• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಶಾಮನೂರು, ಮೇಟಿ ಕುಟುಂಬಕ್ಕೆ ಟಿಕೆಟ್‌ ಘೋಷಣೆ : ಯಾರ ಕೈ ಮೇಲು..?

ಮ್ಯಾರಥಾನ್‌ ಮೀಟಿಂಗ್‌ ಬಳಿಕ ಜಾಣತನ ಪ್ರದರ್ಶಿಸಿದ ಕಾಂಗ್ರೆಸ್‌ ಹೈಕಮಾಂಡ್‌ : ಕೊನೆಗೂ ಕುಟುಂಬ ರಾಜಕೀಯಕ್ಕೆ ಮಣೆ ಹಾಕಿದ ಕೈ..

ಪ್ರತಿಧ್ವನಿ by ಪ್ರತಿಧ್ವನಿ
March 22, 2026
in Top Story, Uncategorized, ಇದೀಗ, ಕರ್ನಾಟಕ, ದೇಶ, ರಾಜಕೀಯ
0
BREAKING NEWS : ಶಾಮನೂರು, ಮೇಟಿ ಕುಟುಂಬಕ್ಕೆ ಟಿಕೆಟ್‌ ಘೋಷಣೆ : ಯಾರ ಕೈ ಮೇಲು..?
Share on WhatsAppShare on FacebookShare on Telegram

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಅಳೆದು ತೂಗಿ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ದಾವಣಗೆರೆ ದಕ್ಷಿಣದ ಟಿಕೆಟ್‌ ಶಾಮನೂರು ಕುಟುಂಬಕ್ಕೆ ದಕ್ಕಿದ್ದು, ಸಚಿವ ಎಸ್‌.ಎಸ್.‌ ಮಲ್ಲಿಕಾರ್ಜುನ ಪುತ್ರ ಸಮರ್ಥ್‌ ಶಾಮನೂರನ್ನು ಕಣಕ್ಕಿಳಿಸಿದೆ.

ADVERTISEMENT
LPG Cylinder Crisis : ಗ್ಯಾಸ್ ಇಲ್ಲದೆ ಹೋಟೆಲ್ ನಡೆಸೋದು ಕಷ್ಟವಾಗಿದೆ.. #pratidhvani

ಮುಸ್ಲಿಂ ಬಾಹುಳ್ಯದ ಕ್ಷೇತ್ರವಾಗಿರುವ ಇಲ್ಲಿ ಮುಸ್ಲಿಂ ಸಮುದಾಯಕ್ಕೆ ಟಿಕೆಟ್‌ ನೀಡಬೇಕೆಂದು ಒತ್ತಡಗಳು ಹಾಗೂ ಒತ್ತಾಯಗಳ ಮಧ್ಯೆಯೂ ಕಾಂಗ್ರೆಸ್‌ ಹೈಕಮಾಂಡ್‌ ಪಕ್ಷದ ಹಿತದೃಷ್ಟಿಯಿಂದ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಅಲ್ಲದೆ ಒಂದು ವೇಳೆ ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್‌ ನೀಡದಿದ್ದರೆ ರಾಜೀನಾಮೆಯ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ತೀವ್ರ ಹಿನ್ನಡೆಯಾಗಿದೆ.

ಮುಖ್ಯವಾಗಿ ಅಂದುಕೊಂಡಂತೆ ಡಿಸಿಎಂ ಡಿಕೆ ಶಿವಕುಮಾರ್‌ ಶಾಮನೂರು ಕುಟುಂಬಕ್ಕೆ ಟಿಕೆಟ್‌ ನೀಡುವಲ್ಲಿ ಸಫಲರಾಗಿದ್ದಾರೆ. ಅಲ್ಪಸಂಖ್ಯಾತರ ಮತಗಳು ಕೈ ತಪ್ಪುವ ಭೀತಿಯ ನಡುವೆಯೂ ಡಿಕೆ ಶಿವಕುಮಾರ್‌ ದಾವಣಗೆರೆ ಉಪಚುನಾವಣೆಯ ನೊಗ ಹೊತ್ತಿದ್ದಾರೆ.

ಇನ್ನೂ ತೀವ್ರ ಕಗ್ಗಂಟಾಗಿದ್ದ ಬಾಗಲಕೋಟೆಯ ಕಾಂಗ್ರೆಸ್‌ ಟಿಕೆಟ್‌ ಫೈಟ್‌ ತಣ್ಣಗಾಗಿದ್ದು, ದಿ. ಹೆಚ್.ವೈ. ಮೇಟಿ ಪುತ್ರ ಉಮೇಶ್‌ ಮೇಟಿಗೆ ಒಲಿದಿದೆ. ಸಾಕಷ್ಟು ಹಗ್ಗಜಗ್ಗಾಟದ ನಡುವೆ ಕೊನೆಗೆ ಕಾಂಗ್ರೆಸ್‌ ಪಕ್ಷ ಮೇಟಿ ಕುಟುಂಬಕ್ಕೆ ಟಿಕೆಟ್ ನೀಡಿದೆ.‌ ಈ ಕ್ಷೇತ್ರದ ಟಿಕೆಟ್‌ಗಾಗಿ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗಿತ್ತು.

ಇದನ್ನೂ ಓದಿ : Viral News ; ಅಪಾಯದಲ್ಲಿ ಗಂಗಾ ನದಿಯ ಈ ಸೇತುವೆ : ಜನರಲ್ಲಿ ಪಿಲ್ಲರ್ ಕುಸಿತದ ಆತಂಕ!

ಆದರೆ ಅವುಗಳನ್ನೆಲ್ಲ ಬದಿಗೊತ್ತಿ ಆಪ್ತನ ಕುಟುಂಬಕ್ಕೆ ಬಿ ಫಾರಂ ತಲುಪುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೋಡಿಕೊಂಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯನವರಿಗೆ ಬಾಗಲಕೋಟೆಯ ಅಗ್ನಿ ಪರೀಕ್ಷೆಯಲ್ಲಿ ಗೆದ್ದು ಬಿಜೆಪಿಯ ಅಲೆಯಲ್ಲಿ ಕಾಂಗ್ರೆಸ್‌ ಉಳಿಸಿಕೊಳ್ಳುವ ಸವಾಲು ಎದುರಾದಂತಾಗಿದೆ.

ಅಲ್ಲದೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿಯ ನಡುವೆಯೂ ಪಕ್ಷದಲ್ಲಿನ ಫೈಟ್ ಇಲ್ಲಿಗೆ ತಣ್ಣಗಾಗುತ್ತಾ? ಅಥವಾ‌ ಚುನಾವಣೆಯ ಮೇಲೆ ಪರಿಣಾಮ ಬೀರುತ್ತಾ ಎನ್ನುವುದನ್ನು ಕಾದು ನೋಡಬೇಕಿದೆ.

Tags: BagalakoteBy electionCM SiddaramaiahCongress High CommandCongress TicketDavanagere SouthDK ShivakumarH Y MetiH Y Meti Familykannada newskarnataka newsKarnataka PoliticsPratidhvaniSamarth Shamanurshamanur shivashankarappaUmesh Meti
Previous Post

ಭಾರತದಲ್ಲಿ ಸಮಕಾಲೀನ ಪ್ರಭುತ್ವ

Next Post

ಬಾಗಲಕೋಟೆಯಲ್ಲಿ ವಿಜಯ ಪಥ, ದಾವಣಗೆರೆಯಲ್ಲಿ ಅಚ್ಚರಿ ಕಾದಿದೆ : ಬೊಮ್ಮಾಯಿ ಶಾಕಿಂಗ್‌ ಹೇಳಿಕೆ

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದೆಹಲಿ ಬುಲಾವ್ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ ಇಲ್ಲಿದೆ: ಏನಿದೆ ಕಾಂಗ್ರೆಸ್ ಲೆಕ್ಕಾಚಾರ?

May 25, 2026
ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

ದಿಢೀರ್ ದೆಹಲಿ ಬುಲಾವ್! ಸಿದ್ದರಾಮಯ್ಯ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ಬಾಗಲಕೋಟೆಯಲ್ಲಿ ವಿಜಯ ಪಥ, ದಾವಣಗೆರೆಯಲ್ಲಿ ಅಚ್ಚರಿ ಕಾದಿದೆ : ಬೊಮ್ಮಾಯಿ ಶಾಕಿಂಗ್‌ ಹೇಳಿಕೆ

ಬಾಗಲಕೋಟೆಯಲ್ಲಿ ವಿಜಯ ಪಥ, ದಾವಣಗೆರೆಯಲ್ಲಿ ಅಚ್ಚರಿ ಕಾದಿದೆ : ಬೊಮ್ಮಾಯಿ ಶಾಕಿಂಗ್‌ ಹೇಳಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada