• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರದ ಮೇಲೆ ಒತ್ತಡ ಹಾಕಲು ಮಂಗಳವಾರ ದೆಹಲಿಗೆ ಹೋಗ್ತೀವಿ : ಡಿಕೆ ಶಿವಕುಮಾರ್ ಮಹತ್ವದ ಮಾಹಿತಿ..

ಯುಕೆಪಿ ಯೋಜನೆಗೆ ಆಂಧ್ರ ತಕರಾರು ಬಗ್ಗೆ ಕರ್ನಾಟಕದ ಸಂಸದರ ಜತೆ ದೆಹಲಿಯಲ್ಲಿ ಸಭೆಯ ಮಾಹಿತಿ ನೀಡಿದ ಡಿಸಿಎಂ..

ಪ್ರತಿಧ್ವನಿ by ಪ್ರತಿಧ್ವನಿ
March 14, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕೇಂದ್ರದ ಮೇಲೆ ಒತ್ತಡ ಹಾಕಲು ಮಂಗಳವಾರ ದೆಹಲಿಗೆ ಹೋಗ್ತೀವಿ : ಡಿಕೆ ಶಿವಕುಮಾರ್ ಮಹತ್ವದ ಮಾಹಿತಿ..
Share on WhatsAppShare on FacebookShare on Telegram

ಬಾಗಲಕೋಟೆ : ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಕೃಷ್ಣಾ ಮೇಲ್ದಂಡೆ ಯೋಜನೆಯ (UKP) 3ನೇ ಹಂತಕ್ಕೆ ತಕರಾರು ಎತ್ತಿರುವ ಹಾಗೂ ತುಂಗಭದ್ರಾ ಅಣೆಕಟ್ಟಿನ ನೀರು ಪೋಲು ತಡೆಯಲು ಸಹಕಾರ ನೀಡದಿರುವ ಆಂಧ್ರ ಪ್ರದೇಶದ ನಡೆ ವಿರುದ್ಧ ಧ್ವನಿ ಎತ್ತಲು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂದು ಜಲಸಂಪನ್ಮೂಲ ಸಚಿವ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ADVERTISEMENT
Pradeep Eshwar : ಬಿಜೆಪಿಯವರನ್ನು ಕೇಂದ್ರದಲ್ಲಿ ಕಿತ್ತಾಕುದ್ರೆ ಎಲ್ಲಾ ಸಮಸ್ಯೆಗಳಿಗೆ ಫುಲ್ ಸ್ಟಾಪ್ ಬೀಳುತ್ತೆ..!

ಜಿಲ್ಲೆಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಇದಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ರಾಜ್ಯದ ಸಂಸದರ ಜತೆ ದೆಹಲಿಯ ಕರ್ನಾಟಕ ಭವನದಲ್ಲಿ ಬರುವ ಮಂಗಳವಾರ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಹಾಗೂ ಭೂಸ್ವಾಧೀನ ಪ್ರಕ್ರಿಯೆ ಮಾಡಬಾರದು ಎಂದು ಆಂಧ್ರ ಪ್ರದೇಶದವರು ಕೇಂದ್ರ ಸರ್ಕಾರಕ್ಕೆ ಆಕ್ಷೇಪಣಾ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ನಮಗೆ ಪತ್ರ ಬರೆದು ಸ್ಪಷ್ಟನೆ ಕೇಳಿದೆ. ನ್ಯಾಯಾಧೀಕರಣ ಆದೇಶದ ಪ್ರಕಾರ ನಮ್ಮ ಪಾಲಿನ ನೀರಿನ ಬಳಕೆಗೆ ಯೋಜನೆ ಮಾಡುತ್ತಿದ್ದು, ಈಗಾಗಲೇ 26 ಸಾವಿರ ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಆರಂಭಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಭ್ರಮಾಧೀನ ಸಮಾಜ- ಯುವಜನಾಂಗದ ಕನಸು

ನಾವು ಈಗಲೇ ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳ ಮಾಡುತ್ತಿಲ್ಲ. 2010 ರಲ್ಲಿ ಆಗಿರುವ ಆದೇಶದ ಅನುಸಾರ ನಮ್ಮ ಪಾಲಿನ ನೀರನ್ನು ಬಳಕೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಇದಕ್ಕೆ ಆಂಧ್ರಪ್ರದೇಶ ಸರ್ಕಾರ ತಗಾದೆ ತೆಗೆದಿದೆ ಎಂದು ಡಿಕೆ ಶಿವಕುಮಾರ್‌ ಕಿಡಿಕಾರಿದ್ದಾರೆ.

ಅಲ್ಲದೆ, ತುಂಗಭದ್ರಾ ಅಣೆಕಟ್ಟೆಯಿಂದ ನಮಗೆ 30 ಟಿಎಂಸಿ ನೀರು ವ್ಯರ್ಥವಾಗುತ್ತಿದ್ದು, ಇದಕ್ಕೆ ಪರ್ಯಾಯ ಮಾರ್ಗ ಕಂಡುಕೊಳ್ಳಲು ಆಂಧ್ರ ಸರಕಾರ ನಮಗೆ ಸಹಕಾರ ನೀಡುತ್ತಿಲ್ಲ. ಈ ಎಲ್ಲಾ ವಿಚಾರಗಳ ಬಗ್ಗೆ ನಮ್ಮ ಸಂಸದರ ಜತೆ ಚರ್ಚೆ ಮಾಡಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲು ನಾನು, ಸಚಿವರಾದ ಹೆಚ್.ಕೆ ಪಾಟೀಲ್, ಎಂ.ಬಿ. ಪಾಟೀಲ್, ಬೋಸರಾಜು ಮಂಗಳವಾರ ದೆಹಲಿಗೆ ಹೋಗುತ್ತಿದ್ದೇವೆ ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

Tags: Andhra InterruptAndhraPradesh GovernmentBagalakote NewsCM SiddaramaiahDK Shivakumarflood affected areasGovernment of IndiaHK Patilirrigation ministerKarnataka Irrigation Projectskarnataka newsKrishna RiverM B PatilN Chandrababu Naidun s boserajuPratidhvaniUKP ProjectUnion Water MinisteUpper Krishna
Previous Post

ಯುದ್ಧದ ಎಫೆಕ್ಟ್‌ : ಗಲ್ಫ್‌ನಲ್ಲಿರುವ ಕುಟುಂಬಸ್ಥರನ್ನೇ ನಂಬಿರುವ ಭಾರತೀಯರಿಗೆ ಆರ್ಥಿಕ ಹೊಡೆತ..!

Next Post

ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ; ಮಾರ್ಚ್ 9 ರಿಂದ ಸಂಜೆ 6 ಗಂಟೆಗೆ ನಿಮ್ಮ ಮನಗೆಲ್ಲಲು ಬರ್ತಿದೆ ಹೊಸ ಕತೆ

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
Next Post
ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ; ಮಾರ್ಚ್ 9 ರಿಂದ ಸಂಜೆ 6 ಗಂಟೆಗೆ ನಿಮ್ಮ ಮನಗೆಲ್ಲಲು ಬರ್ತಿದೆ ಹೊಸ ಕತೆ

ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ; ಮಾರ್ಚ್ 9 ರಿಂದ ಸಂಜೆ 6 ಗಂಟೆಗೆ ನಿಮ್ಮ ಮನಗೆಲ್ಲಲು ಬರ್ತಿದೆ ಹೊಸ ಕತೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada