ಕನ್ನಡ ಚಿತ್ರರಂಗದ ನಟ ದೀಲಿಪ್ ರಾಜ್ ನಿಧನದ ಬೆನ್ನಲ್ಲೇ ಅವರ ಪತ್ನಿ ಶ್ರೀವಿದ್ಯಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.“ಖಂಡಿತ ನಾಶ ಮಾಡದೆ ಬಿಡುವುದಿಲ್ಲ, ಹುಷಾರಾಗಿರಿ” ಎಂಬ ಅರ್ಥದ ಸಂದೇಶವನ್ನು ಶ್ರೀವಿದ್ಯಾ ತಮ್ಮ ಸ್ಟೇಟಸ್ ಹಾಗೂ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ಪೋಸ್ಟ್ ಯಾರನ್ನು ಉದ್ದೇಶಿಸಿ ಮಾಡಲಾಗಿದೆ ಎಂಬ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

ಕೆಲವರು ಇದನ್ನು ಭಾವನಾತ್ಮಕ ಪ್ರತಿಕ್ರಿಯೆ ಎಂದು ವಿಶ್ಲೇಷಿಸುತ್ತಿದ್ದರೆ, ಇನ್ನೂ ಕೆಲವರು ಇದಕ್ಕೆ ಬೇರೆ ಅರ್ಥ ಹುಡುಕಲು ಮುಂದಾಗಿದ್ದಾರೆ.ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ದಿಲೀಪ್ ರಾಜ್ ಅವರ ಅಗಲಿಕೆ ಕುಟುಂಬ ಹಾಗೂ ಅಭಿಮಾನಿಗಳಿಗೆ ಭಾರೀ ಆಘಾತ ಉಂಟುಮಾಡಿತ್ತು. ಅವರ ನಿಧನದ ಬಳಿಕ ಶ್ರೀವಿದ್ಯಾ ಹಂಚಿಕೊಂಡಿದ್ದ ಮೊದಲ ಪೋಸ್ಟ್ ಕೂಡ ಸಾಕಷ್ಟು ವೈರಲ್ ಆಗಿತ್ತು. ಅದರಲ್ಲಿ “ಅವರನ್ನು ಶಾಂತಿಯಿಂದ ಹೋಗಲು ಬಿಡಲು ನಿರ್ಧರಿಸಿದ್ದೇನೆ” ಎಂದು ಬರೆದುಕೊಂಡಿದ್ದರು.

ಇದೀಗ ಹೊಸ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಭಿಮಾನಿಗಳು ಹಲವು ರೀತಿಯ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಆದರೆ ಈ ಕುರಿತು ಶ್ರೀವಿದ್ಯಾ ಯಾವುದೇ ಸ್ಪಷ್ಟನೆ ನೀಡಿಲ್ಲ.47ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದ ದಿಲೀಪ್ ರಾಜ್, ಕನ್ನಡದ ಹಲವು ಧಾರಾವಾಹಿ, ಸಿನಿಮಾ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದರು. ಅವರ ಕೊನೆಯ ಇನ್‌ಸ್ಟಾಗ್ರಾಂ ಪೋಸ್ಟ್ ಕೂಡ ಇತ್ತೀಚೆಗೆ ಭಾರೀ ವೈರಲ್ ಆಗಿತ್ತು.






