• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಅಂತಿಮ ಘಟ್ಟವನ್ನು ತಲುಪಿರುವ ರಾಜ್ಯ ರಾಜಕಾರಣ, ದೆಹಲಿಯಲ್ಲಿ ತೀರ್ಮಾನವಾಗಲಿದೆ ಕಾಂಗ್ರೆಸ್‌ ನಾಯಕರ ರಾಜಕೀಯ ಭವಿಷ್ಯ..!

ಪ್ರತಿಧ್ವನಿ by ಪ್ರತಿಧ್ವನಿ
May 26, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?
Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಪ್ರಮುಖ ವಿಚಾರಗಳ ಚರ್ಚೆಗೆ ಇಂದು ನವದೆಹಲಿಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಈಗಾಗಲೇ ಇದೇ ಸಭೆಗಾಗಿ ಹೈಕಮಾಂಡ್‌ ಕರೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ದೆಹಲಿಯಲ್ಲಿದ್ದಾರೆ.

ADVERTISEMENT
DK Shivakumar : ದೆಹಲಿಯಲ್ಲಿಗರಿಗೆದರಿದ ರಾಜಕೀಯ ಚಟುವಟಿಕೆಗಳು..! #dkshivakumar #congress #pratidhvani

ಹೀಗಾಗಿ ಇಂದು ಇಂದಿರಾಭವನದಲ್ಲಿ ಸಿದ್ದರಾಮಯ್ಯ ಹೈವೋಲ್ಟೇಜ್‌ ಸಭೆಯಲ್ಲಿ ಭಾಗಿಯಾಗಿದ್ದಾರೆ. ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಈ ಮೀಟಿಂಗ್‌ನಲ್ಲಿ ಉಪಸ್ಥಿತರಿದ್ದಾರೆ.

ಪ್ರಮುಖವಾಗಿ ನಾಯಕತ್ವ ಬದಲಾವಣೆಯ ಬಗ್ಗೆಯೇ ಹೆಚ್ಚಿನ ಚರ್ಚೆ ನಡೆಯುವ ಸಾಧ್ಯತೆಯಿದ್ದು, ಅದರಂತೆ ರಾಜ್ಯಸಭಾ ಸ್ಥಾನಗಳ ಹಂಚಿಕೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತೂ ಮಾತುಕತೆ ನಡೆಯಲಿದೆ. ಒಟ್ಟು ಮೂರು ಸುತ್ತಿನ ಸಭೆಗಳು ನಡೆಯುವ ಸಾಧ್ಯತೆಯಿದ್ದು, ಮೊದಲು ಸಿದ್ದರಾಮಯ್ಯ, ಎರಡನೇ ಸಭೆಯಲ್ಲಿ ಡಿಕೆ ಶಿವಕುಮಾರ್‌ ಜೊತೆ ನಂತರ ಇಬ್ಬರ ಜೊತೆಯೂ ನೇರಾ ನೇರ ಮಾತುಕತೆ ನಡೆಸಲು ವರಿಷ್ಠರು ತೀರ್ಮಾನಿಸಿದ್ದಾರೆ.

ಇದನ್ನೂ ಓದಿ : ಪ್ರಜಾಪ್ರಭುತ್ವದ ಸಾಂಸ್ಥಿಕ ಅಗ್ನಿಪರೀಕ್ಷೆ-ಎಸ್‌ಐಆರ್‌

ಹೀಗಾಗಿ ಪಟ್ಟದ ಪಗಡೆಯಾಟ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈ ವಿಚಾರ ಚರ್ಚೆಯಲ್ಲಿತ್ತು. ಆದರೆ ಅಂತಿಮವಾಗಿ ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರಗಳು ಹೊರಬೀಳುವ ಸಾಧ್ಯತೆಯಿದೆ. ಸಭೆಯಲ್ಲಿ ಇಬ್ಬರೂ ನಾಯಕರು ತಪ್ಪದೇ ಆದ ಪ್ರತ್ಯೇಕ ದಾಳಗಳನ್ನು ಉರುಳಿಸಲು ಸಿದ್ದವಾಗಿದ್ದಾರೆ, ಅದೇ ದಾಳಗಳನ್ನು ಸಭೆಯಲ್ಲಿ ಪಕ್ಷದ ನಾಯಕರ ಮುಂದೆ ಇಡಲು ತೀರ್ಮಾನಿಸಿದ್ದಾರೆ.

ಸಿದ್ದರಾಮಯ್ಯ ದೆಹಲಿಗೆ ಹೋಗುವಾಗಲೇ ತಮ್ಮ ಆಪ್ತ ಸಚಿವ ಹಾಗೂ ಶಾಸಕರೊಂದಿಗೆ ತೆರಳಿದ್ದಾರೆ. ಯಾವುದೇ ಸಮಯದಲ್ಲಿ ಎಂತದ್ದೇ ನಿರ್ಧಾರ ಬಂದರೂ ಎಲ್ಲದಕ್ಕೂ ಸಿದ್ದವಾಗಿರುವ ನಿಟ್ಟಿನಲ್ಲಿ ತಮ್ಮ ದಂಡು ಹಿಂಡನ್ನು ಜೊತೆಗೆ ಕರೆದುಕೊಂಡು ಹೋಗಿದ್ದಾರೆ.

ಅಲ್ಲದೆ ಸಚಿವಾಕಾಂಕ್ಷಿ ಶಾಸಕರು ಸಹ ಈಗಾಗಲೇ ದೆಹಲಿಯಲ್ಲಿ ಠಿಕಾಣಿ ಹೂಡಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್‌ ರಚನೆಯಾಗುವ ನಿರೀಕ್ಷೆಯಲ್ಲಿ ಶಾಸಕರಿದ್ದಾರೆ. ಸಿದ್ದರಾಮಯ್ಯ ಕೂಡ ಕೇವಲ ಒಂದೇ ಒಂದು ಅಜೆಂಡಾವನ್ನು ಸಭೆಯಲ್ಲಿ ಪ್ರಾಥಮಿಕವಾಗಿ ಮಂಡಿಸಲಿದ್ದಾರೆ. ಸಚಿವ ಸಂಪುಟದ ವಿಚಾರದಲ್ಲಿ ಗಟ್ಟಿ ನಿಲುವು ತಾಳುವಂತೆ ಮನವರಿಕೆ ಮಾಡಿಕೊಡಲಿದ್ದಾರೆ. ಇದು ಸಾಧ್ಯವಾಗದೇ ಇದ್ದರೆ ನಾಯಕತ್ವದ ಬದಲಾವಣೆಯ ಬಗ್ಗೆ ಒತ್ತಡ ಬಂದರೆ ಎಲ್ಲ ರೀತಿಯ ತಮ್ಮ ಪ್ಲ್ಯಾನ್‌ಗಳನ್ನು ಒಂದೊಂದಾಗಿ ಬಿಚ್ಚಿಡಲಿದ್ದಾರೆ ಎನ್ನಲಾಗಿದೆ.

Tags: cabinet expansionCm changeCM SiddaramaiahCongress High Commandcongress karnatakacongress mlasK C VenugoplaKarnataka PoliticsMallikarjun KhargeNew Delhi MeetingRahul Gandhirandeep singh surjewala
Previous Post

ಪ್ರಜಾಪ್ರಭುತ್ವದ ಸಾಂಸ್ಥಿಕ ಅಗ್ನಿಪರೀಕ್ಷೆ-ಎಸ್‌ಐಆರ್‌

Next Post

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

Related Posts

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?
Top Story

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯ ರಾಜಕಾರಣ ದೆಹಲಿಗೆ ಶಿಫ್ಟ್‌ ಆಗಿದ್ದು, ಕಾಂಗ್ರೆಸ್‌ ಪಾಳಯದಲ್ಲಿನ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಈ ಕುರಿತು ಈಗಾಗಲೇ ದೆಹಲಿಯಲ್ಲಿರುವ ಸಿದ್ದರಾಮಯ್ಯ ಹಾಗೂ...

Read moreDetails
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

May 26, 2026
ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

ಬೆಂಗಳೂರು ರಾಜಕೀಯಕ್ಕೆ ವಿಜಯ್ ಎಂಟ್ರಿ? ಗ್ರೇಟರ್ ಬೆಂಗಳೂರು ಚುನಾವಣೆಗೆ ಟಿವಿಕೆ ಮಾಸ್ಟರ್ ಪ್ಲಾನ್!

May 26, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
Next Post
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada