• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ; ಪ್ರಸ್ತಾವಿತ ಜಾಗ ಪರಿಶೀಲಿಸಿದ ARAI ಅಧಿಕಾರಿಗಳು

ಬಸರಾಳು ಸಮೀಪದ 110 ಎಕರೆ ಸರಕಾರಿ ಭೂಮಿ ವೀಕ್ಷಣೆ; ಜಿಲ್ಲಾಧಿಕಾರಿ ಜತೆ ತಂಡದ ಸಮಾಲೋಚನೆ

ಪ್ರತಿಧ್ವನಿ by ಪ್ರತಿಧ್ವನಿ
March 16, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರ; ಪ್ರಸ್ತಾವಿತ ಜಾಗ ಪರಿಶೀಲಿಸಿದ ARAI ಅಧಿಕಾರಿಗಳು
Share on WhatsAppShare on FacebookShare on Telegram

ಶೀಘ್ರದಲ್ಲಿ ವರದಿ ನೀಡಲಿರುವ ತಂಡ; ನಂತರ ತಾಂತ್ರಿಕ ತಂಡ ಸ್ಥಳಕ್ಕೆ. ಕೇಂದ್ರದ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಕನಸಿನ ಯೋಜನೆ.

ADVERTISEMENT

ಮಂಡ್ಯ 16 ಮಾರ್ಚ್ 2026: ಮಂಡ್ಯ ಜಿಲ್ಲೆಯಲ್ಲಿ ಸ್ಥಾಪನೆಯಾಗಲಿರುವ ಆಟೋಮೊಟಿವ್ ರಿಸರ್ಚ್ ಅಸೋಸಿಯೇಷನ್‌ ಆಫ್ ಇಂಡಿಯಾ (ARAI) ಪರೀಕ್ಷಾ ಕೇಂದ್ರಕ್ಕೆ ರಾಜ್ಯ ಸರಕಾರದಿಂದ ನೀಡಲಾಗುವುದು ಎಂದು ಹೇಳಿರುವ ಪ್ರಸ್ತಾವಿತ ಜಾಗವನ್ನು ಆ ಸಂಸ್ಥೆಯ ಉನ್ನತಾಧಿಕಾರಿಗಳು ಸೋಮವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Budget Assembly: ಸದನದಲ್ಲಿ ಫ್ಲೆಕ್ಸ್ ವಿವಾದಗಳ ಬಗ್ಗೆ ಬೆಂಕಿ ಮಾತುಗಳನ್ನಾಡಿ ಬಿಜೆಪಿ ಶಾಸಕ #pratidhvani

ಸಂಸ್ಥೆಯ ಹಿರಿಯ ಉಪ ನಿರ್ದೇಶಕರಾದ ವಿ.ಎ. ಪಂಖಾವಾಲ, ಡಾ. ಬಿ.ವಿ. ಶ್ಯಾಮಸುಂದರ ಹಾಗೂ ಹಿರಿಯ ಪ್ರಧಾನ ವ್ಯವಸ್ಥಾಪಕ ಗಿರೀಶ್‌ ತನವಾಡೆ ಅವರು ಮಂಡ್ಯದ ಕಂದಾಯ ಇಲಾಖೆಯ ಅಧಿಕಾರಿಗಳೊಂದಿಗೆ ಬಸರಾಳು ಸಮೀಪದಲ್ಲಿರುವ ಮದ್ದಿಘಟ್ಟ ಹಾಗೂ ಹೆಗ್ಗಡತಿಹಳ್ಳಿ ಗ್ರಾಮಗಳ ಬಳಿಯ ಜಾವನ್ನು ಖುದ್ದು ವೀಕ್ಷಿಸಿದರು.

ಈ ಎರಡು ಗ್ರಾಮಗಳ ಬಳಿ ಸುಮಾರು 110 ಎಕರೆ ಸರಕಾರಿ ಭೂಮಿ ಲಭ್ಯವಿದೆ ಎಂದು ರಾಜ್ಯ ಸರಕಾರ ತಿಳಿಸಿದ್ದು, ಎಆರ್‌ಎಐ ತಂಡವು ಈ ಭೂಮಿಯನ್ನು ವಿಸ್ತೃತವಾಗಿ ಪರಿಶೀಲನೆ ನಡೆಸಿತು. ಅಲ್ಲದೆ, ಜಾಗಕ್ಕೆ ಸಂಬಂಧಿತ ಅಗತ್ಯ ಮಾಹಿತಿಯನ್ನು ಕಂದಾಯ ಇಲಾಖೆ ಅಧಿಕಾರಿಗಳಿಂದ ಕಲೆ ಹಾಕಿತು.

ಈ ಭೂಮಿ ಎಆರ್‌ಎಐ ಪರೀಕ್ಷಾ ಕೇಂದ್ರ ಸ್ಥಾಪನೆಗೆ ಅನುಕೂಲವಾಗಿವೆಯೇ ಇಲ್ಲವೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಿದದರು. ಈ ತಂಡದ ವರದಿಯ ನಂತರ ತಾಂತ್ರಿಕ ನಿಪುಣರ ತಂಡವು ಈ ಭೂಮಿಗಳನ್ನು ಪರಿಶೀಲನೆ ನಡೆಸಲಿದೆ.

ಭೂಮಿಯ ಸ್ವರೂಪ, ರಸ್ತೆ ಸಂಪರ್ಕ, ನೀರು, ವಿದ್ಯುತ್‌ ಸೇರಿ ಮೂಲಸೌಕರ್ಯಗಳ ಸಂಯೋಜನೆ ಸುಲಭ ಸಾಧ್ಯವೇ ಎಂಬುದರ ಬಗ್ಗೆ ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆಯಿತು. ಅಲ್ಲದೆ, ತ್ವರಿತವಾಗಿ ತಾಂತ್ರಿಕ ತಂಡವೂ ಸ್ಥಳಕ್ಕೆ ಭೇಟಿ ಕಾರ್ಯಸಾಧ್ಯತಾ ವರದಿಯನ್ನು ನೀಡಲಿದೆ ಎಂದು ಹೇಳಿತು.

Budget session : ಸ್ವಪಕ್ಷದ ವಿರುದ್ಧ ಗುಡುಗಿದ ಬಿಜೆಪಿ ಶಾಸಕ ST ಸೋಮಶೇಖರ್‌..! #bjp #mla #yeshwanthpur

ಜಿಲ್ಲಾಧಿಕಾರಿಗಳ ಜತೆ ಭೆಟಿಯಾದ ಎಆರ್‌ಎಐ ತಂಡ:
ಸದರಿ ಭೂಮಿಯನ್ನು ವೀಕ್ಷಿಸಿದ ನಂತರ ಎಆರ್‌ಎಐ ಅಧಿಕಾರಿಗಳ ತಂಡವು ಮಂಡ್ಯ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿತು. ಈ ಸಂದರ್ಭದಲ್ಲಿ ಅಗತ್ಯವಿರುವ ಭೂಮಿ ಹೇಗಿರಬೇಕು ಎಂಬ ಪ್ರಾಥಮಿಕವಾಗಿ ಜಿಲ್ಲಾಧಿಕಾರಿಗಳೊಂದಿಗೆ ಅಧಿಕಾರಿಗಳು ಚರ್ಚಿಸಿದರು.

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಜಿಲ್ಲಾಧಿಕಾರಿ ಡಾ. ಕುಮಾರ ಅವರು; ಎಆರ್‌ಎಐ ತಂಡವು ಬಸರಾಳು ಭೂಮಿಯನ್ನು ಪ್ರಾಥಮಿಕ ಪರಿಶೀಲನೆ ನಡೆಸಿದೆ. ಬಸರಾಳು ಹತ್ತಿರದ ಭೂಮಿ ಎಆರ್‌ಎಐ ಪರೀಕ್ಷಾ ಕೇಂದ್ರಕ್ಕೆ ಸೂಕ್ತವಾಗಿದೆ ಎಂದು ಹೇಳಿದೆಯೇ ವಿನಾ ಅಲ್ಲಿಯೇ ಕಾರ್ಯ ಸಾಧ್ಯತೆ ಆಗುತ್ತದೆಯೇ ಎಂಬುದನ್ನು ಹೇಳಿಲ್ಲ.

Siddaramaiah : ಕಾಂಗ್ರೇಸ್ ಮನಸ್ಥಿತಿ ಹೇಗಿದೆ ಅಂದ್ರೆ ಎಲ್ಲದಕ್ಕೂ ಪುರುಷರನ್ನೇ ಆಯ್ಕೆ ಮಾಡ್ತಾರೆ #pratidhvani

ಅಲ್ಲದೆ; ಈಗ ಬಂದಿರುವ ಮೂವರು ಅಧಿಕಾರಿಗಳ ತಂಡವು ಇಪ್ಪತ್ತು ದಿನಗಳಲ್ಲಿ ವರದಿ ನೀಡಲಿದ್ದು, ಆ ವರದಿ ಪರಿಶೀಲನೆ ನಂತರ ತಾಂತ್ರಿಕ ತಂಡ ಜಿಲ್ಲೆಗೆ ಭೇಟಿ ನೀಡಲಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಸಚಿವರ ಕನಸು ಈಡೇರುವುದಕ್ಕೆ ದೊಡ್ಡ ಹೆಜ್ಜೆ:
ಮಂಡ್ಯದಲ್ಲಿ ಕೇಂದ್ರದ ಬೃಹತ್‌ ಕೈಗಾರಿಕೆ ಸಚಿವಾಲಯದ ಅಧೀನದಲ್ಲಿರುವ ಎಆರ್‌ಎಐ ಪರೀಕ್ಷಾ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯದ ಜನತೆಗೆ ಭರವಸೆ ನೀಡಿದ್ದರು. ಇದೇ ಮಾರ್ಚ್‌ 14ರಂದು ಮಂಡ್ಯದ ವಿ.ಸಿ. ಫಾರಂನಲ್ಲಿ ಒಳಾಂಗಣ ಕ್ರೀಡಾಂಗಣಕ್ಕೆ ಅಡಿಗಲ್ಲು ಹಾಕಿದ ಸಭೆಯಲ್ಲಿ ಮಾತನಾಡುತ್ತಾ, ಎಆರ್‌ಎಐ ಪರೀಕ್ಷಾ ಕೇಂದ್ರ ಸ್ಥಾಪನೆಯ ಪ್ರಕ್ರಿಯೆಗಳು ಆರಂಭವಾಗಿವೆ ಎಂದು ಹೇಳಿದ್ದರು. ಅದಾದ ಎರಡು ದಿನಗಳಲ್ಲಿಯೇ ಆ ಸಂಸ್ಥೆಯ ಉನ್ನತಾಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಯೋಜನೆಗೆ ಆರಂಭಿಕ ಹಂತದಲ್ಲಿ ₹ 500 ಕೋಟಿ, ನಂತರದ ದಿನಗಳಲ್ಲಿ ಇನ್ನೂ ₹ 500 ಕೋಟಿ ಹೂಡಿಕೆ ಮಾಡಲಾಗುವುದು. ಇದರಿಂದ ಮಂಡ್ಯದ ಅಭಿವೃದ್ಧಿಗೆ ಬಲ ಬರುವುದು ಮಾತ್ರವಲ್ಲದೆ, ಕರ್ನಾಟಕದಲ್ಲಿ ಆಟೋಮೊಬೈಲ್‌ ಕ್ಷೇತ್ರದ ಬೆಳವಣಿಗೆಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಸಚಿವರು ತಿಳಿಸಿದ್ದರು.

Tags: ARAiBasaraluBJPCongress GovtDr. BV ShyamasundarGirish TanavadeHD Devegowdahd kumarswamyJDSMandyaMandya DC Dr. KumarMP MandyaNikhil KumarswamyVA Pankhavala
Previous Post

ಪಿಯು ಉಪನ್ಯಾಸಕರಿಂದ ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕಾರ ಎಚ್ಚರಿಕೆ: ಏಕೆ ?

Next Post

‘ಬಾಸ್’ ಸಿನಿಮಾ ವಿವಾದ: ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದ ದರ್ಶನ್ ಪರ ವಕೀಲರು

Related Posts

ಬಹುತ್ವ ಭಾರತ ಮತ್ತು ಮತಾಂಧ ರಾಜಕಾರಣ
ಅಂಕಣ

ಬಹುತ್ವ ಭಾರತ ಮತ್ತು ಮತಾಂಧ ರಾಜಕಾರಣ

by ಪ್ರತಿಧ್ವನಿ
May 21, 2026
0

(ದಿನಾಂಕ 15 ಮೇ 2026ರಂದು ಡಾ ಬಿ.ಆರ್.‌ ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ ದಲಿತ ಸಂಘರ್ಷ ಸಮಿತಿ (ಸಂಯೋಜಕ) ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಮಂಡಿಸಿದ ಉಪನ್ಯಾಸದ ಲೇಖನ ರೂಪ...

Read moreDetails
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
Next Post
‘ಬಾಸ್’ ಸಿನಿಮಾ ವಿವಾದ: ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದ ದರ್ಶನ್ ಪರ ವಕೀಲರು

‘ಬಾಸ್’ ಸಿನಿಮಾ ವಿವಾದ: ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದ ದರ್ಶನ್ ಪರ ವಕೀಲರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada