ಬೆಂಗಳೂರು : ಮಾರ್ಚ್ 20ರಂದು ನಡೆದ ಟಿ20 ವಿಶ್ವಕಪ್ 2026ರಲ್ಲಿ ಭಾರತ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಇದು ಒಟ್ಟು ಟೂರ್ನಿಯಲ್ಲಿ ಭಾಗವಹಿಸಿದ್ದ 20 ತಂಡಗಳಲ್ಲಿ ಭಾರತ ತಂಡವು ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡುವ ಮೂಲಕ ಗೆದ್ದು ಬೀಗಿ ಇತಿಹಾಸ ನಿರ್ಮಿಸಿದೆ.

ವರ್ಲ್ಡ್‌ಕಪ್ ಪಂದ್ಯಾವಳಿ ಮುಗೀತು ಇನ್ನೇನ ಎನ್ನುತ್ತಿದ್ದ ಕ್ರೀಡಾಭಿಮಾನಿಗಳಿಗೆ ಬಿಸಿಸಿಐ ಸಿಹಿ ಸುದ್ದಿ ನೀಡಿದ್ದು, ಕೆಲವೇ ದಿನಗಳಲ್ಲಿ ಇಂಡಿಯನ್ ಪ್ರಿಮಿಯರ್ ಲೀಗ್ (IPL) ಪ್ರಾರಂಭವಾಗಲಿದೆ ಎಂದು ತಿಳಿಸಿದೆ.
ಈ ಬಾರಿಯ 19ನೇ ಆವೃತ್ತಿ ಐಪಿಎಲ್ ಟೂರ್ನಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಕ್ರಿಕೆಟ್ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. ಐಪಿಎಲ್ ಟೂರ್ನಿಯ ಮೊದಲ 20 ಪಂದ್ಯಗಳ ಪಟ್ಟಿಯಷ್ಟೇ ರಿಲೀಸ್ ಮಾಡಲಾಗಿದೆ. ಉಳಿದಂತೆ ಮಾರ್ಚ್ 28 ರಿಂದ ಐಪಿಎಲ್ ಪಂದ್ಯ ಪ್ರಾರಂಭವಾಗಲಿವೆ.
ಬೆಂಗಳೂರಿನಲ್ಲೇ ಉದ್ಘಾಟನಾ ಪಂದ್ಯ..
ಇನ್ನೂ ಹಾಲಿ ಚಾಂಪಿಯನ್ ಪಟ್ಟವನ್ನು ಪಡೆದ ತಂಡವು ಟೂರ್ನಿಯ ಮೊದಲ ಪಂದ್ಯವನ್ನು ಆಡುವುದು ಐಪಿಎಲ್‌ನ ನಿಯಮಗಳಲ್ಲೊಂದಾಗಿದೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಸಾಂಪ್ರದಾಯಿಕವಾಗಿ ಟೂರ್ನಿಯನ್ನು ಪ್ರಾರಂಭಿಸಲಿದೆ.
ಇದನ್ನೂ ಓದಿ : ಇಂಗ್ಲೀಷ್‌ನಲ್ಲಿಯೇ ಮಾತನಾಡಿ ಎಂದ ಉನ್ನತ ಶಿಕ್ಷಣ ಅಧಿಕಾರಿ: ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ್ರು ಹೇಳಿದ್ದು ಹೀಗೆ!
ಈ ತಂಡವು ಐಪಿಎಲ್ ಟೂರ್ನಿಯ ಅತಿದೊಡ್ಡ ಫ್ರಾಂಚೈಸಿಗಳಲ್ಲಿ ಒಂದಾಗಿರುವ ಚೆನ್ನೈ ಸೂಪರ್ ಕಿಂಗ್ಸ್ (CSK) ಅಥವಾ ಸನ್‌ರೈಸರ್ಸ್ ಹೈದ್ರಾಬಾದ್ ತಂಡದ ವಿರುದ್ಧ ಮೊದಲ ಬ್ಲಾಕ್‌ಬಸ್ಟರ್ ಪಂದ್ಯವನ್ನು ಆಡಬಹುದು ಎನ್ನಲಾಗುತ್ತಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಯಲಿದ್ದು, ಆರ್‌ಸಿಬಿ ಅಭಿಮಾನಿಗಳು ಪಂದ್ಯ ಆರ್‌ಸಿಬಿ ಆಟಕ್ಕಾಗಿ ಎದುರು ನೋಡುತ್ತಿದ್ದಾರೆ.






