ನವದೆಹಲಿ : ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು, ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಪಕ್ಷದ ಪ್ರಮುಖ ನಾಯಕಿ ಹಾಗೂ ರಾಜ್ಯಸಭಾ ಸಂಸದೆ ಸುಶ್ಮಿತಾ ದೇವ್ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇನ್ನೂ ರಾಜೀನಾಮೆ ನೀಡಿದ ತಕ್ಷಣವೇ ದೇವ್ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಟಿಎಂಸಿ ಸಂಸದ ಸುಖೇಂದು ಶೇಖರ್ ರೇ ರಾಜ್ಯಸಭೆಗೆ ರಾಜೀನಾಮೆ ನೀಡಿದ ಎರಡು ದಿನಗಳ ನಂತರ, ಇದೀಗ ಮತ್ತೊಬ್ಬ ತೃಣಮೂಲ ಕಾಂಗ್ರೆಸ್ ಸಂಸದೆ ಸುಷ್ಮಿತಾ ದೇವ್ ಬುಧವಾರ ಮೇಲ್ಮನೆಗೆ ರಾಜೀನಾಮೆ ನೀಡಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷದ ಬಲ 11 ಕ್ಕೆ ಇಳಿದಿದೆ.
ಇದನ್ನೂ ಓದಿ : ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ: ಸಾವಿರಾರು ಫಲಾನುಭವಿಗಳಿಗೆ ಬಿಗ್ ಶಾಕ್..!
ಪ್ರಮುಖವಾಗಿ ಟಿಎಂಸಿ ಈಗಾಗಲೇ ಆಂತರಿಕ ಭಿನ್ನಾಭಿಪ್ರಾಯ ಭುಗಿಲೆದ್ದಿದೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ನಾಯಕರು ಪಕ್ಷವನ್ನು ತೊರೆಯುತ್ತಿದ್ದಾರೆ. ಈ ನಡುವೆಯೇ ಮಮತಾ ಬ್ಯಾನರ್ಜಿ ಆಪ್ತೆಯ ನಡೆಯು ದೀದಿಗೆ ಆಘಾತವನ್ನು ಉಂಟು ಮಾಡಿದೆ.
ಬಂಗಾಳದಲ್ಲಿ ಟಿಎಂಸಿ ಅಧಿಕಾರಕ್ಕೆ ಬ್ರೇಕ್ ಹಾಕುವ ಮೂಲಕ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಘಟನೆಗಳು ಸಾಕಷ್ಟು ಗಮನ ಸೆಳೆಯುತ್ತಿವೆ. ರಾಜಕೀಯ ಸೇಡಿಗಾಗಿಯೋ ಅಥವಾ ಅಸ್ತಿತ್ವದ ಗಟ್ಟಿತನಕ್ಕಾಗಿಯೋ ಅರ್ಥವಾಗದಿದ್ದರೂ ಸಹ ಈ ರೀತಿಯ ಚಟುವಟಿಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅತ್ಯಂತ ಮಾರಕವಾಗಿದೆ ಎಂಬುವ ವಿಚಾರಗಳು ದೇಶಾದ್ಯಂತ ಚರ್ಚೆಯಾಗುತ್ತಿವೆ.






