ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಹೇಳಿಕೆಯೊಂದು ರಾಜಸ್ಥಾನ್ ರಾಯಲ್ಸ್ ತಂಡವನ್ನು ಸುತ್ತುವರಿದ ವಿವಾದಕ್ಕೆ ಕಾರಣವಾಗಿದೆ. ಭಾಷಾ ಹೋರಾಟಗಾರನೊಬ್ಬ, ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರನ್ನು “ಚೈಲ್ಡ್ ಲೇಬರ್” ಆಗಿ ಬಳಸಲಾಗುತ್ತಿದೆ ಎಂದು ಆರೋಪಿಸಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾನೆ.

ಈ ಸಂಬಂಧ ವಿಜೆ ಶೆಟ್ಟಿ ತಮ್ಮ ಎಕ್ಸ್ (ಹಳೆಯ ಟ್ವಿಟರ್) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ವಿಷಯಕ್ಕೆ ಮತ್ತಷ್ಟು ಚರ್ಚೆ ಹುಟ್ಟುಹಾಕಿದೆ. ಪೋಸ್ಟ್ನಲ್ಲಿ, “ರಾಜಸ್ಥಾನ್ ರಾಯಲ್ಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಭಾಷಾ ಹೋರಾಟಗಾರ ಹೇಳಿದ್ದಾನೆ” ಎಂದು ಉಲ್ಲೇಖಿಸಲಾಗಿದೆ.ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಪ್ರತಿಕ್ರಿಯೆ ಹುಟ್ಟುಹಾಕಿದ್ದು, ಕೆಲವರು ಇದನ್ನು ತೀವ್ರವಾಗಿ ಟೀಕಿಸಿದರೆ, ಇನ್ನೂ ಕೆಲವರು ಈ ಆರೋಪದ ಹಿನ್ನೆಲೆಯನ್ನು ಪ್ರಶ್ನಿಸಿದ್ದಾರೆ.

ಯುವ ಆಟಗಾರರ ಪಾಲ್ಗೊಳ್ಳುವಿಕೆ ಮತ್ತು ಅವರ ವಯೋಮಿತಿ ಕುರಿತು ಚರ್ಚೆಗಳು ಮತ್ತೊಮ್ಮೆ ಪ್ರಾರಂಭವಾಗಿವೆ.ಇನ್ನೊಂದೆಡೆ, ಈ ಆರೋಪಗಳ ಕುರಿತು ರಾಜಸ್ಥಾನ್ ರಾಯಲ್ಸ್ ತಂಡದಿಂದ ಅಥವಾ ಸಂಬಂಧಿತ ಅಧಿಕಾರಿಗಳಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಇನ್ನೂ ಲಭ್ಯವಾಗಿಲ್ಲ.ಈ ಬೆಳವಣಿಗೆಯೊಂದಿಗೆ, ಕ್ರೀಡೆಯಲ್ಲಿ ಯುವ ಆಟಗಾರರ ಬಳಕೆ ಹಾಗೂ ಕಾನೂನುಬದ್ಧ ನಿಯಮಗಳ ಬಗ್ಗೆ ಮತ್ತೆ ಚರ್ಚೆ ಗರಿಗೆದರಿದೆ.






