• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ಪ್ರತಿಧ್ವನಿ by ಪ್ರತಿಧ್ವನಿ
April 13, 2026
in ಕರ್ನಾಟಕ
0
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ
Share on WhatsAppShare on FacebookShare on Telegram

ಬೆಂಗಳೂರು, ಏ. 09:

ADVERTISEMENT

ರಾಜ್ಯದಲ್ಲಿ ಗೃಹ ರಕ್ಷಕದಳ ಹಾಗೂ ಸಶಸ್ತ್ರ ಪೊಲೀಸ್ ಸಿಬ್ಬಂದಿಗಳಿಂದ ನಡೆಯುತ್ತಿರುವ ನಿಯಮಬಾಹಿರ ವಾಹನ ತಪಾಸಣೆಗಳನ್ನು ತಕ್ಷಣ ನಿಲ್ಲಿಸುವಂತೆ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯ ಮೋಹನ್ ಕುಮಾರ್ ದಾನಪ್ಪ ಅವರು ಡಿಜಿ ಮತ್ತು ಐಜಿಪಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ಮೋಟಾರ್ ವಾಹನ ಕಾಯ್ದೆ-1988 ಮತ್ತು ಕರ್ನಾಟಕ ಮೋಟಾರ್ ವಾಹನಗಳ ನಿಯಮಗಳು-1989ರ ಪ್ರಕಾರ, ಸಹಾಯಕ ಪೊಲೀಸ್ ಉಪ ನಿರೀಕ್ಷಕ (ಎಎಸ್‌ಐ) ಮತ್ತು ಅದಕ್ಕಿಂತ ಮೇಲಿನ ಅಧಿಕಾರಿಗಳಿಗೆ ಮಾತ್ರ ವಾಹನ ತಪಾಸಣೆ ನಡೆಸುವ ಹಾಗೂ ನಿಯಮ ಉಲ್ಲಂಘನೆಗೆ ದಂಡ ವಿಧಿಸುವ ಅಧಿಕಾರವಿದೆ.

DISHA ಸಭೆಗೆ ಬಂದ HD Kumaraswamy ಕೈಕುಲುಕಿ ಬರಮಾಡಿಕೊಂಡ ಕಾಂಗ್ರೆಸ್ MLA Ravikumar Gowda Ganiga

ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಹೆಡ್ ಕಾನ್ಸ್‌ಟೇಬಲ್‌ಗಳಿಗೆ ಎಫ್‌ಟಿವಿಆರ್ ವರದಿ ಆಧಾರದ ಮೇಲೆ ಟ್ರಾಫಿಕ್ ಚಾಲನ್ ನೀಡುವ ಅವಕಾಶವಿದ್ದರೂ, ಗೃಹ ರಕ್ಷಕದಳದ ಸಿಬ್ಬಂದಿ ಮತ್ತು ಸಶಸ್ತ್ರ ಪಡೆಯ ಕೆಲವು ಸಿಬ್ಬಂದಿಗಳಿಗೆ ಈ ಅಧಿಕಾರ ಅನ್ವಯಿಸುವುದಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.ಆದರೂ, ಕೆಲವೆಡೆ ಅಧಿಕಾರಿಗಳ ಅನುಪಸ್ಥಿತಿಯಲ್ಲಿ ಗೃಹ ರಕ್ಷಕದಳ ಮತ್ತು ಸಶಸ್ತ್ರ ಪೊಲೀಸ್ ಸಿಬ್ಬಂದಿಗಳು ವಾಹನಗಳನ್ನು ನಿಲ್ಲಿಸಿ ತಪಾಸಣೆ ನಡೆಸುವುದು, ವಾಹನ ಚಾಲಕರಿಗೆ ಬೆದರಿಕೆ ಹಾಕುವುದು, ಕೀಲಿಗಳನ್ನು ಕಿತ್ತುಕೊಳ್ಳುವುದು ಹಾಗೂ ದೌರ್ಜನ್ಯ ನಡೆಸುತ್ತಿರುವ ಬಗ್ಗೆ ದೂರುಗಳು ಬಂದಿವೆ. ಗ್ರಾಮಾಂತರ ಪ್ರದೇಶಗಳು, ಚೆಕ್‌ಪೋಸ್ಟ್‌ಗಳು ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿವೆ ಎನ್ನಲಾಗಿದೆ.

Vatal Nagaraj: ಪೊಲೀಸ್ ಜೀಪ್‌ ಹತ್ತಲ್ಲ ಎಂದ ವಾಟಾಳ್.. ಆಟೋದಲ್ಲಿ ಕರೆದುಕೊಂಡು ಹೋದ ಪೊಲೀಸರು #pratidhvani

ಇದಲ್ಲದೆ, ಸಾರ್ವಜನಿಕರಿಂದ ಅನಧಿಕೃತ ಹಣ ವಸೂಲಿ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದೂ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ದೂರವಾಣಿ ಮೂಲಕ ಹಾಗೂ ಪ್ರಾಧಿಕಾರದ ಕಚೇರಿಗೆ ಭೇಟಿ ನೀಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕಾನೂನಿನ ಪ್ರಕಾರ ಅಧಿಕಾರ ಹೊಂದಿರುವವರ ಹೊರತು ಇತರ ಸಿಬ್ಬಂದಿಗಳು ಯಾವುದೇ ವಾಹನಗಳನ್ನು ತಡೆದು ತಪಾಸಣೆ ನಡೆಸದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು. ಜೊತೆಗೆ, ಇಂತಹ ದುರ್ನಡತೆಗಳು ಮರುಕಳಿಸದಂತೆ ಪ್ರತಿದಿನ ರೋಲ್ ಕಾಲ್ ವೇಳೆ ಸಿಬ್ಬಂದಿಗೆ ಸ್ಪಷ್ಟ ಸೂಚನೆ ನೀಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ.

Tags: Armed PolicebengaluruDGPHome GuardsIllegal CheckingIllegal Money CollectionPolice departmentpratidavaniPublic HarassmentTRAFFIC RULESVehicle Checking
Previous Post

ಆರ್‌ಸಿಬಿ ವಿರುದ್ಧ ಪಂದ್ಯದ ಮಧ್ಯದಲ್ಲಿ ಆಟ ಬಿಟ್ಟ ರೋಹಿತ್ ಶರ್ಮಾ, ಪಂದ್ಯಕ್ಕೆ ತಿರುವು

Next Post

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

Related Posts

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?
ಅಂಕಣ

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

by ಪ್ರತಿಧ್ವನಿ
April 13, 2026
0

ವಿಶೇಷ ಲೇಖನ : ನಾ ದಿವಾಕರ, ಹಿರಿಯ ಲೇಖಕರು.. ಡಾ. ಬಿ.ಆರ್. ಅಂಬೇಡ್ಕರ್ ಮತ್ತೊಮ್ಮೆ ವಾರ್ಷಿಕ ಆಚರಣೆಗಳ ಕೇಂದ್ರ ಬಿಂದುವಾಗಿ ಸಾರ್ವಜನಿಕರ ನಡುವೆ ಕಾಣಿಸಿಕೊಳ್ಳಲಿದ್ದಾರೆ. ತಾನು ದೇಶದ...

Read moreDetails
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada