• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

ಪ್ರತಿಧ್ವನಿ by ಪ್ರತಿಧ್ವನಿ
May 28, 2026
in ಕರ್ನಾಟಕ
0
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
Share on WhatsAppShare on FacebookShare on Telegram

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಬಳಿಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಚರ್ಚೆಗಳು ಜೋರಾಗಿರುವ ನಡುವೆಯೇ, ಡಿಕೆಶಿ ಅವರ ಆಪ್ತ ಗುರು ಎಂದೇ ಗುರುತಿಸಿಕೊಂಡಿರುವ ದ್ವಾರಕನಾಥ್ ಗುರೂಜಿ ನೀಡಿರುವ ಭವಿಷ್ಯ ಇದೀಗ ಭಾರೀ ಸದ್ದು ಮಾಡುತ್ತಿದೆ.“ಮುಂದಿನ 8 ವರ್ಷಗಳ ಕಾಲ ಡಿಕೆ ಶಿವಕುಮಾರ್ ಅವರನ್ನು ಯಾರಿಂದಲೂ ಅಲ್ಲಾಡಿಸಲು ಸಾಧ್ಯವಿಲ್ಲ” ಎಂದು ಗುರೂಜಿ ಹೇಳಿರುವ ಮಾತು ಕಾಂಗ್ರೆಸ್ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ.

ADVERTISEMENT
Karnataka Power Tussle : ಸಿದ್ದು ಮುಂದಿನ ಹೆಜ್ಜೆ ಏನ್‌ ಗೊತ್ತಾ.? #siddaramaiah #dkshivakumar #pratidhvani

ಮಾಧ್ಯಮಗಳ ಜೊತೆ ಮಾತನಾಡಿದ ದ್ವಾರಕನಾಥ್ ಗುರೂಜಿ, “ಡಿಕೆ ಶಿವಕುಮಾರ್ ಅವರಿಗೆ ಈಗ ಅತ್ಯಂತ ಸುವರ್ಣ ಸಮಯ ಆರಂಭವಾಗಿದೆ. ಗುರು ಗ್ರಹ ಮಿಥುನ ರಾಶಿಗೆ ಪ್ರವೇಶಿಸಿರುವುದರಿಂದ ಅವರಿಗೆ ಭಾರೀ ರಾಜಯೋಗ ಶುರುವಾಗಿದೆ. ನನ್ನ ಲೆಕ್ಕಾಚಾರದ ಪ್ರಕಾರ ಮುಂದಿನ 8 ವರ್ಷ ರಾಜ್ಯ ರಾಜಕೀಯದಲ್ಲಿ ಅವರನ್ನು ಸೋಲಿಸುವುದು ಸುಲಭವಲ್ಲ” ಎಂದು ಭವಿಷ್ಯ ನುಡಿದಿದ್ದಾರೆ.

ಇನ್ನೂ ಮುಂದೆ ಮಾತನಾಡಿದ ಅವರು, “ಡಿಕೆ ಶಿವಕುಮಾರ್ ಸೋಮವಾರದೊಳಗೆ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ” ಎಂದು ಹೇಳಿದ್ದಾರೆ.

ದ್ವಾರಕನಾಥ್ ಗುರೂಜಿ ಹಾಗೂ ಡಿಕೆ ಶಿವಕುಮಾರ್ ನಡುವೆ ಮೂರು ದಶಕಗಳಿಗೂ ಅಧಿಕ ಸ್ನೇಹ ಮತ್ತು ಆತ್ಮೀಯತೆ ಇದೆ ಎನ್ನಲಾಗಿದೆ. “ಡಿಕೆಶಿ ನನಗೆ ಕಳೆದ 35 ವರ್ಷಗಳಿಂದ ಪರಿಚಯ. ಬಂಗಾರಪ್ಪ ಸಚಿವ ಸಂಪುಟದಲ್ಲಿ ಅತಿ ಕಿರಿಯ ವಯಸ್ಸಿನಲ್ಲಿ ಸಚಿವನಾಗಿದ್ದಾಗಲೇ ‘ನೀನು ಒಂದು ದಿನ ಈ ರಾಜ್ಯದ ಮುಖ್ಯಮಂತ್ರಿ ಆಗ್ತೀಯಾ’ ಎಂದು ಹೇಳಿದ್ದೆ” ಎಂದು ಗುರೂಜಿ ಹಳೆಯ ನೆನಪುಗಳನ್ನು ಹಂಚಿಕೊಂಡಿದ್ದಾರೆ.

“ಅವನು ನಮ್ಮ ಮನೆಯ ಮಗನಂತಿದ್ದಾನೆ. ಯಾವಾಗಲೂ ಸಂಪರ್ಕದಲ್ಲೇ ಇರುತ್ತಾನೆ” ಎಂದು ಹೇಳುವ ಮೂಲಕ ಡಿಕೆಶಿಯೊಂದಿಗೆ ಇರುವ ಆತ್ಮೀಯ ಬಾಂಧವ್ಯವನ್ನು ಅವರು ವಿವರಿಸಿದ್ದಾರೆ.

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುವ ಪ್ರಕ್ರಿಯೆ ವಿಳಂಬವಾಗುತ್ತಿರುವ ಹಿನ್ನೆಲೆ ತಮ್ಮ ಪರವಾಗಿ ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾಗಿ ಗುರೂಜಿ ಹೇಳಿದ್ದಾರೆ.“ನಾನು ಶೃಂಗೇರಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾಗಲೇ ಡಿಕೆ ಶಿವಕುಮಾರ್ ಫೋನ್ ಮಾಡಿ ‘ಗುರೂಜಿ, ಕೆಲಸ ಆಗಿದೆ’ ಎಂದು ಸಂತಸದ ಸುದ್ದಿ ನೀಡಿದ” ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನ ತ್ಯಜಿಸಿರುವ ಸಿದ್ದರಾಮಯ್ಯ ಕುರಿತು ಮಾತನಾಡಿದ ಗುರೂಜಿ, “ಸಿದ್ದರಾಮಯ್ಯ ಅವರದ್ದು ವೃಶ್ಚಿಕ ರಾಶಿ. ಸದ್ಯ ಅವರಿಗೆ ಗುರು ಬಲ ಹಾಗೂ ಶನಿ ಬಲ ಎರಡೂ ಇಲ್ಲ. ಅವರ ಮುಖ್ಯಮಂತ್ರಿ ರಾಜಯೋಗ ಈಗ ಅಂತ್ಯವಾಗಿದೆ. ಆದರೆ ರಾಜ್ಯಕ್ಕೆ ಅವರ ಅನುಭವ ಮತ್ತು ಮಾರ್ಗದರ್ಶನ ಇನ್ನೂ ಅಗತ್ಯವಿದೆ” ಎಂದು ಹೇಳಿದ್ದಾರೆ.ಸದ್ಯ ದ್ವಾರಕನಾಥ್ ಗುರೂಜಿ ನೀಡಿರುವ ಈ ಭವಿಷ್ಯ ರಾಜಕೀಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಡಿಕೆ ಶಿವಕುಮಾರ್ ಬೆಂಬಲಿಗರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

Tags: #-pratidhvani#BengaluruPolitics#CMRace#congress#DKSH#dkshivakumar#DKShivakumarCM#DwarkanathGuruji#KarnatakaPolitics#politicalnews#PoliticalPrediction#siddaramaiahAstrologykarnatakacmRajguruviralnews
Previous Post

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

Next Post

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

Related Posts

“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 
ಕರ್ನಾಟಕ

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

by ಪ್ರತಿಧ್ವನಿ
May 28, 2026
0

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರ ಅನುಪಸ್ಥಿತಿಯಲ್ಲಿ ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ಕಾರ್ಯದರ್ಶಿಗೆ ಸಲ್ಲಿಸಿದ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾವುಕ ವಿದಾಯ ಭಾಷಣ ಮಾಡಿದರು. ತಮ್ಮ...

Read moreDetails
ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

ಕರ್ನಾಟಕ ರಾಜಕೀಯದಲ್ಲಿ ಮಹಾಪಲ್ಲಟ: ಸಿದ್ದರಾಮಯ್ಯ ರಾಜೀನಾಮೆ, ಡಿಕೆ ಶಿವಕುಮಾರ್ ನೂತನ ಸಿಎಂ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಮಧ್ಯಾಹ್ನ ಸಿದ್ದರಾಮಯ್ಯ ರಾಜೀನಾಮೆ ಘೋಷಣೆ: ಡಿಕೆಶಿ ಮುಂದಿನ ಸಿಎಂ ಬಹುತೇಕ ಖಚಿತ?

May 28, 2026
ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

May 28, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
“ಮುಂದಿನ 8 ವರ್ಷ ಡಿಕೆಶಿಯನ್ನು ಅಲ್ಲಾಡಿಸಲು ಆಗಲ್ಲ”: ರಾಜಗುರು ದ್ವಾರಕನಾಥ್ ಗುರೂಜಿ ಭವಿಷ್ಯ ವೈರಲ್! 

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!