ಬೆಂಗಳೂರು : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (Trinmool Congress) ನಾಯಕಿ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯಾಗಿದ್ದ ಭಬಾನಿಪುರ ಕ್ಷೇತ್ರದ ಶಾಸಕರಾಗಿ ಮುಂದುವರೆಯುವುದಾಗಿ ಘೋಷಿಸಿದ್ದಾರೆ. ಈ ಮೂಲಕ ತಾವು ಗೆಲುವು ಕಂಡಿದ್ದ ನಂದಿಗ್ರಾಮ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಇತ್ತೀಚಿಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಭಬಾನಿಪುರದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಹಾಗೂ ತಮ್ಮ ಸ್ವಕ್ಷೇತ್ರ ನಂದಿಗ್ರಾಮದಲ್ಲಿ ಟಿಎಂಸಿ ಅಭ್ಯರ್ಥಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ಎರಡೂ ಕಡೆ ಗೆಲುವು ಸಾಧಿಸಿರುವ ಸುವೇಂದು ಅಧಿಕಾರಿ ಅವರು ಈಗ ಒಂದು ಕಡೆ ರಾಜೀನಾಮೆ ನೀಡಿದ್ದು, ಭವಾನಿಪುರವನ್ನು ಉಳಿಸಿಕೊಂಡಿದ್ದಾರೆ.
ಇದನ್ನೂ ಓದಿ : ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್ ಕೊಟ್ಟ ಗುಡ್ ನ್ಯೂಸ್ ಏನು..?
ಇಂದು ಮೊದಲ ದಿನ ಮುಖ್ಯಮಂತ್ರಿಯಾಗಿ ವಿಧಾನಸಭೆಗೆ ಆಗಮಿಸಿದ್ದ ಸುವೇಂದು ಅಧಿಕಾರಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ, ಬಳಿಕ ಸದನದ ಪ್ರವೇಶದ್ವಾರದಲ್ಲಿ ಮಂಡಿಯೂರಿ ನಮಸ್ಕರಿಸಿ, ಒಳಗೆ ಪ್ರವೇಶಿಸಿ ಐತಿಹಾಸಿಕ ಕ್ಷಣವನ್ನು ವಿಶೇಷವಾಗಿಸಿಕೊಂಡರು.

ಜನರಿಗೆ ನೀಡಿರುವ ಭರವಸೆ ಈಡೇರಿಸುವೆ..






