• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜನರ ಆಶೀರ್ವಾದವಿದ್ರೆ ಮಾತ್ರ ಸಿಎಂ ಆಗೋಕೆ ಸಾಧ್ಯ : ಸಿದ್ದರಾಮಯ್ಯ ಕೌಂಟರ್‌ ಯಾರಿಗೆ..?

ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ, ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಂಬುವವನು ನಾನು - ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
March 7, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಜನರ ಆಶೀರ್ವಾದವಿದ್ರೆ ಮಾತ್ರ ಸಿಎಂ ಆಗೋಕೆ ಸಾಧ್ಯ : ಸಿದ್ದರಾಮಯ್ಯ ಕೌಂಟರ್‌ ಯಾರಿಗೆ..?
Share on WhatsAppShare on FacebookShare on Telegram

ಮೈಸೂರು : ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ. ಸಮಾಜದ ಬಡವರು ಹಾಗೂ ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಕಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲೆಯ ಪಿಲ್ಲಹಳ್ಳಿ ಗ್ರಾಮದಲ್ಲಿಂದು ಆಯೋಜಿಸಲಾಗಿದ್ದ ಶ್ರೀ ಆದಿಶಕ್ತತ್ಮಕ ದಂಡಿಮಾರಮ್ಮ ದೇವಾಲಯದ ಪ್ರತಿಷ್ಠಾಪನೆ ಮಹೋತ್ಸವ ಹಾಗೂ ಕುಂಭಕಳಶದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ADVERTISEMENT
Budget 2026 : ಬಜೆಟ್ ಮಂಡಿಸ್ತೀರಾ ಅಂದ್ರೆ ಸಿದ್ರಾಮಯ್ಯ ಶಾಕಿಂಗ್ ಮಾತು  #pratidhvani

ದೇವರು ದೇಗುಲಗಳಲ್ಲಿ ಇರುತ್ತಾರೆಂಬುದು ನಮ್ಮ ನಂಬಿಕೆ. ದೇವರ ಆರಾಧನೆಯಿಂದ ಒಳಿತಾಗುತ್ತದೆ ಎಂಬ ನಂಬಿಕೆಯನ್ನು ನಾನು ವಿರೋಧಿಸುವುದಿಲ್ಲ. ಆದರೆ ದೇವರು ಎಲ್ಲೆಡೆಯೂ ಇದ್ದಾನೆ ಎಂದು ನಾನು ನಂಬುವವನು ಮತ್ತು ಆಚರಿಸುವವನು ಎಂದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

1978 ರಲ್ಲಿ ತಾಲ್ಲೂಕು ಅಭಿವೃದ್ಧಿ ಮಂಡಳಿಯ ಪ್ರಥಮ ಬಾರಿಗೆ ಚುನಾವಣೆಯಲ್ಲಿ ಸ್ಪರ್ದಿಸಿದಾಗ ಇಲ್ಲಿನ ಜನರ ಆಶೀರ್ವಾದ ನನಗೆ ದೊರೆತಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಜನರ ಸಹಕಾರ ದೊರೆಯಿತು.ಮೈಸೂರು ತಾಲ್ಲೂಕಿನ ಚಾಮುಂಡೇಶ್ವರಿ ಹಾಗೂ ವರುಣಾ ಕ್ಷೇತ್ರದ ಜನರ ಆಶೀರ್ವಾದದಿಂದ ಈವರೆಗೆ 8 ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದು, ರಾಜ್ಯದ ಮುಖ್ಯಮಂತ್ರಿಯಾಗಲು ಸಾಧ್ಯವಾಗಿದೆ. ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ ಎಂದು ಪುನರುಚ್ಚರಿಸಿದ್ದಾರೆ.

ಇದನ್ನೂ ಓದಿ : ಇಸ್ರೇಲ್–ಇರಾನ್ ಸಂಘರ್ಷ : ಸುದ್ದಿ ಚಾನೆಲ್‌ಗಳ ಟಿಆರ್‌ಪಿ ಪ್ರಕಟಣೆ ಸ್ಥಗಿತ

ಪಿಲ್ಲಹಳ್ಳಿ ಜನರ ಪ್ರೀತಿಯಿಂದಾಗಿ ಇಲ್ಲಿನ ದೇವಸ್ಥಾನದ ಉದ್ಘಾಟನೆಗೆ ಆಗಮಿಸಿದ್ದೇನೆ. 1978 ರಿಂದ ಇಂದಿನವರೆಗೂ ಹಾಗೂ ಮುಂದೆಯೂ ಈ ಭಾಗದ ಜನರ ಸಹಕಾರ ದೊರೆಯುವ ವಿಶ್ವಾಸವಿದೆ. ದಂಡಿಮಾರಮ್ಮ ದೇವಸ್ಥಾನಕ್ಕೆ ಬಾಲ್ಯದಿಂದಲೂ ಭೇಟಿ ನೀಡುತ್ತಿದ್ದ ನೆನಪನ್ನು ಮೆಲುಕು ಹಾಕಿ, ದೇವರನ್ನು ಕಷ್ಟ ಬಂದಾಗ ನೆನಪಿಸಿಕೊಳ್ಳದೇ, ಎಲ್ಲ ಸಂದರ್ಭದಲ್ಲಿಯೂ ಸ್ಮರಿಸಬೇಕು. ‘ದೇವನೊಬ್ಬ ನಾಮ ಹಲವು’ ಎಂದು ನಂಬಿ, ದೇವರು ನಮ್ಮೊಳಗೂ ಸೇರಿದಂತೆ ಎಲ್ಲ ಕಡೆಯೂ ಇದ್ದಾನೆ. ಎಲ್ಲರಿಗೂ ಒಳಿತನ್ನು ಬಯಸುವುದೇ ಮುಖ್ಯ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಯಾವೊಂದು ಧರ್ಮ ಜಾತಿಗಳು ಪ್ರೀತಿಯನ್ನು ಬೋಧಿಸುತ್ತದೆಯೇ ಹೊರತು ದ್ವೇಷಿಸುವುದನ್ನು ಬೋಧಿಸುವುದಿಲ್ಲ. ಸಮಾಜದ ಅಸಮಾನತೆ ಕಡಿಮೆಯಾಗಬೇಕು. ಸಮಾನತೆಯ ಸ್ಥಾಪಿಸುವ ಉದ್ದೇಶವನ್ನು ಸರ್ಕಾರದ ಎಲ್ಲ ಯೋಜನೆಗಳು ಹೊಂದಿವೆ. ಸಮಾಜದ ಎಲ್ಲ ಜಾತಿ ಧರ್ಮ, ವರ್ಗಗಳಿಗೆ ಆರ್ಥಿಕ ಸಾಮಾಜಿಕ ಶಕ್ತಿ ದೊರೆಯಬೇಕು. ಲಿಂಗ ತಾರತಮ್ಯ ಹೋಗಲಾಡಿಸಿ, ಮಹಿಳೆಯರಿಗೆ ಶಕ್ತಿ ತುಂಬಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ. ಸಮಾಜದ ಬಡವರು, ಅಶಕ್ತರಿಗೆ ಶಕ್ತಿ ತುಂಬುವುದೇ ನನ್ನ ಉದ್ದೇಶ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೌಲಭ್ಯಗಳು ದೊರೆತಾಗ ಮಾತ್ರ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ.

Tags: Chamundeshwari ConstituencyCm changeCM PostDevelopmentElectionsGoddess blessGovernment of Karnatakakannada newskarnataka newsKarnataka Politicsmysore newsPratidhvaniReligionsocial JusticeTemple FunctionVaruna Constituency
Previous Post

ಇಸ್ರೇಲ್–ಇರಾನ್ ಸಂಘರ್ಷ : ಸುದ್ದಿ ಚಾನೆಲ್‌ಗಳ ಟಿಆರ್‌ಪಿ ಪ್ರಕಟಣೆ ಸ್ಥಗಿತ

Next Post

ನನ್ನ ಮನಸ್ಸು ಆ ತಂಡ ಗೆಲ್ಲುತ್ತದೆ ಎಂದು ಹೇಳುತ್ತಿದೆ-ಫೈನಲ್ ಬಗ್ಗೆ ಡಿವಿಲಿಯರ್ಸ್ ಭವಿಷ್ಯ

Related Posts

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು
Top Story

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

by ಪ್ರತಿಧ್ವನಿ
May 21, 2026
0

ತಮಿಳುನಾಡಿನ ರಾಜಕೀಯದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಕೇವಲ ಆರು ಗಂಟೆಗಳ ಅವಧಿಯಲ್ಲಿ ನೀಡಲಾಗಿದ್ದ ₹17 ಲಕ್ಷ ಮೌಲ್ಯದ...

Read moreDetails
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಜಾರ್ಜ್

May 20, 2026
Next Post
ನನ್ನ ಮನಸ್ಸು ಆ ತಂಡ ಗೆಲ್ಲುತ್ತದೆ ಎಂದು ಹೇಳುತ್ತಿದೆ-ಫೈನಲ್ ಬಗ್ಗೆ ಡಿವಿಲಿಯರ್ಸ್ ಭವಿಷ್ಯ

ನನ್ನ ಮನಸ್ಸು ಆ ತಂಡ ಗೆಲ್ಲುತ್ತದೆ ಎಂದು ಹೇಳುತ್ತಿದೆ-ಫೈನಲ್ ಬಗ್ಗೆ ಡಿವಿಲಿಯರ್ಸ್ ಭವಿಷ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada