ತಮಿಳುನಾಡು ಸಿಎಂ ವಿಜಯ್ ಅವರ ಬದುಕಲ್ಲಿ ಹೊಸ ಭರವಸೆ ಮೂಡುತ್ತಾ? ಇಂಥದ್ದೊಂದು ಪ್ರಶ್ನೆ ಸದ್ಯ ಗಿರಕಿ ಹೊಡೆಯುತ್ತಿದೆ. ಅದಕ್ಕೆ ಕಾರಣ, ವಿಚ್ಛೇದನ. ಹೌದು, ಕಳೆದ ಕೆಲವು ತಿಂಗಳುಗಳಿಂದ ತಮಿಳುನಾಡು ಸಿಎಂ ವಿಜಯ್ ಮತ್ತು ಪತ್ನಿ ಸಂಗೀತಾ ಅವರ ದಾಂಪತ್ಯ ಜೀವನದ ಬಗ್ಗೆ ಹಲವು ಸುದ್ದಿಗಳು ಹರಿದಾಡುತ್ತಿವೆ. ವಿಚ್ಛೇದನಕ್ಕೆ ಸಂಬಂಧಿಸಿದಂತೆ ಒಂದಷ್ಟು ಅಂತೆ-ಕಂತೆಗಳು ಮಾತುಗಳು ಕೇಳಿಬಂದವು. ಆ ಮಧ್ಯೆ ಇದೀಗ ದಂಪತಿ ಪುನಃ ಒಂದಾಗುವ ಸಾಧ್ಯತೆ ಇದೆ ಎಂಬ ಚರ್ಚೆ ಶುರುವಾಗಿದೆ.

ಹೌದು, ಇದೀಗ ಈ ಬೆಳವಣಿಗೆಗೆ ಹೊಸ ತಿರುವು ಸಿಕ್ಕಿದೆ. ವಿಜಯ್ ಅವರ ತಾಯಿ ಶೋಭಾ ಚಂದ್ರಶೇಖರ್ ಸೇರಿದಂತೆ ಕುಟುಂಬದ ಹಿರಿಯರು ದಂಪತಿಯನ್ನು ಮತ್ತೆ ಒಂದಾಗಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಕುಟುಂಬದ ಸದಸ್ಯರು ಮತ್ತು ಆಪ್ತರು ಸಂಧಾನದ ಮಾತುಕತೆಯಲ್ಲಿ ತೊಡಗಿದ್ದಾರೆ ಎನ್ನಲಾಗಿದೆ.

ತಮಿಳುನಾಡು ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಉಡುಪಿಗೆ ಭೇಟಿ ನೀಡಿದ್ದ ವಿಜಯ್, ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಾಲಯದಲ್ಲಿ ಕೆಲ ಕಾಲ ಕಳೆದ ಅವರು ದೇವಿಗೆ ವಿಶೇಷ ಕಾಣಿಕೆಯನ್ನಾಗಿ ಬೆಳ್ಳಿ ಖಡ್ಗವನ್ನು ಅರ್ಪಿಸಿದ್ದಾರೆ. ಈ ಭೇಟಿ ಬಳಿಕ ಅವರ ವೈಯಕ್ತಿಕ ಜೀವನದ ಬಗ್ಗೆ ಹೊಸ ಚರ್ಚೆಗಳು ಆರಂಭವಾಗಿವೆ.

ಅದೇನೆ ಇರಲಿ, ವಿಜಯ್ ಅಭಿಮಾನಿಗಳು ಕೂಡ ಅವರು ಒಂದಾಗಬೇಕು ಅನ್ನೋ ಆಸೆ ಹೊಂದಿದ್ದಾರೆ. ಸದ್ಯ ವಿಜಯ್ ಕುಟುಂಬ ಇಬ್ಬರನ್ನು ಒಂದು ಮಾಡುವ ಪ್ರಯತ್ನದಲ್ಲಿದ್ದಾರೆ. ಮುಂದೆ ಏನಾಗುತ್ತೋ ಅನ್ನೋದನ್ನು ಕಾದು ನೋಡಬೇಕಿದೆ.






