• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ನೀವೆಲ್ಲ ಅದೃಷ್ಟವಂತರು, ಇಂತಹ ಮಹತ್ವದ ಕಾನೂನಿನ ಜಾರಿಯಲ್ಲಿ ಭಾಗಿಯಾಗಿದ್ದೇವೆ. ಈ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸುವವರು ಸುಧೀರ್ಘ ಕಾಲದವರೆಗೂ ಬೆಲೆ ತೆರಬೇಕಾಗುತ್ತದೆ

ಪ್ರತಿಧ್ವನಿ by ಪ್ರತಿಧ್ವನಿ
April 16, 2026
in Top Story, ಕರ್ನಾಟಕ, ದೇಶ
0
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Share on WhatsAppShare on FacebookShare on Telegram

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ಅವರು ಮಸೂದೆಗಳನ್ನು ಮಂಡಿಸಿ ಸಂಪೂರ್ಣ ವಿವರವನ್ನು ನೀಡಿದ್ದಾರೆ. ಅಲ್ಲದೆ ಕೇಂದ್ರ ಸಂಸದೀಯ ವ್ಯವಹಾರಗಳ ಇಲಾಖೆ ಸಚಿವ ಕಿರಣ್‌ ರಿಜಿಜು ಕೇಂದ್ರ ಸರ್ಕಾರದ ಮಸೂದೆಯನ್ನು ವಿಪಕ್ಷಗಳು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ADVERTISEMENT
Tamil Nadu Polls : ಅಮ್ಮಾ ಜಯಲಲಿತಾ ರಾಜಕೀಯದಲ್ಲಿ ಸಾಕಷ್ಟು ನೋವುಗಳನ್ನು ಅನುಭವಿಸಿದ್ದಾರೆ.. #pratidhvani

ಇನ್ನೂ ಮಧ್ಯಾಹ್ನದ ವೇಳೆಗೆ ಲೋಕಸಭೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಮಹಿಳಾ ಮೀಸಲಾತಿ ಮಸೂದೆಯ ಮೇಲೆ ಸುದೀರ್ಘವಾದ ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ. ಅಲ್ಲದೆ ಮಾತಿನಲ್ಲೆ ವಿಪಕ್ಷಗಳ ನಾಯಕರಿಗೆ ಟಾಂಗ್‌ ಕೊಟ್ಟ ಮೋದಿ, ಮಹಿಳಾ ಮೀಸಲಾತಿ ಬಿಲ್‌ (Womens Reservation Bill) ವಿರೋಧಿಸುವವರನ್ನ ದೇಶದ ಮಹಿಳೆಯರು ಕ್ಷಮಿಸುವುದಿಲ್ಲ. ಈ ನಿರ್ಧಾರದ ಹಿಂದೆ ಮೋದಿಗೆ ರಾಜಕೀಯ ಸ್ವಾರ್ಥ ಇದೆ ಎಂದು ಇಲ್ಲಿ ಕೆಲವರ ಭಾವನೆಯಿದೆ. ಇದನ್ನ ವಿರೋಧ ಮಾಡಿದರೆ ನಮಗೆ ರಾಜಕೀಯ ಲಾಭ ಸಿಗುತ್ತದೆ ಎಂದುಕೊಂಡಿದ್ದಾರೆ. ಆದರೆ ನಮಗೆ ಈ ವಿಚಾರದಲ್ಲಿ ಕ್ರೆಡಿಟ್‌ ಬೇಡ, ನಾಳೆ ಜಾಹೀರಾತು ನೀಡುವ ಮೂಲಕ ಪ್ರತಿಯೊಬ್ಬರಿಗೂ ಕ್ರೆಡಿಟ್ ನೀಡಲು ನಾವು ಸಿದ್ಧರಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಪಕ್ಷಗಳ ಕಾಲೆಳೆದಿದ್ದಾರೆ.

ಈ ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸುವವರು ಸುಧೀರ್ಘ ಕಾಲದವರೆಗೂ ಬೆಲೆ ತೆರಬೇಕಾಗುತ್ತದೆ ಎಂದು ಮಾತಿನಲ್ಲೇ ಪಂಚ್‌ ಕೊಟ್ಟರು. ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಈ ದಿನವು ಅತ್ಯಂತ ನಿರ್ಣಾಯಕವಾಗಿದೆ. ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ಅಗತ್ಯವಿದೆ, ಪ್ರಜಾಪ್ರಭುತ್ವದಲ್ಲಿ ಸಮಯಕ್ಕೆ ತಕ್ಕಂತೆ ಬದಲಾವಣೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ವಿಕಸಿತ ಭಾರತ ಅಂದರೆ ನೀತಿ ನಿಯಮಗಳನ್ನ ರೂಪಿಸುವಲ್ಲಿ ಮಹಿಳೆಯರ ಪಾತ್ರವೂ ಅಗತ್ಯವಾಗಿದೆ..

ಈ ನಮ್ಮ ವ್ಯವಸ್ಥೆಯಲ್ಲಿ ಹೊಸ ಆಯಾಮ ತರುವ ಒಳ್ಳೆಯ ಸಮಯ ಈಗ ಬಂದಿದೆ. ನಾವ – ನೀವೆಲ್ಲ ಅದೃಷ್ಟವಂತರು, ಇಂತಹ ಮಹತ್ವದ ಕಾನೂನಿನ ಜಾರಿಯಲ್ಲಿ ಭಾಗಿಯಾಗಿದ್ದೇವೆ. ಎಲ್ಲ ಸಂಸದರು ಒಟ್ಟಾಗಿ ದೇಶಕ್ಕೆ ನೂತನ ದಾರಿ ಹಾಗೂ ದಿಕ್ಕನ್ನು ತೋರಿಸುತ್ತಿದ್ದೇವೆ. ಈ ತೀರ್ಮಾನವು ದೇಶದ ರಾಜಕೀಯ ಸ್ವರೂಪವನ್ನು ಬಿಂಬಿಸಲಿದೆ. ಇದು ದೇಶದ ದಿಕ್ಕು ಬದಲಿಸುವ ತೀರ್ಮಾನವೂ ಆಗಿದೆ. ದೇಶ ಹೊಸ ಆತ್ಮ ವಿಶ್ವಾಸದೊಂದಿಗೆ ಮುನ್ನುಗ್ಗುತ್ತಿದೆ, ʻವಿಕಸಿತ ಭಾರತ ಅಂದರೆ ಮೂಲಸೌಕರ್ಯಗಳ ಅಭಿವೃದ್ಧಿ ಅಷ್ಟೇ ಅಲ್ಲದೆ, ವಿಕಸಿತ ಭಾರತ ಅಂದರೆ ನೀತಿ ನಿಯಮಗಳನ್ನ ರೂಪಿಸುವಲ್ಲಿ ಮಹಿಳೆಯರ ಪಾತ್ರವೂ ಅಗತ್ಯವಾಗಿದೆ ಎಂದು ಮೋದಿ ಒತ್ತಿ ಹೇಳಿದ್ದಾರೆ.

ಈ ವಿಚಾರದಲ್ಲಿ ನಾವು ಈಗಾಗಲೇ ವಿಳಂಬ ಮಾಡಿದ್ದೇವೆ, ಇದಕ್ಕೆ ಕಾರಣ ಯಾರೇ ಆಗಿರಬಹುದು, ಈಗ ನಾವು ಒಟ್ಟಾಗಿ ಈ ಕಾರ್ಯ ಮಾಡಬೇಕು. ಅದಕ್ಕಾಗಿ ನಾವು ಎಲ್ಲ ರಾಜಕೀಯ ಪಕ್ಷಗಳನ್ನು ಸಂಪರ್ಕಿಸಿದ್ದೇವೆ. ಮುಖ್ಯವಾಗಿ ಈ ಮಸೂದೆಯನ್ನು ವಿರೋಧಿಸುವವರನ್ನು ನಮ್ಮ ದೇಶದ ಮಹಿಳೆಯರು ಕ್ಷಮಿಸುವುದಿಲ್ಲ. ಇದು ರಾಜಕೀಯ ಹಿತಾಸಕ್ತಿ ವಿಚಾರವಾಗಿಲ್ಲ. ಯಾಕೆಂದರೆ ಕಳೆದ 2023ರ ವೇಳೆಯಲ್ಲಿ ಯಾರು ಇದನ್ನು ವಿರೋಧಿಸಿದ್ದರೋ ಅವರು ಇಂದು ಇಲ್ಲಿ ಇಲ್ಲ. ವಿಪಕ್ಷಗಳಿಗೂ ಇದರಲ್ಲಿ ಲಾಭ ಇದೆ, ಇದನ್ನ ರಾಜಕೀಯಗೊಳಿಸುವುದು ಬೇಡ ಎಂದು ವಿಪಕ್ಷಗಳಿಗೆ ಮಾರ್ಮಿಕ ಸಂದೇಶ ರವಾನಿಸಿದ್ದಾರೆ.

ಈಗ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಅತ್ಯುತ್ತಮ ಸಾಧನೆ ಮಾಡುತ್ತಿದ್ದಾರೆ..

Women’s Reservation Bill in Lok Sabha : ಕೇಂದ್ರ ಸರ್ಕಾರದ ನಡೆಗೆ ಲೋಕಸಭೆಯಲ್ಲಿ ವಿಪಕ್ಷಗಳ ಖಂಡನೆ..!

ಪಂಚಾಯತಿಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಯಾವುದೇ ಆಕ್ಷೇಪ ಇಲ್ಲ. ಯಾಕೆಂದರೆ ನಮ್ಮ ಹುದ್ದೆಗೆ ಯಾವುದೇ ಸಮಸ್ಯೆ ಇಲ್ಲ ಎನ್ನುತ್ತಿದ್ದರು. ಆದರೆ ಲೋಕಸಭೆ ವಿಧಾನಸಭೆಯಲ್ಲಿ ಮೀಸಲಾತಿಗೆ ವಿರೋಧಿಸುತ್ತಿದ್ದರು ಎಂದು ಪರೋಕ್ಷವಾಗಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಆಗ ಆಗಿದ್ದು ಆಗಿದೆ, ಆದರೆ ಇಂದು ಹಾಗೆ ಯೋಚಿಸಿ ತಪ್ಪು ಮಾಡಬೇಡಿ. ಈಗ ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರು ಅತ್ಯುತ್ತಮ ಸಾಧನೆ ಮಾಡುತ್ತಿದ್ದಾರೆ. ಆದರೂ ಅವರಿಗೆ ಶೇ. 33ರಷ್ಟು ಮೀಸಲಾತಿ ನೀಡುವುದನ್ನ ಯಾಕೆ ತಡೆಯಲಾಗುತ್ತಿದೆ? ಇದನ್ನು ರಾಜಕೀಯವಾಗಿ ನೋಡಬೇಡಿ, ರಾಜಕೀಯ ಹಿತಕ್ಕಾಗಿ ಇದನ್ನ ಮಾಡಲಾಗುತ್ತಿದೆ. ವಿಕಸಿತ್ ಭಾರತಕ್ಕೆ ಅತ್ಯುತ್ತಮ ನಾರೀ ಶಕ್ತಿ ಅಗತ್ಯವಿದೆ ಪ್ರಧಾನಿ ಮೋದಿ ವಿಪಕ್ಷಗಳಿಗೆ ತಿಳಿ ಹೇಳಿದ್ದಾರೆ.

ಮಹಿಳಾ ಮೀಸಲಾತಿ ಶೇ. 33ರಷ್ಟು ಮೀಸಲಾತಿ ನೀಡುವುದು ಇದು ಪ್ರತಿಯೊಬ್ಬ ಮಹಿಳೆಯರ ಹಕ್ಕಾಗಿದೆ. ನಾವು ಇದನ್ನು ಬಹಳ ವರ್ಷಗಳಿಂದ ತಡೆದಿದ್ದೇವೆ. ಪ್ರಾಯಶ್ಚಿತ್ತದೊಂದಿಗೆ ನಾವು ಅವರಿಗೆ ಅವರ ಹಕ್ಕು ನೀಡುತ್ತಿದ್ದೇವೆ. ಈಗಲೂ ತಾಂತ್ರಿಕ ಅಂಶಗಳನ್ನು ಇಟ್ಟು ತಡೆಯುವ ಯತ್ನ ನಡೆದಿದೆ. 2023 ರಲ್ಲಿ ಸರ್ವಾನುಮತದಿಂದ ಮಹಿಳಾ ಮೀಸಲಾತಿ ಮಸೂದೆಯನ್ನ ಒಪ್ಪಿಕೊಳ್ಳಲಾಗಿತ್ತು. ಅಂದು ಈ ಮಸೂದೆಗೆ ರಾಜಕೀಯ ಬಣ್ಣ ಬಳಿಯಲಿಲ್ಲ. ಈಗ ಜನಗಣತಿ ಬಗ್ಗೆ ಮಾತನಾಡುತ್ತಿದ್ದಾರೆ. ಜನಗಣತಿಗೆ ನಾವೇಲ್ಲ ಏನು ಪ್ರಯತ್ನ ಮಾಡಿದ್ದೇವೆ ಅದನ್ನು ಎಲ್ಲರೆದುರು ತೆರೆದಿಡುತ್ತೇವೆ. 2023ರಲ್ಲೂ ಶೇ. 33ರಷ್ಟು ಮಹಿಳಾ ಮೀಸಲಾತಿ ಕೂಡಲೇ ಜಾರಿಯಾಗಬೇಕು ಎನ್ನುವ ಒತ್ತಾಯ ಅಧಿಕವಾಗಿತ್ತು. ಬಳಿಕ 2024 ರಲ್ಲಿ ಕಡಿಮೆ ಅವಧಿಯಲ್ಲಿ ಇದರ ಜಾರಿ ಸಾಧ್ಯವಿರಲಿಲ್ಲ. ಹೀಗಾಗಿ ಈಗ ಅದನ್ನು ಜಾರಿ ಮಾಡಲಾಗುತ್ತಿದೆ ಮಹಿಳಾ ಮೀಸಲಾತಿ ಮಸೂದೆಯ ವಿಳಂಬಕ್ಕೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರಣ ನೀಡಿದ್ದಾರೆ.

Tags: Amit ShahArjunRAm MeghawaalBJPcongressGram Panchayatsindia blocKiran RijeejuNarendra ModiNari Shakti AdhiniyamNDA allianceParliment sessionParliment Special SessionPriyanka Gandhi VadraRahul GandhiUnion Minister Of IndiaWomen Reservation Bill
Previous Post

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

Next Post

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada