ಕರ್ನಾಟಕ:
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಾವಿರಾರು ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಒಟ್ಟು 5764 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ.
- ಸಿವಿಲ್ ಪೊಲೀಸ್ ಕಾನ್ಸ್ಟೇಬಲ್: 4114 ಹುದ್ದೆಗಳು.
- ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್: 1650 ಹುದ್ದೆಗಳು.

ಶೀಘ್ರವೇ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳುವಂತೆ ಎಡಿಜಿಪಿ (ಆಡಳಿತ) ಸೌಮೇಂದು ಮುಖರ್ಜಿ ಅವರು ಆದೇಶಿಸಿದ್ದಾರೆ.
ಈ ಕುರಿತು ಪೊಲೀಸ್ ಮಹಾನಿರ್ದೇಶಕರು (ನೇಮಕಾತಿ) ಅವರಿಗೆ ಪತ್ರ ಬರೆಯಲಾಗಿದ್ದು, ಡಿಜಿ ಮತ್ತು ಐಜಿಪಿ ಅವರಿಂದಲೂ ಅನುಮೋದನೆ ದೊರೆತಿದೆ. ಈ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲಾ ಪೊಲೀಸ್ ಆಯುಕ್ತರುಗಳು, ಜಿಲ್ಲಾ ಪೊಲೀಸ್ ಅಧೀಕ್ಷಕರುಗಳು ಹಾಗೂ ಕೆಎಸ್ಆರ್ಪಿ ಕಮಾಂಡೆಂಟ್ಗಳಿಗೆ ರವಾನಿಸಲಾಗಿದೆ.

ಆಡಳಿತಾತ್ಮಕ ಕಾರಣಗಳಿಂದಾಗಿ ಈ ಹಿಂದೆ ಘೋಷಿಸಲಾಗಿದ್ದ ಹುದ್ದೆಗಳನ್ನು ವಿವಿಧ ಘಟಕಗಳಿಗೆ ಮರು ಹಂಚಿಕೆ ಮಾಡಲಾಗಿದೆ. ಘಟಕವಾರು ಹುದ್ದೆಗಳ ಮರು ಹಂಚಿಕೆಯ ವಿವರಗಳನ್ನು ಅನುಬಂಧದಲ್ಲಿ ನೀಡಲಾಗಿದ್ದು, ಘಟಕಗಳಿಗೆ ಮರು ಹಂಚಿಕೆಯಾಗಿರುವ ಹುದ್ದೆಗಳಿಗೆ ಸಂಬಂಧಿಸಿದಂತೆ ವರ್ಗೀಕರಣವನ್ನು ನೇಮಕಾತಿ ವಿಭಾಗಕ್ಕೆ ಶೀಘ್ರವಾಗಿ ಸಲ್ಲಿಸುವಂತೆ ಸೂಚಿಸಲಾಗಿದ್ದು, ಇದರಿಂದ ಪೊಲೀಸ್ ಉದ್ಯೋಗಾಕಾಂಕ್ಷಿಗಳಲ್ಲಿ ಹೊಸ ಭರವಸೆ ಮೂಡಿದೆ.
ಇದನ್ನೂ ಓದಿ
“ಸತ್ಯ, ಸಂಶೋಧನೆ ನಡೆಸಿ ಬರೆಯುವ ಪತ್ರಕರ್ತರ ಸಂಖ್ಯೆ ಸುಳ್ಳು ಹರಡುವವರಿಗಿಂತ ಹೆಚ್ಚಾಗಬೇಕು”






