• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಪ್ರೀತಿ ಮಾಡೋ ನೆಪದಲ್ಲಿ ಪ್ರಿಯಕರನನ್ನೇ ಮುಗಿಸಿಬಿಟ್ಟ ಕಿರಾತಕಿ ಪ್ರೇಯಸಿ..

ಪ್ರತಿಧ್ವನಿ by ಪ್ರತಿಧ್ವನಿ
April 22, 2026
in Top Story, ಇದೀಗ, ಕರ್ನಾಟಕ
0
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..
Share on WhatsAppShare on FacebookShare on Telegram

ಬೆಂಗಳೂರು : ನಗರದ ಬ್ಯಾಡರಹಳ್ಳಿಯ ಮನೆಯಲ್ಲಿ ಯುವಕ ಸಾವು ಪ್ರಕರಣಕ್ಕೆ ರೋಚಕ ಟ್ವಿಸ್ಟ್, ಯುವತಿಯಿಂದಲೇ ಯುವಕನ ಹತ್ಯೆಯಾಗಿರುವ ಮಾಹಿತಿ ಹೊರಬಿದ್ದಿದೆ. ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಂದಿರುವ ಪ್ರೇಮಾ, ತಾನು ಬಚಾವಾಗಲು ಸಣ್ಣಪುಟ್ಟ ಗಾಯ ಮಾಡಿಕೊಂಡಿದ್ದಳು ಎಂದು ಪೊಲೀಸ್ ವಿಚಾರಣೆ ವೇಳೆ ಸತ್ಯ ಬಾಯಿಬಿಟ್ಟಿದ್ದಾಳೆ ಆರೋಪಿ ಪ್ರೇಮಾ.

ADVERTISEMENT
Tamil Nadu Polls : ತಮಿಳುನಾಡು ಸಿಎಂ ವಿರುದ್ಧ ರೊಚ್ಚಿಗೆದ್ದ ರೈತ..... #pratidhvani

ಇನ್ನೂ ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಕಾಣುತಿತ್ತು ಆದರೆ ಯುವತಿಯೇ ಆತನನ್ನು ಕೊಲೆ ಮಾಡಿದ್ದಾಳೆ. ಪೆಟ್ರೋಲ್ ಹಾಗೂ ಸೀಮೆಎಣ್ಣೆ ಬಳಸಿ ಕೊಲೆ ಮಾಡಿದ್ದಳು. ಆಕೆಯನ್ನು ಆತ ನಿರ್ಲಕ್ಷಿಸುತ್ತಿದ್ದ  ಎಂದು ಭಾವಿಸುತ್ತಿದಳು. ಹೀಗಾಗಿ ಕರೆ ಮಾಡಿ ಆತನನ್ನು ಮನೆಗೆ ಕರೆದಿದ್ದಾಳೆ. ಬಳಿಕ ಒಬ್ಬಳೇ ಈ ಕೃತ್ಯದಲ್ಲಿ ಭಾಗಿಯಾಗಿದ್ದಳೋ ಅಥವಾ ಇನ್ನು ಯಾರಾದರೂ ಇದರಲ್ಲಿ ಇದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ವಾಯುವ್ಯ ವಿಭಾಗ ಡಿಸಿಪಿ ನಾಗೇಶ್ ತಿಳಿಸಿದ್ದಾರೆ.

ಪ್ರಮುಖವಾಗಿ ಈ ಪ್ರಕರಣದಲ್ಲಿ ಪ್ರೀತಿಸಿ ಕೈಕೊಡಲು ಮುಂದಾಗಿದ್ದ ಪ್ರಿಯತಮನಿಗೆ ಪ್ರೇಯಸಿ ಪ್ರೇಮಾಳೇ ಬೆಂಕಿ ಇಟ್ಟಿದ್ದಾಳೆ. ಆಗಸ್ಟ್ ನಲ್ಲಿ ಇಬ್ಬರ ಮಧ್ಯೆ ಪರಿಚಯವಾಗಿತ್ತು. ಬಳಿಕ ಫೆಬ್ರವರಿ 14 ರಂದು ಪ್ರೇಮಾ ಪ್ರೇಮ ನಿವೇದನೆ ಮಾಡಿದ್ದಳು. ಈ ಪ್ರಪೋಸಲನ್ನು ಕಿರಣ್‌ ಒಪ್ಪಿಕೊಂಡಿದ್ದ. ಕಿರಣ್ ಗಾಗಿ ನಾಲ್ಕೂವರೆ ಲಕ್ಷದ ಬೈಕ್,ಮೊಬೈಲ್ ಗಿಫ್ಟ್ ನೀಡಬೇಕು ಪ್ರೇಮಾ ಯೋಚಿಸಿದ್ದಳು ಎಂದು ಖುದ್ದು ಆರೋಪಿಯೇ ಬ್ಯಾಡರಹಳ್ಳಿ ಪೊಲೀಸರ ವಿಚಾರಣೆ ವೇಳೆ  ಎಲ್ಲಾ ಸತ್ಯವನ್ನು ಬಾಯ್ಬಿಟ್ಟಿದ್ದಾಳೆ.

ಇದನ್ನೂ ಓದಿ : ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ಆದರೆ ಇತ್ತೀಚೆಗೆ ಯುವತಿಯಿಂದ ಅಂತರ ಕಾಯ್ದುಕೊಂಡಿದ್ದ ಕಿರಣ್, ಇದರಿಂದ ಪ್ರೇಮಾ ಸಾಕಷ್ಟು ನೊಂದು ಹೋಗಿದ್ದಳು. ಹೀಗಾಗಿ ಆತನನ್ನು ಕೊಂದು ತಾನು ಸಾಯಲು ನಿರ್ಧರಿಸಿದ್ದಳು. ಇದಕ್ಕಾಗಿಯೇ ಪೆಟ್ರೋಲ್ ಮತ್ತು ಸೀಮೆ ಎಣ್ಣೆ ಎರಡನ್ನು ಖರೀದಿಸಿಟ್ಟಿದ್ದಳು ಕಿರಾತಕಿ ಪ್ರೇಮಾ.

ಮೊದಲು ಇಬ್ಬರು ಹೋಗಿ ಬೈಕ್ ಅನ್ನು ನೋಡಿಕೊಂಡಿದ್ದರು. ಆದರೆ ಮದುವೆ ವಿಚಾರವಾಗಿ ಮತ್ತೆ ಇಬ್ಬರ ಮಧ್ಯೆ ಗಲಾಟೆ ನಡೆದಿದೆ. ಈ ವೇಳೆ ಈ ವೇಳೆ ಫಾರಿನ್ ಸ್ಟೈಲ್‌ ಲವ್‌ ಮಾಡುವುದಾಗಿ ಕಿರಣ್‌ ಎರಡೂ ಕೈ ಕಾಲುಗಳನ್ನು ಕಟ್ಟಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾಳೆ. ಬೆಂಕಿಯ ಜ್ವಾಲೆಗೆ ಪ್ರೇಮಾಳ ಮನೆಯಲ್ಲಿಯೇ ಕಿರಣ್ ಸುಟ್ಟು ಕರಕಲಾಗಿದ್ದ.

ಇತ್ತೀಚಿನ ದಿನಗಳಲ್ಲಿ ಪ್ರೀತಿ ಪ್ರೇಮದ ವಿಚಾರದಲ್ಲಿ ಈ ರೀತಿಯ ಅಪರಾಧಗಳು ನಡೆಯುತ್ತಿರುವುದು ನಿಜಕ್ಖೂ ಆಘಾತಕಾರಿ ಸಂಗತಿಯಾಗಿದೆ. ಪ್ರೀತಿಯನ್ನು ನಿರಾಕರಿಸಿದ ಎನ್ನುವ ಕಾರಣಕ್ಕೆ ಇಡೀ ಜೀವ ಹಾಗೂ ಜೀವನವನ್ನೇ ಬಲಿ ತೆಗೆದುಕೊಳ್ಳುವುದು ಎಷ್ಟು ಸರಿ..? ಎನ್ನುವುದನ್ನು ಯೋಚಿಸಬೇಕಿದೆ. ಯುವತಿಯಾಗಲಿ ಅಥವಾ ಯುವಕರಾಗಲಿ ಪ್ರೀತಿಯೆಂಬ ಎಂಬ ಬೆಂಕಿಯನ್ನು ಮುಟ್ಟುವ ಮುನ್ನ ಹತ್ತಾರು ಬಾರಿ ಯೋಚಿಸಿ ನಿರ್ಧಾರ ಮಾಡುವುದು ಸೂಕ್ತ. ಪ್ರೀತಿಯಿಂದಾಚೆಗೆ ಕುಟುಂಬ ಎಂಬ ಅದ್ಭುತ ಬಳಗ ನಿಮಗಾಗಿ ಕಾಯುತ್ತಿರುತ್ತದೆ ಎನ್ನುವುದನ್ನು ಮರೆಯಬಾರದು. ಪ್ರೀತಿಯೇ ಎಲ್ಲ ಎಂಬ ಭ್ರಮೆಯಿಂದ ಹೊರಬಂದು ಬದುಕಿನಲ್ಲಿ ಆನಂದಿಸೋಕೆ ಹಲವಾರು ಸಂಗತಿಗಳು ಇವೆ ಎಂಬ ಸತ್ಯವನ್ನು ಅರಿತುಕೊಳ್ಳಬೇಕು.

Tags: Benglore PoliceCRIME NEWSKarnataka PoliceLoverLover MurderMurders CasePratidhvaniPrema Accused
Previous Post

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

Next Post

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

Related Posts

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?
Top Story

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

by ಪ್ರತಿಧ್ವನಿ
April 26, 2026
0

ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿ.ಸಿ.ಯ ಹಿಲ್ಟನ್ ಹೋಟೆಲ್‌ನಲ್ಲಿ ನಡೆದ ಹೈಪ್ರೊಫೈಲ್ ವರದಿಗಾರರ ಔತಣಕೂಟದ ವೇಳೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಹತ್ಯೆ ಯತ್ನ ನಡೆದಿದೆ ಎಂಬ...

Read moreDetails
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ: ಅಮೆರಿಕ ರಾಜಕೀಯದಲ್ಲಿ ಆತಂಕ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
Next Post
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada