• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ

ಪ್ರತಿಧ್ವನಿ by ಪ್ರತಿಧ್ವನಿ
May 15, 2026
in ಕರ್ನಾಟಕ
0
ವಸ್ತ್ರಸಂಹಿತೆ ವಿವಾದಕ್ಕೆ ಹೊಸ ತಿರುವು; ಸರ್ಕಾರದ ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ಶಾಲೆ ಮತ್ತು ಕಾಲೇಜುಗಳಲ್ಲಿ ಹಿಜಾಬ್, ಜನಿವಾರ, ಶಿವಧಾರ ಸೇರಿದಂತೆ ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳಿಗೆ ಅವಕಾಶ ನೀಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ. ಅನುದಾನರಹಿತ ಖಾಸಗಿ ಶಾಲೆಗಳ ಮೇಲೆ ಯಾವುದೇ ರೀತಿಯ ವಸ್ತ್ರಸಂಹಿತೆಯನ್ನು ಸರ್ಕಾರ ಬಲವಂತವಾಗಿ ಹೇರಲು ಸಾಧ್ಯವಿಲ್ಲ ಎಂದು ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್) ಸ್ಪಷ್ಟಪಡಿಸಿದೆ.

Hd Kumaraswamy ಈ ಸರ್ಕಾರದಿಂದ ನ್ಯಾಯಾಂಗಕ್ಕೂ ಅಪಚಾರ ಎಂದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ. #pratidhvani

ಈ ಕುರಿತು ಮಾತನಾಡಿದ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್, “ಸರ್ಕಾರ ಹೊರಡಿಸಿರುವ ವಸ್ತ್ರಸಂಹಿತೆ ಸಂಬಂಧಿತ ಆದೇಶವನ್ನು ಸರ್ಕಾರಿ ಶಾಲೆಗಳಲ್ಲಿ ಜಾರಿಗೆ ತರಬಹುದು. ಆದರೆ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಮೇಲೆ ಅದನ್ನು ಕಡ್ಡಾಯವಾಗಿ ಹೇರಲು ಸಂವಿಧಾನಾತ್ಮಕ ಅವಕಾಶವಿಲ್ಲ” ಎಂದು ಹೇಳಿದ್ದಾರೆ.ಖಾಸಗಿ ಶಾಲೆಗಳು ತಮ್ಮದೇ ಆದ ಆಡಳಿತ ನಿಯಮಾವಳಿ ಮತ್ತು ಶಿಸ್ತು ಸಂಹಿತೆಯನ್ನು ಹೊಂದಿರುವುದರಿಂದ, ಸಮವಸ್ತ್ರ ನಿಯಮಗಳ ಬಗ್ಗೆ ನಿರ್ಧಾರ ಕೈಗೊಳ್ಳುವ ಹಕ್ಕು ಶಾಲಾ ಆಡಳಿತ ಮಂಡಳಿಗಳಿಗೇ ಸೇರಿದೆ ಎಂದು ಅವರು ತಿಳಿಸಿದ್ದಾರೆ.

Araga Jnanendra : ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ಪಿತೂರಿಗೆ ಕೈ ಹಾಕಿದೆ.. #pratidhvani

“ಪ್ರತಿ ಶಾಲೆಯೂ ತನ್ನದೇ ಆದ ಶೈಕ್ಷಣಿಕ ವಾತಾವರಣ, ಶಿಸ್ತು ಮತ್ತು ಸಂಸ್ಕೃತಿಯನ್ನು ಕಾಪಾಡಿಕೊಳ್ಳಲು ವಸ್ತ್ರಸಂಹಿತೆ ರೂಪಿಸುತ್ತದೆ. ದಾಖಲಾತಿ ವೇಳೆಯಲ್ಲಿಯೇ ಪೋಷಕರು ಈ ನಿಯಮಗಳಿಗೆ ಒಪ್ಪಿಗೆ ನೀಡಿರುತ್ತಾರೆ. ಹೀಗಾಗಿ ಸರ್ಕಾರ ಅಥವಾ ಮೂರನೇ ವ್ಯಕ್ತಿಗಳು ಮಧ್ಯಪ್ರವೇಶಿಸುವುದು ಸೂಕ್ತವಲ್ಲ” ಎಂದು ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರ ಇತ್ತೀಚೆಗೆ ಶಾಲೆಗಳಲ್ಲಿ ಧಾರ್ಮಿಕ ಸಂಕೇತಗಳಿಗೆ ಅವಕಾಶ ನೀಡುವ ಕುರಿತು ಸ್ಪಷ್ಟನೆ ನೀಡಿದ ಬಳಿಕ ಈ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಕೆಲ ಶಿಕ್ಷಣ ತಜ್ಞರು ಮತ್ತು ಪೋಷಕರ ಸಂಘಟನೆಗಳು ಸರ್ಕಾರದ ನಿರ್ಧಾರಕ್ಕೆ ಬೆಂಬಲ ವ್ಯಕ್ತಪಡಿಸಿದ್ದರೆ, ಇನ್ನೊಂದೆಡೆ ಖಾಸಗಿ ಶಾಲಾ ಸಂಘಟನೆಗಳು ಇದರಿಂದ ಶಿಸ್ತು ಹಾಗೂ ಏಕರೂಪತೆಯ ಮೇಲೆ ಪರಿಣಾಮ ಬೀಳುವ ಆತಂಕ ವ್ಯಕ್ತಪಡಿಸಿವೆ.

Dinesh Gundu Rao: 1.85 ಕೋಟಿ ಮೌಲ್ಯದ ಅನುತ್ತಮ ಔಷಧಿಗಳನ್ನು ಲಿಸ್ಟ್ ಮಾಡಲಾಗಿದೆ #pratidhvani

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟ, ಸರ್ಕಾರ ಖಾಸಗಿ ಶಾಲೆಗಳ ಮೇಲೂ ಈ ನಿಯಮಗಳನ್ನು ಕಡ್ಡಾಯಗೊಳಿಸಲು ಮುಂದಾದರೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಎಚ್ಚರಿಸಿದೆ. “ಶಿಕ್ಷಣ ಸಂಸ್ಥೆಗಳ ಆಡಳಿತ ಸ್ವಾಯತ್ತತೆಗೆ ಧಕ್ಕೆ ತರಲು ಅವಕಾಶ ನೀಡುವುದಿಲ್ಲ. ಅಗತ್ಯವಿದ್ದರೆ ಕಾನೂನು ಹೋರಾಟಕ್ಕೂ ಸಿದ್ಧ” ಎಂದು ಒಕ್ಕೂಟ ತಿಳಿಸಿದೆ.ಈ ಬೆಳವಣಿಗೆ ರಾಜ್ಯದಲ್ಲಿ ಶಾಲಾ ವಸ್ತ್ರಸಂಹಿತೆ, ಧಾರ್ಮಿಕ ಸ್ವಾತಂತ್ರ್ಯ ಮತ್ತು ಶಿಕ್ಷಣ ಸಂಸ್ಥೆಗಳ ಸ್ವಾಯತ್ತತೆ ಕುರಿತ ಚರ್ಚೆಗೆ ಹೊಸ ತಿರುವು ನೀಡಿದೆ.

Tags: #CAMS#DressCode#KarnatakaSchools#LegalBattle#PrivateEducation#PrivateSchools#SchoolRules#SchoolUniform#Shivadhara#UniformPolicyEducationNewsHIJABJanivaraKarnatakagovernmentkarnatakanewspratidavani
Previous Post

ಕೇರಳದ ನೂತನ ಸಿಎಂ: ವೇಣುಗೋಪಾಲ್‌ಗೆ ನಿರಾಸೆ? ಫಸ್ಟ್ ರಿಯಾಕ್ಷನ್ ಏನು

Next Post

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

Related Posts

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ
Top Story

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

by ಪ್ರತಿಧ್ವನಿ
May 15, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ಯುದ್ಧದ ಸ್ಥಿತಿ ಹಾಗೂ ಉದ್ವಿಗ್ನ ಪರಿಸ್ಥಿತಿ ಪರಿಣಾಮ ಇದೀಗ ಭಾರತಕ್ಕೂ ತಟ್ಟಿದೆ, ಇದರ ಮುನ್ನೇಚ್ಚರಿಕೆ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ...

Read moreDetails
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

May 14, 2026
3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

3ನೇ ಹಂತದ SIR : ಕರ್ನಾಟಕ ಸೇರಿದಂತೆ ಯಾವ್ಯಾವ ರಾಜ್ಯಗಳಲ್ಲಿ ಮತಪಟ್ಟಿ ಪರಿಷ್ಕರಣೆ..?

May 14, 2026
Next Post
ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

ನೀಟ್ ಯುಜಿ 2026 ಮರುಪರೀಕ್ಷೆಗೆ ದಿನಾಂಕ ಘೋಷಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada