• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಪ್ರತಿಧ್ವನಿ by ಪ್ರತಿಧ್ವನಿ
April 24, 2026
in Top Story
0
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ನಗರದಲ್ಲಿ ಸಿನಿಮಾವನ್ನೇ ಹೋಲಿಸುವಂತಹ ಬ್ಯಾಂಕ್ ಚಿನ್ನಾಭರಣ ಕಳ್ಳತನ ಪ್ರಕರಣವೊಂದು ಬೆಳಕಿಗೆ ಬಂದಿದೆ. ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಕಿರಣ್ ಎಂಬಾತ, ಗ್ರಾಹಕರು ಅಡಮಾನ ಇಟ್ಟಿದ್ದ ಚಿನ್ನಾಭರಣವನ್ನು ಹಂತ ಹಂತವಾಗಿ ಕದ್ದಿರುವುದು ಬಹಿರಂಗವಾಗಿದೆ.ಮಾಹಿತಿಯ ಪ್ರಕಾರ, ಸುಮಾರು 24 ಮಂದಿ ಗ್ರಾಹಕರು ಅಡಮಾನ ಇಟ್ಟಿದ್ದ ಚಿನ್ನಾಭರಣಗಳಲ್ಲಿ ಸುಮಾರು 4 ಕೋಟಿ ರೂಪಾಯಿ ಮೌಲ್ಯದ ಚಿನ್ನ ಕಾಣೆಯಾಗಿದೆ. ಆರೋಪಿಯು ಮ್ಯಾನೇಜರ್ ಗೈರುಹಾಜರಿದ್ದ ಸಮಯವನ್ನು ದುರುಪಯೋಗಪಡಿಸಿಕೊಂಡು ಲಾಕರ್‌ಗಳಿಂದ ನಿಧಾನವಾಗಿ ಚಿನ್ನ ತೆಗೆದು ಕಳ್ಳತನ ಮಾಡುತ್ತಿದ್ದನೆಂದು ತಿಳಿದುಬಂದಿದೆ.

ಈ ಕೃತ್ಯವನ್ನು ದೀರ್ಘಕಾಲದಿಂದ ಯೋಜಿತವಾಗಿ ನಡೆಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.ಇನ್ನೊಂದು ಆಘಾತಕಾರಿ ಅಂಶವೆಂದರೆ, ಕಳ್ಳತನ ಮಾಡಿದ ಚಿನ್ನವನ್ನು ಕಿರಣ್ ಆನ್‌ಲೈನ್ ಬೆಟ್ಟಿಂಗ್‌ಗೆ ಬಳಸಿಕೊಂಡು ವೈಭವ ಜೀವನ ನಡೆಸುತ್ತಿದ್ದಾನೆ ಎಂಬ ಆರೋಪವೂ ಕೇಳಿಬರುತ್ತಿದೆ. ಗ್ರಾಹಕರು ತಮ್ಮ ಅಡಮಾನ ಚಿನ್ನವನ್ನು ಮರುಪಡೆಯಲು ಬ್ಯಾಂಕ್‌ಗೆ ಬಂದಾಗ ಈ ಅಕ್ರಮ ಬೆಳಕಿಗೆ ಬಂದಿದೆ. ಬಳಿಕ ಲಾಕರ್‌ಗಳ ಪರಿಶೀಲನೆ ವೇಳೆ ದೊಡ್ಡ ಪ್ರಮಾಣದ ಚಿನ್ನ ಕಣ್ಮರೆಯಾಗಿರುವುದು ದೃಢಪಟ್ಟಿದೆ.

ಈ ಪ್ರಕರಣ ಸಂಬಂಧ ಫೆಬ್ರವರಿ 5ರಂದು ಬ್ಯಾಂಕ್ ಮ್ಯಾನೇಜರ್ ಗಿರಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಕಿರಣ್ ಅನ್ನು ಬಂಧಿಸಿದರೂ, ಕೆಲವೇ ದಿನಗಳಲ್ಲಿ ಜಾಮೀನು ಮೇಲೆ ಹೊರಬಂದಿರುವುದು ಗ್ರಾಹಕರ ಆಕ್ರೋಶಕ್ಕೆ ಕಾರಣವಾಗಿದೆ.
ಒಟ್ಟು 2 ಕಿಲೋಗ್ರಾಂಗಿಂತ ಹೆಚ್ಚು ಚಿನ್ನ ಕಳ್ಳತನವಾಗಿದ್ದು, ಇದರಲ್ಲಿ ಸುಮಾರು 4 ಕೋಟಿ ರೂಪಾಯಿ ಮೌಲ್ಯವಿದೆ ಎಂದು ಅಂದಾಜಿಸಲಾಗಿದೆ. ಆದರೆ ಆರೋಪಿಯಿಂದ ವಶಪಡಿಸಿಕೊಂಡಿರುವುದು ಕೇವಲ 1 ಕಿಲೋಗ್ರಾಂ ಚಿನ್ನ ಮಾತ್ರ. ಉಳಿದ ಚಿನ್ನದ ಪತ್ತೆ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲದಿರುವುದು ತನಿಖೆಯ ಮೇಲೆ ಅನುಮಾನ ಹುಟ್ಟಿಸಿದೆ.

HTManju Angry on BJP Leader: ಮಾಜಿ ಸಚಿವ ನಾರಾಯಣಗೌಡರ ಆಪ್ತನ ಮೇಲೆ ಮುಗಿಬಿದ್ದ ಹಾಲಿ MLAಮಂಜು #pratidhvani

ಈ ಹಿನ್ನೆಲೆಯಲ್ಲಿ ಗ್ರಾಹಕರು ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿ ಅಳಲು ತೋಡಿಕೊಂಡಿದ್ದಾರೆ. ಚಿನ್ನ ಕಳೆದುಕೊಂಡಿದ್ದರೂ ಬ್ಯಾಂಕ್ ಅಧಿಕಾರಿಗಳು ಬಡ್ಡಿ ಪಾವತಿಸಲು ಒತ್ತಾಯಿಸುತ್ತಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬರುತ್ತಿದೆ. ಜೊತೆಗೆ, ಪೊಲೀಸ್ ತನಿಖೆ ಸಮರ್ಪಕವಾಗಿಲ್ಲ ಎಂಬ ಅಸಮಾಧಾನವೂ ವ್ಯಕ್ತವಾಗಿದೆ. ಈ ಘಟನೆ ಬ್ಯಾಂಕಿಂಗ್ ವ್ಯವಸ್ಥೆಯ ಮೇಲಿನ ನಂಬಿಕೆಗೆ ಧಕ್ಕೆ ತಂದಿದ್ದು, ಸಮಗ್ರ ತನಿಖೆ ನಡೆಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ಗ್ರಾಹಕರಿಗೆ ನ್ಯಾಯ ಒದಗಿಸಬೇಕೆಂಬ ಒತ್ತಾಯ ಹೆಚ್ಚಾಗಿದೆ.

Tags: Bank ScambengaluruCRIME NEWSCustomer OutrageGirinagarGold TheftIndian Bankkarnataka newsOnline Bettingpolice investigationpratidavani
Previous Post

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

Next Post

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
Next Post
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada