• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸುಸ್ಥಿರ ಭವಿಷ್ಯಕ್ಕಾಗಿ ಇಂಧನ ಪರಿವರ್ತನೆ, ನೀತಿ ಮತ್ತು ಆವಿಷ್ಕಾರಗಳ ಕುರಿತ ಚಿಂತನ ಮಂಥನ..

ಪ್ರತಿಧ್ವನಿ by ಪ್ರತಿಧ್ವನಿ
April 17, 2026
in Top Story, ಇದೀಗ, ಜೀವನದ ಶೈಲಿ, ದೇಶ, ರಾಜಕೀಯ
0
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..
Share on WhatsAppShare on FacebookShare on Telegram

ಬೆಂಗಳೂರು :  ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಏಪ್ರಿಲ್ 18 ರಂದು ಬೆಂಗಳೂರಿನ ಶಾಂಗ್ರಿ-ಲಾ ಹೋಟೆಲ್‌ನಲ್ಲಿ ನಡೆಯಲಿದ್ದು, ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ADVERTISEMENT
Priyank Kharge  : ಟೆಕ್ ಉದ್ಯಮಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ.. #pratidhvani

ಕಾಮನ್‌ವೆಲ್ತ್ ಲೀಗಲ್‌ ಎಜುಕೇಷನ್‌ ಅಸೋಸಿಯೇಷನ್‌ (CLEA) ಮತ್ತು ಇಂಧನ ಇಲಾಖೆ ಜಂಟಿಯಾಗಿ ಆಯೋಜಿಸುತ್ತಿರುವ ಈ ಸಮ್ಮೇಳನವು ದೇಶ- ವಿದೇಶಗಳ ಪ್ರಮುಖ ನ್ಯಾಯಶಾಸ್ತ್ರಜ್ಞರು, ನೀತಿ ನಿರೂಪಕರು, ಉದ್ಯಮ ತಜ್ಞರು ಮತ್ತು ಶಿಕ್ಷಣ ತಜ್ಞರನ್ನು ಈ ವೇದಿಕೆಯಲ್ಲಿ ಒಟ್ಟುಗೂಡಿಸಲಾಗುತ್ತದೆ.

ಉದ್ಘಾಟನಾ ಸಮಾರಂಭದ ನೇತೃತ್ವ ವಹಿಸಲಿರುವ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಉದ್ಘಾಟನಾ ಭಾಷಣ ಮಾಡಲಿದ್ದಾರೆ. ಸುಸ್ಥಿರತೆ, ನಾವೀನ್ಯತೆ ಮತ್ತು ಇಂಧನ ಭದ್ರತೆಗೆ ಒತ್ತು ನೀಡಲಿರುವ ಈ ಉನ್ನತ ಮಟ್ಟದ ಉದ್ಘಾಟನಾ ಅಧಿವೇಶನವು ದೇಶದ ಇಂಧನ ಭವಿಷ್ಯದ ಕುರಿತ ಚರ್ಚೆಗಳಿಗೆ ನಾಂದಿ ಹಾಡಲಿದೆ.

ಇದನ್ನೂ ಓದಿ : ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

ಈ ಸಮ್ಮೇಳನವು ಇಂಧನ ವಲಯದಲ್ಲಿ ಕರ್ನಾಟಕದ ಮುಂದಾಳತ್ವವನ್ನು ಸಾರಲಿದೆ. ಪ್ರಗತಿಪರ ಇಂಧನ ನೀತಿಗಳೊಂದಿಗೆ ನಾವೀನ್ಯತೆಯನ್ನು ಬೆಳೆಸುವಲ್ಲಿ ಮತ್ತು ಭಾರತದ ದೀರ್ಘಕಾಲೀನ ಇಂಧನ ಗುರಿಗಳು ಮತ್ತು ನಿವ್ವಳ ಶೂನ್ಯ ಬದ್ಧತೆಗಳಿಗೆ ರಾಜ್ಯದ ಕೊಡುಗೆಯನ್ನು ಬಲಪಡಿಸುವಲ್ಲಿ ಇಂಧನ ಇಲಾಖೆಯು ಪ್ರಮುಖ ಪಾತ್ರ ವಹಿಸುತ್ತದೆ.

ಈ ಸಮ್ಮೇಳನವು ಭಾರತದ ಇಂಧನ ಪರಿವರ್ತನೆ, ನೀತಿ ಮತ್ತು ಆಡಳಿತದ ಕುರಿತು ಸಂವಾದಕ್ಕೆ ವೇದಿಕೆಯನ್ನು ಒದಗಿಸಲಿದ್ದು, 2047ರ ವೇಳೆಗೆ ಇಂಧನ ಭದ್ರತೆ ಮತ್ತು ಸುಸ್ಥಿರತೆಗಾಗಿ ರಾಷ್ಟ್ರೀಯ ಗುರಿಗೆ ಅನುಗುಣವಾಗಿರುತ್ತದೆ. ಈ ಸಮ್ಮೇಳನವು ಏಪ್ರಿಲ್ 19 ರಂದು ನಡೆಯುವ ಸಮಾರೋಪ ಸಮಾರಂಭದೊಂದಿಗೆ ಮುಕ್ತಾಯಗೊಳ್ಳಲಿದ್ದು, ಪ್ರಮುಖ ಶಿಫಾರಸುಗಳು ಮತ್ತು ಒಳನೋಟಗಳ ಮೂಲಕ ಮುಂದಿನ ದಾರಿಯನ್ನು ವಿವರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಂಧನ ಸಚಿವ ಕೆ.ಜೆ. ಜಾರ್ಜ್ ನೇತೃತ್ವದಲ್ಲಿ ಮತ್ತು ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರ ಮಾರ್ಗದರ್ಶನದಲ್ಲಿ ಈ ಸಮ್ಮೇಳನ ನಡೆಯಲಿದೆ. ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ. ರಾಮ್ ಪ್ರಸಾತ್ ಮನೋಹರ್; ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಎನ್. ಶಿವಶಂಕರ್; ಮತ್ತು ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಸೇರಿದಂತೆ ಇತರ ಅಧಿಕಾರಿಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

Tags: CJI SuryakantCM Siddaramaiahcongress karnatakaenergy sectorGovernment of KarnatakaK J GeorgePower DepartmentPower ministerPratidhvaniSafety LawsSupreme Court of India
Previous Post

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

Next Post

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

Related Posts

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು
Top Story

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು

by ಪ್ರತಿಧ್ವನಿ
August 21, 2026
0

ತಮಿಳುನಾಡು ವಿಧಾನಸಭೆಯ ಕಲಾಪದಲ್ಲಿ ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಹಾಗೂ ಟಿವಿಕೆ ನಾಯಕ ಸಿಟಿಆರ್ ನಿರ್ಮಲ್ ಕುಮಾರ್ ನಡುವೆ ತೀವ್ರ ವಾಕ್ಸಮರ ನಡೆಯಿತು. ಉದಯನಿಧಿ ಸ್ಟಾಲಿನ್ ಅವರು...

Read moreDetails
ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

ಸಕ್ಕರೆ ಬೆಲೆ ಏರಿಕೆಗೆ ಕೇಂದ್ರದ ಬ್ರೇಕ್‌: ದಾಸ್ತಾನು ಮಿತಿಗೂ ಕಡಿವಾಣ

August 21, 2026
ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

ಸರ್ಕಾರಿ ಶಾಲೆ ಪರಿಶೀಲನೆಗೆ ತೆರಳಿದ್ದ CJP ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ; ಜೈಪುರದಲ್ಲಿ ಉದ್ವಿಗ್ನ ಪರಿಸ್ಥಿತಿ

August 21, 2026
500 KPS ಶಾಲೆಗಳ ಅಭಿವೃದ್ಧಿಗೆ  1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

500 KPS ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

August 21, 2026
ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

August 21, 2026
Next Post
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada