• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ: ಸಚಿವ ಕೆ.ಜೆ ಜಾರ್ಜ್ ಮಹತ್ವದ ಮಾಹಿತಿ

ಪ್ರತಿಧ್ವನಿ by ಪ್ರತಿಧ್ವನಿ
July 3, 2026
in Top Story, ಕರ್ನಾಟಕ, ರಾಜಕೀಯ
0
ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ: ಸಚಿವ ಕೆ.ಜೆ ಜಾರ್ಜ್ ಮಹತ್ವದ ಮಾಹಿತಿ
Share on WhatsAppShare on FacebookShare on Telegram

ಬೆಂಗಳೂರು: ಕರ್ನಾಟಕವನ್ನು ದೇಶದ ಪ್ರಮುಖ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ, ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ನೀಡುವ ‘ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026’ ಯನ್ನು ರೂಪಿಸಲಾಗುತ್ತಿದ್ದು, ಈ ನೀತಿಯಲ್ಲಿ ಕ್ರೂಸ್‌ ಪ್ರವಾಸೋದ್ಯಮ, ಬೀಚ್‌ ಪ್ರವಾಸೋದ್ಯಮ ಹಾಗೂ ವಿಶ್ವದರ್ಜೆಯ ಪ್ರವಾಸಿ ಸೌಲಭ್ಯಗಳಿಗೆ ವಿಶೇಷ ಆದ್ಯತೆ ನೀಡಬೇಕು ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT
Bengaluru's First Hebbal Tunnel Road : CM ಡಿಕೆಶಿ ಕನಸಿನ ಕೂಸು ಟನಲ್ ರಸ್ತೆ ನಿರ್ಮಾಣ.! #pratidhvani

ಇಂಧನ ಭವನದಲ್ಲಿ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜ್ಯದ ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸುವ ದೂರದೃಷ್ಟಿಯ ಕಾರ್ಯತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.

ರಾಜ್ಯದ ಕರಾವಳಿ ಹಾಗೂ ಮಲೆನಾಡು ವ್ಯಾಪ್ತಿಯ ಆರು ಜಿಲ್ಲೆಗಳ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸಿದ್ಧವಾಗುತ್ತಿರುವ ಹೊಸ ಪ್ರವಾಸೋದ್ಯಮ ನೀತಿಯಲ್ಲಿ, ವಿಷಯಾಧಾರಿತ (Theme-based) ಪ್ರವಾಸೋದ್ಯಮ ಸರ್ಕೀಟ್‌ಗಳು, ಕಡಲತೀರ ಪ್ರವಾಸೋದ್ಯಮ, ಕ್ರೂಸ್‌ ಪ್ರವಾಸೋದ್ಯಮ, ಸಾಹಸ ಕ್ರೀಡೆಗಳು ಹಾಗೂ ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

DkShivakumar on SIR: ಕಲ್ಯಾಣ ಮಂಟಪದಲ್ಲಿ ನಡೀತಿರೋ SIR ಬಗ್ಗೆ ಡಿಕೆಶಿವಕುಮಾರ್ ರಿಯಾಕ್ಷನ್ #pratidhvani

ಅಂತರರಾಷ್ಟ್ರೀಯ ಕ್ರೂಸ್‌ ಹಡಗುಗಳು ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಬಂದರುಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಸಮಗ್ರ ಕಾರ್ಯತಂತ್ರ ರೂಪಿಸಬೇಕಿದೆ. ಕ್ರೂಸ್‌ ಪ್ರವಾಸಿಗರು ಕರ್ನಾಟಕದಲ್ಲಿ ಹೆಚ್ಚು ದಿನ ಉಳಿಯುವಂತೆ ಆಕರ್ಷಕ ಪ್ರವಾಸೋದ್ಯಮ ಪ್ಯಾಕೇಜ್‌ಗಳು ಮತ್ತು ಸರ್ಕೀಟ್‌ಗಳನ್ನು ಅಭಿವೃದ್ಧಿಪಡಿಸಬೇಕು. ಈ ನಿಟ್ಟಿನಲ್ಲಿ ಪ್ರಮುಖ ಕ್ರೂಸ್‌ ಆಪರೇಟರ್‌ಗಳೊಂದಿಗೆ ಸಭೆ ನಡೆಸಿ, ಅವರ ಹಾಗೂ ಪ್ರವಾಸಿಗರ ನಿರೀಕ್ಷೆಗಳನ್ನು ಆಧರಿಸಿ ನೀತಿಯಲ್ಲಿ ಅಗತ್ಯ ಬದಲಾವಣೆಗಳನ್ನು ಅಳವಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಕೆಜೆ ಜಾರ್ಜ್‌ ಸೂಚಿಸಿದರು.

DkShivakumar: ರಾಜ್ಯದ ಜನರ ಸಮಸ್ಯೆ ಆಲಿಸಲು ಹೊಸ ಇಲಾಖೆ ಆರಂಭ ಎಂದ ಸಿಎಂ ಡಿಕೆಶಿವಕುಮಾರ್ #pratidhvani

ಬೀಚ್‌ ಪ್ರವಾಸೋದ್ಯಮವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ಬ್ಲೂ ಫ್ಲಾಗ್‌ ಬೀಚ್‌ಗಳ ಅಭಿವೃದ್ಧಿ, ಸ್ವಚ್ಛತೆ, ಸುರಕ್ಷತೆ, ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯ ಮೂಲಸೌಕರ್ಯ, ಜಲಕ್ರೀಡೆಗಳು (Water Sports), ಸಾಹಸ ಚಟುವಟಿಕೆಗಳು ಹಾಗೂ ಸಮುದ್ರತೀರದಲ್ಲಿ ಗುಣಮಟ್ಟದ ಪ್ರವಾಸಿ ಅನುಭವ ಕಲ್ಪಿಸುವ ಯೋಜನೆಗಳನ್ನು ಹೊಸ ನೀತಿಯಲ್ಲಿ ಸೇರಿಸಬೇಕು ಎಂದರು.

HD Kumaraswamy : ಡಿಕೆಶಿ ಆಡಳಿತದಲ್ಲಿ ಸಿದ್ದರಾಮಯ್ಯಗೆ ದಳಪತಿ ಬಹುಪರಾಕ್..! #pratidhvani

ಇದರ ಜೊತೆಗೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಮತ್ತು ಜಂಗಲ್ ಲಾಡ್ಜಸ್ ಅಂಡ್ ರೆಸಾರ್ಟ್ಸ್ (JLR) ವ್ಯಾಪ್ತಿಯ ಪ್ರವಾಸಿ ತಾಣಗಳಲ್ಲಿ ಗುಣಮಟ್ಟದ ವಸತಿ, ಮೂಲಭೂತ ಸೌಕರ್ಯ, ಸ್ವಚ್ಛತೆ, ಮಾಹಿತಿ ವ್ಯವಸ್ಥೆ ಹಾಗೂ ಪ್ರವಾಸಿಗರಿಗೆ ಅಗತ್ಯವಾದ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಮೂಲಕ ಪ್ರವಾಸಿಗರ ಅನುಭವವನ್ನು ಉತ್ತಮಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರವಾಸೋದ್ಯಮ ಎಂದರೆ ಕೇವಲ ಪ್ರವಾಸಿ ತಾಣಗಳ ಅಭಿವೃದ್ಧಿಯಲ್ಲ; ಪ್ರವಾಸಿಗರಿಗೆ ವಿಶ್ವದರ್ಜೆಯ ಅನುಭವವನ್ನು ನೀಡುವ ಸಮಗ್ರ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವುದು. ಉತ್ತಮ ಮೂಲಸೌಕರ್ಯ, ಸುಲಭ ಸಂಪರ್ಕ, ಸುರಕ್ಷತೆ ಮತ್ತು ಗುಣಮಟ್ಟದ ಸೇವೆಗಳ ಮೂಲಕವೇ ಕರ್ನಾಟಕವನ್ನು ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಉತ್ತಮ ಸ್ಥಾನ ಪಡೆಯಬಹುದಾಗಿದೆ ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು .

HD Kumaraswamy : ಹಾಸನದ ರೈತರಿಗೆ 1ಎಕರೆಗೆ 25ಲಕ್ಷ ಕೊಟ್ಟಿದ್ದೇವೆ.! #pratidhvani

ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಪ್ರವಾಸೋದ್ಯಮ ಇಲಾಖೆಯ ಆಯುಕ್ತ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಕೆಎಸ್‌ಟಿಡಿಸಿ ಹಾಗೂ ಜೆಎಲ್‌ಆರ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Previous Post

ರಾಮಮಂದಿರ ದೇಣಿಗೆ ನಾಪತ್ತೆ ಪ್ರಕರಣ: ಟಿನ್ನು ಯಾದವ್ ಪ್ರಮುಖ ಪಾತ್ರಧಾರಿ?

Next Post

ಕಾಂಗ್ರೆಸ್‌ನಲ್ಲಿ ರೇಟ್ ಫಿಕ್ಸ್ ಆಗಿದೆ..ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗ್ತಿಲ್ಲ: ವಿಜಯೇಂದ್ರ ವ್ಯಂಗ್ಯ

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
Next Post
ಕಾಂಗ್ರೆಸ್‌ನಲ್ಲಿ ರೇಟ್ ಫಿಕ್ಸ್ ಆಗಿದೆ..ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗ್ತಿಲ್ಲ: ವಿಜಯೇಂದ್ರ ವ್ಯಂಗ್ಯ

ಕಾಂಗ್ರೆಸ್‌ನಲ್ಲಿ ರೇಟ್ ಫಿಕ್ಸ್ ಆಗಿದೆ..ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗ್ತಿಲ್ಲ: ವಿಜಯೇಂದ್ರ ವ್ಯಂಗ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada