• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೋಶಿಯಲ್ ಮೀಡಿಯಾ ನಿಷೇಧದ ‘ಗಿಮಿಕ್’ ಹಾಸ್ಯಾಸ್ಪದ! : ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ವಾಗ್ದಾಳಿ..

ಸಿದ್ದರಾಮಯ್ಯ ಮಂಡಿಸಿರುವ 17ನೇ ಬಜೆಟ್ ಕರ್ನಾಟಕವನ್ನು ಅಭಿವೃದ್ಧಿಯ ಹಾದಿಯಿಂದ ಮತ್ತಷ್ಟು ದೂರಕ್ಕೆ ತಳ್ಳಿ, 'ಸಾಲದ ಸುಳಿ'ಗೆ ಸಿಲುಕಿಸುತ್ತಿರುವ ಕರಾಳ ಅಧ್ಯಾಯ ಎಂದ ಬಿವೈವಿ..

ಪ್ರತಿಧ್ವನಿ by ಪ್ರತಿಧ್ವನಿ
March 6, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಸೋಶಿಯಲ್ ಮೀಡಿಯಾ ನಿಷೇಧದ ‘ಗಿಮಿಕ್’ ಹಾಸ್ಯಾಸ್ಪದ! : ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ವಾಗ್ದಾಳಿ..
Share on WhatsAppShare on FacebookShare on Telegram

ಬೆಂಗಳೂರು :  ಸಿಎಂ ಸಿದ್ದರಾಮಯ್ಯ ದಾಖಲೆ ದಿನಗಳವರೆಗೆ ಮುಖ್ಯಮಂತ್ರಿಯಾಗಿ ತಾವು ಪಡೆದ ಅನುಭವವನ್ನು ಸಂಪೂರ್ಣ ನೀರಿನಲ್ಲಿ ಹೋಮ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ADVERTISEMENT
Siddaramaiah Budget ಖಂಡಿಸಿ ಚಾರ್ಜ್‌ಶೀಟ್ ರಿಲೀಸ್‌ ಮಾಡಿದ Nikhil Kumaraswamy #pratidhvani

ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಕುರಿತು ವಿಜಯೇಂದ್ರ ಕಿಡಿ ಕಾರಿದ್ದಾರೆ, ಅಬಕಾರಿ ನೀತಿಯಲ್ಲಿ ಮದ್ಯದ ಕಂಪನಿಗಳಿಗೆ ಬೆಲೆ ನಿರ್ಧರಿಸುವ ಅಧಿಕಾರ ನೀಡಿರುವುದು ‘ಲಿಕ್ಕರ್ ಲಾಬಿ’ಗೆ ಈ ಕಾಂಗ್ರೆಸ್ ಸರ್ಕಾರ ಶರಣಾಗಿರುವುದಕ್ಕೆ ಸಾಕ್ಷಿ. ಇನ್ನೊಂದೆಡೆ, ಶಾಲೆಗಳ ಪೀಠೋಪಕರಣಕ್ಕೆ ಕೇವಲ 25 ಕೋಟಿ ರೂ. ನೀಡಿ, ಸೋಶಿಯಲ್ ಮೀಡಿಯಾ ನಿಷೇಧದಂತಹ ‘ಗಿಮಿಕ್’ ಘೋಷಣೆ ಮಾಡುತ್ತಿರುವುದು ಹಾಸ್ಯಾಸ್ಪದ! ಎಂದು ವಾಗ್ದಾಳಿ ನಡೆಸಿದ್ದಾರೆ.

ಸೋಷಿಯಲ್‌ ಮೀಡಿಯಾ ನಿಷೇಧವನ್ನು ಹೇಗೆ ಮಾಡುತ್ತದೆ ಎಂದು ಹೇಳದೆ, ತನ್ನ ಕಾರ್ಯವ್ಯಾಪ್ತಿಯ ಹೊರಗಿರುವುದನ್ನು ಹೇಳದೆ, ತಾಂತ್ರಿಕವಾಗಿ ಜಾರಿಗೊಳಿಸಲು ಅಸಾಧ್ಯವಾದ ಇಂತಹ ಹಗಲುಗನಸಿನ ಘೋಷಣೆಗಳು ಕೇವಲ ಜನರ ಗಮನವನ್ನು ಈ ರಾಜ್ಯ ಸರ್ಕಾರದ ಆಡಳಿತ ವೈಫಲ್ಯದಿಂದ ಬೇರೆಡೆಗೆ ಸೆಳೆಯುವ ತಂತ್ರವಷ್ಟೇ! ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಮೂಲಸೌಕರ್ಯ ನೀಡಲು ಯೋಗ್ಯತೆ ಇಲ್ಲದ ಸರ್ಕಾರ, ಮಕ್ಕಳ ಮೇಲಿನ ಕಾಳಜಿಯ ನಾಟಕವಾಡುತ್ತಾ ‘ಬುರುಡೆ’ ಘೋಷಣೆಗಳ ಮೂಲಕ ಪೋಷಕರ ಹಾದಿ ತಪ್ಪಿಸುತ್ತಿದೆ. ಬೆಲೆ ಕುಸಿತದಿಂದ ಕಂಗಾಲಾಗಿರುವ ನಮ್ಮ ಅನ್ನದಾತ ರೈತರಿಗೆ ಮಾರುಕಟ್ಟೆ ಮಧ್ಯಪ್ರವೇಶಕ್ಕೆ ಕೇವಲ 100 ಕೋಟಿ ರೂ ನೀಡಿರುವುದು ರೈತರ ಮೂಗಿಗೆ ತುಪ್ಪ ಸವರುವ ಕೆಲಸ! ತನ್ನ ಆಡಳಿತ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಪ್ರತಿ ಬಾರಿಯಂತೆ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಸಿದ್ದರಾಮಯ್ಯನವರಿಗೆ ಹವ್ಯಾಸವಾಗಿಬಿಟ್ಟಿದೆ ಎಂದು ಜರಿದಿದ್ದಾರೆ.

ಇದನ್ನೂ ಓದಿ : BUDGET 2026 – ಶಿಕ್ಷಕರ ಭರ್ತಿ, ಖಾಲಿ ಹುದ್ದೆಗಳ ನೇಮಕಾತಿ : ಶಿಕ್ಷಣ ಇಲಾಖೆಗೆ ಬಜೆಟ್‌ನಲ್ಲಿ ದೊರೆತಿದ್ದೇನು..?

ಸಿದ್ದರಾಮಯ್ಯ ಮಂಡಿಸಿರುವ 17ನೇ ಬಜೆಟ್ ಕರ್ನಾಟಕವನ್ನು ಅಭಿವೃದ್ಧಿಯ ಹಾದಿಯಿಂದ ಮತ್ತಷ್ಟು ದೂರಕ್ಕೆ ತಳ್ಳಿ, ‘ಸಾಲದ ಸುಳಿ’ಗೆ ಸಿಲುಕಿಸುತ್ತಿರುವ ಕರಾಳ ಅಧ್ಯಾಯವಾಗಿದೆ. ಇವರ ಪಂಚ ಗ್ಯಾರಂಟಿಗಳಿಗೆ ಪ್ರತ್ಯೇಕ ಅನುದಾನ ನಿಗದಿ ಮಾಡದೆ ಆಯಾ ಇಲಾಖೆಗಳ ಅನುದಾನವನ್ನೇ ಕಡಿತ ಮಾಡಿ ಪಂಚ ಗ್ಯಾರಂಟಿಗೆ ಜೋಡಿಸಲಾಗಿದೆ. ಪರಿಣಾಮವಾಗಿ ಒಂದೆಡೆ ಆಯಾ ಇಲಾಖೆಗಳ ಅಭಿವೃದ್ಧಿ ಯೋಜನೆಗಳಿಗೆ ಪೆಟ್ಟು ಬೀಳುತ್ತದೆ. ಮತ್ತೊಂದೆಡೆ ಪರಿಶಿಷ್ಟ ಜಾತಿ ಹಾಗೂ ಪಂಗಡದ ಜನರ ಅಭಿವೃದ್ಧಿಗಾಗಿ ಮೀಸಲಿರುವ ವಿಶೇಷ ಕಾಯ್ದೆಯ ಅನುದಾನವನ್ನು ಯಥೇಚ್ಛವಾಗಿ ಗ್ಯಾರಂಟಿಗೆ ಡೈವರ್ಟ್ ಮಾಡಲು ಸರಕಾರ ತನ್ನ ಹುನ್ನಾರವನ್ನು ಮುಂದುವರಿಸಿದೆ ಎಂದು ಆರೋಪಿಸಿದ್ದಾರೆ.

ಬಂಡವಾಳ ವೆಚ್ಚದಲ್ಲಿ ಅಲ್ಪ ಏರಿಕೆ ಮಾಡಿ, ಅಭಿವೃದ್ಧಿಗೆ ಬ್ರೇಕ್ ಹಾಕಿರುವ ಈ ಕಾಂಗ್ರೆಸ್ ಸರ್ಕಾರ, ರಾಜ್ಯದ ಭವಿಷ್ಯವನ್ನು ಅಡವಿಟ್ಟಿದೆ. ಸಾರ್ವಜನಿಕ ಸಾಲ ಒಟ್ಟು 8.24 ಲಕ್ಷ ಕೋಟಿ ರೂ.ಗೆ ಏರಿಸಿರುವುದು ಪ್ರತಿ ಕನ್ನಡಿಗನಿಗೆ ಈ ಕಾಂಗ್ರೆಸ್ ಸರ್ಕಾರ ನೀಡಿರುವ ‘ಉಡುಗೊರೆ’!. ಇದು ಪ್ರಗತಿಪರ ಬಜೆಟ್ ಅಲ್ಲ, ಇದು ಕರ್ನಾಟಕದ ಪಾಲಿಗೆ ಮತ್ತೊಂದು ಪೊಳ್ಳು ಭರವಸೆಯ ಬಜೆಟ್. ಕಾಂಗ್ರೆಸ್ ಅಧಿಕಾರಕ್ಕೆ ಬಂದ 3 ವರ್ಷದಿಂದ ರಾಜ್ಯದ ಪ್ರಗತಿ ರಥಕ್ಕೆ ಹಾಕಿರುವ ಬ್ರೇಕ್ ಅನ್ನು ಈ ಬಾರಿಯೂ ತೆಗೆದಿಲ್ಲ ಅನ್ನುವುದೇ ವಾಸ್ತವ! ಎಂದು ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ.

ಸತತ ಮೂರನೇ ವರ್ಷವೂ ಈ ಸರ್ಕಾರ ‘ರಾಜಸ್ವ ಕೊರತೆಯ’ (Revenue Deficit) ಬಜೆಟ್ ಮಂಡಿಸಿರುವುದು ಆರ್ಥಿಕ ದಿವಾಳಿತನದ ಸಂಕೇತ. 22,957 ಕೋಟಿ ರೂ. ಕೊರತೆಯನ್ನು ನೀಗಿಸಲು ಮತ್ತು ದೈನಂದಿನ ತುಪ್ಪ ತಿನ್ನಲು ಸಾಲ ಮಾಡುತ್ತಿರುವ ಈ ನಡೆ ಅಪಾಯಕಾರಿ. ಸಂಪತ್ತು ಸೃಜಿಸದ, ಕೇವಲ ಅನುಭೋಗಿ ವೆಚ್ಚಕ್ಕೆ (Revenue Expenditure) 1.32 ಲಕ್ಷ ಕೋಟಿ ರೂ. ಹೊಸ ಸಾಲ ಮಾಡುವುದು ಮುಂದಿನ ಪೀಳಿಗೆಗೆ ಮಾಡುವ ದ್ರೋಹವಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗೆ 44,632 ಕೋಟಿ ರೂಪಾಯಿ ಮೀಸಲಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಈ ಸರ್ಕಾರ, ದಲಿತರ ಕಾಲೋನಿಗಳ ಅಭಿವೃದ್ಧಿಗೆ ಮತ್ತು ಮೂಲಸೌಕರ್ಯಕ್ಕೆ ನೀಡಿರುವುದು ಕೇವಲ 1,332 ಕೋಟಿ ರೂ. ಮಾತ್ರ! ಅಂದರೆ ಒಟ್ಟು ನಿಧಿಯ ಶೇ. 97ರಷ್ಟು ಹಣ ಬಡಾವಣೆಗಳ ಅಭಿವೃದ್ಧಿಗೆ ಬಳಕೆಯಾಗುತ್ತಿಲ್ಲ. ದಲಿತರ ಅಭಿವೃದ್ಧಿಯ ಹೆಸರಿನಲ್ಲಿ ಬಜೆಟ್ ಗಾತ್ರ ಹೆಚ್ಚಿಸಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ, ವಾಸ್ತವದಲ್ಲಿ ಆ ಹಣವನ್ನು ತಮ್ಮ ಗ್ಯಾರಂಟಿ ಸಾಲ ತೀರಿಸಲು ಬಳಸುತ್ತಿದ್ದಾರೆ. ಇದು ದಲಿತರಿಗೆ ನೀಡಿದ ‘ಭಾಗ್ಯ’ವಲ್ಲ, ಇದು ಅವರ ಭವಿಷ್ಯಕ್ಕೆ ಮಾಡಿರುವ ‘ದ್ರೋಹ’ ವಲ್ಲವೇ ಮುಖ್ಯಮಂತ್ರಿಗಳೇ? ಎಂದು ವಿಜಯೇಂದ್ರ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

Tags: B Y VijayendraBasic Needsbjp karnataka newsBJP leadersbudget 2026 karnatakaCM Siddramaiahcongress karnatakaDalit CommunityDevelopment ProjectsExcise departmentGovernment of KarnatakaGovernment Schoolsguarantee schemesParentsPratidhvaniSC Communitysiddaramaiah budget 2026Social Media BanST Community
Previous Post

Khameneiಪರ Indiaದಲ್ಲಿ ಪ್ರತಿಭಟನೆ ಮಾಡೋದು ಬೇಡ

Next Post

ಬಿಜೆಪಿಯವರಿಂದ ಕೆಲಸ ತಗೊಂಡು ನಮ್ಮ ಎದೆ ಮೇಲೆ ಕೂತಿದ್ದೀರಿ : ಗುತ್ತಿಗೆದಾರರ ವಿರುದ್ಧ ಡಿಕೆಶಿ ಕಿಡಿ..

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
ಬಿಜೆಪಿಯವರಿಂದ ಕೆಲಸ ತಗೊಂಡು ನಮ್ಮ ಎದೆ ಮೇಲೆ ಕೂತಿದ್ದೀರಿ : ಗುತ್ತಿಗೆದಾರರ ವಿರುದ್ಧ ಡಿಕೆಶಿ ಕಿಡಿ..

ಬಿಜೆಪಿಯವರಿಂದ ಕೆಲಸ ತಗೊಂಡು ನಮ್ಮ ಎದೆ ಮೇಲೆ ಕೂತಿದ್ದೀರಿ : ಗುತ್ತಿಗೆದಾರರ ವಿರುದ್ಧ ಡಿಕೆಶಿ ಕಿಡಿ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada