• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, August 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗಾಗಿ 419.50 ಕೋಟಿ ರೂ. ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಲಭ್ಯ, ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..

ಪ್ರತಿಧ್ವನಿ by ಪ್ರತಿಧ್ವನಿ
April 16, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Share on WhatsAppShare on FacebookShare on Telegram

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.

ADVERTISEMENT
Tamil Nadu Polls : ಅಮ್ಮಾ ಜಯಲಲಿತಾ ರಾಜಕೀಯದಲ್ಲಿ ಸಾಕಷ್ಟು ನೋವುಗಳನ್ನು ಅನುಭವಿಸಿದ್ದಾರೆ.. #pratidhvani

ವಿಧಾನಸೌಧ ಸಭಾಂಗಣದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿಂದು ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಕುಡಿಯುವ ನೀರು ಪೂರೈಕೆ ಕುರಿತಾಗಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ ತಿಂಗಳಲ್ಲಿ ವಾಡಿಕೆ ಮಳೆಯಾಗುವ ಸಾಧ್ಯತೆಯಿದ್ದು, ಸೆಪ್ಟಂಬರ್ ತಿಂಗಳಲ್ಲಿ ಮಳೆ ಕಡಿಮೆ ನಿರೀಕ್ಷಿಸಲಾಗಿದೆ. ಕುಡಿಯುವ ನೀರಿಗೆ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ಇದಕ್ಕೆ ಹೊಣೆಯಾಗುತ್ತಾರೆ. ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ತಾಕೀತು ಮಾಡಿದ್ದಾರೆ.

ಈ ಬಾರಿ ಎಪ್ರಿಲ್-ಜೂನ್ ಅವಧಿಯಲ್ಲಿ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡು ಬರುವ ಸಾಧ್ಯತೆಯಿದೆ. ಇಂತಹ ಸಂದರ್ಭದಲ್ಲಿ ಯಾವ ರೀತಿಯ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಬಗ್ಗೆ ಎಲ್ಲಾ ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

ಸಾರ್ವಜನಿಕರಿಗೆ ನೆರಳಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕುಡಿಯುವ ನೀರು ಪೂರೈಕೆಯನ್ನು ಖಾತ್ರಿಪಡಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಅನುದಾನವನ್ನು ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

114 ತಾಲೂಕುಗಳ 598 ಗ್ರಾಮ ಪಂಚಾಯತ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ..

ರಾಜ್ಯದಲ್ಲಿ ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸಬಹುದಾದ 213 ತಾಲೂಕುಗಳನ್ನು ಹಾಗೂ 2410 ಗ್ರಾಮ ಪಂಚಾಯತಿಗಳನ್ನು ಗುರುತಿಸಲಾಗಿದೆ. ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಟ್ಯಾಂಕರ್‌ಗಳ ಮೂಲಕ 137 ಗ್ರಾಮಗಳಿಗೆ ಒಟ್ಟು 129 ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. 585 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆಯಲಾಗಿದ್ದು, ಇದರ ಮೂಲಕ 515ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುತ್ತಿರುವ ಕುರಿತು ಅಧಿಕಾರಿಗಳು ಸಭೆಯಲ್ಲಿ ಸಿಎಂ ಗಮನಕ್ಕೆ ತಂದಿದ್ದಾರೆ.

ಕಲಬುರಗಿ ಜಿಲ್ಲೆಯ 147 ಗ್ರಾಮ ಪಂಚಾಯತ್, ಬಾಗಲಕೋಟೆ 114, ಬೆಳಗಾವಿಯ 127, ಚಿಕ್ಕಮಗಳೂರಿನ 115, ಹಾವೇರಿಯ 138, ಮಂಡ್ಯ 130, ತುಮಕೂರಿನ 141 ಹಾಗೂ ಉತ್ತರಕನ್ನಡ ಜಿಲ್ಲೆಯ 125 ಗ್ರಾಮ ಪಂಚಾಯತ್ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದೆಂದು ಗುರುತಿಸಲಾಗಿದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರಸ್ತುತ 27 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು, 95 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂದು ಗುರುತಿಸಲಾಗಿದೆ. ಒಟ್ಟು 145 ವಾರ್ಡ್ಗಳಿಗೆ 57 ಟ್ಯಾಂಕರ್ಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ಬಾಡಿಗೆಗೆ 22 ಕೊಳವೆ ಬಾವಿಗಳನ್ನು ಪಡೆಯಲಾಗಿದೆ. ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಟ್ಯಾಂಕರ್ ನೀರು ಪೂರೈಕೆ ಮಾಡಬೇಕು. ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯುವುದಕ್ಕೆ ಆದ್ಯತೆ ನೀಡಬೇಕು. ಅಗತ್ಯ ಸಂದರ್ಭದಲ್ಲಿ ಕೊಳವೆ ಬಾವಿ ಕೊರೆಯಬಹುದಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Street Vendors : ಹಗಲು ದರೋಡೆಗಿಳಿದ ಗೋಕಾಕಿನ ಅಂಕಲಗಿ ಪಂಚಾಯತಿ... #pratidhvani

ಪ್ರಮುಖವಾಗಿ ರಾಜ್ಯದ 14 ಜಲಾಶಯಗಳಲ್ಲಿ ಪ್ರಸ್ತುತ 321.93 ಟಿ.ಎಂ.ಸಿ ನೀರು ಲಭ್ಯವಿದ್ದು, ಇದು ಒಟ್ಟು ಸಾಮರ್ಥ್ಯದ ಶೇ.36ರಷ್ಟಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 330.35 ಟಿ.ಎಂ.ಸಿ ನೀರು ಲಭ್ಯವಿತ್ತು. ಪ್ರಸುತ ಕುಡಿಯುವ ನೀರಿಗೆ ಸಾಕಷ್ಟು ನೀರು ಜಲಾಶಯಗಳಲ್ಲಿ ಲಭ್ಯವಿದೆ. ಮಳೆಗಾಲ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿರುವುದರಿಂದ ಜುಲೈ ಮಧ್ಯದವರೆಗೂ ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು. ನೀರಾವರಿಗಿಂತ ಕುಡಿಯುವ ನೀರಿನ ಪೂರೈಕೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಜಲಾಶಯಗಳಲ್ಲಿ ನೀರಿನ ಸೋರಿಕೆಯನ್ನು ಗುರುತಿಸಿ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು..

ಕುಡಿಯುವ ನೀರಿನ ಕುರಿತಾಗಿ ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು. ಇದಕ್ಕಾಗಿ ತಾಲೂಕು ಹಾಗೂ ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು. ಜಿಲ್ಲಾ ಮಟ್ಟದ ಕಾರ್ಯಪಡೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು. ಎಲ್ಲಾ ಆರ್. ಒ ಘಟಕಗಳು 24/7 ನಿರಂತರ ವಿದ್ಯುತ್ ಸರಬರಾಜಿನೊಂದಿಗೆ ಕಾರ್ಯ ನಿರ್ವಹಿಸುವುದನ್ನು ಖಾತ್ರಿಪಡಿಸಬೇಕು. ಆರ್ ಒ ಘಟಕಗಳ ತಕ್ಷಣದ ದುರಸ್ತಿ ಮತ್ತು ಕುಡಿಯುವ ನೀರಿನ ಪೂರೈಕೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ತಾಲೂಕು ಮಟ್ಟದಲ್ಲಿ ತಂಡಗಳನ್ನು ನಿಯೋಜಿಸಬೇಕು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಈ ಸ್ವರ ಸಾಮ್ರಾಜ್ಞಿಗೂ ಸಾಟಿ ಯಾರೂ ಇಲ್ಲ

ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಸ್ಥಿತಿಯಿಂದಾಗಿ ಈ ಬಾರಿ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿದೆ. ವ್ಯಾಪಾರಿಗಳು ರಸಗೊಬ್ಬರವನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿ ದಾಸ್ತಾನು ಇರಿಸುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು. ರೈತರಿಗೆ ಸೂಕ್ತ ಸಮಯದಲ್ಲಿ ರಸಗೊಬ್ಬರ ಲಭ್ಯತೆಯನ್ನು ಖಾತ್ರಿಪಡಿಸಲು ಕ್ರಮ ಕೈಗೊಳ್ಳಬೇಕು. ಯೂರಿಯಾ, ಡಿಎಪಿ ಸರಿಯಾಗಿ ವಿತರಣೆಯಾಗುವಂತೆ ನೋಡಿಕೊಳ್ಳಬೇಕು. ಬೇರೆ ರಾಜ್ಯಗಳಿಗೆ ರಸಗೊಬ್ಬರ ಸಾಗಾಟ ಮಾಡುವುದನ್ನು ನಿಯಂತ್ರಿಸಬೇಕು. ಇದಕ್ಕಾಗಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯನ್ನು ಬಿಗಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಕಟ್ಟಪ್ಪಣೆ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಮೇವಿನ ಕೊರತೆ ಸಧ್ಯಕ್ಕೆ ಇಲ್ಲ..

ಕಳೆದ ಎರಡು ವರ್ಷಗಳಲ್ಲಿ ಉತ್ತಮ ಮಳೆಯಾಗಿರುವುದರಿಂದ ಮೇವಿನ ಕೊರತೆ ಸಧ್ಯಕ್ಕೆ ಇರುವುದಿಲ್ಲ. ಆದರೆ ಈ ಕುರಿತು ನಿರ್ಲಕ್ಷ್ಯ ವಹಿಸದೆ ಮೇವಿನ ಲಭ್ಯತೆಯನ್ನು ಖಾತ್ರಿಪಡಿಸಬೇಕು. ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ ಕುರಿತಾದ ಟಾಸ್ಕ್‌ ಪೋರ್ಸ್‌ ಸಭೆ ನಡೆಸಿ ವರದಿ ಸಲ್ಲಿಸಬೇಕು. ಕಲುಷಿತ ನೀರು ಪೂರೈಕೆಯಾಗಿ ಆರೋಗ್ಯ ಸಮಸ್ಯೆಯಾಗದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುರಿತು ಈಗಾಗಲೇ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದ್ದು, ಯಾವುದೇ ಕಾರಣಕ್ಕೂ ಕಲುಷಿತ ನೀರಿನಿಂದ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು ಜಿಲ್ಲಾಧಿಕಾರಿಗಳ ಜವಾಬ್ದಾರಿ ಎಂದು ಸಿಎಂ ಆದೇಶಿಸಿದ್ದಾರೆ.

ರಸಗೊಬ್ಬರ ಮಾರಾಟದ ಮೇಲೆ ನಿರಂತರ ನಿಗಾ ವಹಿಸಿ, ಅರ್ಹ ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ. ಹಾವೇರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಕಳೆದ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದ ರಸಗೊಬ್ಬರ ಮಾರಾಟವಾಗಿದ್ದು, ಇದಕ್ಕೆ ಕಾರಣವೇನು? ರಸಗೊಬ್ಬರ ಮಾರಾಟದ ಮೇಲೆ ನಿರಂತರ ನಿಗಾ ವಹಿಸಿ, ಅರ್ಹ ರೈತರಿಗೆ ರಸಗೊಬ್ಬರ ಕೊರತೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ಒದಗಿಸಲು ಆದ್ಯತೆ ನೀಡಬೇಕು. ಪಂಚಾಯತ್ ರಾಜ್ ಮತ್ತು ಇಂಧನ ಇಲಾಖೆ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು. ವಿದ್ಯುತ್ ಸಂಪರ್ಕ ಕಲ್ಪಿಸಲು ಠೇವಣಿಗಾಗಿ ಕಾಯಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆಯಲ್ಲಿ ಖಡಕ್‌ ಸೂಚನೆ ಹಾಗೂ ಸಲಹೆಗಳನ್ನು ನೀಡುವ ಮೂಲಕ ಬೇಸಿಗೆಯನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗಿರುವಂತೆ ತಿಳಿಸಿದ್ದಾರೆ.

Tags: Chief Secretary Of KarnakatakaCM Siddaramaiahcongress karnatakacongress ministersDistrict Collectors MeetingDK ShivakuamrDr H.C.MahadevappaDrinking WaterK. VenkateshKarnataka GovernmentKrishna ByregowdaM B PatilPratidhvaniPriyanka KhargeRDPRRevenue DepartmentShalini RajaneeshSummer ProblemsWater Problems
Previous Post

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

Next Post

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

Related Posts

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ
Top Story

ಶಿವಶಂಕರಪ್ಪ ಸಾಹುಕಾರ್‌ಗೆ ಬಿಗ್‌ ರಿಲೀಫ್‌: ಶೀಘ್ರವೇ ಮತ್ತೆ KPSC ಅಧ್ಯಕ್ಷ ಪಟ್ಟ

by ಪ್ರತಿಧ್ವನಿ
August 18, 2026
0

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಸ್ಥಾನದಿಂದ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೇ 7 ದಿನಗಳೊಳಗೆ ಮತ್ತೆ...

Read moreDetails
‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

‘ಟಾಕ್ಸಿಕ್’ : ಆಗಸ್ಟ್‌ 21ರಿಂದ ಮುಂಗಡ ಬುಕ್ಕಿಂಗ್‌ ಶುರು

August 18, 2026
ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

ಜೈಲಿಗೆ ಹಾಕಿದ್ರೂ ನಾವು ‘ವಂದೇ ಮಾತರಂ’ ಎರಡೇ ಪ್ಯಾರಾ ಹಾಡೋದು: ಬಿ.ಕೆ ಹರಿಪ್ರಸಾದ್‌

August 18, 2026
ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

ಎನ್‌ಕೌಂಟರ್‌ ಪ್ರಕರಣ: ತ.ನಾಡು ಸರ್ಕಾರ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ

August 18, 2026
ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

ಆರೋಪಿ ಪವಿತ್ರಾ ಗೌಡಗೆ ಜ್ವರ; ವಿಚಾರಣೆಗೆ ಗೈರು

August 18, 2026
Next Post
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada