• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, November 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಮಾಜಕ್ಕೆ 7.5 ರಷ್ಟು ಮೀಸಲಾತಿ ಸಿಗದಿದ್ದರೆ ರಾಜೀನಾಮೆ : 2028ಕ್ಕೆ ನಾನೇ ಮಂತ್ರಿ ಎಂದ ರಮೇಶ್ ಜಾರಕಿಹೊಳಿ

ಅಧಿಕಾರ ತ್ಯಾಗ ಮಾಡುವ ಆ ಶಕ್ತಿ ಮತ್ತು ಧೈರ್ಯ ಸತೀಶ್‌ಗೆ ಇಲ್ಲ : ಸಹೋದರನ ವಿರುದ್ಧ ವಾಗ್ದಾಳಿ ನಡೆಸಿಸ ರೆಬಲ್‌ ನಾಯಕ..

ಪ್ರತಿಧ್ವನಿ by ಪ್ರತಿಧ್ವನಿ
June 22, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
Ramesh Jarakiholi Vs Satish Jarakiholi

Ramesh Jarakiholi Vs Satish Jarakiholi

Share on WhatsAppShare on FacebookShare on Telegram

ಬಳ್ಳಾರಿ : 2028 ರಲ್ಲಿ ವಿಧಾನಸಭಾ ಚುನಾವಣೆ ಬರಲಿದೆ. ಈಗಾಗಲೇ ರಾಜಕೀಯ ಪಕ್ಷಗಳು ಮುಂದಿನ ಚುನಾವಣೆಯಲ್ಲಿ ನಾವೇ ಬರುತ್ತೇವೆ. ನಮ್ಮ ಸರ್ಕಾರವೇ ಅಸ್ತಿತ್ವಕ್ಕೆ ಬರುತ್ತೆ ಅಂತ ಹೇಳಿಕೆ ಕೊಡುತ್ತಲೇ ಇದ್ದಾರೆ. ಆ ಸಾಲಿಗೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಕೂಡ ಸೇರಿದ್ದಾರೆ. ಹೌದು, ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಅಯೋಜಿಸಿದ್ದ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ADVERTISEMENT
Ramesh Jarkiholi :STಗೆ 7.5 ಮೀಸಲಾತಿ ನೀಡದಿದ್ರೆ ರಾಜೀನಾಮೆ ಕೊಟ್ಟು ಹೊರಬರುವೆ..? #pratidhvani   #telegram

2028ರ ವಿಧಾನಸಭಾ ಚುನಾವಣೆಯ ನಂತರ ಬಿಜೆಪಿ ಸರ್ಕಾರ ರಚಿಸುವುದು ಖಚಿತ. ಆ ಸರ್ಕಾರದಲ್ಲಿ ನಾನು ಸಚಿವನಾಗುತ್ತೇನೆ. ಆದರೆ ನಮ್ಮ ಸಮಾಜಕ್ಕೆ 7.5 ರಷ್ಟು ಮೀಸಲಾತಿ ಸಿಗದಿದ್ದರೆ, ನಾನು ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬರಲು ಸಿದ್ಧ ಎಂದು ರಮೇಶ್ ಜಾರಕಿಹೊಳಿ ಘೋಷಿಸಿದ್ದಾರೆ.

ರಾಜ್ಯದಲ್ಲಿ ಯಾವ ಪಕ್ಷ ಇರಲಿ, ಅದನ್ನು ಅಧಿಕಾರಕ್ಕೆ ತರುವ ಅಥವಾ ಗದ್ದುಗೆಯಿಂದ ಕೆಳಗಿಳಿಸುವ ರಾಜಕೀಯ ಶಕ್ತಿಯನ್ನು ದೇವರು ನಮ್ಮ ಸಮಾಜಕ್ಕೆ ಕೊಟ್ಟಿದ್ದಾನೆ. 1970ರ ದಶಕದಲ್ಲೇ ನಾವು ಕೇವಲ ಮೂರ್ನಾಲ್ಕು ಸೀಟುಗಳನ್ನು ಗೆದ್ದು, ಇಡೀ ಅಧಿಕಾರದ ಚುಕ್ಕಾಣಿಯನ್ನು ನಮ್ಮ ಕೈಯಲ್ಲಿ ಹಿಡಿದುಕೊಳ್ಳುತ್ತಿದ್ದೆವು. ನಾವು ಈಗ ಮತ್ತಷ್ಟು ಪ್ರಬಲವಾಗಿ ಸಂಘಟನೆ ಮಾಡಬೇಕು. ನಮ್ಮದೇ ಸಮಾಜವಲ್ಲದೆ, ರಾಜ್ಯದಲ್ಲಿರುವ ಇತರೆಲ್ಲಾ ಸಣ್ಣಪುಟ್ಟ ಸಮುದಾಯಗಳನ್ನು ಜೊತೆಗೆ ಕರೆದುಕೊಂಡು ಹೋದಾಗ ಮಾತ್ರ ನಮಗೆ ನಿಜವಾದ ರಾಜಕೀಯ ಶಕ್ತಿ ಬರಲು ಸಾಧ್ಯ ಎಂದು ಜಾರಕಿಹೊಳಿ ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ : ಟಾಕ್ಸಿಕ್‌ ಇಲ್ಲಿನವರಿಗೊಂದು ವಿದೇಶಿಗರಿಗೊಂದು ಪ್ರಿಂಟ್!‌ ಎರಡು ಪ್ರಿಂಟ್‌ಗಳೊಂದಿಗೆ ರಿಲೀಸ್‌ ಆಗುತ್ತಾ ಯಶ್‌ ಚಿತ್ರ?

ಸಹೋದರ ಹಾಗೂ ಹಾಲಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಪರೋಕ್ಷವಾಗಿ ಕಿಡಿಕಾರಿ, ಇವತ್ತು ಸಮಾಜದ ಹಿತದೃಷ್ಟಿಯಿಂದ ಮಾತನಾಡಲು ಕೆಲವರಿಗೆ ಧೈರ್ಯವಿಲ್ಲ. ಒಂದು ವೇಳೆ ಸತೀಶ್ ಜಾರಕಿಹೊಳಿ ಇರುವ ಸ್ಥಾನದಲ್ಲಿ ನಾನೇನಾದರೂ ಇದ್ದಿದ್ದರೆ, ಇಷ್ಟೊತ್ತಿಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೊರ ಬರುತ್ತಿದ್ದೆ. ಆದರೆ ಅಧಿಕಾರ ತ್ಯಾಗ ಮಾಡುವ ಆ ಶಕ್ತಿ ಮತ್ತು ಧೈರ್ಯ ಸತೀಶ್‌ಗೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಮುಂದಿನ ಚುನಾವಣೆಗೆ ಇನ್ನೇನು ಕೇವಲ 22 ತಿಂಗಳುಗಳು ಬಾಕಿ ಇವೆ. 2028 ಕ್ಕೆ ಕರ್ನಾಟಕದಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಇವತ್ತು ವೇದಿಕೆಯ ಮೇಲೆ ಕುಳಿತಿರುವ ನಾವೆಲ್ಲರೂ ಮುಂದಿನ ಬಾರಿಯೂ ಶಾಸಕರಾಗಿ ಆಯ್ಕೆಯಾಗಲಿದ್ದೇವೆ. ಆಡಳಿತಕ್ಕೆ ಬರುವ ನಮ್ಮದೇ ಸರ್ಕಾರದಲ್ಲಿ ಸಮಾಜಕ್ಕೆ ನ್ಯಾಯ ಸಿಗದಿದ್ದರೆ ಹೋರಾಟ ಮಾಡಲು ಸದಾ ಸಿದ್ಧ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

Tags: Ballarai Newsbjp karnatakacongress karnatakaKarnataka GovernmentKarnataka PoliticsMinister Satish JarakiholiPratidhvaniRamesh Jarkiholisc st reservation karnataka
Previous Post

ಉದ್ಯೋಗಿಗಳಾಗುವುದಕ್ಕಿಂತ ಉದ್ಯೋಗದಾತರಾಗುವುದು ನಿಮ್ಮ ಗುರಿಯಾಗಲಿ : ವಿದ್ಯಾರ್ಥಿಗಳಿಗೆ ಸಿಎಂ ಡಿಕೆಶಿ ಕರೆ..

Next Post

ಬಿಡದಿ ಟೌನ್‌ಶಿಪ್‌ ವಿವಾದ: ಸಿಎಂ ಡಿ.ಕೆ ಶಿವಕುಮಾರ್‌ಗೆ HDK ನೇರ ಸವಾಲು

Related Posts

ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಆರೋಪ; ‘ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ಸಂಪುಟ ಅಸ್ತು!
ಕರ್ನಾಟಕ

ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಆರೋಪ; ‘ಬಸವ ಮಂಟಪ’ ಕೃತಿ ಮುಟ್ಟುಗೋಲಿಗೆ ಸಂಪುಟ ಅಸ್ತು!

by Shivakumar
November 19, 2026
0

ಹನ್ನೆರಡನೇ ಶತಮಾನದ ಸಮಾಜ ಸುಧಾರಕ, ಭಕ್ತಿ ಭಂಡಾರಿ ಬಸವಣ್ಣನವರ ಕುರಿತು ಆಕ್ಷೇಪಾರ್ಹ ಅಂಶಗಳಿವೆ ಎಂಬ ಆರೋಪಕ್ಕೆ ಗುರಿಯಾಗಿರುವ ಲೇಖಕ ರವಿ ಹಂಜ್ ಅವರ ‘ಬಸವ ಮಂಟಪ’ ಕೃತಿ...

Read moreDetails
ಡಿಕೆಶಿ ಗೃಹಪ್ರವೇಶದ ಔತಣಕೂಟಕ್ಕೆ ವಾಟಾಳ್ ನಾಗರಾಜ್ ಎಂಟ್ರಿ; ಕುಮಾರಕೃಪಾ ಉಳಿಸಲು ಹೋರಾಟದ ಎಚ್ಚರಿಕೆ!

ಡಿಕೆಶಿ ಗೃಹಪ್ರವೇಶದ ಔತಣಕೂಟಕ್ಕೆ ವಾಟಾಳ್ ನಾಗರಾಜ್ ಎಂಟ್ರಿ; ಕುಮಾರಕೃಪಾ ಉಳಿಸಲು ಹೋರಾಟದ ಎಚ್ಚರಿಕೆ!

November 19, 2026
Protest by ASHA workers: What did D.K. Shivakumar say?

ಆಶಾ ಕಾರ್ಯಕರ್ತೆಯರ ಪ್ರತಿಭಟನೆ : ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

November 19, 2026
Allegation of disrespect towards Basavanna: B.Y. Vijayendra demands seizure of Ravi Hanj's work

ಬಸವಣ್ಣನವರ ಗೌರವಕ್ಕೆ ಧಕ್ಕೆ ಆರೋಪ: ರವಿ ಹಂಜ್ ಕೃತಿ ಮುಟ್ಟುಗೋಲಿಗೆ ಬಿ.ವೈ. ವಿಜಯೇಂದ್ರ ಆಗ್ರಹ

November 19, 2026
BREAKING: CM’s meeting with ASHA workers fails?

BREAKING : ಆಶಾ ಕಾರ್ಯಕರ್ತೆಯರೊಂದಿಗಿನ ಸಿಎಂ ಸಭೆ ವಿಫಲ? ಡಿಕೆಶಿ ಪ್ರತಿಕ್ರಿಯೆಗೆ ಕಾರ್ಯಕರ್ತೆಯರ ತೀವ್ರ ಅಸಮಾಧಾನ

November 19, 2026
Next Post
ಬಿಡದಿ ಟೌನ್‌ಶಿಪ್‌ ವಿವಾದ: ಸಿಎಂ ಡಿ.ಕೆ ಶಿವಕುಮಾರ್‌ಗೆ HDK ನೇರ ಸವಾಲು

ಬಿಡದಿ ಟೌನ್‌ಶಿಪ್‌ ವಿವಾದ: ಸಿಎಂ ಡಿ.ಕೆ ಶಿವಕುಮಾರ್‌ಗೆ HDK ನೇರ ಸವಾಲು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada