• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಎಲ್‌ಪಿಜಿ ಪೊರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಿ : ಕೇಂದ್ರಕ್ಕೆ ತೇಜಸ್ವಿ ಸೂರ್ಯ ಒತ್ತಾಯ..

ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ ಹೋಟೆಲ್ ಉದ್ಯಮ, ಉದ್ಯೋಗ ಹಾಗೂ ಗ್ರಾಹಕರ ಸೇವೆಗಳ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ : ಬಿಜೆಪಿ ಸಂಸದನ ಎಚ್ಚರಿಕೆ..

ಪ್ರತಿಧ್ವನಿ by ಪ್ರತಿಧ್ವನಿ
March 10, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ
0
ಎಲ್‌ಪಿಜಿ ಪೊರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಿ : ಕೇಂದ್ರಕ್ಕೆ ತೇಜಸ್ವಿ ಸೂರ್ಯ ಒತ್ತಾಯ..
Share on WhatsAppShare on FacebookShare on Telegram

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಇರಾನ್‌ – ಇಸ್ರೇಲ್‌ ಹಾಗೂ ಅಮೆರಿಕ ನಡುವಿನ ಯುದ್ಧದ ಪರಿಣಾಮ ಷೇರು ಮಾರುಕಟ್ಟೆಯ ಬಳಿಕ ಇದೀಗ ದೇಶದ ಹೋಟೆಲ್‌ ಉದ್ಯಮದ (Hotel Bussiness ) ಮೇಲೂ ಬಿದ್ದಿದೆ. ದೇಶದ ಹಲವು ರಾಜ್ಯಗಳು ಸೇರಿದಂತೆ ಬೆಂಗಳೂರಿಗೂ ಇದರ ಬಿಸಿ ತಟ್ಟಿದೆ. ಹೀಗಾಗಿ ಇಂದು ಮಧ್ಯಾಹ್ನದಿಂದ ಬಹುತೇಕ ಹೋಟೆಲ್‌ಗಳು ಬಂದ್‌ ಆಗಲಿವೆ.

ADVERTISEMENT
🔴LIVE : ವಿಧಾನಸಭೆ ಬಜೆಟ್‌ ಅಧಿವೇಶನ ನೇರಪ್ರಸಾರ..! #pratidhvani

ವಾಣಿಜ್ಯ ಬಳಕೆಯ ಸಿಲಿಂಡರ್‌ ಪೊರೈಕೆಯಲ್ಲಿ ಭಾರಿ ವ್ಯತ್ಯಯದ ಹಿನ್ನೆಲೆ ರಾಜ್ಯ ಹೋಟೆಲ್‌ ಮಾಲೀಕರ ಈ ರೀತಿಯ ನಿರ್ಧಾರಕ್ಕೆ ಬಂದಿದು, ಇದರಿಂದ ಹೋಟೆಲ್‌ಗಳನ್ನೇ ಅವಲಂಬನೆಯಾಗಿದ್ದ ಜನರಿಗೆ ಶಾಕ್‌ ಆದಂತಾಗಿದೆ.

ಇನ್ನೂ ಇದೇ ವಿಚಾರಕ್ಕೆ ಹೋಟೆಲ್‌ ಮಾಲೀಕರು ಈ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ಮನವಿ ಸಲ್ಲಿಸಿದ್ದಾರೆ. ಹೀಗಾಗಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ (Natural Gas) ಸಚಿವರಾದ ಹರ್ದೀಪ್‌ ಸಿಂಗ್‌ ಪೂರಿ ಅವರಿಗೆ ಪತ್ರ ಬರೆದು ಸಮಸ್ಯೆ ಪರಿಹರಿಸುವಂತೆ ಕೋರಿದ್ದಾರೆ.

ಇದನ್ನೂ ಓದಿ : ಇರಾನ್‌ – ಇಸ್ರೇಲ್‌ ಯುದ್ಧದ ಎಫೆಕ್ಟ್‌ : ಷೇರು ಮಾರುಕಟ್ಟೆಯಲ್ಲಿ ಭಾರಿ ಅಲ್ಲೋಲ ಕಲ್ಲೋಲ..!

ಮುಖ್ಯವಾಗಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು ದಿನನಿತ್ಯದ ಅಡುಗೆ ಕಾರ್ಯಗಳಿಗೆ ಅಧಿಕವಾಗಿ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳನ್ನೇ ಅವಲಂಬಿಸಿವೆ. ಪಿಎನ್‌ಜಿ ಸಂಪರ್ಕ ಅಥವಾ ವಿದ್ಯುತ್ ಆಧಾರಿತ ಅಡುಗೆ ಮಾಡುವ ಅನುಕೂಲ ಇದುವರೆಗೂ ಅಧಿಕವಾಗಿ ಲಭ್ಯವಿಲ್ಲದ ಕಾರಣ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾದರೆ ಹೋಟೆಲ್ ಉದ್ಯಮ, ಉದ್ಯೋಗ ಹಾಗೂ ಗ್ರಾಹಕರ ಸೇವೆಗಳ ಮೇಲೆ ಭಾರಿ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತೇಜಸ್ವಿ ಸೂರ್ಯ ಪತ್ರದಲ್ಲಿ ಕೇಂದ್ರಕ್ಕೆ ಎಚ್ಚರಿಸಿದ್ದಾರೆ.

ಹೋಟೆಲ್‌ ಮಾಲೀಕರ ಸಂಘದ ಮನವಿಯಂತೆ ಸಿಲಿಂಡರ್‌ ಪೊರೈಕೆಯಲ್ಲಿ ಯಾವುದೇ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಬಗೆಹರಿಸಲು ಕ್ರಮ ಕೈಗೊಳ್ಳಬೇಕೆಂದು ತೇಜಸ್ವಿ ಸೂರ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್‌ ಮಾಡಿ ಒತ್ತಾಯಿಸಿದ್ದಾರೆ.

Tags: Commercial Use LPG CylinderGovernment of IndiaHome use cylinderHotel BussinessHotel Owners associationIran israel conflictsiran israel warKarnataka GovernmentLPGLPG cylinderLPG Domestic GasLPG Gas PriceLPG SubsidyPetroleum ministerPratididhvani
Previous Post

ಈ ಬ್ಯಾಂಕುಗಳ ಖಾತೆಯಲ್ಲಿ  ಕನಿಷ್ಠ ಬ್ಯಾಲೆನ್ಸ್ ಇಲ್ಲದಿದ್ದರೆ ದಂಡ ವಿಧಿಸುವಂತಿಲ್ಲ !

Next Post

“10, 20 ರೂ. ಜಾಸ್ತಿಯಾದ್ರೆ ಹೋರಾಟ ಮಾಡ್ತಿದ್ದ ಸ್ಮೃತಿ ಇರಾನಿ ಈಗ್ಯಾಕೆ ಮಾತಾಡ್ತಿಲ್ಲ..?”

Related Posts

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ
ರಾಜಕೀಯ

ಜೀವಾವಧಿ ಶಿಕ್ಷೆ ಹಿನ್ನೆಲೆ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಅಮಾನ್ಯ – ಧಾರವಾಡ ಕ್ಷೇತ್ರ ಖಾಲಿ

by ಪ್ರತಿಧ್ವನಿ
May 2, 2026
0

ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಸರ್ಕಾರ ಅಧಿಕೃತವಾಗಿ ಅಮಾನ್ಯಗೊಳಿಸಿರುವುದು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿದೆ.ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ...

Read moreDetails
ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

May 2, 2026
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
Next Post
“10, 20 ರೂ. ಜಾಸ್ತಿಯಾದ್ರೆ ಹೋರಾಟ ಮಾಡ್ತಿದ್ದ ಸ್ಮೃತಿ ಇರಾನಿ ಈಗ್ಯಾಕೆ ಮಾತಾಡ್ತಿಲ್ಲ..?”

"10, 20 ರೂ. ಜಾಸ್ತಿಯಾದ್ರೆ ಹೋರಾಟ ಮಾಡ್ತಿದ್ದ ಸ್ಮೃತಿ ಇರಾನಿ ಈಗ್ಯಾಕೆ ಮಾತಾಡ್ತಿಲ್ಲ..?"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada