• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ಶೇ 60 ರಷ್ಟು ವೇತನ ಏರಿಕೆ ಮಾಡಿ ಅಧಿಸೂಚನೆ, ಒಂದು ಕೋಟಿಗೂ ಹೆಚ್ಚು ಕಾರ್ಮಿಕರಿಗೆ ಲಾಭ, ಶ್ರಮಿಕರಿಗೆ ಸರ್ಕಾರದಿಂದ ಮತ್ತೊಂದು ಕೊಡುಗೆ..

ಪ್ರತಿಧ್ವನಿ by ಪ್ರತಿಧ್ವನಿ
May 23, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..
Share on WhatsAppShare on FacebookShare on Telegram

ಮುಖ್ಯಾಂಶಗಳು..

ADVERTISEMENT

* ಒಂದು ಕೋಟಿಗೂ ಹೆಚ್ಚು ಕಾರ್ಮಿಕರಿಗೆ ವೇತನ ಹೆಚ್ಚಳದಿಂದ ಲಾಭ
* 81 ಕ್ಕೂ ಹೆಚ್ಚು ಉದ್ಯೋಗ ವಲಯಗಳ ಕಾರ್ಮಿಕರ ವೇತನ ಹೆಚ್ಚಳ
* ಎಲ್ಲ ನಿಗದಿತ ಉದ್ಯೋಗಗಳು ಒಂದೇ ಅಧಿಸೂಚನೆಯ ವ್ಯಾಪ್ತಿಗೆ
* ಇ-ಕಾಮರ್ಸ್‌, ಕೊರಿಯರ್‌ ಸಂಸ್ಥೆ, ಧಾರ್ಮಿಕ ಸಂಸ್ಥೆ ನೌಕರರಿಗೂ ಅನುಕೂಲ

ಬೆಂಗಳೂರು : ಕಾರ್ಮಿಕರ ಕನಿಷ್ಠ ವೇತನವನ್ನು ಸರಾಸರಿ ಶೇ 60 ರಷ್ಟು ಏರಿಕೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ರಾಜ್ಯದ ಕೋಟ್ಯಂತರ ಕಾರ್ಮಿಕರಿಗೆ ಸರ್ಕಾರ, ಕಾರ್ಮಿಕ ಇಲಾಖೆಯ ಮೂಲಕ ಭರ್ಜರಿ ಕೊಡುಗೆ ನೀಡಿದೆ.

Satish jarkiholi : ಬಾಗಲಕೋಟೆಗೆ ಹೆಲಿಕಾಪ್ಟರ್​​ನಲ್ಲಿ ಸತೀಶ್ ಜಾರಕಿಹೊಳಿ ರಗಡ್ ಎಂಟ್ರಿ..! #pratidhvani

ಈ ಅಧಿಸೂಚನೆಯು ರಾಜ್ಯದ ಅಸಂಘಟಿತ ಮತ್ತು ನಿರ್ದಿಷ್ಟ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಆರ್ಥಿಕ ಸೌಲಭ್ಯವನ್ನು ಒದಗಿಸಲಿದೆ. ಸುಪ್ರೀಂಕೋರ್ಟ್‌ ನಿರ್ದೇಶನದ ಅನ್ವಯ ಈ ವೇತನ ಪರಿಷ್ಕರಣೆಯನ್ನು ಮಾಡಲಾಗಿದೆ. ಈ ಬಾರಿಯ ಅಧಿಸೂಚನೆಯ ವಿಶೇಷವೆಂದರೆ ಇದೇ ಮೊದಲ ಬಾರಿಗೆ ಎಲ್ಲಾ ನಿಗದಿತ ಉದ್ಯೋಗಗಳನ್ನು ಒಂದೇ ಅಧಿಸೂಚನೆಯಡಿ ತಂದಿರುವುದು. ಈ ಹಿಂದೆ ಇದ್ದ ನಾಲ್ಕು ವಲಯಗಳ ವರ್ಗೀಕರಣವನ್ನು ಮೂರು ವಲಯಗಳಿಗೆ ಪರಿಷ್ಕರಿಸಲಾಗಿದೆ.

ಇನ್ನೂ ನೂತನ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳ ಅಧಿಸೂಚನೆಯು ಖಾಸಗಿ ಶಾಲೆ- ಕಾಲೇಜು ಬೋಧಕೇತನ ಸಿಬ್ಬಂದಿ, ಇ-ಕಾಮರ್ಸ್‌ ವಲಯದ ನೌಕರರು ಮತ್ತು ಕೋರಿಯರ್‌ ಸಂಸ್ಥೆಗಳ ನೌಕರರು ಮತ್ತು ಧಾರ್ಮಿಕ ಸಂಸ್ಥೆಗಳಲ್ಲಿ ದುಡಿಯುವ ಸಿಬ್ಬಂದಿಗೂ ಲಾಭ ಮಾಡಿಕೊಟ್ಟಿದೆ. ಒಟ್ಟಾರೆಯಾಗಿ ಕರ್ನಾಟಕದಲ್ಲಿನ 81 ಅನುಸೂಚಿತ ಉದ್ಯೋಗಗಳಲ್ಲಿ ದುಡಿಯುವ ಶ್ರಮಿಕರಿಗೆ ಅನುಕೂಲವಾಗಲಿದೆ.

ಇದನ್ನೂ ಓದಿ : ಸಾಮಾನ್ಯ ಭಕ್ತರಿಗೆ ಟಿಟಿಡಿಯಿಂದ ಬಂಪರ್ ಸಿಹಿಸುದ್ದಿ: ಶ್ರೀವಾರಿ ದರ್ಶನ ಇನ್ನಷ್ಟು ಸುಲಭ

ಬಹುದಿನಗಳ ಬೇಡಿಕೆ ಈಡೇರಿದ ಸಂತಸ..!

ಕನಿಷ್ಠ ವೇತನ ಪರಿಷ್ಕರಣೆ ಮಾಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ವಿವಿಧ ಸಂಘಟನೆಗಳು, ಕಾರ್ಮಿಕರ ಒಕ್ಕೂಟಗಳು ಇದಕ್ಕಾಗಿ ಬೇಡಿಕೆ ಇಟ್ಟಿದ್ದವು. ಇದೀಗ ಕಾರ್ಮಿಕ ಇಲಾಖೆ ಸ್ಪಂದಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜೀವನ ನಡೆಸಲು ಕಷ್ಟಪಡುತ್ತಿದ್ದ ಕಾರ್ಮಿಕ ವಲಯಕ್ಕೆ ಈ ಕನಿಷ್ಠ ವೇತನ ಪರಿಷ್ಕರಣೆಯು ದೊಡ್ಡ ಮಟ್ಟದ ಅನುಕೂಲ ಮಾಡಿಕೊಡಲಿದೆ. ಪರಿಷ್ಕೃತ ಕನಿಷ್ಠ ವೇತನದ ಕರಡು ಅಧಿಸೂಚನೆಯನ್ನು ಕಳೆದ ವರ್ಷದ ಏಪ್ರಿಲ್ 11 ರಂದು ಹೊರಡಿಸಲಾಗಿತ್ತು. 2016-2017 ರಲ್ಲಿ ಜಾರಿಗೆ ಬಂದ ಕೊನೆಯ ಪರಿಷ್ಕರಣೆಯ ಒಂದು ದಶಕದ ನಂತರ ಈ ಪರಿಷ್ಕರಣೆ ಜಾರಿಗೆ ಬಂದಿದೆ. ಕಾರ್ಮಿಕ ಸಂಘಗಳು ಕನಿಷ್ಠ ವೇತನ ಅಧಿಸೂಚನೆ ಹೊರಡಿಸಲು ಒತ್ತಾಯಿಸುತ್ತಿದ್ದವು. ಆದರೆ ಕೈಗಾರಿಕೆಗಳು, ವಿಶೇಷವಾಗಿ ಎಂಎಸ್‌ಎಂಇ ವಲಯದಿಂದ ವಿರೋಧ ವ್ಯಕ್ತವಾಗಿತ್ತು.

ವಲಯ 3 ರಲ್ಲಿನ ಕೌಶಲ್ಯರಹಿತ ಕಾರ್ಮಿಕರಿಗೆ ರೂ.19,300 ರಿಂದ ವಲಯ 1 ರಲ್ಲಿ ಹೆಚ್ಚು ಕೌಶಲ್ಯಪೂರ್ಣ ಕಾರ್ಮಿಕರಿಗೆ 31,100 ರೂಪಾಯಿಗಳವರೆಗೆ ಏರಿಕೆ ಮಾಡಲಾಗಿದೆ. ಎರಡು ವರ್ಷಗಳ 1,030 ಮೊತ್ತದ ವೇರಿಯಬಲ್ ಡಿಯರ್ನೆಸ್ ಭತ್ಯೆಯನ್ನು (VDA) ಕನಿಷ್ಠ ವೇತನದಲ್ಲಿ ಸೇರಿಸಲಾಗಿದೆ. ಕನಿಷ್ಠ ವೇತನ ಲೆಕ್ಕಾಚಾರ ಮಾಡಲು ರಾಜ್ಯವನ್ನು ಮೂರು ವಲಯಗಳಾಗಿ ವರ್ಗೀಕರಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರದೇಶವು ವಲಯ 1 ರ ಅಡಿಯಲ್ಲಿ ಬರಲಿದೆ. ವಲಯ 2 ರಲ್ಲಿ ಜಿಲ್ಲಾ ಕೇಂದ್ರಗಳು ಬರಲಿವೆ ಮತ್ತು ಉಳಿದ ಪ್ರದೇಶಗಳು ವಲಯ 3 ರ ಅಡಿಯಲ್ಲಿ ವರ್ಗೀಕರಿಸಲಾಗಿದೆ.

Savukku Shankar: ಜೈಲಿನಿಂದ ಬಿಡುಗಡೆ ಬಳಿಕ ಸ್ಟಾಲಿನ್‌ ವಿರುದ್ಧ ಯುಟ್ಯೂಬರ್‌ ಸಾವುಕ್ಕು ಶಂಕರ್ ವಾಗ್ದಾಳಿ..!

ಕನಿಷ್ಠ ವೇತನದ ಗುರಿ, ಕರ್ನಾಟಕಕ್ಕೆ ಮೂರನೇ ಸ್ಥಾನ..

ಕಾರ್ಮಿಕರ ಕನಿಷ್ಠ ವೇತನ ಹೆಚ್ಚಳದ ಅಧಿಸೂಚನೆಯನ್ನು ಹೊರಡಿಸಿದ ಮೂರನೇ ರಾಜ್ಯ ಎಂಬ ಕೀರ್ತಿಗೆ ಕರ್ನಾಟಕ ಈಗ ಪಾತ್ರವಾಗಿದೆ. ಈಗಾಗಲೇ ಉತ್ತರ ಪ್ರದೇಶ ಮತ್ತು ಹರಿಯಾಣದಲ್ಲಿ ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಈಗಿನ ಪ್ರಸ್ತುತ ಪರಿಷ್ಕರಣೆಯು 1991 ರ ರೆಪ್ಟಕೋಸ್ ಬ್ರೆಟ್ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿರುವ ಮಾರ್ಗಸೂಚಿಗಳ ಪ್ರಕಾರವೇ ಏರಿಕೆ ಮಾಡಲಾಗಿದೆ. ಮನೆಗಳಲ್ಲಿ ದಿನನಿತ್ಯದ ವೆಚ್ಚದ ಲೆಕ್ಕಾಚಾರದ ಮೇಲೆ ಇದನ್ನು ಜಾರಿ ಮಾಡಲಾಗಿದೆ.

ಕಾರ್ಮಿಕರ ಕನಿಷ್ಠ ವೇತನ ಜಾರಿಯಾಗುವಲ್ಲಿ ಕಾರ್ಮಿಕ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಸಾಕಷ್ಟು ಕೆಲಸ ಮಾಡಿದ್ದಾರೆ. ಈ ಸಂಬಂಧ ಅವರು ವಿವಿಧ ಕಾರ್ಮಿಕ ಸಂಘಟನೆಗಳು, ಉದ್ಯೋಗದಾತರು, ತಜ್ಞರು, ಕಾನೂನು ಪರಿಣತರ ಜೊತೆಗೆ ಸಮಾಲೋಚನೆ, ಸಭೆಗಳನ್ನು ನಡೆಸಿದ್ದಾರೆ. ಅಂತಿಮವಾಗಿ ಇದೀಗ ಅಧಿಸೂಚನೆ ಹೊರಡಿಸಲಾಗಿದ್ದು, ಸಚಿವ ಲಾಡ್‌ ಅವರ ಕಾರ್ಯಕ್ಕೆ ಕಾರ್ಮಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇನ್ನೂ ಹೊಸ ಕನಿಷ್ಠ ವೇತನ ಜಾರಿಯಿಂದ ರಾಜ್ಯದಲ್ಲಿನ ಸಾಕಷ್ಟು ಕಾರ್ಮಿಕರಿಗೆ ಅನುಕೂಲವಾಗಲಿದೆ. ಇಎಸ್‌ಐ ಮತ್ತು ಪಿಎಫ್‌ ಗಳಿಗೆ ವೇತನ ಕಡಿತ ಮಾಡಿದ ನಂತರ ಕಾರ್ಮಿಕರಿಗೆ ಕಡಿಮೆ ವೇತನ ಉಳಿಯುತ್ತಿತ್ತು. ಕೆಲವರು ಬಿಪಿಎಲ್‌ ವ್ಯಾಪ್ತಿಯಿಂದಲೂ ಹೊರಗಿದ್ದರು. ಅಂತಹವರಿಗೆಲ್ಲ ಈ ಕನಿಷ್ಠ ವೇತನ ಹೆಚ್ಚಳದಿಂದ ಸಹಾಯವಾಗಲಿದೆ. ಇದೊಂದು ಕ್ರಾಂತಿಕಾರಕ ಕ್ರಮವೆಂದೇ ಹೇಳಬಹುದು. ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯವಾಗುವ ಕ್ರಮವನ್ನು ಜಾರಿ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಸಾರ್ಥಕ ಭಾವ ಮೆರೆದಿದ್ದಾರೆ.

Tags: BPLBuilding workersCM Siddaramaiahcongress karnatakaDK ShivakumarKarnataka GovernmentLabour DepartmentLabour Development BoardMinimum Wage SalaryPayment IrderPratidhvaniSantosh Lad
Previous Post

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

Next Post

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

Related Posts

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..
Top Story

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

by ಪ್ರತಿಧ್ವನಿ
May 23, 2026
0

ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ...

Read moreDetails
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

“ಕರ್ನಾಟಕದ ಜನತೆ ಎಂದಿಗೂ ಕ್ಷಮಿಸುವುದಿಲ್ಲ, ಇತಿಹಾಸವೂ ನಿಮ್ಮ ಕೊಳಕು ಮನಸ್ಥಿತಿಯನ್ನು ದಾಖಲಿಸದೆ ಬಿಡುವುದಿಲ್ಲ”

May 23, 2026
ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

ಗ್ರಾಹಕರ ಜೇಬು ಸುಡುತ್ತಿದೆ ಇಂಧನ ದರ ಏರಿಕೆ : ಪೆಟ್ರೋಲ್‌, ಡೀಸೆಲ್‌ ಬೆಲೆಗಳಲ್ಲಿ ಎಷ್ಟು ಹೆಚ್ಚಳ ಗೊತ್ತಾ..?

May 23, 2026
ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

ಎಬೋಲಾ ವೈರಸ್ ಎಚ್ಚರಿಕೆ: ಕರ್ನಾಟಕದಲ್ಲಿ ಹೈ ಅಲರ್ಟ್‌! ಈ‌ ನಿಯಮ‌ ಕಡ್ಡಾಯ 

May 23, 2026
Next Post
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada