• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ : ದಿಢೀರ್‌ ಸಿಎಂ ಭೇಟಿಯಾಗಿದ್ದೇಕೆ ಕೈ ಶಾಸಕರು..?

ಉಪಚುನಾವಣೆಯ ಬಳಿಕ ಸಂಪುಟ ವಿಸ್ತರಣೆ ಮಾಡುವ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ..

ಪ್ರತಿಧ್ವನಿ by ಪ್ರತಿಧ್ವನಿ
March 17, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ : ದಿಢೀರ್‌ ಸಿಎಂ ಭೇಟಿಯಾಗಿದ್ದೇಕೆ ಕೈ ಶಾಸಕರು..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಸಂಬಂಧಿಸಿದ ಚರ್ಚೆಯು ಇನ್ನೂ ತಣ್ಣಗಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಬಣದ ಶಾಸಕರು ತಮ್ಮ ತಮ್ಮ ನಾಯಕನ ಪರವಾಗಿ ಬ್ಯಾಟ್‌ ಬೀಸುತ್ತಿದ್ದಾರೆ.

ADVERTISEMENT
Assembly Session :  ಸಿಎಂ ಸಿದ್ದರಾಮಯ್ಯ ಬಜೆಟ್‌ ಬಗ್ಗೆ MLA ಶರಣು ಸಲಗಾರ್‌ ಏನಂದ್ರು..! #pratidhvani

ಆದರೆ ಸಿಎಂ ಹುದ್ದೆಯ ವಿಚಾರದಲ್ಲಿ ಈ ಶಾಸಕರು ಪ್ರತ್ಯೇಕವಾಗಿ ಭಿನ್ನಾಭಿಪ್ರಾಯವನ್ನು ಹೊಂದಿದ್ದರೆ, ಮಂತ್ರಿಗಿರಿಯ ವಿಷಯದಲ್ಲಿ ಎಲ್ಲರೂ ಒಗ್ಗಟ್ಟಾಗಿಯೇ ಧ್ವನಿ ಎತ್ತುತ್ತಿರುವುದು ಗಮನಾರ್ಹ ಸಂಗತಿಯಾಗಿದೆ. ಕಳೆದ ಕೆಲ ದಿನಗಳ ಹಿಂದಷ್ಟೇ ಸಭೆ ಸೇರಿದ್ದ ಕಾಂಗ್ರೆಸ್‌ ಹಿರಿಯ ಶಾಸಕರು ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆ ಇಡುವುದರ ಜೊತೆಗೆ ಅಧಿವೇಶನದ ಬಳಿಕ ದೆಹಲಿಗೆ ತೆರಳಿ ಪಕ್ಷದ ವರಿಷ್ಠರ ಮೇಲೂ ಒತ್ತಡ ಹೇರುವ ತೀರ್ಮಾನಕ್ಕೆ ಬಂದಿದ್ದರು. ಅದರಂತೆ ಇಂದು ಬಜೆಟ್​​ ಅಧಿವೆಶನದ ನಡುವೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ.

ಇದನ್ನೂ ಓದಿ : ನೆತನ್ಯಾಹು ಸಾವಿನ ವದಂತಿ: ಇಸ್ರೇಲ್ ರಾಯಭಾರಿ ಸ್ಪಷ್ಟನೆ

ಸಚಿವ ಸಂಪುಟ ಪುನಾರಚನೆ ಸಮಯದಲ್ಲಿ 20 ಜನ ಹಿರಿಯ ಶಾಸಕರಿಗೆ ಸಂಪುಟದಲ್ಲಿ ಸ್ಥಾನ ನೀಡುವಂತೆ ವಿಧಾನಸೌಧ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಶಾಸಕರು ಮನವಿ ಮಾಡಿದ್ದಾರೆ. ಭೋಜನ ವಿರಾಮದ ಸಮಯದಲ್ಲಿ ಸಿಎಂ ಭೇಟಿಯಾದ ಕಾಂಗ್ರೆಸ್‌ ಹಿರಿಯ ಶಾಸಕರು 3ಕ್ಕೂ ಅಧಿಕ ಬಾರಿ ನಾವು ಎಂಎಲ್​​ಎಗಳಾಗಿದ್ದೇವೆ. ಹೀಗಾಗಿ ನಮಗೂ ಅವಕಾಶ ನೀಡಿ ಎಂಬ ಬೇಡಿಕೆ ಮುಂದಿಟ್ಟಿದ್ದಾರೆ.

ಶಾಸಕರಾದ ಅಶೋಕ ಪಟ್ಟಣ, ಎನ್​.ಎ.ಹ್ಯಾರಿಸ್​, ಹಂಪನಗೌಡ ಬಾದರ್ಲಿ, ಬಾಲಕೃಷ್ಣ, ಎಸ್.‌ ಎನ್. ನಾರಾಯಣಸ್ವಾಮಿ, ಯಶವಂತರಾಯಗೌಡ ಪಾಟೀಲ್, ತನ್ವೀರ್ ಸೇಠ್, ರಾಘವೇಂದ್ರ ಹಿಟ್ನಾಳ್ ಸೇರಿದಂತೆ 16 ಶಾಸಕರು ಮನವಿ ಮಾಡಿದ್ದಾರೆ.

ಇನ್ನೂ ಶಾಸಕರ ಮನವಿ ಆಲಿಸಿದ ಸಿದ್ದರಾಮಯ್ಯ, ಉಪಚುನಾವಣೆಯ ಬಳಿಕ ಸಂಪುಟ ವಿಸ್ತರಣೆಯನ್ನು ಮಾಡಲಾಗುವುದು. ನಿಮ್ಮೆಲ್ಲರ ಪರವಾಗಿ ನಾನೇ ಖುದ್ದಾಗಿ ದೆಹಲಿಗೆ ತೆರಳಿ ಹೈಕಮಾಂಡ್‌ ನಾಯಕರನ್ನು ಭೇಟಿಯಾಗುತ್ತೇನೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗುತ್ತಿದೆ.

 ಮುಖ್ಯಮಂತ್ರಿಗಳು ನಮಗೆ ಭರವಸೆ ನೀಡಿದ್ದಾರೆ. ನೀವು ನಿಮ್ಮ ಬೇಡಿಕೆಯನ್ನು ಪಕ್ಷದ ನಾಯಕರ ಮುಂದಿಡಿ, ನಾನು ಮಾತನಾಡುತ್ತೇನೆ. ಸಂಪುಟ ವಿಸ್ತರಣೆಯನ್ನು ಶೀಘ್ರದಲ್ಲೇ ಮಾಡುತ್ತೇನೆ ಅಂತ ನಮಗೆ ಸಿಎಂ ತಿಳಿಸಿದ್ದಾರೆ.

ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ : ಅಶೋಕ ಪಟ್ಟಣ ನಾಮಪತ್ರ ವಾಪಸ್ ಪಡೆಯುವ ನಿರ್ಧಾರ  ಮೊದಲೆ ಆಗಿತ್ತೆ ?

– ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಸಚೇತಕರು ಹಾಗೂ ಶಾಸಕರು ರಾಮದುರ್ಗ ವಿಧಾನಸಭಾ ಕ್ಷೇತ್ರ

Tags: AICCAshok M Pattancabinet expansioncabinet reshuffleCM SiddaramaiahCongress High Commandcongress karnatakacongress mlasDK ShivakumarH C BalakrishnaKarnataka GovernmentMallikarjun KhargeN A HarisPratidhvaniRahul GandhiSonia Gandhi
Previous Post

ಕಾಲವೇ ಎಲ್ಲದಕ್ಕೂ ಉತ್ತರಿಸುತ್ತದೆ : ಟಿವಿಕೆ ನಾಯಕನ ವಿರುದ್ಧ ಮೌನ ಮುರಿದ ರಜನಿಕಾಂತ್..

Next Post

ಏಕೈಕ ಮುಸ್ಲಿಂ ಶಾಸಕಿ ಸೇರಿದಂತೆ ಮೂವರಿಗೆ ಕಾಂಗ್ರೆಸ್‌ ಗೇಟ್‌ ಪಾಸ್..! : ಕಾರಣ ಏನು..?

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಏಕೈಕ ಮುಸ್ಲಿಂ ಶಾಸಕಿ ಸೇರಿದಂತೆ ಮೂವರಿಗೆ ಕಾಂಗ್ರೆಸ್‌ ಗೇಟ್‌ ಪಾಸ್..! : ಕಾರಣ ಏನು..?

ಏಕೈಕ ಮುಸ್ಲಿಂ ಶಾಸಕಿ ಸೇರಿದಂತೆ ಮೂವರಿಗೆ ಕಾಂಗ್ರೆಸ್‌ ಗೇಟ್‌ ಪಾಸ್..! : ಕಾರಣ ಏನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada