• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಪ್ರತಿಧ್ವನಿ by ಪ್ರತಿಧ್ವನಿ
May 26, 2026
in Top Story
0
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್
Share on WhatsAppShare on FacebookShare on Telegram

ದೇಶಾದ್ಯಂತ ಆತಂಕ ಸೃಷ್ಟಿಸಿರುವ “ಡಿಜಿಟಲ್ ಅರೆಸ್ಟ್” ಸೈಬರ್ ವಂಚನೆ ಇದೀಗ ಮತ್ತೊಮ್ಮೆ ಭಾರೀ ಸದ್ದು ಮಾಡಿದೆ. ಸಿಬಿಐ ಹಾಗೂ ಇಡಿ ಅಧಿಕಾರಿಗಳ ಹೆಸರಿನಲ್ಲಿ ಹಿರಿಯ ಮಹಿಳೆಯೊಬ್ಬರನ್ನು ಬೆದರಿಸಿ ಸುಮಾರು 24 ಕೋಟಿ ರೂಪಾಯಿ ವಂಚಿಸಿರುವ ಶಾಕ್‌ಿಂಗ್ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದ ಹಿನ್ನಲೆಯಲ್ಲಿ ಹಲವು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿರುವ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ.

ADVERTISEMENT
Actress Jayamala : ಕಲಾವಿದರಿಗಾಗಿ ಸಿದ್ದರಾಮಯ್ಯ ಸರ್ಕಾರಕ್ಕೆ 50 ಎಕರೆ ಭೂಮಿ ನೀಡಲು ಜಯಮಾಲಾ ಬೇಡಿಕೆ..!

ಬೆಂಗಳೂರಿನ 74 ವರ್ಷದ ಲಕ್ಷ್ಮೀ ರಾಮಮೂರ್ತಿ ಎಂಬ ನಿವೃತ್ತ ಶಿಕ್ಷಕಿಯನ್ನು ಗುರಿಯಾಗಿಸಿಕೊಂಡಿದ್ದ ಆರೋಪಿಗಳು, ತಾವು ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಎಂದು ನಂಬಿಸಿದ್ದರು. “ನಿಮ್ಮ ಆಧಾರ್ ಮತ್ತು ಬ್ಯಾಂಕ್ ಖಾತೆಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಳಸಲಾಗಿದೆ” ಎಂದು ಹೇಳಿ ಮಹಿಳೆಯನ್ನು ಮಾನಸಿಕ ಒತ್ತಡಕ್ಕೆ ಒಳಪಡಿಸಿದ್ದರು.

Dr K Sudhakar: ಕುರ್ಚಿ ಬಚಾವ್ ಆಂದೋಲನ ಎಂದ  ಸುಧಾಕರ್​ಗೆ ತಿರುಗೇಟು  #pratidhvani

ಸೈಬರ್ ವಂಚಕರು ಮೊದಲು ಕರೆ ಮಾಡಿ, ಬಳಿಕ ವಿಡಿಯೊ ಕಾಲ್ ಮೂಲಕ ನಕಲಿ ಪೊಲೀಸ್ ಕಚೇರಿ, ಯೂನಿಫಾರ್ಮ್ ಮತ್ತು ನಕಲಿ ದಾಖಲೆಗಳನ್ನು ತೋರಿಸುತ್ತಾರೆ. “ನೀವು ತನಿಖೆಯಲ್ಲಿದ್ದೀರಿ”, “ನಿಮ್ಮ ಮೇಲೆ ಕೇಸ್ ದಾಖಲಾಗಿದೆ” ಎಂದು ಬೆದರಿಸಿ, ಯಾರೊಂದಿಗೂ ಮಾತನಾಡಬಾರದು ಎಂದು ಸೂಚಿಸುತ್ತಾರೆ. ಇದನ್ನೇ “ಡಿಜಿಟಲ್ ಅರೆಸ್ಟ್” ಎಂದು ಕರೆಯಲಾಗುತ್ತದೆ.

Siddaramaiah : ಮೋದಿ ಇದೇನಾ? ಸಿಎಂ ಸಿದ್ದು ಆಕ್ರೋಶ #pratidhvani

ಈ ಪ್ರಕರಣದಲ್ಲೂ ಮಹಿಳೆಯನ್ನು ತಿಂಗಳುಗಳ ಕಾಲ ಭಯಭೀತಗೊಳಿಸಿ, ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಫೆಬ್ರವರಿಯಿಂದ ಏಪ್ರಿಲ್‌ವರೆಗೆ ಒಟ್ಟು 26 ವ್ಯವಹಾರಗಳ ಮೂಲಕ 23 ಮ್ಯೂಲ್ ಖಾತೆಗಳಿಗೆ ಸುಮಾರು 24 ಕೋಟಿ ರೂಪಾಯಿ ಜಮಾ ಮಾಡಲಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ.

DK Shivakumar :  ಬೆಲೆ ಏರಿಕೆ ವಿರುದ್ಧ ದೊಡ್ಡ ಮಟ್ಟದ ಹೋರಾಟ..! #petrol

ವಂಚಕರು ಮಹಿಳೆಯಿಂದ ಇನ್ನೂ 3 ಕೋಟಿ ರೂಪಾಯಿ ಪಡೆಯಲು ಚಿನ್ನದ ಸಾಲ ಮಾಡಿಸುವ ಯತ್ನದಲ್ಲಿದ್ದರು. ಆದರೆ ಬ್ಯಾಂಕ್ ಅಧಿಕಾರಿಗಳಿಗೆ ಅನುಮಾನ ಮೂಡಿದ ಹಿನ್ನೆಲೆಯಲ್ಲಿ ತಕ್ಷಣ ಕರ್ನಾಟಕ ಸೈಬರ್ ಕಮಾಂಡ್‌ಗೆ ಮಾಹಿತಿ ನೀಡಲಾಯಿತು. ಕೂಡಲೇ ಎಚ್ಚೆತ್ತ ಪೊಲೀಸರು ಮಹಿಳೆಯನ್ನು ಸಂಪರ್ಕಿಸಿ ಮತ್ತಷ್ಟು ಹಣ ವರ್ಗಾವಣೆ ಆಗುವುದನ್ನು ತಡೆದಿದ್ದಾರೆ.

ಹಣದ ಹಾದಿ ಪತ್ತೆ ಹಚ್ಚಿದ ಪೊಲೀಸರು ತಮಿಳುನಾಡು, ಮಹಾರಾಷ್ಟ್ರ, ಗುಜರಾತ್, ದೆಹಲಿ ಮತ್ತು ಬಿಹಾರ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸಿ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರ ಬಳಿಯಿಂದ ಮೊಬೈಲ್‌ಗಳು ಸೇರಿದಂತೆ ಹಲವು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ಈಗಾಗಲೇ 5 ಕೋಟಿಗೂ ಹೆಚ್ಚು ಹಣವನ್ನು ಫ್ರೀಜ್ ಮಾಡಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

DK Shivakumar : ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ವಿರುದ್ಧ ದೊಡ್ಡ ಮಟ್ಟದ ಹೋರಾಟ..! #petrol #petrolprice

ಇತ್ತೀಚಿನ ತಿಂಗಳುಗಳಲ್ಲಿ “ಡಿಜಿಟಲ್ ಅರೆಸ್ಟ್” ಹೆಸರಿನಲ್ಲಿ ದೇಶದಾದ್ಯಂತ ಸಾವಿರಾರು ಕೋಟಿ ರೂಪಾಯಿ ವಂಚನೆ ನಡೆದಿದೆ ಎಂದು ಕೇಂದ್ರ ಗೃಹ ಸಚಿವಾಲಯ ಎಚ್ಚರಿಕೆ ನೀಡಿದೆ. ವಿಶೇಷವಾಗಿ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಈ ಜಾಲ ಕಾರ್ಯನಿರ್ವಹಿಸುತ್ತಿದೆ.

 

ಸಾರ್ವಜನಿಕರಿಗೆ ಪೊಲೀಸರ ಎಚ್ಚರಿಕೆ

  • ಸಿಬಿಐ, ಇಡಿ ಅಥವಾ ಪೊಲೀಸ್ ಇಲಾಖೆ ಎಂದಿಗೂ ವಿಡಿಯೊ ಕಾಲ್ ಮೂಲಕ “ಅರೆಸ್ಟ್” ಮಾಡುವುದಿಲ್ಲ
  • OTP, ಬ್ಯಾಂಕ್ ವಿವರ ಅಥವಾ ಹಣ ವರ್ಗಾವಣೆ ಕೇಳುವುದಿಲ್ಲ
  • ಬೆದರಿಕೆ ಕರೆ ಬಂದರೆ ತಕ್ಷಣ 1930 ಸೈಬರ್ ಸಹಾಯವಾಣಿ ಸಂಪರ್ಕಿಸಬೇಕು
  • ಯಾವುದೇ ಅನುಮಾನಾಸ್ಪದ ಕರೆಗಳನ್ನು ತಕ್ಷಣ ಸ್ಥಳೀಯ ಪೊಲೀಸರಿಗೆ ತಿಳಿಸಬೇಕು

ಸೈಬರ್ ಅಪರಾಧಿಗಳು ಹೊಸ ಹೊಸ ತಂತ್ರಗಳನ್ನು ಬಳಸುತ್ತಿರುವ ಹಿನ್ನೆಲೆ ಸಾರ್ವಜನಿಕರು ಎಚ್ಚರಿಕೆಯಿಂದಿರುವುದು ಅತ್ಯಗತ್ಯ ಎಂದು ಪೊಲೀಸರು ತಿಳಿಸಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: #CyberCrime#CyberScam#CyberSecurity#DigitalArrest#DigitalFraud#FakeArrest#FraudCase#indianews#OnlineFraud#PoliceAlert#ScamAlert#WomanTargetedcrimenewsgurugrampratidavani
Previous Post

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

Next Post

ಪ್ರಜಾಪ್ರಭುತ್ವದ ಸಾಂಸ್ಥಿಕ ಅಗ್ನಿಪರೀಕ್ಷೆ-ಎಸ್‌ಐಆರ್‌

Related Posts

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?
Top Story

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

by ಪ್ರತಿಧ್ವನಿ
May 25, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯ ಅಕ್ಕಿ ವಿತರಣೆಗೆ ಇದೀಗ ಮತ್ತೆ ಕತ್ತರಿ ಬೀಳುವ ಭೀತಿ ಎದುರಾಗಿದೆ. ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವ ಲಕ್ಷಾಂತರ...

Read moreDetails
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
Next Post
ಪ್ರಜಾಪ್ರಭುತ್ವದ ಸಾಂಸ್ಥಿಕ ಅಗ್ನಿಪರೀಕ್ಷೆ-ಎಸ್‌ಐಆರ್‌

ಪ್ರಜಾಪ್ರಭುತ್ವದ ಸಾಂಸ್ಥಿಕ ಅಗ್ನಿಪರೀಕ್ಷೆ-ಎಸ್‌ಐಆರ್‌

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada