• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

ವಾಯು ಹಾಗೂ ಕ್ಷಿಪಣಿಗಳ ದಾಳಿಯನ್ನು ನಿಲ್ಲಿಸಿ, ಜಗತ್ತಿನಲ್ಲಿ ಶಾಂತಿ ನೆಲೆಸಬೇಕೆಂದು ನಡೆದ ಸಂಧಾನ ಮಾತುಕತೆ ವಿಫಲ..

ಪ್ರತಿಧ್ವನಿ by ಪ್ರತಿಧ್ವನಿ
April 13, 2026
in Top Story, ಇದೀಗ, ದೇಶ, ರಾಜಕೀಯ, ವಿದೇಶ
0
ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?
Share on WhatsAppShare on FacebookShare on Telegram

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್‌ ಹಾಗೂ ಅಮೆರಿಕ ನಡುವಿನ ಯುದ್ಧವೂ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಈಗಾಗಲೇ ವಾಯು ಹಾಗೂ ಕ್ಷಿಪಣಿಗಳ ದಾಳಿಯನ್ನು ನಿಲ್ಲಿಸಿ, ಜಗತ್ತಿನಲ್ಲಿ ಶಾಂತಿ ನೆಲೆಸಬೇಕೆಂದು ನಡೆದ ಸಂಧಾನ ಮಾತುಕತೆ ವಿಫಲವಾಗಿದೆ.

ADVERTISEMENT
TVK Vijay : ಸ್ಟಾಲಿನ್ ವಿರುದ್ಧ ಗುಡುಗಿದ ನಟ ವಿಜಯ್..! #mkstalin #dmk #aiadmk #tamilnadu #pratidhvani

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಸುದೀರ್ಘ ಚರ್ಚೆಯ ಬಳಿಕ ಅಮೆರಿಕದ ಮೊಂಡುತನದ ಬೇಡಿಕೆಗಳ ಹಿನ್ನೆಲೆಯಲ್ಲಿ ಇರಾನ್‌ ಸಂಧಾನದಿಂದ ಹಿಂದಕ್ಕೆ ಸರಿದಿದೆ. ಅಲ್ಲದೆ ಅಂತರರಾಷ್ಟ್ರೀಯ ಹಡಗುಗಳ ಚಲನೆಯ ಮೇಲೆ ನಿರ್ಬಂಧಗಳನ್ನು ವಿಧಿಸುವುದು ಕಾನೂನುಬಾಹಿರ ಕೃತ್ಯ ಮತ್ತು ಕಡಲ್ಗಳ್ಳತನಕ್ಕೆ ಸಮಾನವಾಗಿದೆ ಎಂದು ಇರಾನ್‌ನ ಸಶಸ್ತ್ರ ಪಡೆಗಳು ಅಮೆರಿಕದ ವಿರುದ್ಧ ಕಿಡಿಕಾರಿವೆ.

ಮುಖ್ಯವಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೊರ್ಮುಜ್‌ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಸುತ್ತೇನೆ ಎಂದು ಬೆದರಿಕೆಯೊಡ್ಡಿದ್ದಾರೆ. ಇದರಿಂದ ಇರಾನಿನ ಬಂದರುಗಳನ್ನು ಪ್ರವೇಶಿಸುವ ಮತ್ತು ನಿರ್ಗಮಿಸುವ ಎಲ್ಲಾ ಸಮುದ್ರ ಸಂಚಾರವನ್ನು ನಿರ್ಬಂಧಿಸುವುದಾಗಿ ಅಮೆರಿಕ ಸೇನೆ ಹೇಳಿದೆ.

ಇದನ್ನೂ ಓದಿ : ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಇನ್ನೂ ಅಮೆರಿಕ ಶಾಂತಿ ನೆಲೆಸುವ ಉದ್ದೇಶದಿಂದ ಸಂಧಾನಕ್ಕೆ ಬಂದಿರಲಿಲ್ಲ, ತಳಬುಡವಿಲ್ಲದ ಬೇಡಿಕೆಗಳೊಂದಿಗೆ ಆಗಮಿಸಿದ್ದ ಕಾರಣ ಪಾಕಿಸ್ತಾನದಲ್ಲಿ ಅಮೆರಿಕದೊಂದಿಗಿನ ಮಾತುಕತೆ ವಿಫಲವಾಯಿತು ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ.

ಇಸ್ರೇಲ್ ಸೇನೆಯು ದಕ್ಷಿಣ ಲೆಬನಾನ್ ಮೇಲೆ ಬಾಂಬ್ ದಾಳಿ ನಡೆಸಿ, ಮಾರೂಬ್‌ನಲ್ಲಿ ನಾಲ್ಕು ಜನರನ್ನು ಬಲಿ ಪಡೆದಿದೆ. ಹಿಜ್ಬೊಲ್ಲಾ ಉಗ್ರ ಸಂಘಟನೆ ಜೊತೆಗಿನ ಘರ್ಷಣೆಗಳು ಮುಂದುವರಿದಂತೆ ಇಸ್ರೇಲಿ ಸೈನಿಕರು ಬಿಂಟ್ ಜೆಬೈಲ್ ಪಟ್ಟಣದ ಎಲ್ಲಾ ಪ್ರವೇಶದ್ವಾರಗಳನ್ನು ವಶಪಡಿಸಿಕೊಂಡಿದ್ದಾರೆ.

ಅಲ್ಲದೆ ಇರಾನ್ ರಾಜಧಾನಿ ತೆಹ್ರಾನ್ ಮೇಲೆ ಅಮೆರಿಕ-ಇಸ್ರೇಲ್‌ ಜಂಟಿ ವೈಮಾನಿಕ ದಾಳಿಯ ನಂತರ, ಇರಾನ್‌ನ ರೆಡ್ ಕ್ರೆಸೆಂಟ್ ಸೊಸೈಟಿ ತನ್ನ ರಕ್ಷಣಾ ತಂಡಗಳು ಅವಶೇಷಗಳಡಿಯಿಂದ 620 ಜನರನ್ನು ರಕ್ಷಿಸಿವೆ ಎಂದು ವರದಿಗಳು ಹೇಳಿವೆ.

ಇನ್ನೂ ದಾಳಿಯ ಪರಿಣಾಮವಾಗಿ ದೇಶಾದ್ಯಂತ ಒಟ್ಟು 125,630 ನಾಗರಿಕ ಪ್ರದೇಶದ ಕಟ್ಟಡಗಳಿಗೆ ತೀವ್ರ ಹಾನಿಯಾಗಿದೆ. ಇದರಲ್ಲಿ ಸುಮಾರು 100,000 ವಸತಿ ಘಟಕಗಳು ಮತ್ತು ಸುಮಾರು 24,000 ವಾಣಿಜ್ಯ ಆಸ್ತಿಗಳು ಸೇರಿವೆ ಎಂಬ ಮಾಹಿತಿಯೂ ಹೊರಬಿದ್ದಿದೆ.

Tags: american presidentBenjamin netanyahuCivilian LostCompromise MeetingCrucial SituationDonald TrumpDrone attackinternational newsIran Foreigniran israeliran warMissile AttackPratidhvaniStrait Of HormuzSyed Abbas AragchiTeharan
Previous Post

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

Next Post

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

Related Posts

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!
Top Story

ಲೆಕ್ಕ ಕೊಡಿ ಅಭಿಯಾನದ ಎಫೆಕ್ಟ್‌ : ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ..!

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಹತ್ವದ ಬೆಳವಣಿಗೆಯೊಂದರಲ್ಲಿ ದಾವಣಗೆರೆಯ ಹರಿಹರ ಪಂಚಮಸಾಲಿ ಗುರು ಪೀಠದಿಂದ ಶ್ವಾಸಗುರು ವಚನಾನಂದ ಸ್ವಾಮೀಜಿಯವರನ್ನು ಉಚ್ಚಾಟಿಸಲಾಗಿದೆ. ಇಂದು ಸಭೆ ಸೇರಿದ್ಧ ಧರ್ಮ ದರ್ಶಿ ಮಂಡಳಿಯ 15 ಸದಸ್ಯರ...

Read moreDetails
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

April 13, 2026
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
Next Post
ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

ಅನಗತ್ಯ ಹೇಳಿಕೆ ನೀಡಿದ್ರೆ ಶಿಸ್ತುಕ್ರಮ : ಶಾಸಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್‌ ವಾರ್ನ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!