• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, September 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?

140 ಪ್ರಶ್ನೆಗಳು ಪರೀಕ್ಷೆಗೆ ಮೊದಲು ಹಂಚಿಕೊಳ್ಳಲಾದ ಸೋರಿಕೆಯಾಗಿರುವ ಪ್ರಶ್ನೆಗಳಿಗೆ ಹೊಂದಿಕೆಯಾಗಿರುವ ಅಂಶ ಪತ್ತೆ..

ಪ್ರತಿಧ್ವನಿ by ಪ್ರತಿಧ್ವನಿ
May 12, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಆಗೋ ಮುನ್ಸೂಚನೆ ಸಿಕ್ಕಿತ್ತಾ ..? : ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿತಾ NTA..?
Share on WhatsAppShare on FacebookShare on Telegram
ADVERTISEMENT

ಬೆಂಗಳೂರು :  NEET UG 2026 ರ ರದ್ದತಿಯು ದೇಶಾದ್ಯಂತ ಲಕ್ಷಾಂತರ ವೈದ್ಯಕೀಯ ಆಕಾಂಕ್ಷಿಗಳಲ್ಲಿ ಭಾರಿ ಆತಂಕವನ್ನು ಹುಟ್ಟುಹಾಕಿದೆ, ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂಬ ಮಾಹಿತಿಗಳು ಹೊರಬರುತ್ತಿವೆ. ಈಗಾಗಲೇ ಎನ್‌ಟಿಎ ಮರು ಪರೀಕ್ಷೆ ಮಾಡುವುದಾಗಿ ಘೋಷಿಸಿದೆ.

NEET Exam 2026 Cancelled Amid Paper Leak : ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾದ ಕೇದ್ರ ಸರ್ಕಾರ..!

ಪ್ರಮುಖವಾಗಿ ನೀಟ್‌ ಭಾರತದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾಗಿದೆ. ಯುಜಿ 2026 ಅನ್ನು ‘ಗೆಸ್ ಪತ್ರಿಕೆ’ ಸೋರಿಕೆ ಆರೋಪದ ನಂತರ ರದ್ದುಪಡಿಸಲಾಗಿದೆ. ಮೇ 3 ರಂದು ನಡೆದ ಪರೀಕ್ಷೆಯ ಸಮಗ್ರತೆಯ ಬಗ್ಗೆ ಕೇಂದ್ರೀಯ ಸಂಸ್ಥೆಗಳಿಂದ ಬಂದ ಮಾಹಿತಿಗಳು ಕಳವಳ ವ್ಯಕ್ತಪಡಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ ತಕ್ಷಣವೇ ಈ ಇಡೀ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.

ಪರೀಕ್ಷೆಗೂ ಮುನ್ನ ಪ್ರಸಾರವಾದ ಪ್ರಶ್ನೆಗಳು ಮತ್ತು ಮೇ 3 ರಂದು ನಡೆಸಲಾದ ನಿಜವಾದ ಪ್ರಶ್ನೆ ಪತ್ರಿಕೆಯ ನಡುವಿನ ಹೋಲಿಕೆಯು ಅನುಮಾನವನ್ನು ಹುಟ್ಟುಹಾಕಿದೆ. ವಿವಾದದ ಸುತ್ತಲಿನ ಚರ್ಚೆಗಳು ಅಂತಿಮ ಪತ್ರಿಕೆಯ ಸುಮಾರು 140 ಪ್ರಶ್ನೆಗಳು ಪರೀಕ್ಷೆಗೆ ಮೊದಲು ಹಂಚಿಕೊಳ್ಳಲಾದ ಸೋರಿಕೆಯಾದ ಪ್ರಶ್ನೆಗಳಿಗೆ ಹೊಂದಿಕೆಯಾಗುತ್ತವೆ ಎಂಬ ಮಾಹಿತಿಯು ಇದೆ. 

ಲೀಕ್‌ ಆಗಿರುವ ಪ್ರಶ್ನೆ ಪತ್ರಿಕೆಯಲ್ಲಿನ ಹೊಂದಾಣಿಕೆ ಪ್ರಶ್ನೆಗಳ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಅಲ್ಲದೆ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲವು ಕೇರಳದವರೆಗೂ ಹಬ್ಬಿರುವ ಶಂಕೆಯು ವ್ಯಕ್ತವಾಗುತ್ತಿದೆ.. ಇಷ್ಟು ದೊಡ್ಡ ಪ್ರಮಾಣದಲ್ಲಿ ಪತ್ರಿಕೆ ಸೋರಿಕೆಯಾಗಿರುವುದರ ಹಿಂದೆ ಕೋಚಿಂಗ್‌ ಮಾಫಿಯಾ ಹಾಗೂ ಕೇಂದ್ರಗಳ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಇದನ್ನೂ ಓದಿ : ಟ್ರಾಫಿಕ್ ಸಮಸ್ಯೆಗೆ ಬ್ರೇಕ್ ಹಾಕಲು ಮಹತ್ವದ ಹೆಜ್ಜೆ, ಬೆಂಗಳೂರು ಉಪನಗರ ರೈಲು ಯೋಜನೆಗೆ 153 ಹೊಸ ಕೋಚ್‌ಗಳು!

ಟೆಲಿಗ್ರಾಮ್‌ನಲ್ಲಿ ಪೇಪರ್ ಸೋರಿಕೆ..!.
ಇನ್ನೂ ಪರೀಕ್ಷೆಯ ನಂತರದ ದಿನಗಳಲ್ಲಿ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದೆ ಎಂದು ಹೇಳಲಾಗುವ ಟೆಲಿಗ್ರಾಮ್ ವೀಡಿಯೊಗಳು, ಸ್ಕ್ರೀನ್‌ಶಾಟ್‌ಗಳು ಮತ್ತು ಪ್ರಶ್ನೆ ಪತ್ರಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿವೆ. ಇದಾದ ಬಳಿಕ ಈ ಬಗ್ಗೆ ಅನುಮಾನಗಳು ಹುಟ್ಟಿಕೊಂಡಿದ್ದವು. ಆದರೆ ಪರೀಕ್ಷೆ ನಡೆದ ನಾಲ್ಕು ದಿನಗಳ ಬಳಿಕ, ಮೇ 7 ರ ಸಂಜೆ, ಅಕ್ರಮ ಚಟುವಟಿಕೆಗಳ ಕುರಿತು ಮಾಹಿತಿ ಬಂದಿರುವುದಾಗಿ ಎನ್‌ಟಿಎ ತಿಳಿಸಿದೆ. ಸ್ವತಂತ್ರ ಪರಿಶೀಲನೆ ಮತ್ತು ಹೆಚ್ಚಿನ ತನಿಖೆಗಾಗಿ ಮೇ 8 ರಂದು ಈ ಮಾಹಿತಿಯನ್ನು ತಕ್ಷಣವೇ ಸಿಬಿಐಗೆ ರವಾನಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಆರೋಪಿಗಳು ಪರೀಕ್ಷೆಗೂ ಮುನ್ನವೇ ಹೆಚ್ಚಿನ ಪ್ರಶ್ನೆಪತ್ರಿಕೆ ಸೆಟ್‌ಗಳನ್ನು ಪಡೆದಿರಬಹುದೇ ಎಂಬ ಪ್ರಶ್ನೆಗಳೂ ಹುಟ್ಟಿಕೊಂಡಿದ್ದು, ಈ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ. ಆರೋಪಿಗಳು ಪ್ರಶ್ನೆ ಪತ್ರಿಕೆಯ ಒಂದಕ್ಕಿಂತ ಹೆಚ್ಚು ಪ್ರಶ್ನೆಪತ್ರಿಕೆ ಸೆಟ್‌ಗಳನ್ನು ಪಡೆದಿರಬಹುದು ಮತ್ತು ಎರಡೂ ಸೆಟ್‌ಗಳಿಂದ ಪ್ರಶ್ನೆಗಳನ್ನು ಹರಿಬಿಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

Karnataka Public Service Commission  ಸರ್..‌ ಕೈ ಕಾಲು ಮುರಿದು ಬಿಡಿ.. #pratidhvani #students #protest

22 ಲಕ್ಷ ವಿದ್ಯಾರ್ಥಿಗಳಲ್ಲಿ ಮೂಡಿದ ಆತಂಕದ ಛಾಯೆ..!

ಈ ನೀಟ್‌ ಹಗರಣದ ಕುರಿತು ಸಂಪೂರ್ಣ ತನಿಖೆಗೆ ಆದೇಶಿಸಿರುವ ಕೇಂದ್ರ ಸರ್ಕಾರವು ಪರೀಕ್ಷೆಯನ್ನು  ರದ್ದುಗೊಳಿಸುವಂತೆ ಎನ್‌ಟಿಎಗೆ ಸೂಚಿಸಿದ ಬಳಿಕ ಸಂಸ್ಥೆಯು ಈ ಕ್ರಮ ಕೈಗೊಂಡಿದೆ.ಆದರೆ  ಮರು ಪರೀಕ್ಷೆಯನ್ನು ಶೀಘ್ರದಲ್ಲೇ ನಡೆಸುವ ನಿರೀಕ್ಷೆಯಿರುವುದರಿಂದ, ಲಕ್ಷಾಂತರ ವಿದ್ಯಾರ್ಥಿಗಳು ಪ್ರವೇಶ ಪ್ರಕ್ರಿಯೆಯ ಮುಂದಿನ ಹಂತದ ಬಗ್ಗೆ ಆತಂಕದಲ್ಲಿದ್ದಾರೆ. ಆದರೆ ಇದು ದೇಶದ ದೊಡ್ಡ ಹಗರಣಗಳಲ್ಲಿ ಒಂದಾಗಿರುವಂತೆ ಕಂಡು ಬರುತ್ತಿದೆ. ಬರೊಬ್ಬರಿ ಪರೀಕ್ಷೆ ಬರೆದಿದ್ದ ಸುಮಾರು 22.79 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅವರ ಕುಟುಂಬಗಳಿಗೆ ಈ ನಿರ್ಧಾರದಿಂದ ಆಘಾತವಾದಂತಾಗಿದ್ದು, ಇದೀಗ ಕೇಂದ್ರ ಸರ್ಕಾರದ ನಿರ್ಲಕ್ಷ್ಯಕ್ಕೆ ಹಿಡಿಶಾಪ ಹಾಕುವ ಸ್ಥಿತಿ ನಿರ್ಮಾಣವಾಗಿದೆ.

Tags: Bhajanlal SharmaBJP GovernmentCBIdoctorsGovernment of IndiaNarendra ModiNational Testing AgencyNEETNEET ExamNTAPratidhvaniQuestion Paper LeakRajastan GovernmentTelegram AppUG CoureseUnion Education Minister Dharmendra Pradhan
Previous Post

ಮೋದಿ ಕರೆ ಬೆನ್ನಲ್ಲೇ ಇಳಿಕೆ ಕಂಡ ಅಡುಗೆ ಎಣ್ಣೆ : ಅಕ್ಕಿ ರೇಟ್‌ ಎಷ್ಟು ಗೊತ್ತಾ..?

Next Post

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

Related Posts

The Controversy Surrounding the NICE Project: A Brief Overview
Top Story

ನೈಸ್ ಯೋಜನೆ ಸುತ್ತಲಿನ ವಿವಾದ: ಒಂದು ಸಂಕ್ಷಿಪ್ತ ಕಿರುನೋಟ | NICE

by ಪ್ರತಿಧ್ವನಿ
September 29, 2026
0

ಬೆಂಗಳೂರು: ಮೂರು ದಶಕಗಳ ಹಿಂದೆ ರೂಪುಗೊಂಡ ನೈಸ್‌ (NICE) ರಸ್ತೆ ಯೋಜನೆ, ಕರ್ನಾಟಕದ (Karnataka) ಮೂಲಸೌಕರ್ಯ ಅಭಿವೃದ್ಧಿಯ ಇತಿಹಾಸದಲ್ಲೇ ಅತ್ಯಂತ ಚರ್ಚೆಗೆ ಈಡಾದ ಯೋಜನೆಗಳಲ್ಲಿ ಒಂದು. ಬೆಂಗಳೂರು...

Read moreDetails
Parents sell their one-month-old infant to buy gold jewelry and a smartphone

SHOCKING : ಚಿನ್ನಾಭರಣ, ಸ್ಮಾರ್ಟ್‌ಫೋನ್‌ ಖರೀದಿಸಿಲು 1 ತಿಂಗಳ ಹಸುಗೂಸನ್ನೇ ಮಾರಿದ ಹೆತ್ತವರು.!

September 29, 2026
Gyanesh Kumar is a puppet of the Centre Mallikarjun Kharge

ಜ್ಞಾನೇಶ್ ಕುಮಾರ್ ಕೇಂದ್ರದ ಕೈಗೊಂಬೆ, ತಕ್ಷಣ ರಾಜೀನಾಮೆ ನೀಡಲಿ: ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ | Mallikarjun Kharge

September 29, 2026
Centre approves 1,650 new MBBS seats in Karnataka

ವೈದ್ಯಕೀಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಕರ್ನಾಟಕದಲ್ಲಿ ಹೊಸ 1,650 ಹೊಸ MBBS ಸೀಟುಗಳಿಗೆ ಕೇಂದ್ರ ಅನುಮೋದನೆ | MBBS

September 29, 2026
How to change the mobile number linked to FASTag

`ಫಾಸ್ಟ್‌ ಟ್ಯಾಗ್’ ಜೊತೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | FASTag

September 29, 2026
Next Post
ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

ಭಾರತವು ಯಾವುದೇ ಇಂಧನ ಸಮಸ್ಯೆಗಳನ್ನು ಎದುರಿಸುತ್ತಿಲ್ಲ : ಹರ್ದೀಪ್‌ ಸಿಂಗ್‌ ಪುರಿ ಬಿಗ್‌ ಅಪ್ಡೇಟ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada