• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

ಪ್ರತಿಧ್ವನಿ by ಪ್ರತಿಧ್ವನಿ
May 19, 2026
in ರಾಜಕೀಯ
0
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?
Share on WhatsAppShare on FacebookShare on Telegram

 ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗಾಗಿ ಚಿತ್ರದುರ್ಗದಲ್ಲಿ ಆಯೋಜಿಸಲಾಗಿದ್ದ ‘ಬಿಎಸ್‌ವೈ ಅಭಿಮಾನೋತ್ಸವ’ ಭಾರೀ ಯಶಸ್ಸು ಕಂಡ ಬೆನ್ನಲ್ಲೇ, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗಳು ಆರಂಭವಾಗಿವೆ. ಈ ಸಮಾವೇಶದ ಯಶಸ್ಸಿನಿಂದ ಉತ್ಸಾಹಗೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಣ, ರಾಜ್ಯದ ನಾಲ್ಕು ಪ್ರಮುಖ ಭಾಗಗಳಲ್ಲಿ ಮತ್ತಷ್ಟು ಬೃಹತ್ ಮಟ್ಟದ ಸಮಾವೇಶಗಳನ್ನು ನಡೆಸಲು ಚಿಂತನೆ ನಡೆಸಿದೆ ಎನ್ನಲಾಗಿದೆ.

ADVERTISEMENT
Mohan Kumar Danappa On Power Department : ನಕಲಿ ಬಿಲ್‌ ಕಲೆಕ್ಟರ್‌ ಹಾವಳಿಗೆ‌ ಬಿತ್ತು ಬ್ರೇಕ್..#pratidhvani

ಪಕ್ಷದ ಮೂಲಗಳ ಪ್ರಕಾರ, ಮುಂದಿನ ಎಂಟು ತಿಂಗಳ ಅವಧಿಯಲ್ಲಿ ಮಂಡ್ಯ, ಮಂಗಳೂರು, ಬೆಳಗಾವಿ ಹಾಗೂ ಕಲಬುರಗಿಯಲ್ಲಿ ತಲಾ ಎರಡು ತಿಂಗಳ ಅಂತರದಲ್ಲಿ ಬೃಹತ್ ಸಮಾವೇಶಗಳನ್ನು ಆಯೋಜಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಸಮಾವೇಶಗಳ ಮೂಲಕ ಪಕ್ಷದ ಸಂಘಟನಾ ಶಕ್ತಿಯನ್ನು ಮತ್ತಷ್ಟು ಬಲಪಡಿಸುವುದು ಹಾಗೂ ರಾಜ್ಯ ಸರ್ಕಾರದ ವಿರುದ್ಧ ರಾಜಕೀಯ ಹೋರಾಟ ತೀವ್ರಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿದುಬಂದಿದೆ.

ಚಿತ್ರದುರ್ಗದಲ್ಲಿ ನಡೆದ ಬಿಎಸ್‌ವೈ ಅಭಿಮಾನೋತ್ಸವದಲ್ಲಿ ಬಿಜೆಪಿ ಪಕ್ಷದ ಅಧಿಕೃತ ಚಿಹ್ನೆ ಬಳಸದೇ ಇದ್ದರೂ ಲಕ್ಷಾಂತರ ಜನರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಈ ಬೆಳವಣಿಗೆ ವಿಜಯೇಂದ್ರ ಬಣಕ್ಕೆ ಹೊಸ ಆತ್ಮವಿಶ್ವಾಸ ನೀಡಿದ್ದು, ಮುಂದಿನ ಕಾರ್ಯಕ್ರಮಗಳನ್ನು ಪಕ್ಷದ ಚಿಹ್ನೆಯೊಂದಿಗೇ ರಾಜ್ಯಮಟ್ಟದಲ್ಲಿ ದೊಡ್ಡ ರಾಜಕೀಯ ಸಂದೇಶವಾಗಿ ರೂಪಿಸುವ ಚಿಂತನೆ ನಡೆದಿದೆ ಎನ್ನಲಾಗಿದೆ.ಇತ್ತೀಚಿನ ತಿಂಗಳುಗಳಲ್ಲಿ ಬಿಜೆಪಿ ಒಳಗೆ ಕೇಳಿಬಂದಿದ್ದ ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತು ಭಿನ್ನಮತದ ಧ್ವನಿಗಳು ಅಭಿಮಾನೋತ್ಸವದ ಬಳಿಕ ಕೆಲಮಟ್ಟಿಗೆ ತಣ್ಣಗಾಗಿವೆ ಎಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬರುತ್ತಿವೆ. ಯಡಿಯೂರಪ್ಪರ ಪ್ರಭಾವ ಇನ್ನೂ ರಾಜ್ಯ ರಾಜಕಾರಣದಲ್ಲಿ ಗಟ್ಟಿಯಾಗಿರುವುದನ್ನು ಈ ಸಮಾವೇಶ ಸಾಬೀತುಪಡಿಸಿದೆ ಎಂಬ ವಿಶ್ಲೇಷಣೆಗಳು ವ್ಯಕ್ತವಾಗುತ್ತಿವೆ.

 

ರಾಜ್ಯದ ವಿವಿಧ ಭಾಗಗಳಲ್ಲಿ ಹಂತ ಹಂತವಾಗಿ ಸಮಾವೇಶ ನಡೆಸುವುದರಿಂದ ಪಕ್ಷದ ಕಾರ್ಯಕರ್ತರನ್ನು ನಿರಂತರ ಚಟುವಟಿಕೆಯಲ್ಲಿ ತೊಡಗಿಸಿಡಲು ಸಾಧ್ಯವಾಗಲಿದೆ. ಅಲ್ಲದೆ, ಮುಂಬರುವ ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳ ದೃಷ್ಟಿಯಿಂದ ಸಂಘಟನೆ ಬಲಪಡಿಸುವ ಕೆಲಸಕ್ಕೂ ಇದು ಪೂರಕವಾಗಲಿದೆ ಎಂದು ಬಿಜೆಪಿ ನಾಯಕರು ಅಂದಾಜಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸುವುದು, ಕಾರ್ಯಕರ್ತರಲ್ಲಿ ಉತ್ಸಾಹ ತುಂಬುವುದು ಹಾಗೂ ಯಡಿಯೂರಪ್ಪ–ವಿಜಯೇಂದ್ರ ನಾಯಕತ್ವವನ್ನು ಮತ್ತಷ್ಟು ಬಲಪಡಿಸುವುದು ಈ ಸಮಾವೇಶಗಳ ಪ್ರಮುಖ ಉದ್ದೇಶಗಳಾಗಿವೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

 

 

Tags: #BJPMeeting#BSYAbhimanotsava#byvijayendra#KarnatakaPoliticsbjpkarnatakaBSYPeatidavaniYediyurappa
Previous Post

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

Next Post

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

Related Posts

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

by ಪ್ರತಿಧ್ವನಿ
May 20, 2026
0

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ...

Read moreDetails
ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

May 20, 2026
ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

May 20, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ  ಖಡಕ್‌ ಸಂದೇಶವೇನು..?

ಕಾಂಗ್ರೆಸ್‌ ಸರ್ಕಾರಕ್ಕೆ 3 ವರ್ಷದ ಸಂಭ್ರಮ : ಕಲ್ಪತರು ನಾಡಿನಿಂದ ಬಿಜೆಪಿಗೆ ಸಿದ್ದರಾಮಯ್ಯ ಖಡಕ್‌ ಸಂದೇಶವೇನು..?

May 19, 2026
Next Post
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada