಳಿಗೆ ಬ್ರ್ಯಾಂಡಿಂಗ್–ಮಾರುಕಟ್ಟೆ ಬೆಂಬಲ: ರೋಹಿಣಿ ಸಿಂಧೂರಿ
Share on WhatsAppShare on FacebookShare on Telegram

ಬೆಂಗಳೂರು, ಮಾರ್ಚ್ 5: ‘ಬ್ರ್ಯಾಂಡ್ ಕರ್ನಾಟಕ’ ಕಾರ್ಯಕ್ರಮದಡಿ ಮಹಿಳಾ ನೇತೃತ್ವದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳಿಗೆ (ಎಂಎಸ್‌ಎಂಇ) ವಿಶೇಷ ಆದ್ಯತೆ ನೀಡಲಾಗುವುದು ಎಂದು ವಾಣಿಜ್ಯ ಮತ್ತು ಕೈಗಾರಿಕೆ (ಎಂಎಸ್‌ಎಂಇ, ಗಣಿ, ಜವಳಿ ಮತ್ತು ಸಕ್ಕರೆ) ಇಲಾಖೆಯ ಕಾರ್ಯದರ್ಶಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ADVERTISEMENT

 

ನಗರದಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ಆಯೋಜಿಸಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸುಮಾರು 4,000 ಎಂಎಸ್‌ಎಂಇಗಳಿಗೆ ಬ್ರ್ಯಾಂಡಿಂಗ್, ಉತ್ಪನ್ನಗಳ ಸ್ಥಾನೀಕರಣ, ಗುಣಮಟ್ಟದ ಪ್ರಮಾಣೀಕರಣ ಹಾಗೂ ಮಾರುಕಟ್ಟೆ ಪ್ರವೇಶಕ್ಕೆ ಅಗತ್ಯ ಬೆಂಬಲ ಒದಗಿಸಲಾಗುವುದು ಎಂದು ಹೇಳಿದರು.

ಸ್ಥಳೀಯ ಉದ್ದಿಮೆಗಳು ದೇಶೀಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಬೆಳೆಯಲು ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಜಾಗತಿಕ ಮಟ್ಟದಲ್ಲಿ ಕರ್ನಾಟಕದ ಉತ್ಪನ್ನಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಈ ಉಪಕ್ರಮವು ಸಹಕಾರಿಯಾಗಲಿದೆ ಎಂದು ಅವರು ವಿವರಿಸಿದರು.

ರಾಜ್ಯದಲ್ಲಿ ಸುಮಾರು 25 ಲಕ್ಷ ಎಂಎಸ್‌ಎಂಇಗಳಿದ್ದು, ಇವು ರಾಜ್ಯದ ಕೈಗಾರಿಕಾ ಹಾಗೂ ಉದ್ಯೋಗ ಸೃಷ್ಟಿಯ ಬೆನ್ನೆಲುಬಾಗಿವೆ. ಇದರಲ್ಲಿ ಶೇ.25 ರಷ್ಟು ಉದ್ದಿಮೆಗಳನ್ನು ಮಹಿಳೆಯರೇ ಮುನ್ನಡೆಸುತ್ತಿರುವುದು ಆರ್ಥಿಕ ಚಟುವಟಿಕೆಗಳಲ್ಲಿ ಮಹಿಳೆಯರ ಪಾತ್ರ ಹೆಚ್ಚುತ್ತಿರುವುದನ್ನು ತೋರಿಸುತ್ತದೆ ಎಂದು ಅವರು ಹೇಳಿದರು.

 

ಉತ್ಪನ್ನಗಳ ಗುಣಮಟ್ಟ ಸುಧಾರಣೆ, ಬ್ರ್ಯಾಂಡಿಂಗ್ ಬಲಪಡಿಸುವಿಕೆ ಹಾಗೂ ಮಾರುಕಟ್ಟೆ ವಿಸ್ತರಣೆಗೆ ‘ಬ್ರ್ಯಾಂಡ್ ಕರ್ನಾಟಕ’ ಕಾರ್ಯಕ್ರಮವು ಎಂಎಸ್‌ಎಂಇಗಳಿಗೆ ವ್ಯವಸ್ಥಿತ ಬೆಂಬಲ ನೀಡಲಿದೆ. ಈ ಯೋಜನೆ ರಾಜ್ಯದ ‘ಒಂದು ಜಿಲ್ಲೆ, ಒಂದು ಉತ್ಪನ್ನ’ (ODOP) ಯೋಜನೆಯೊಂದಿಗೆ ಸಂಯೋಜನೆಯಾಗಿದ್ದು, ಪ್ರಾದೇಶಿಕ ಉತ್ಪನ್ನಗಳ ಉತ್ತೇಜನಕ್ಕೆ ನೆರವಾಗಲಿದೆ ಎಂದರು.

ಇದೇ ಸಂದರ್ಭದಲ್ಲಿ ‘ರ‍್ಯಾಂಪ್’ (RAMP) ಯೋಜನೆಯಡಿ ಮಹಿಳಾ ನೇತೃತ್ವದ 240 ಎಂಎಸ್‌ಎಂಇಗಳಿಗೆ ವಿಶೇಷ ವೇಗವರ್ಧಕ ಕಾರ್ಯಕ್ರಮಗಳನ್ನು ನಡೆಸಲಾಗುವುದು. ತಲಾ ಆರು ತಿಂಗಳ ಅವಧಿಯ 12 ಬ್ಯಾಚ್‌ಗಳಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸಲು ‘ಮಹಿಳಾ ಎಂಎಸ್‌ಎಂಇ ಹ್ಯಾಕಥಾನ್’ ಕೂಡ ಆಯೋಜಿಸಲಾಗುತ್ತಿದ್ದು, ವಿಜೇತ 12 ಉದ್ದಿಮೆಗಳಿಗೆ ತಲಾ 10 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

 

ಈ ಯೋಜನೆಗಳ ಅನುಷ್ಠಾನಕ್ಕಾಗಿ ಒಟ್ಟು 6.40 ಕೋಟಿ ರೂ. ಅನುದಾನವನ್ನು ಮೀಸಲಿಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಮೈಸೂರು ಅರಮನೆಯ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಮಾತನಾಡಿ, ಮಹಿಳೆಯರು ಇಂದು ಮಾತ್ರವಲ್ಲ, ಭವಿಷ್ಯದ ಬಗ್ಗೆ ಯೋಚಿಸುವ ಗುಣ ಹೊಂದಿದ್ದಾರೆ. ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯತ್ತ ಎಲ್ಲರೂ ಗಮನಹರಿಸಬೇಕು ಎಂದು ಹೇಳಿದರು.

 

ನಟಿ ಸುಧಾ ಬೆಳವಾಡಿ ಹಾಗೂ ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: pratidavaniRajamatha pramoda deviRohini SindhuriSudha Belavadi
Previous Post

ನಿಮ್ಹಾನ್ಸ್‌ನಲ್ಲಿ ಅಂತರಾಷ್ಟ್ರೀಯ ಕ್ಲಿನಿಕಲ್ ನ್ಯೂರೋ ಸೈಕೋಲಾಜಿ ಸಮ್ಮೇಳನಕ್ಕೆ ಚಾಲನೆ

Next Post

ಕನ್ನಡ ಗೆಳೆಯರ ಬಳಗದ ಸಂಚಾಲಕ ಬ.ಹ.ಉಪೇಂದ್ರ ನಿಧನ

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post
ಕನ್ನಡ ಗೆಳೆಯರ ಬಳಗದ ಸಂಚಾಲಕ ಬ.ಹ.ಉಪೇಂದ್ರ ನಿಧನ

ಕನ್ನಡ ಗೆಳೆಯರ ಬಳಗದ ಸಂಚಾಲಕ ಬ.ಹ.ಉಪೇಂದ್ರ ನಿಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada