ಅಹಮದಾಬಾದ್ : ಇಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯದಲ್ಲಿ ಆಲೌಟ್ ಆಗುವ ಮೂಲಕ ಆರ್‌ಸಿಬಿ ಹೀನಾಯ ಸೋಲು ಕಂಡಿದೆ. ಆರಂಭದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 19.2 ಓವರ್‌ಗಳಲ್ಲಿ 155 ರನ್‌ಗಳಿಗೆ ಆಲೌಟ್ ಆಯಿತು.

ಈ ಟಾರ್ಗೆಟ್ ಬೆನ್ನಟ್ಟಿದ ಗುಜರಾತ್ ಟೈಟನ್ಸ್ ತಂಡವು ಕೇವಲ 15.5 ಓವರ್‌ಗೆ 6 ವಿಕೆಟ್ ನಷ್ಟಕ್ಕೆ 158 ರನ್ ಗಳಿಸುವ ಮೂಲಕ 4 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಬೆಂಗಳೂರಿನಲ್ಲಿ ಕಂಡ ಸೋಲಿಗೆ ಶುಭಮನ್ ಗಿಲ್ ಪಡೆ ಸೇಡು ತೀರಿಸಿಕೊಂಡಿದೆ.
ಬಳಿಕ ಮಾತನಾಡಿದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ (Rajat Patidar ) ತಮ್ಮ ತಂಡದ ಬ್ಯಾಟಿಂಗ್ ವೈಫಲ್ಯ ಹಾಗೂ ಮಧ್ಯಮ ಓವರ್‌ಗಳಲ್ಲಿ ಆಟಗಾರರು ವಿಕೆಟ್‌ಗಳನ್ನು ಕಳೆದುಕೊಂಡಿರುವುದು ಸೋಲಿಗೆ ಮುಖ್ಯ ಕಾರಣವಾಗಿದೆ ಎನ್ನುವ ಮೂಲಕ ಆರ್‌ಸಿಬಿ ನಾಯಕ ಆಟಗಾರರ ಮೇಲೆ ಸ್ಪಷ್ಟವಾಗಿ ನಿರಾಶೆ ಹೊರಹಾಕಿದ್ದಾರೆ.
ಇದನ್ನೂ ಓದಿ : ಎಕ್ಸಿಟ್ ಪೋಲ್ ಅಂಕಿಗಳಿಗೆ ಸವಾಲು ಹಾಕಿದ ಮಮತಾ ಬ್ಯಾನರ್ಜಿ ಹೇಳಿದ್ದೇನು ?
ತಮ್ಮ ಬ್ಯಾಟ್ಸ್‌ಮನ್‌ಗಳನ್ನು ನೇರವಾಗಿ ದೂಷಿಸಿ, ತಂಡದ ಸ್ಕೋರ್‌ಬೋರ್ಡ್‌ನಲ್ಲಿ ನಿಗದಿಪಡಿಸಿದ ಗುರಿ ತಂಡದ ಗೆಲುವಿಗೆ ಸಾಲಲಿಲ್ಲ. ಸ್ಕೋರ್ ಸಾಕಾಗಲಿಲ್ಲ. ನಾವು ಪಂದ್ಯವನ್ನು 16 ನೇ ಓವರ್‌ಗೆ ಎಳೆದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಪಾಟಿದಾರ್ ಹೇಳಿದ್ದಾರೆ. ಇಂತಹ ನಿರ್ಣಾಯಕ ಸಮಯದಲ್ಲಿ ವಿಕೆಟ್‌ಗಳನ್ನು ಕಳೆದುಕೊಳ್ಳುತ್ತಲೇ ಇದ್ದರೆ, ಯಾವುದೇ ಸ್ಕೋರ್ ರಕ್ಷಿಸುವುದು ಕಷ್ಟಕರವಾಗುತ್ತದೆ ಎಂದು ಆರ್‌ಸಿಬಿ ನಾಯಕ ಬೇಸರ ವ್ಯಕ್ತಪಡಿಸಿದ್ದಾರೆ.






