• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಡಿಕೆಶಿಗೆ ಪಟ್ಟಾಭಿಷೇಕ: ಸೋಮವಾರವೇ ನೂತನ ಸಿಎಂ ಪ್ರಮಾಣವಚನ?

ಪ್ರತಿಧ್ವನಿ by ಪ್ರತಿಧ್ವನಿ
May 29, 2026
in ರಾಜಕೀಯ
0
ಡಿಕೆಶಿಗೆ ಪಟ್ಟಾಭಿಷೇಕ: ಸೋಮವಾರವೇ ನೂತನ ಸಿಎಂ ಪ್ರಮಾಣವಚನ?
Share on WhatsAppShare on FacebookShare on Telegram

ಕರ್ನಾಟಕ ರಾಜಕೀಯದಲ್ಲಿ ಹಲವು ತಿಂಗಳುಗಳಿಂದ ತೀವ್ರ ಚರ್ಚೆಗೆ ಕಾರಣವಾಗಿದ್ದ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಇದೀಗ ಅಂತಿಮ ಹಂತ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಭವನದಲ್ಲಿ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಅಧಿಕಾರ ತ್ಯಜಿಸುವ ಪ್ರಕ್ರಿಯೆ ಪೂರ್ಣಗೊಳಿಸಿದರು. ರಾಜ್ಯಪಾಲರು ಮುಂಬೈ ಪ್ರವಾಸದಲ್ಲಿರುವ ಹಿನ್ನೆಲೆ, ಅವರ ಕಚೇರಿಯ ಮೂಲಕ ರಾಜೀನಾಮೆ ಸ್ವೀಕರಿಸಲಾಗಿದೆ.

ರಾಜೀನಾಮೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, “ಪಕ್ಷದ ಹೈಕಮಾಂಡ್ ಸೂಚನೆಗೆ ಗೌರವ ನೀಡಿ ಈ ನಿರ್ಧಾರ ಕೈಗೊಂಡಿದ್ದೇನೆ” ಎಂದು ಸ್ಪಷ್ಟಪಡಿಸಿದರು.

ರಾಜ್ಯಸಭೆ ಸ್ಥಾನ ನೀಡುವ ಮೂಲಕ ರಾಷ್ಟ್ರೀಯ ರಾಜಕಾರಣಕ್ಕೆ ಬರಲು ಕಾಂಗ್ರೆಸ್ ಹೈಕಮಾಂಡ್ ಆಹ್ವಾನ ನೀಡಿದೆ ಎಂಬ ಸುದ್ದಿಗಳ ನಡುವೆಯೂ, ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ.

“ನಾನು ಇನ್ನೂ ಶಾಸಕನಾಗಿದ್ದೇನೆ. ಜನರ ಜೊತೆ ರಾಜ್ಯ ರಾಜಕಾರಣದಲ್ಲೇ ಕೆಲಸ ಮುಂದುವರಿಸುತ್ತೇನೆ” ಎಂಬ ಸಂದೇಶವನ್ನು ಅವರು ಆಪ್ತರ ಬಳಿ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.

CM Breakfast meeting inside: ನಗುತ್ತಲೇ ಡಿಕೆಶಿ ಕೈ ಹಿಡ್ದು ಶುಭ ಹಾರೈಸಿದ CM #pratidhvani

ಕಾಂಗ್ರೆಸ್ ಮೂಲಗಳ ಪ್ರಕಾರ, ಡಿ.ಕೆ. ಶಿವಕುಮಾರ್ ಸೋಮವಾರ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಿದೆ. ಈ ಸಂಬಂಧ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಅಂತಿಮ ಚರ್ಚೆಗಳು ನಡೆಯುತ್ತಿದ್ದು, ಪ್ರಮಾಣವಚನ ಸಮಾರಂಭದ ಸಿದ್ಧತೆಗಳು ಬಿರುಸಿನಿಂದ ಸಾಗುತ್ತಿವೆ.ರಾಹುಲ್ ಗಾಂಧಿ,‌ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

2023ರ ವಿಧಾನಸಭೆ ಚುನಾವಣೆಯ ಬಳಿಕ ಕಾಂಗ್ರೆಸ್ ಪಕ್ಷದೊಳಗೆ ರೂಪುಗೊಂಡಿದ್ದ ಅಧಿಕಾರ ಹಂಚಿಕೆ ಸೂತ್ರದಂತೆ ಇದೀಗ ನಾಯಕತ್ವ ಬದಲಾವಣೆ ನಡೆಯುತ್ತಿದೆ ಎನ್ನಲಾಗುತ್ತಿದೆ. ಕಳೆದ ಮೂರು ವರ್ಷಗಳಿಂದ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಬಳಿಕ ಇದೀಗ ಡಿಕೆ ಶಿವಕುಮಾರ್‌ಗೆ ಅವಕಾಶ ನೀಡುವ ಮೂಲಕ ಕಾಂಗ್ರೆಸ್ ಹೊಸ ರಾಜಕೀಯ ಅಧ್ಯಾಯ ಆರಂಭಿಸಲು ಮುಂದಾಗಿದೆ.ಈ ಬೆಳವಣಿಗೆಯೊಂದಿಗೆ ರಾಜ್ಯದಲ್ಲಿ ಸಚಿವ ಸಂಪುಟ ಪುನರ್‌ರಚನೆ, ಹೊಸ ಡಿಸಿಎಂ ಆಯ್ಕೆ ಹಾಗೂ ಪ್ರಮುಖ ಖಾತೆಗಳ ಹಂಚಿಕೆ ಕುರಿತ ಚಟುವಟಿಕೆಗಳು ಸಹ ವೇಗ ಪಡೆದುಕೊಂಡಿದೆ.

Tags: #CMRace#CMSwearingIn#congress#DKSCoronation#dkshivakumar#KarnatakaPolitics#NewCM#PoliticalBuzz#PoliticalUpdate#siddaramaiahbreakingnewscongresshighcommandDKSkarnatakacmkarnatakanewspratidavani
Previous Post

ರಾಜೀನಾಮೆ ಬಳಿಕ ಸಿದ್ದರಾಮಯ್ಯ ಭಾವುಕ ವಿದಾಯ ಭಾಷಣ: ಮಾತಾಡಿದ್ದೇನು

Next Post

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?

Related Posts

ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!
Top Story

ಬೆಂಗಳೂರಿನ ಮೊಳೆ ಮಾಫಿಯಾ ಮಟ್ಟ ಹಾಕಿ : ನಗರ ಪೊಲೀಸ್ ಆಯಕ್ತರಿಗೆ ಮೋಹನ್‌ ಕುಮಾರ್‌‌ ದಾನಪ್ಪ ಪತ್ರ..!

by ಪ್ರತಿಧ್ವನಿ
May 29, 2026
0

ಬೆಂಗಳೂರು : ಸಾರ್ವಜನಿಕ ವಾಹನಗಳಿಗೆ ಹಾನಿ ಮಾಡುವ ದುರುದ್ದೇಶದಿಂದ ಸಾರ್ವಜನಿಕ ರಸ್ತೆಗಳಲ್ಲಿ ಕಬ್ಬಿಣದ ಮೊಳೆಗಳನ್ನು ಹರಡುತ್ತಿರುವ ಕಿಡಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ರಾಜ್ಯಸಭೆ ಸ್ಥಾನಕ್ಕೆ ಸಿದ್ದರಾಮಯ್ಯ ನಿರಾಸಕ್ತಿ? ರಾಜ್ಯ ರಾಜಕೀಯದಲ್ಲೇ ಮುಂದುವರಿಯಲು ಸಿಎಂ ಮನಸ್ಸು!

May 28, 2026
ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿಗೆ ಬಿಜೆಪಿ ನಾಯಕರು‌ ಹೇಳಿದ್ದೇನು ?

May 28, 2026
ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

May 28, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
Next Post
ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರವಾಗುತ್ತಾ? ರಾಜ್ಯಪಾಲರ ಕಚೇರಿ ಹೇಳಿದ್ದೇನು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada