• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಪ್ರತಿಧ್ವನಿ by ಪ್ರತಿಧ್ವನಿ
May 13, 2026
in Top Story
0
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Share on WhatsAppShare on FacebookShare on Telegram

ನವದೆಹಲಿ: ದೇಶದ ಆರ್ಥಿಕತೆ ಬಲಪಡಿಸುವ ಉದ್ದೇಶದಿಂದ ಅನಗತ್ಯ ಚಿನ್ನ ಖರೀದಿಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಭಾರತ ಕನಿಷ್ಠ ಒಂದು ವರ್ಷ ಚಿನ್ನ ಖರೀದಿಯನ್ನು ಗಣನೀಯವಾಗಿ ಕಡಿಮೆ ಮಾಡಿದರೆ ವಿದೇಶಿ ವಿನಿಮಯ ಉಳಿತಾಯವಾಗುವುದರ ಜೊತೆಗೆ ದೇಶದ ಆರ್ಥಿಕ ಸ್ಥಿತಿ ಮತ್ತಷ್ಟು ಬಲಿಷ್ಠವಾಗಬಹುದು ಎಂದು ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ADVERTISEMENT
🔴LIVE | PM Modi attends swearing-in ceremony of the new Government in West Bengal..! #pratidhvani

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಚಿನ್ನ ಖರೀದಿ ಮತ್ತು ಬಳಕೆ ಮಾಡುವ ರಾಷ್ಟ್ರಗಳಲ್ಲಿ ಎರಡನೇ ಸ್ಥಾನದಲ್ಲಿದೆ. ಪ್ರತಿವರ್ಷ ಸುಮಾರು 700ರಿಂದ 800 ಟನ್ ಚಿನ್ನವನ್ನು ಭಾರತ ಆಮದು ಮಾಡಿಕೊಳ್ಳುತ್ತದೆ. ಇದರಲ್ಲಿ ಸುಮಾರು ಶೇ.90ರಷ್ಟು ಚಿನ್ನ ವಿದೇಶಗಳಿಂದಲೇ ಬರುತ್ತದೆ. ಇದಕ್ಕಾಗಿ ಭಾರತ ಸಾವಿರಾರು ಕೋಟಿ ರೂಪಾಯಿ ವಿದೇಶಿ ವಿನಿಮಯ ವೆಚ್ಚ ಮಾಡುತ್ತಿದೆ.

ಮಹಾಜನ್ ವರದಿ ಅಂತಿಮಕ್ಕೆ ಪಟ್ಟು.. #pratidhvani

ಆರ್ಥಿಕ ತಜ್ಞರ ಅಂದಾಜಿನ ಪ್ರಕಾರ, ಭಾರತ ಒಂದು ವರ್ಷ ಚಿನ್ನದ ಆಮದು ಶೇ.50ರಷ್ಟು ಕಡಿಮೆ ಮಾಡಿದರೆ ಸುಮಾರು 30 ಬಿಲಿಯನ್ ಅಮೆರಿಕನ್ ಡಾಲರ್ ವಿದೇಶಿ ವಿನಿಮಯ ಉಳಿತಾಯವಾಗಬಹುದು. ಶೇ.75ರಷ್ಟು ಆಮದು ಕಡಿತಗೊಂಡರೆ ಸುಮಾರು 44 ಬಿಲಿಯನ್ ಡಾಲರ್ ವಿದೇಶಿ ವಿನಿಮಯ ಉಳಿಸಬಹುದು ಎಂದು ಹೇಳಲಾಗುತ್ತಿದೆ.

CM Vijay wins Floor test: ನಮಗೆ ಯಾರ ಮೇಲೂ ದ್ವೇಷವಿಲ್ಲ, ದ್ವೇಷ ರಾಜಕಾರಣ ಮಾಡಲ್ಲ ಎಂದ ವಿಜಯ್ #pratidhvani

ಭಾರತ ಮುಖ್ಯವಾಗಿ ಸ್ವಿಟ್ಜರ್‌ಲೆಂಡ್, ಯುಎಇ, ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾದಿಂದ ಚಿನ್ನ ಆಮದು ಮಾಡಿಕೊಳ್ಳುತ್ತದೆ. ಭಾರತದಲ್ಲಿ ಚಿನ್ನದ ಖರೀದಿ ಗಣನೀಯವಾಗಿ ಇಳಿಕೆಯಾಗಿದರೆ ಈ ರಾಷ್ಟ್ರಗಳ ಚಿನ್ನ ವ್ಯಾಪಾರ ಮತ್ತು ಆರ್ಥಿಕ ಚಟುವಟಿಕೆಗಳ ಮೇಲೂ ಪರಿಣಾಮ ಬೀಳಬಹುದು ಎನ್ನಲಾಗುತ್ತಿದೆ.ಪ್ರಧಾನಿ ಮೋದಿ ನೀಡಿರುವ ಈ ಕರೆಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ದೇಶದ ಹಿತದೃಷ್ಟಿಯಿಂದ ಅನಗತ್ಯ ಖರೀದಿಯನ್ನು ನಿಯಂತ್ರಿಸುವುದು ಉತ್ತಮ ಕ್ರಮ ಎಂದು ಕೆಲ ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ, ಚಿನ್ನ ವ್ಯಾಪಾರ ಮತ್ತು ಆಭರಣ ಉದ್ಯಮದ ಮೇಲೆ ಅವಲಂಬಿತವಾಗಿರುವ ಸಾವಿರಾರು ವ್ಯಾಪಾರಿಗಳು ಹಾಗೂ ಕುಟುಂಬಗಳಿಗೆ ಇದರಿಂದ ಹೊಡೆತ ಬೀಳಬಹುದು ಎಂಬ ಆತಂಕವೂ ವ್ಯಕ್ತವಾಗಿದೆ.

Santosh Lad Slams PM Modi | ಮೋದಿ ಹೇಳಿಕೆಗೆ ಸಚಿವ ಸಂತೋಷ್ ಲಾಡ್ ವ್ಯಂಗ್ಯ #pratidhvani

ಇದೇ ವೇಳೆ ದೇಶದ ಆರ್ಥಿಕತೆ, ಹಣದುಬ್ಬರ ನಿಯಂತ್ರಣ ಹಾಗೂ ವಿದೇಶಿ ವಿನಿಮಯ ಉಳಿತಾಯಕ್ಕಾಗಿ ಪ್ರಧಾನಿ ಮೋದಿ ಹಲವು ಸಲಹೆಗಳನ್ನು ನೀಡಿದ್ದಾರೆ. ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಿಸುವುದು, ಎಲೆಕ್ಟ್ರಿಕ್ ವಾಹನಗಳಿಗೆ ಆದ್ಯತೆ ನೀಡುವುದು, ಪೆಟ್ರೋಲ್-ಡೀಸೆಲ್ ಬಳಕೆ ಕಡಿಮೆ ಮಾಡುವುದು ಹಾಗೂ ವರ್ಕ್ ಫ್ರಮ್ ಹೋಮ್ ವ್ಯವಸ್ಥೆಗೆ ಉತ್ತೇಜನ ನೀಡುವುದು ಸೇರಿದಂತೆ ಹಲವು ಕ್ರಮಗಳನ್ನು ಅನುಸರಿಸುವಂತೆ ಕರೆ ನೀಡಿದ್ದಾರೆ.

Tags: #EconomicSavings#ForeignExchange#GoldImport#GoldMarket#GoldPrices#GoldPurchase#indianews#ModiCall#narendramodi#SwitzerlandAustraliaEconomyNewsIndianEconomySouthAfricaUAE
Previous Post

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

Next Post

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

Related Posts

ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?
Top Story

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

by ಪ್ರತಿಧ್ವನಿ
May 13, 2026
0

ನವದೆಹಲಿ: ಇಂಧನ ಉಳಿತಾಯ ಮತ್ತು ಮಿತವ್ಯಯ ಕ್ರಮಗಳ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಅಧಿಕೃತ ಬೆಂಗಾವಲು ವಾಹನಗಳ ಸಂಖ್ಯೆಯನ್ನು ಗಣನೀಯವಾಗಿ ಕಡಿತಗೊಳಿಸಿರುವುದು ಇದೀಗ ದೇಶಾದ್ಯಂತ ಚರ್ಚೆಗೆ...

Read moreDetails
BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

May 13, 2026
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
Next Post
ಚಿನ್ನ ಖರೀದಿ ಕಡಿಮೆ ಮಾಡಿದರೆ ಭಾರತಕ್ಕೆ ಲಾಭ?; ಮೋದಿ ಕರೆಯಿಂದ ಯಾವ ದೇಶಕ್ಕೆ ನಷ್ಟ ?

ಮಿತವ್ಯಯಕ್ಕೆ ಮೋದಿ ಹೊಸ ಹೆಜ್ಜೆ; ಪ್ರಧಾನಿ ಬೆಂಗಾವಲು ವಾಹನಗಳ ಸಂಖ್ಯೆ ಇಳಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!