ಬೆಂಗಳೂರು : ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಡಿಕೆ ಶಿವಕುಮಾರ್ ತಮ್ಮ ತಾಯಿಯ ಆಶೀರ್ವಾದ ಪಡೆದಿದ್ದಾರೆ.
ಇಲ್ಲಿನ ಸದಾಶಿವ ನಗರದಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ತಾಯಿ ಗೌರಮ್ಮ ಮಗನಿಗೆ ಭಾವುಕರಾಗಿ ಆಶೀರ್ವಾದ ಮಾಡಿದ್ದಾರೆ. ಈಗಾಗಲೇ ಪ್ರಮಾಣ ವಚನಕ್ಕೆ ಸಿದ್ದರಾಗಿರುವ ನಿಯೋಜಿತ ಮುಖ್ಯಮಂತ್ರಿ ಡಿಕ ಶಿವಕುಮಾರ್ ಸಂಪುಟ ಪಟ್ಟಿಯೊಂದಿಗೆ ಕೆಲವೇ ಕ್ಷಣಗಳಲ್ಲಿ ಲೋಕಭವನಕ್ಕೆ ತೆರಳಲಿದ್ದಾರೆ.






