• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

ಪ್ರತಿಧ್ವನಿ by ಪ್ರತಿಧ್ವನಿ
May 23, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”
Share on WhatsAppShare on FacebookShare on Telegram

ಬೆಂಗಳೂರು : ಲಾಡ್ಲೆ ಮಶಾಕ್‌ ದರ್ಗಾದಲ್ಲಿರುವ ಶಿವಲಿಂಗದ ಮೇಲೆ ಮಲ ಮೂತ್ರ ವಿಸರ್ಜನೆ ಮಾಡಿರುವ ಪ್ರಕರಣವನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡನೆ ವ್ಯಕ್ತಪಡಿಸಿದ್ದಾರೆ.

ADVERTISEMENT
Pralhad Joshi : ರೋಜ್‌ಗಾರ ಮೇಳದಲ್ಲಿ ನೇಮಕಾತಿ ಪತ್ರ ವಿತರಿಸಿದ ಕೇಂದ್ರ ಸಚಿವ..! #pralhadjoshi #pratidhvani

ತುಷ್ಟೀಕರಣದ ಎಲ್ಲ ಮಿತಿಗಳನ್ನೂ ದಾಟಿರುವ ಈ ನಾಚಿಕೆಗೆಟ್ಟ ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್‌, ಓಲೈಕೆಯ ಕೀಳು ರಾಜಕೀಯ ಮತ್ತು ಅಲ್ಪಸಂಖ್ಯಾತರ ತುಷ್ಟೀಕರಣದ ಪರಮಾವಧಿಯ ನಿರ್ಲಜ್ಜ ಪ್ರದರ್ಶನಕ್ಕೆ ರಾಜ್ಯ ಈಗ ಸಾಕ್ಷಿಯಾಗಿದೆ ಎಂದು ಕಿಡಿಕಾರಿದ್ದಾರೆ.

ಕನಿಷ್ಠ ಜವಾಬ್ದಾರಿಯೂ ಇಲ್ಲದೆ, ನೈತಿಕತೆ, ಗೌರವಗಳೆಲ್ಲವನ್ನೂ ಗಾಳಿಗೆ ತೂರಿ, ಸಭ್ಯತೆಯ ಎಲ್ಲಾ ಮಿತಿಗಳನ್ನೂ ಈ ತುಘಲಕ್ ಕಾಂಗ್ರೆಸ್ ಸರ್ಕಾರ ದಾಟಿದೆ.
ಕಲಬುರಗಿಯ ಆಳಂದದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಪವಿತ್ರ ರಾಘವ ಚೈತನ್ಯ ಶಿವಲಿಂಗದ ಮೇಲೆ ಮಲಮೂತ್ರ ವಿಸರ್ಜನೆ ಮಾಡಿ ವಿಕೃತಿ, ದಾರ್ಷ್ಟ್ಯ ಮೆರೆದಿದ್ದ. ಆ ಸಮಯದಲ್ಲಿ ಅಂದಿನ ಕೇಂದ್ರ ಸಚಿವರು, ಜಿಲ್ಲಾಧಿಕಾರಿ ಹಾಗೂ ಎಸ್ಪಿಯವರ ವಾಹನಗಳ ಮೇಲೆ ಮಾರಕಾಸ್ತ್ರಗಳಿಂದ ಕಲ್ಲು ತೂರಾಟ ನಡೆಸಿದ್ದ ಘೋರ ಅಪರಾಧ ಮತ್ತು ಹೀನಾಯ ಕೋಮು ಗಲಭೆಯ 13 ಪ್ರಕರಣಗಳನ್ನು ಈ ತುಘಲಕ್ ಸರ್ಕಾರ ವಾಪಸ್ ಪಡೆದಿರುವುದನ್ನು ಅತ್ಯಂತ ಕಟುವಾದ ಪದಗಳಲ್ಲಿ ಟೀಕಿಸಿದ್ದಾರೆ.

ಇದನ್ನೂ ಓದಿ : ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಸಮಾಜದ ಶಾಂತಿ ಕದಡಿದ ಇಂತಹ ಗಂಭೀರ ಅಪರಾಧದ ಸಮಾಜವಿರೋಧಿ ಕಿಡಿಗೇಡಿಗಳನ್ನು ರಾಜಾರೋಷವಾಗಿ ಮುಕ್ತಗೊಳಿಸುವ ಮೂಲಕ ಸಮಾಜಕ್ಕೆ ಏನು ಸಂದೇಶ ನೀಡುತ್ತಿದ್ದೀರಿ ಮುಖ್ಯಮಂತ್ರಿಗಳೇ? ಈ ಕಾಂಗ್ರೆಸ್ ಸರ್ಕಾರಕ್ಕೆ, ಹಿಂದೂ ಧರ್ಮದ ಬಗ್ಗೆ ಕನಿಷ್ಟ ಗೌರವ, ಹಿಂದೂಗಳ ಮನಸ್ಸಿಗೆ ಆಗಿರುವ ನೋವು, ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಕನಿಷ್ಠ ಸಂವೇದನೆ, ಗೌರವವಾದರೂ ಉಳಿದಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಬೇಕಾದ ವಿಧಾನಸಭಾ ಸಭಾಧ್ಯಕ್ಷರಾದ ಮಾನ್ಯ ಶ್ರೀ ಯು.ಟಿ.ಖಾದರ್ ಅವರೇ ಸ್ವತಃ ಈ ದುರುಳ ದಗಾಕೋರರ ಪ್ರಕರಣಗಳನ್ನು ಹಿಂಪಡೆಯಲು ಶಿಫಾರಸು ಮಾಡಿರುವ ವರದಿ ಮತ್ತಷ್ಟು ಖೇದನೀಯ ಮಾತ್ರವಲ್ಲ ಪ್ರಜಾಪ್ರಭುತ್ವಕ್ಕೆ ಬಗೆದ ದ್ರೋಹ!. ಇದು ನಿಜಕ್ಕೂ ಅತ್ಯಂತ ದುರ್ದೈವದ ಸಂಗತಿ. ಕೇವಲ ನಿಮ್ಮ ಕೊಳಕು ಓಲೈಕೆಗಾಗಿ, ಸಮಾಜಘಾತುಕ ಶಕ್ತಿಗಳಿಗೆ, ಅಪರಾಧಿಗಳಿಗೆ ಕ್ಲೀನ್ ಚೀಟ್ ನೀಡುತ್ತಿರುವ ಮುಖ್ಯಮಂತ್ರಿ  ಸಿದ್ದರಾಮಯ್ಯನವರೇ, ಬಹುಸಂಖ್ಯಾತರ ಧಾರ್ಮಿಕ ಭಾವನೆಗಳನ್ನು ಹಾಗೂ ನಾಡಿನ ಸುರಕ್ಷತೆಯನ್ನು ಮುಸ್ಲಿಂ ವೋಟ್ ಬ್ಯಾಂಕಿಗೆ ಅಡವಿಟ್ಟಿರುವ ನಿಮ್ಮ ಈ ಜನವಿರೋಧಿ ಧೋರಣೆಯನ್ನು ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ ಎಂದು ವಿಜಯೇಂದ್ರ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡು ಬೆಂಕಿಯುಗುಳಿದ್ದಾರೆ.

Tags: Aland Ladle Mashak DargahB Y Vijayendrabjp karnatakaCabinet Meetingcongress karnatakaDK ShivakumarKalaburagiKarnataka GovernmentKarnataka PoliticsPratidhvanisiddaramaiahTalk warTwitter PostU T Khader
Previous Post

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

Next Post

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

Related Posts

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?
Top Story

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

by ಪ್ರತಿಧ್ವನಿ
May 23, 2026
0

ಬೆಂಗಳೂರು : ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳಿಗೆ ಸೆಡ್ಡು ಹೊಡೆದು ಸಾಮಾಜಿಕ ಜಾಲತಾಣದಲ್ಲಿ ಧೂಳೆಬ್ಬಿಸಿರುವ ಕಾಕ್ರೋಚ್‌ ಜನತಾ ಪಾರ್ಟಿಯ ಇನ್‌ಸ್ಟಾಗ್ರಾಂ ಖಾತೆಯನ್ನು ಹ್ಯಾಕ್‌ ಮಾಡಲಾಗಿದೆ. ಕಳೆದ...

Read moreDetails
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

ರೈಲು ಮಿಸ್ ಆದರೆ ಅದೇ ಟಿಕೆಟ್‌ನಲ್ಲಿ ಬೇರೆ ರೈಲು ಹತ್ತಬಹುದಾ? ಇಲ್ಲಿದೆ ರೈಲ್ವೆಯ ಸ್ಪಷ್ಟ ನಿಯಮ

May 23, 2026
‘ಕಾಕ್ರೋಚ್ ಜನತಾ ಪಾರ್ಟಿ’ ಹಿಂದೆ ವಿದೇಶಿ ಸಂಪರ್ಕ? ನೆಟ್ಟಿಗರ ಪ್ರಶ್ನೆಗೆ ಸಂಸ್ಥಾಪಕ‌ ಹೇಳಿದ್ದೇನು‌?

ಬೌರಿಂಗ್ ಆಸ್ಪತ್ರೆ ಗೋಡೆ ದುರಂತ: ನಿಜ ಕಾರಣ ಬಹಿರಂಗಪಡಿಸಿದ ಲೋಕಾಯುಕ್ತ ವರದಿ!

May 22, 2026
Next Post
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!