ಬೆಂಗಳೂರು : ನಗರದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಆತಂಕಕಾರಿ ಘಟನೆ ನಡೆದಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ತೀವ್ರ ತನಿಖೆ ಮುಂದುವರೆಸಿದ್ದಾರೆ.

ನಗರದ ಹೊರವಲಯದ ಕಗ್ಗಲೀಪುರ ಠಾಣೆ ವ್ಯಾಪ್ತಿಯ ತಾತಗುಣಿ ಬಳಿ ಇಂದು ಬೆಳಗ್ಗೆ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದು, ಎಲ್ಲರನ್ನೂ ಆತಂಕಕ್ಕೆ ದೂಡಿದೆ. ಪ್ರಧಾನಿ ಮೋದಿ ಕಾರ್ಯಕ್ರಮ ಭೇಟಿ ನೀಡಬೇಕಿದ್ದ ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಕಡೆ ತೆರಳುವ ಮಾರ್ಗದ ಸಮೀಪದಲ್ಲೇ ಈ ಸ್ಫೋಟಕ ವಸ್ತುಗಳು ಪತ್ತೆಯಾಗುವ ಮೂಲಕ ಭದ್ರತಾ ವ್ಯವಸ್ಥೆಗೆ ಸವಾಲು ಹಾಕಿದಂತಾಗಿದೆ.
ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಸಂಗತಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ಈ ಜಿಲೆಟಿನ್ ಕಡ್ಡಿಗಳನ್ನು ಇರಿಸಿದ್ದ ಆರೋಪದ ಮೇಲೆ 40 ವರ್ಷದ ಕೋರಮಂಗಲ ನಿವಾಸಿಯೊಬ್ಬನನ್ನು ಸದ್ಯ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ಆರಂಭಿಸಿದ್ದಾರೆ.
ಇದನ್ನೂ ಓದಿ : ಸಿಎಂ ಆದ ಬೆನ್ನಲ್ಲೇ ವಿಜಯ್ ರಾಜೀನಾಮೆ : ಕುತೂಹಲ ಮೂಡಿಸಿದ ದಳಪತಿ ನಡೆ..!
ಸಂಪೂರ್ಣ ಭದ್ರತೆ ಖಚಿತವಾದ ನಿರ್ಗಮಿಸಿದ ಮೋದಿ..
ಪ್ರಧಾನಿ ಅಗಮಿಸುವ ಮೊದಲೇ ಸ್ಪೋಟಕ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ತಕ್ಷಣ ಸಂಪೂರ್ಣ ರಸ್ತೆಯನ್ನು ಮತ್ತೊಮ್ಮೆ ಪರಿಶೀಲನೆಗೆ ಒಳಪಡಿಸಲಾಗಿತ್ತು. ಬಳಿಕ ರಸ್ತೆಯಲ್ಲಿ ಯಾವುದೇ ಭದ್ರತಾ ಸಮಸ್ಯೆ ಇಲ್ಲ ಎಂಬುದನ್ನು ಖಾತ್ರಿ ಪಡಿಸಿಕಳ್ಳಲಾಗಿದೆ. ಆ ನಂತರವೇ ಪ್ರಧಾನಿ ಅವರನ್ನು ಅದೇ ರಸ್ತೆ ಮೂಲಕ ಕರೆತಂದು ಕಾರ್ಯಕ್ರಮ ಮುಗಿದ ಬಳಿಕ ವಾಪಸ್ಸು ಕಳಿಸುವವರೆಗೆ ಎಲ್ಲರಲ್ಲೂ ಆತಂಕದ ಛಾಯೆ ಮೂಡಿತ್ತು.
ಹೈದ್ರಾಬಾದ್ಗೆ ನಮೋ ಪ್ರಯಾಣ..
ಇಂದು ಬೆಳಗ್ಗೆ ನಗರಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಮೊದಲು ಹೆಚ್ಎಎಲ್ನಲ್ಲಿ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆಲುವಿ ಸಾಧಸಿದ್ದಕ್ಕಾಗಿ ಅಭಿನಂದನಾ ಸಮಾರಂಭದಲ್ಲಿ ಭಾಗಿಯಾಗಿ ಭಾಷಣ ಮಾಡಿದ್ದರು. ಅದಾದ ನಂತರ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ನ 45ನೇ ವಾರ್ಷಿಕೋತ್ಸವ ಹಾಗೂ ಧ್ಯಾನ ಮಂದಿರ ಉದ್ಘಾಟನೆಗೆ ಸಮಾರಂಭದಲ್ಲಿ ಪಾಲ್ಗೊಂಡು ಬಳಿಕ ಹೈದರಾಬಾದ್ಗೆ ಪ್ರಯಾಣ ಬೆಳೆಸಿದ್ದಾರೆ.






