• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

ಮೆಲೋನಿ ಜೊತೆ ಐತಿಹಾಸಿಕ ಕೊಲೊಸಿಯಂಗೆ ಭೇಟಿ ನೀಡಿದೆ. ವಿವಿಧ ಮಹತ್ವದ ವಿಷಯಗಳ ಕುರಿತು ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡೆವು : ಪ್ರಧಾನಿ ಮೋದಿ..

ಪ್ರತಿಧ್ವನಿ by ಪ್ರತಿಧ್ವನಿ
May 20, 2026
in Top Story, ಇದೀಗ, ದೇಶ, ರಾಜಕೀಯ, ವಿದೇಶ
0
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?
Share on WhatsAppShare on FacebookShare on Telegram

ನವದೆಹಲಿ : ಐದ ರಾಷ್ಟ್ರಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ನೆದರ್ಲ್ಯಾಂಡ್‌, ಸ್ವೀಡನ್‌ , ನಾರ್ವೆ ಬಳಿಕ ಇದೀಗ ಇಟಲಿ ತಲುಪಿದ್ದಾರೆ. ಭಾರತದ ಬಾಂಧವ್ಯ ಜಾಗತಿಕ ಮಟ್ಟದ ಎಲ್ಲ ದೇಶಗಳೊಂದಿಗೆ ಉತ್ತಮವಾಗಿರುವ ನಿಟ್ಟಿನಲ್ಲಿ ಹಾಗೂ ವಿದೇಶಗಳೊಂದಿಗೆ ಬೇರೆ ಬೇರೆ ಒಪ್ಪಂದಗಳನ್ನು ಮಾಡಿಕೊಳ್ಳುವ ಭಾಗವಾಗಿ ಈ ಭೇಟಿಯನ್ನು ನೋಡಲಾಗುತ್ತಿದೆ.

ADVERTISEMENT
ಸಾಧನಾ ಸಮಾವೇಶದ ವಿರುದ್ಧ ರೊಚ್ಚಿಗೆದ್ದ ಬಿಜೆಪಿ ನಾಯಕ.. #pratidhvani

ಇನ್ನೂ ನಾರ್ವೆಯಲ್ಲಿ ಸುದ್ದಿಗೋಷ್ಠಿಯ ವಿಚಾರಕ್ಕೆ ಹೆಚ್ಚು ಚರ್ಚಿತರಾಗಿದ್ದ ಮೋದಿ ಈಗ ಮತ್ತೆ ಚರ್ಚೆಯ ವಸ್ತುವಾಗಿದ್ದಾರೆ. ಕಾರಣ ಪ್ರಧಾನಮಂತ್ರಿ ನರೇಂದ್ರ ಮೋದಿ ಇಟಲಿಯ ರಾಜಧಾನಿ ರೋಮ್‌ಗೆ ಭೇಟಿ ನೀಡಿದ್ದು, ಅಲ್ಲಿ ಅವರನ್ನು ಇಟಲಿಯ ಪ್ರಧಾನಮಂತ್ರಿ ಜಾರ್ಜಿಯಾ ಮೆಲೋನಿ ಆತ್ಮೀಯ ಸ್ವಾಗತ ಕೋರಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌..!

ಅಲ್ಲದೆ ಇಬ್ಬರೂ ಪ್ರಧಾನಿಗಳು ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿರುವ ಭಾವಚಿತ್ರಗಳನ್ನು ಮೋದಿ ಹಂಚಿಕೊಂಡಿದ್ದಾರೆ. ಆದರೆ ಈ ಎಲ್ಲ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಇನ್ನೂ ಈ ನಡುವೆಯೇ ಎತ್ತರದ ಕಟ್ಟಡದ ಮೇಲೆ ನಿಂತು ಮೆಲೋನಿ ಇಟಲಿಯಲ್ಲಿನ ವಾಯು ಮಾಲಿನ್ಯವನ್ನು ತಡೆಗಟ್ಟಲು ಅನುಸರಿಸಿರುವ ಕ್ರಮಗಳನ್ನು ಹಂಚಿಕೊಳ್ಳುವ ವಿಡಿಯೋ ಸಹ ಹೊರಬಂದಿದೆ.

ಇದನ್ನೂ ಓದಿ : ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

ಅಲ್ಲದೆ ಪ್ರಧಾನಿ ಮೋದಿ ಕೂಡ ಮೆಲೋನಿಯವರ ಜೊತೆ ಮಹತ್ವದ ವಿಚಾರಗಳು ಹಾಗೂ ಒಪ್ಪಂದ ಸೇರಿದಂತೆ ಸಂವಾದಕ್ಕೆ ಎದುರು ನೋಡುತ್ತಿದ್ದೇನೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ರೋಮ್‌ಗೆ ಭೇಟಿ ನೀಡಿದ ಬಳಿಕ ಪ್ರಧಾನಿ ಮೆಲೋನಿ ಜೊತೆ ಭೋಜನ ಕೂಟದಲ್ಲಿ ಭಾಗವಹಿಸುವ ಅವಕಾಶ ದೊರೆಯಿತು. ಬಳಿಕ ಐತಿಹಾಸಿಕ ಕೊಲೊಸಿಯಂಗೆ ಭೇಟಿ ನೀಡಿದೆವು. ವಿವಿಧ ಮಹತ್ವದ ವಿಷಯಗಳ ಕುರಿತು ಪರಸ್ಪರ ಅಭಿಪ್ರಾಯ ವಿನಿಮಯ ಮಾಡಿಕೊಂಡೆವು. ಇಂದು ನಡೆಯಲಿರುವ ಮಾತುಕತೆಗಾಗಿ ಎದುರು ನೋಡುತ್ತಿದ್ದೇನೆ. ಭಾರತ–ಇಟಲಿ ಸ್ನೇಹವನ್ನು ಇನ್ನಷ್ಟು ಬಲಪಡಿಸುವ ಬಗ್ಗೆ ಚರ್ಚೆಯನ್ನು ಮುಂದುವರಿಸಲಿದ್ದೇವೆ ಎಂದು ಮೋದಿ ತಿಳಿಸಿದ್ದಾರೆ.

ಇನ್ನೂ ಇದಕ್ಕೂ ಮುನ್ನ ಮೋದಿಯವರಿಗೆ ಸ್ವಾಗತ ನೀಡುವ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಜಾರ್ಜಿಯಾ ಮೆಲೋನಿ  “Welcome to Rome, My Friend” ಎಂದು ಹೇಳಿದ್ದರು, ಅಲ್ಲದೆ ಮೋದಿ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿದ್ದರು. ಪ್ರಧಾನಿ ಮೋದಿ ಹಾಗೂ ಮೆಲೋನಿ ಒಳ್ಳೆಯ ಸ್ನೇಹಿತರಾಗಿದ್ದಾರೆ ಎನ್ನುವುದು ಈ ಹಿಂದಿನ ಅವರ ಭೇಟಿಗಳು ಹಾಗೂ ಭಾವಚಿತ್ರಗಳೇ ಹೇಳುತ್ತವೆ. ಹೀಗಾಗಿ ಮೋದಿ ಪಾಲಿಗೆ ಇಟಲಿ ಭೇಟಿ ಹಲವು  ವಿಶೇಷತೆಗಳಿಂದ ಕೂಡಿದೆ.

Previous Post

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

Related Posts

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?
ರಾಜಕೀಯ

ನಾರ್ಡಿಕ್ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ “ಭಾರತ–ನಾರ್ಡಿಕ್” ಬಗ್ಗೆ ಹೇಳಿದ್ದೇನು ?

by ಪ್ರತಿಧ್ವನಿ
May 20, 2026
0

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾರ್ಡಿಕ್ ಶೃಂಗಸಭೆಯಲ್ಲಿ ಮಾತನಾಡಿ, “ಪ್ರಜಾಪ್ರಭುತ್ವ, ಕಾನೂನಿನ ಆಡಳಿತ ಹಾಗೂ ಜನಪರ ಮೌಲ್ಯಗಳೇ ಭಾರತ ಮತ್ತು ನಾರ್ಡಿಕ್ ರಾಷ್ಟ್ರಗಳನ್ನು ಸಹಜ ಪಾಲುದಾರರನ್ನಾಗಿಸಿವೆ” ಎಂದು...

Read moreDetails
ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

May 20, 2026
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada