• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ

ಪ್ರತಿಧ್ವನಿ by ಪ್ರತಿಧ್ವನಿ
April 29, 2026
in Top Story
0
ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಮತ್ತೆ ವೈರಲ್: ಚೇತನ್ ಅಹಿಂಸಾ ಸುತ್ತ ಹೊಸ ವಿವಾದ
Share on WhatsAppShare on FacebookShare on Telegram

ನಟ ಹಾಗೂ ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ಇತ್ತೀಚೆಗೆ ನೀಡಿದ ಹೇಳಿಕೆಗಳು ಹಾಗೂ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಹಿನ್ನೆಲೆಯಲ್ಲಿ ಹೊಸ ವಿವಾದಕ್ಕೆ ಕಾರಣರಾಗಿದ್ದಾರೆ. ಡಾ. ರಾಜ್‌ಕುಮಾರ್ ಅಭಿಮಾನಿಗಳು ಮತ್ತು ಕನ್ನಡಪರ ಸಂಘಟನೆಗಳು ಚೇತನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಸಾರ್ವಜನಿಕವಾಗಿ ಕ್ಷಮೆ ಕೇಳುವಂತೆ ಒತ್ತಾಯಿಸುತ್ತಿವೆ. ಆದರೆ ಈ ಬೇಡಿಕೆಗೆ ಚೇತನ್ ಮಣಿಯುವ ಲಕ್ಷಣಗಳು ಕಾಣಿಸುತ್ತಿಲ್ಲ.

ADVERTISEMENT
Rahul Gandhi : ಆದಿವಾಸಿಗಳ ಜಮೀನನ್ನು ಅದಾನಿಗೆ ನೀಡಲಾಗುತ್ತಿದೆ..!

ಚೇತನ್ ವಿರುದ್ಧ ಪ್ರತಿಭಟನೆಗಳೂ ನಡೆದಿದ್ದು, ನಿರ್ಮಾಪಕ ಸಾ.ರಾ. ಗೋವಿಂದು, ಅಖಿಲ ಕರ್ನಾಟಕ ರಾಜ್‌ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟದ ಗೌರವಾಧ್ಯಕ್ಷ ಎನ್.ಆರ್. ರಮೇಶ್ ಸೇರಿದಂತೆ ಹಲವು ಗಣ್ಯರು ಕಿಡಿಕಾರಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಅವರ ವಿರುದ್ಧ ಟೀಕೆಗಳು ಹೆಚ್ಚಾಗಿವೆ.ಈ ನಡುವೆ, ಎರಡು ವರ್ಷಗಳ ಹಿಂದೆ ಚೇತನ್ ನೀಡಿದ್ದ ಹಳೆಯ ಸಂದರ್ಶನದ ಹೇಳಿಕೆಗಳು ಮತ್ತೆ ವೈರಲ್ ಆಗಿವೆ. ‘ಮಸ್ತ್ ಮಗಾ’ ಯೂಟ್ಯೂಬ್ ಚಾನಲ್‌ಗೆ ನೀಡಿದ ಸಂದರ್ಶನದಲ್ಲಿ, ಪಾಕಿಸ್ತಾನದ ಬಗ್ಗೆ ಮಾತನಾಡಿದ ಅವರು, “ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಅಲ್ಲ, ಪಕ್ಕದ ರಾಷ್ಟ್ರ” ಎಂದು ಹೇಳಿದ್ದರು.

Parameshwar : ದೆಹಲಿಗೆ ಕೈ ನಾಯಕರು, ಗೃಹ ಸಚಿವ ಪರಮೇಶ್ವರ್‌ ಹೇಳಿದ್ದೇನು..? #satishjarkiholi #hcmahadevappa

“’ಪಾಕಿಸ್ತಾನ ಜಿಂದಾಬಾದ್’ ಎಂಬ ಘೋಷಣೆ ದೇಶದ್ರೋಹ ಎಂದು ಪರಿಗಣಿಸಲಾಗುವುದಿಲ್ಲ” ಎಂಬ ಅಭಿಪ್ರಾಯವನ್ನೂ ವ್ಯಕ್ತಪಡಿಸಿದ್ದರು. ಈ ಹೇಳಿಕೆಗಳು ಈಗ ಮತ್ತೆ ಚರ್ಚೆಗೆ ಗ್ರಾಸವಾಗಿವೆ.ಇತ್ತೀಚೆಗೆ, ಕಂಠೀರವ ಸ್ಟುಡಿಯೋದಲ್ಲಿರುವ ಡಾ. ರಾಜ್‌ಕುಮಾರ್ ಸ್ಮಾರಕ ಕುರಿತು ಚೇತನ್ ಮಾಡಿದ್ದ ಪೋಸ್ಟ್ ಕೂಡ ತೀವ್ರ ವಿವಾದ ಹುಟ್ಟಿಸಿದೆ. “ರಾಜ್‌ಕುಮಾರ್ ಮಹಾನ್ ಕಲಾವಿದರಾದರೂ, 2006ರಲ್ಲಿ ಸ್ಮಾರಕಕ್ಕಾಗಿ ನೀಡಿದ ಭೂಮಿ ನಿರ್ಧಾರವನ್ನು ಪ್ರಶ್ನಿಸಬೇಕಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದರು. ಈ ಹೇಳಿಕೆ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಚೇತನ್ ಅಹಿಂಸಾ ಅವರ ಹೇಳಿಕೆಗಳು ಮತ್ತು ಹಳೆಯ ಅಭಿಪ್ರಾಯಗಳು ಮತ್ತೆ ಬೆಳಕಿಗೆ ಬಂದಿರುವುದರಿಂದ ವಿವಾದ ಮತ್ತಷ್ಟು ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಈ ವಿಷಯ ಯಾವ ದಿಕ್ಕಿಗೆ ತಿರುಗುತ್ತದೆ ಎಂಬುದು ಕಾದು ನೋಡಬೇಕಾಗಿದೆ.

Tags: chetan ahimsaDr Rajkumar FansFreedom of Speech DebateIndia Pakistankannada newsKanteerava Studiokarnataka newsPakistan Zindabad ControversypratidavaniprotestsRajkumar MemorialSandalwood ControversySocial Media Debatetrending newsViral Statement
Previous Post

ಡಾಲಿ ಧನಂಜಯ್ ಮನೆಗೆ ಹೊಸ ಸಂತಸದ ಸುದ್ದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್

Next Post

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

Breking:ಮಂಡ್ಯದಲ್ಲಿ ಮೂವರು ವೈದ್ಯರ ಬಂಧನ, ಸರ್ಕಾರಿ ವೈದ್ಯೆ ನಾಪತ್ತೆ

April 29, 2026
Next Post
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada