• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆಯುವುದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
April 30, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
Share on WhatsAppShare on FacebookShare on Telegram

ಬೆಂಗಳೂರು : ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಅಮಾನತುಗೊಳಿಸಿ, ನೋಟೀಸು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ADVERTISEMENT
Bengalore Rain Tragedy Bowring Hospital wall collapse Report :7 ಜೀವಗಳ ಬಲಿ CM, DCMಗೆ ಟೆನ್ಷನ್.! #

ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆ ದುರಂತದ ಹಿನ್ನೆಲೆಯಲ್ಲಿ ಇಂದು ತಮ್ಮ ಅಧ್ಯಕ್ಷತೆಯಲ್ಲಿ ಜಿಬಿಎ ಆಯುಕ್ತರುಗಳ ಸಭೆ ನಡೆಸಿ ಖಡಕ್‌ ಸೂಚನೆಗಳನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತದಿಂದ ನಿನ್ನೆ ಏಳು ಜನ ಮೃತಪಟ್ಟಿರುವ ಕುರಿತಂತೆ ಜಿಬಿಎ ಆಯುಕ್ತರೊಂದಿಗೆ ಚರ್ಚಿಸಿದ ಮುಖ್ಯಮಂತ್ರಿಗಳು, ಗೋಡೆಗೆ ಹಾನಿ ಆಗಲಿದೆ ಎಂದು ತಿಳಿದಿದ್ದರೂ ಕಾಮಗಾರಿ ನಡೆಯುವಾಗ ಮಣ್ಣು ಸುರಿದದ್ದು ಏಕೆ ಎಂದು ಪ್ರಶ್ನಿಸಿದ್ದಾರೆ.

ಗೋಡೆಗೆ ಹಾನಿಯಾಗುವಂತೆ ಮಣ್ಣು ಸುರಿದದ್ದು ನೀವು ಏಕೆ ನೋಡಿಕೊಳ್ಳಲಿಲ್ಲ ಎಂದು ಆಸ್ಪತ್ರೆ ಮುಖ್ಯಸ್ಥರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದ್ದಾರೆ. ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಅಲ್ಲದೆ ಬೆಂಗಳೂರಿನಲ್ಲಿ ಗುಂಡಿಗಳನ್ನು ಮುಚ್ಚಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ನಿನ್ನೆ ಬೆಂಗಳೂರಿನಲ್ಲಿ ಉಂಟಾದ ಮಳೆಯಲ್ಲಿ ಸಾಕಷ್ಟು ಹಾನಿಯಾಗಿದ್ದು, 250 ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಏಳು ಜನ ಸಾವನ್ನಪ್ಪಿದ್ದಾರೆ. ಈಗಾಗಲೇ ಸತ್ತವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವಂತೆ ತಿಳಿಸಿದ್ದಾರೆ.

ಇದನ್ನೂ ಓದಿ : ಅಹಿಂದ ಚಳುವಳಿಯ ಐತಿಹಾಸಿಕ ಪಯಣ, ರಜತ ಸಂಭ್ರಮ ಮತ್ತು ಭವಿಷ್ಯದ ಪಥ

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಸಿದ್ಧತೆ ಕೈಗೊಳ್ಳಿ..

ಮುಂಗಾರು ಮಳೆ ಪ್ರಾರಂಭವಾಗುವ ಮೊದಲೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬೆಂಗಳೂರಿನ ಐದೂ ವಲಯಗಳ ಆಯುಕ್ತರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು . ಒಣಗಿರುವ ಅಪಾಯಕಾರಿ ಮರಗಳ ರೆಂಬೆಗಳನ್ನು ಕತ್ತರಿಸಬೇಕು. ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ರಾಜಕಾಲುವೆಗಳಲ್ಲಿ ಹೂಳು ತೆಗೆಯುವುದು, ಪ್ರವಾಹ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು. ಮಳೆಯಿಂದ ರಸ್ತೆಯಲ್ಲಿ ಬಿದ್ದಿರುವ ಕಸ, ರೆಂಬೆಗಳನ್ನು ಕೂಡಲೇ ತೆರವು ಮಾಡಲು ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ

ಅಂಡರ್ ಪಾಸ್ ಗಳಲ್ಲಿ ಮಳೆ ನೀರು ನಿಲ್ಲದಂತೆ ಹಾಗೂ ಜನ ಅಂಡರ್ ಪಾಸ್ ಬಳಸದಂತೆ ಕೂಡಲೇ ಬ್ಯಾರಿಕೇಡ್ ಹಾಕಿ ಎಂದು ಸಿದ್ದರಾಮಯ್ಯ ಬಿಬಿಎಂಪಿ ಅಧಿಕಾರಿಗಳು ಹಾಗೂ ಬೌರಿಂಗ್‌ ಆಸ್ಪತ್ರೆಯ ಅಧಿಕಾರಿಗಳಿಗೂ ಖಡಕ್‌ ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಶಾಸಕ ರಿಜ್ವಾನ್ ಅರ್ಷದ್, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಜಿಬಿಎ ಆಯುಕ್ತ ಮಹೇಶ್ವರ ರಾವ್ , ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಮೊದಲಾದವರು ಉಪಸ್ಥಿತರಿದ್ದರು.

Previous Post

ಅಹಿಂದ ಚಳುವಳಿಯ ಐತಿಹಾಸಿಕ ಪಯಣ, ರಜತ ಸಂಭ್ರಮ ಮತ್ತು ಭವಿಷ್ಯದ ಪಥ

Next Post

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

Related Posts

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..
Top Story

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

by ಪ್ರತಿಧ್ವನಿ
April 30, 2026
0

ಹಾವೇರಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮುಖ್ಯಮಂತ್ರಿ ಆಗುವ ಆಸೆ ಇದೆ ಅಂದಿದ್ದಾರೆ ಮೇ 4 ರ ನಂತರ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿ ಇರುತ್ತದೆಯೋ ಇಲ್ವವೊ...

Read moreDetails
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

April 30, 2026
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
Next Post
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada