• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ರಣವೀರ್ ಸಿಂಗ್‌ಗೆ ಪ್ರಸ್ತುತ ಧುರಂಧರ್ 2 ರ ಯಶಸ್ಸು, ಸಿನಿಮಾ ಬಿಡುಗಡೆಯಾಗಿ ತಿಂಗಳು ಕಳೆದರೂ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ..

ಪ್ರತಿಧ್ವನಿ by ಪ್ರತಿಧ್ವನಿ
April 19, 2026
in Top Story, ಇದೀಗ, ಸಿನಿಮಾ
0
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Share on WhatsAppShare on FacebookShare on Telegram

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಲು ಮುಂದಾಗಿದ್ದಾರೆ.

ADVERTISEMENT
B. V. Nagarathna : ಎಐ ಒಳ್ಳೆಯದು, ಆದರೆ ದುರುಪಯೋಗವಾಗದಿರಲಿ.. #pratidhvani

ಬಾಲಿವುಡ್ ತಾರಾ ದಂಪತಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಮತ್ತೊಮ್ಮೆ ಗುಡ್​ ನ್ಯೂಸ್​ ನೀಡಿದ್ದಾರೆ. ಎರಡನೇ ಮಗುವಿನ ನಿರೀಕ್ಷೆಯಲ್ಲಿ ದಂಪತಿಯಿದ್ದು, ಮಗಳೊಂದಿಗಿನ ಫೋಟೋವನ್ನು ಹಂಚಿಕೊಂಡ ಪೋಸ್ಟ್​ನಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.

ದಂಪತಿಗಳು ವೈಯಕ್ತಿಕ ಪೋಸ್ಟನ್ನು ಹಂಚಿಕೊಳ್ಳುವ ಮೂಲಕ ಸುದ್ದಿಯನ್ನು ಹಂಚಿಕೊಂಡಿದ್ದು, ಈ ಸುದ್ದಿ ವೇಗವಾಗಿ ವೈರಲಾಗುತ್ತಿದೆ. ಪೋಸ್ಟ್​ನಲ್ಲಿ ಮಗಳು ದುವಾ ಗರ್ಭಧಾರಣೆಯ ಪರೀಕ್ಷಾ ಕಿಟ್​ ಹಿಡಿದಿದ್ದು, ಮುಖವನ್ನು ತೋರಿಸಿಲ್ಲ. ಪೋಸ್ಟ್​ಗೆ ಬರಹದ ಬದಲು ದೃಷ್ಟಿ ತಗುಲದ ಎಮೋಜಿಯನ್ನು ಹಾಕಲಾಗಿದೆ. ಇನ್ನು ದೀಪಿಕಾ ಇನ್ಸ್‌ಟ್ರಾ​ಗ್ರಾಮ್​ ಪ್ರೊಫೈಲ್​ನಲ್ಲಿ ‘ಇನ್​ ಮೈ ಮಾಮ್​ ಎರ’ (In My Mom Era) ಎಂದು ಬರೆದಿರುವ ಫೋಟೋ ಹಾಕಲಾಗಿದ್ದು, ಇದು ಕೂಡ ಅಭಿಮಾನಿಗಳಲ್ಲಿ ಸಾಕಷ್ಟು ಸಂತೋಷಕ್ಕೆ ಕಾರಣವಾಗಿದೆ.

ಇದನ್ನೂ ಓದಿ : ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಅಲ್ಲದೆ ಇದಕ್ಕೆ ನಟಿ ಪ್ರಿಯಾಂಕಾ ಚೋಪ್ರಾ, ಪರಿಣಿತಿ ಚೋಪ್ರಾ, ಭೂಮಿ ಪೆಡ್ನೇಕರ್, ಧನಶ್ರೀ, ಸಮಂತಾ ರುತ್ ಪ್ರಭು, ಕಿಯಾರಾ ಅಡ್ವಾಣಿ ಮತ್ತು ಅನನ್ಯಾ ಪಾಂಡೆ ಸೇರಿದಂತೆ ಪ್ರಮುಖ ನಟ-ನಟಿಯರು, ಅಭಿಮಾನಿಗಳು ಪ್ರೀತಿ ಮತ್ತು ಅಭಿನಂದನೆಗಳನ್ನು ದೀಪಿಕಾ ರಣವೀರ್‌ ದಂಪತಿಗೆ ತಿಳಿಸಿದ್ದಾರೆ. ರಣವೀರ್ ಸಿಂಗ್ ಪ್ರಸ್ತುತ ಧುರಂಧರ್ 2 ರ ಯಶಸ್ಸನ್ನು ಆನಂದಿಸುತ್ತಿದ್ದಾರೆ.‌ ಸಿನಿಮಾ ಬಿಡುಗಡೆಯಾಗಿ ತಿಂಗಳು ಕಳೆದರೂ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಗಲ್ಲಾಪೆಟ್ಟಿಗೆಯಲ್ಲೂ ದಾಖಲೆಯನ್ನು ಬರೆದಿದೆ. ಈ ಸಂತೋಷದ ನಡುವೆ ದಂಪತಿ ಮತ್ತೊಂದು ಸಿಹಿ ಸುದ್ದಿಯನ್ನು ಫ್ಯಾನ್ಸ್‌ ಜೊತೆ ಶೇರ್‌ ಮಾಡಿಕೊಂಡಿದ್ದಾರೆ.
2024ರಲ್ಲಿ ದುವಾ ಸ್ವಾಗತಿಸಿದ್ದ ಜೋಡಿ..

ಈ ದಂಪತಿಗಳು ತಮ್ಮ ಮೊದಲ ಮಗು ದುವಾ ಪಡುಕೋಣೆಯನ್ನು ಸೆಪ್ಟೆಂಬರ್ 2024 ರಲ್ಲಿ ಸ್ವಾಗತಿಸಿದ್ದರು. ಈ ಸುದ್ದಿ ಅವರ ವೈಯಕ್ತಿಕ ಜೀವನದಲ್ಲಿ ಒಂದು ಪ್ರಮುಖ ಮೈಲಿಗಲ್ಲನ್ನು ಸೃಷ್ಟಿಸುವಂತೆ ಮಾಡಿತ್ತು. ಏಕೆಂದರೆ ಇಬ್ಬರೂ ತಮ್ಮ ಜೀವನದ ವೈಯಕ್ತಿಕ ವಿಚಾರಗಳನ್ನು ರಕ್ಷಿಸಲು ಗರ್ಭಧಾರಣೆ ಮತ್ತು ಹೆರಿಗೆಯ ವಿವರಗಳನ್ನು ಗೌಪ್ಯವಾಗಿಟ್ಟಿದ್ದರು.

ತಮ್ಮ ಮಗಳ ಬಗ್ಗೆ ಹೆಚ್ಚಿನ ವಿಚಾರ ಯಾರಿಗೂ ತಿಳಿಯದಿರಲಿ ರಂದು ತಿಂಗಳುಗಟ್ಟಲೆ ಮಗಳ ಮುಖವನ್ನೇ ಸಾರ್ವಜನಿಕವಾಗಿ ತೋರಿಸಿರಲಿಲ್ಲ. ದೀಪಿಕಾ ಮತ್ತು ರಣವೀರ್ ಅಂತಿಮವಾಗಿ 2025 ರ ದೀಪಾವಳಿಯಂದು ದುವಾ ಅವರನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದರು, ಪ್ರೀತಿಯ ಕುಟುಂಬದ ಫೋಟೋಗಳನ್ನು ಮತ್ತು ಅವರ ಮುಖದ ಮೇಲಿನ ಸಂತೋಷವನ್ನು ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು. “ಪ್ರಾರ್ಥನೆ” ಎಂಬ ಅರೇಬಿಕ್ ಪದ “ದುವಾ” ಎಂಬ ಹೆಸರನ್ನು ಅವರು ಆಯ್ಕೆ ಮಾಡಿಕೊಂಡಿದ್ದಾಗಿ ತಿಳಿಸಿದ್ದರು.

Tags: BollywoodBollywood actress Deepika Padukone iCelebraties WishesCinema IndustryDeepika PadukoneDurandhar 2Duvaa PadukoneNew BabyPadukone FansPratidhvanipregnantpregnant womenranaveer singh
Previous Post

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

Next Post

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

Related Posts

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

by ಪ್ರತಿಧ್ವನಿ
April 19, 2026
0

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು...

Read moreDetails
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

ಇರಾನ್‌ – ಅಮೆರಿಕ ನಡುವೆ ಮುನೀರ್‌ ಮಧ್ಯಸ್ಥಿಕೆ : ದೊಡ್ಡಣ್ಣ ಎಂದು ಕೊಚ್ಚಿಕೊಳ್ಳುವ ಟ್ರಂಪ್‌ಗ್ಯಾಕೆ ಬಂತು ಈ ದುಸ್ಥಿತಿ..?

April 19, 2026
Next Post
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!