• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, June 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೈತರ ಹಿತರಕ್ಷಣೆಗೆ ಮೂರು ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 25, 2026
in Top Story, ಕರ್ನಾಟಕ, ರಾಜಕೀಯ
0
ರೈತರ ಹಿತರಕ್ಷಣೆಗೆ ಮೂರು ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ ಶಿವಕುಮಾರ್
Share on WhatsAppShare on FacebookShare on Telegram

ಕೊಪ್ಪಳ: ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಮೂರು ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ADVERTISEMENT
CM Vijay : ತಮಿಳುನಾಡಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಿದ ವಿಜಯ್ ಸರ್ಕಾರ..! #bus #tamilnadu #cmvijay

ಕೊಪ್ಪಳ ಜಿಲ್ಲೆ ಮುನಿರಾಬಾದ್ ತುಂಗಭದ್ರಾ ಅಣೆಕಟ್ಟೆಯ ಸ್ಪಿಲ್ ವೇ ಗೇಟುಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ʼಇದು ದಕ್ಷಿಣ ಭಾರತದ ಐತಿಹಾಸಿಕ ಕಾರ್ಯಕ್ರಮ. 19ನೇ ಗೇಟ್ ತುಂಡರಿಸಿದಾಗ ಈ ಜಿಲ್ಲೆಯ ಉಸ್ತುವಾರಿ ಮಂತ್ರಿಗಳಾದ ಶಿವರಾಜ್ ತಂಗಡಗಿ ಹಾಗೂ ಅಧಿಕಾರಿಗಳು ಮಧ್ಯರಾತ್ರಿ ನನಗೆ ಕರೆ ಮಾಡಿ, ಅಣೆಕಟ್ಟು ನಡುಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ನಾನು ಅಂದು ಬೆಳಗ್ಗೆ 8 ಗಂಟೆಗೆ ಸ್ಥಳಕ್ಕೆ ಭೇಟಿ ನೀಡಿದೆವು. ತಕ್ಷಣವೇ ಏನು ಮಾಡಬೇಕು ಎಂದು ತಜ್ಞರೊಂದಿಗೆ ಚರ್ಚಿಸಿ ಒಂದೇ ವಾರದಲ್ಲಿ ಗೇಟ್ ಬದಲಾವಣೆ ಮಾಡಲಾಯಿತು. ಆಮೂಲಕ ಈ ಭಾಗದ ರೈತರನ್ನು ರಕ್ಷಣೆ ಮಾಡಲಾಯಿತುʼ ಎಂದು ತಿಳಿಸಿದರು.

ʼಗೇಟ್ ತುಂಡರಿಸಿದಾಗ ವಿರೋಧ ಪಕ್ಷಗಳು ಟೀಕೆಗಳನ್ನು ಮಾಡಿದರು. ಶಾರದ ದೇವಿ, ಹುಲಿಗೆಮ್ಮ ಹಾಗೂ ಹುಚ್ಚರಾಯಸ್ವಾಮಿಯ ಆಶೀರ್ವಾದ, ಅಜ್ಜಯ್ಯ ಅವರ ಪವಾಡ, ಹಂಪಿ ವಿರೂಪಾಕ್ಷನ ಕೃಪೆ, ರಾಘವೇಂದ್ರ ಸ್ವಾಮಿಯ ಶಕ್ತಿಯಿಂದಾಗಿ ಇಂತಹ ಮಹತ್ವದ ಕಾರ್ಯಕ್ರಮ ಮಾಡಲು ಸಾಧ್ಯವಾಯಿತು. ನಮ್ಮ ಸರ್ಕಾರ 33 ಗೇಟ್ ಬದಲಾಯಿಸಲು ತೀರ್ಮಾನಿಸಿ ಈ ಮೂರು ರಾಜ್ಯಗಳ ರೈತರ ರಕ್ಷಣೆಗೆ ಭಗವಂತ ನಮಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಅಂದು ನಾನು ನೀರಾವರಿ ಸಚಿವನಾಗಿದ್ದೆ. ಇಂದು ಮುಖ್ಯಮಂತ್ರಿಯಾಗಿದ್ದೇನೆ. ಆದರೂ ನಾನು ನಿಮ್ಮ ಸೇವಕ ಹಾಗೂ ನಿಮ್ಮ ಬಂಧುʼ ಎಂದರು.

CM DK Shivakumar Speech : ರೇವಂತ್, ನಾಯ್ಡು ಎದುರು ಅಬ್ಬರಿಸಿದ ಡಿಕೆ ಶಿವಕುಮಾರ್.! #revanthreddy #chandrababu

ಮೂರು ರಾಜ್ಯಗಳು ಸೇರಿ ತುಂಗಭದ್ರಾ ಅಣೆಕಟ್ಟು ರಕ್ಷಣೆ

ʼತುಂಗಭದ್ರಾ ಅಣೆಕಟ್ಟು ರಕ್ಷಣೆ ಮಾಡಲಾಗಿದೆ. ಇತಿಹಾಸ ಮರೆತವ ಇತಿಹಾಸ ಸೃಷ್ಟಿಸಲಾರ ಎಂಬ ಮಾತಿದೆ. ಇಂದು ಸಿ.ಆರ್ ಪಾಟೀಲ್ ಅವರ ನೇತೃತ್ವದಲ್ಲಿ ಚಂದ್ರಬಾಬು ನಾಯ್ಡು, ರೇವಂತ್ ರೆಡ್ಡಿ ಅವರು ಸೇರಿದಂತೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಇತಿಹಾಸ ನಿರ್ಮಿಸಿದ್ದೇವೆ. ನಾವು ಇತಿಹಾಸ ಓದುವುದು ಹಾಗೂ ಸ್ಮರಿಸುವುದಕ್ಕಿಂತ ಇತಿಹಾಸ ಸೃಷ್ಟಿಸುವುದು ನಮ್ಮ ಗುರಿ. ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜತೆಗೂಡಿ ಕೆಲಸ ಮಾಡುವುದು ಯಶಸ್ಸು ಎಂದು ನಾನು ಹೇಳುತ್ತಿರುತ್ತೇನೆ. ಸಿ.ಆರ್ ಪಾಟೀಲ್ ಅವರ ನೇತೃತ್ವದಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಒಟ್ಟಾಗಿ ಸೇರಿ ಮೂರು ರಾಜ್ಯಗಳ ರಕ್ಷಣೆ ಮಾಡಿದ್ದೇವೆʼ ಎಂದು ತಿಳಿಸಿದರು.

Pradeep Eshwar on HDK : ನೀವಂತೂ ಒಕ್ಕಲಿಗರನ್ನ ಬೆಳೆಸಲ್ಲ, ನಮ್ಮಂತವರನ್ನಾದ್ರೂ ಬಿಡಿ..! #hdkumaraswamy

ಒಂದು ತಾಸು ಚರ್ಚಿಸಿ, ಐತಿಹಾಸಿಕ ತೀರ್ಮಾನ

ʼಈ ಅಣೆಕಟ್ಟಿನ 33 ಟಿಎಂಸಿ ನೀರನ್ನು ಉಳಿಸುವ ಬಗ್ಗೆ ರೈತ ಮುಖಂಡರು ಸಲ್ಲಿಸಿರುವ ಮನವಿ ಸೇರಿದಂತೆ ಯಾವ ರೀತಿ ರಕ್ಷಿಸಿ, ರೈತ ಕುಟುಂಬಗಳನ್ನು ಕಾಪಾಡಬೇಕು ಎಂದು ನಾವು ಚರ್ಚೆ ಮಾಡಿದ್ದೇವೆ. ನವಿಲಿ ಸಮನಾಂತರ ಜಲಾಶಯ, ಹೂಳೆತ್ತುವ ವಿಚಾರ ಸೇರಿದಂತೆ ಎಲ್ಲಾ ಅವಕಾಶಗಳ ಬಗ್ಗೆ ಸುದೀರ್ಘ ಚರ್ಚೆ ಮಾಡಿ ನಾವೆಲ್ಲರೂ ಒಮ್ಮತದ ಅಭಿಪ್ರಾಯಕ್ಕೆ ಬಂದಿದ್ದೇವೆ. ಈ ತೀರ್ಮಾನವನ್ನು ಕೇಂದ್ರ ಸಚಿವರೇ ಪ್ರಕಟಿಸಲಿದ್ದಾರೆ. ಇಂದು ನಾವು ಒಂದು ತಾಸುಗಳ ಕಾಲ ಮಾಡಿರುವ ಚರ್ಚೆ ದೇಶದ ನೀರಾವರಿ ಹಾಗೂ ಒಕ್ಕೂಟ ವ್ಯವಸ್ಥೆಯಲ್ಲಿ ಇತಿಹಾಸದ ಪುಟಕ್ಕೆ ಸೇರಲಿದೆ. ನಮ್ಮ ನೀರು, ನಮ್ಮ ಹಕ್ಕು ಆಶಯದ ಅಡಿ ಮೂರು ರಾಜ್ಯಗಳ ರೈತರ ರಕ್ಷಣೆಗೆ ನಾವು ಐತಿಹಾಸಿಕ ತೀರ್ಮಾನ ಕೈಗೊಂಡಿದ್ದೇವೆʼ ಎಂದು ಸಿಎಂ ತಿಳಿಸಿದ್ದಾರೆ.

CM Vijay : ತಮಿಳುನಾಡಿನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಿದ ವಿಜಯ್ ಸರ್ಕಾರ..! #bus #tamilnadu #cmvijay

ಅಣೆಕಟ್ಟು ಇತಿಹಾಸ ಸ್ಮರಣೆ

ʼತುಂಗಭದ್ರಾ ನದಿಗೆ ಜಲಾಶಯ ನಿರ್ಮಿಸುವ ಆಲೋಚನೆಗೆ 1860 ರಲ್ಲೇ ಬ್ರಿಟಿಷ್ ಇಂಜಿನಿಯರ್ ಸರ್ ಆರ್ಥರ್ ಕಾಟನ್ ಅವರು ನಾಂದಿ ಹಾಡಿದ್ದರು. ತದನಂತರ 1949 ರಲ್ಲಿ ಇದರ ಕಾಮಗಾರಿ ಆರಂಭಗೊಂಡು ಪೂರ್ಣಗೊಳ್ಳುವ ಹೊತ್ತಿಗೆ ಅನೇಕ ಮಹನೀಯರು ಇದಕ್ಕೆ ಸಾಕ್ಷಿಯಾಗಿದ್ದಾರೆ. ದೇವರು ನಮಗೆ ಎರಡು ಆಯ್ಕೆ ಕೊಟ್ಟಿದ್ದಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ನಮಗೆ ಸಿಕ್ಕ ಅವಕಾಶದಲ್ಲಿ ನಿಮ್ಮ ಸೇವೆ ಮಾಡುತ್ತಿದ್ದೇವೆ.

Krishna Byre Gowda : ಬೇಕಾಬಿಟ್ಟಿಯಾಗಿ ಗುಂಡಿಗಳನ್ನು ಮುಚ್ಚಬೇಡಿ ಎಂದ ಮಂತ್ರಿ..! #bengaluru #pratidhvani

ನಾನು ಸಿಎಂ ಆದ ಬಳಿಕ ಇದು ಎರಡನೇ ಸಾರ್ವಜನಿಕ ಕಾರ್ಯಕ್ರಮ. ರೈತನಿಗೆ ಸಂಬಳವಿಲ್ಲ, ಬಡ್ತಿ ಇಲ್ಲ, ಪಿಂಚಣಿ ಇಲ್ಲ, ರಜೆಯೂ ಇಲ್ಲ ಹಾಗೂ ನಿವೃತ್ತಿಯೂ ಇಲ್ಲ. ಇಂತಹ ಕಷ್ಟದ ಪರಿಸ್ಥಿತಿಯಲ್ಲೂ ದೇಶಕ್ಕೆ ಅನ್ನ ನೀಡುವ ರೈತನ ಬದುಕನ್ನು ಉಳಿಸಬೇಕು ಮತ್ತು ಈ ಭಾಗದ ಭತ್ತದ ಕಣಜವನ್ನು ಕಾಪಾಡಬೇಕು ಎಂಬ ದೃಢ ತೀರ್ಮಾನವನ್ನು ನಿಮ್ಮೆಲ್ಲರ ಆಶೀರ್ವಾದದೊಂದಿಗೆ ನಾವು ತೆಗೆದುಕೊಂಡಿದ್ದೇವೆʼ ಎಂದರು.

Previous Post

ಆರ್‌ಎಸ್‌ಎಸ್‌ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತೆ: ಸಚಿವ ಪ್ರಿಯಾಂಕ್‌ ಖರ್ಗೆ

Next Post

ಗೋವಾದ ಬೀಚ್‌ನಲ್ಲಿ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋದ ಕರ್ನಾಟಕದ ಪ್ರವಾಸಿಗ

Related Posts

ಅನುಮತಿಯಿಲ್ಲದೆ ಖಾಸಗಿ ಫೋಟೋ-ವಿಡಿಯೋ ಹಂಚಿದರೆ ಜೈಲು ಗ್ಯಾರಂಟಿ!ಪೊಲೀಸರಿಗೆ ಹೊಸ ಮಾರ್ಗಸೂಚಿ
Top Story

ಅನುಮತಿಯಿಲ್ಲದೆ ಖಾಸಗಿ ಫೋಟೋ-ವಿಡಿಯೋ ಹಂಚಿದರೆ ಜೈಲು ಗ್ಯಾರಂಟಿ!ಪೊಲೀಸರಿಗೆ ಹೊಸ ಮಾರ್ಗಸೂಚಿ

by ಪ್ರತಿಧ್ವನಿ
June 25, 2026
0

ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ (Revenge Pornography), ಸೆಕ್ಸ್‌ಟಾರ್ಷನ್ (Sextortion) ಹಾಗೂ ಖಾಸಗಿ ವಿಡಿಯೋಗಳ ಮೂಲಕ ಬ್ಲ್ಯಾಕ್‌ಮೇಲ್ ಮಾಡುವ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್‌ಐಆರ್ ದಾಖಲಿಸುವಂತೆ ಕರ್ನಾಟಕ ಪೊಲೀಸ್ ಇಲಾಖೆ...

Read moreDetails
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

ಮಳೆ ಆರ್ಭಟಕ್ಕೆ ಸಜ್ಜಾದ ಸರ್ಕಾರ; ಜಿಲ್ಲಾವಾರು ಸಚಿವರ ನೇಮಕ: ಯಾರಿಗೆ ಯಾವ್ಯಾವ ಹೊಣೆ ?

June 25, 2026
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

June 25, 2026
ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

ಕೋಟಿ ಕೋಟಿ ಹಣ, ಅಪಾರ ಚಿನ್ನಾಭರಣ ಸೀಜ್ : ಅಬಕಾರಿ ಆಯುಕ್ತ ಮನಿ ಮಂಜುನಾಥ್‌ ಬಳಿ ಇಡಿಗೆ ಸಿಕ್ಕಿದ್ಧೇನು..?

June 25, 2026
“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

“ಕಾಂಗ್ರೆಸ್ ಕಿಡಿಗೇಡಿಗಳು ಪೋಸ್ಟರ್ ಚಾಳಿ ಬಿಡದಿದ್ದರೆ ರಾಹುಲ್ ಗಾಂಧಿ ಮನೆಗೆ ಪೋಸ್ಟರ್ ಅಂಟಿಸುತ್ತೇವೆ”

June 25, 2026
Next Post
ಗೋವಾದ ಬೀಚ್‌ನಲ್ಲಿ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋದ ಕರ್ನಾಟಕದ ಪ್ರವಾಸಿಗ

ಗೋವಾದ ಬೀಚ್‌ನಲ್ಲಿ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋದ ಕರ್ನಾಟಕದ ಪ್ರವಾಸಿಗ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada