• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!

ಪ್ರತಿಧ್ವನಿ by ಪ್ರತಿಧ್ವನಿ
July 5, 2026
in Top Story, ಕರ್ನಾಟಕ, ರಾಜಕೀಯ
0
ಪರಪ್ಪನ ಅಗ್ರಹಾರದಿಂದ 24 ಕೈದಿಗಳಿಗೆ ಬಿಡುಗಡೆ ಭಾಗ್ಯ..!
Share on WhatsAppShare on FacebookShare on Telegram

ಬೆಂಗಳೂರು: ಸನ್ನಡತೆಯ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆಗೊಂಡ 24 ಕೈದಿಗಳು ಸಮಾಜದ ಮುಖ್ಯವಾಹಿನಿಗೆ ಮರಳಿ ಜವಾಬ್ದಾರಿಯುತ ನಾಗರಿಕರಾಗಿ ಹೊಸ ಬದುಕು ಕಟ್ಟಿಕೊಳ್ಳಬೇಕು ಎಂದು ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿವಿ ಮಾತು ಹೇಳಿದರು.

ADVERTISEMENT
🌧️☔ರಾಜ್ಯ ಹವಾಮಾನ ವರದಿ.! CS Patil | Weather Report | Heavy Rain | PRATIDHVANI | FULL RANI#pratidhvani

ಬೆಂಗಳೂರು ಕೇಂದ್ರ ಕಾರಾಗೃಹ, ಪರಪ್ಪನ ಅಗ್ರಹಾರದಲ್ಲಿ ಸನ್ನಡತೆಯ ಆಧಾರದ ಮೇಲೆ ಬಿಡುಗಡೆಯಾದ 24 ಕೈದಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಅವರು, ಶಿಕ್ಷೆ ಎಂಬುದು ವ್ಯಕ್ತಿಯ ಜೀವನದ ಅಂತ್ಯವಲ್ಲ, ಅದು ಜೀವನವನ್ನು ತಿದ್ದಿಕೊಳ್ಳಲು ದೊರೆಯುವ ಅವಕಾಶವಾಗಿದೆ. ಸಮಾಜಕ್ಕೆ ಮರಳಿದ ಬಳಿಕ ಕಾನೂನು ಪಾಲಿಸುವ ಪ್ರಜೆಯಾಗಿ ಬದುಕುವುದರ ಮೂಲಕ ತಮ್ಮಿಂದಾದ ಪ್ರಮಾದಕ್ಕೆ ಅರ್ಥಪೂರ್ಣ ಪ್ರಾಯಶ್ಚಿತ್ತ ಸಲ್ಲಿಸಬೇಕು ಎಂದು ತಿಳಿಸಿದರು.

 ರಾಜ್ಯ ಸರ್ಕಾರ ಕಾರಾಗೃಹಗಳನ್ನು ಕೇವಲ ಶಿಕ್ಷೆ ಅನುಭವಿಸುವ ಸ್ಥಳಗಳನ್ನಾಗಿ ಅಲ್ಲ, ವ್ಯಕ್ತಿತ್ವ ಪರಿವರ್ತನೆ ಮತ್ತು ಪುನರ್ವಸತಿಯ ಕೇಂದ್ರಗಳನ್ನಾಗಿ ರೂಪಿಸಲು ಬದ್ಧವಾಗಿದೆ. ಕೈದಿಗಳಿಗೆ ಶಿಕ್ಷಣ, ಕೌಶಲಾಭಿವೃದ್ಧಿ, ಉದ್ಯೋಗ ತರಬೇತಿ ಹಾಗೂ ಮಾನಸಿಕ ಸದೃಢತೆಗೆ ಅಗತ್ಯವಾದ ಎಲ್ಲ ಅವಕಾಶಗಳನ್ನು ಒದಗಿಸಲಾಗುತ್ತಿದೆ. ಇದರಿಂದ ಬಿಡುಗಡೆಯಾದ ನಂತರ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲಿದೆ ಎಂದರು.

ಸರ್ಕಾರ ನೌಕರರನ್ನು ಕಳ್ಳರಂತೆ ಕಾಣ್ತಿದೆ ಇದು ನಡೆಯಲ್ಲ... #pratidhvani

ಕಾರ್ಯಕ್ರಮದ ಬಳಿಕ ಸಚಿವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿವಿಧ ವಿಭಾಗಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಂಪ್ಯೂಟರ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೈದಿಗಳೊಂದಿಗೆ ಮಾತುಕತೆ ನಡೆಸಿ, ಅವರಿಗೆ ನೀಡಲಾಗುತ್ತಿರುವ ತರಬೇತಿ, ಉದ್ಯೋಗ ಕೌಶಲಾಭಿವೃದ್ಧಿ ಹಾಗೂ ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ನಂತರ ಕಾರಾಗೃಹದ ಅಡುಗೆಮನೆಗೆ ಭೇಟಿ ನೀಡಿ ಕೈದಿಗಳಿಗೆ ತಯಾರಾಗುತ್ತಿದ್ದ ಆಹಾರದ ಗುಣಮಟ್ಟ ಹಾಗೂ ಸ್ವಚ್ಛತೆಯನ್ನು ಪರಿಶೀಲಿಸಿದರು. ಕೈದಿಗಳು ತಯಾರಿಸಿದ ವಿವಿಧ ಕರಕುಶಲ ವಸ್ತುಗಳನ್ನು ವೀಕ್ಷಿಸಿ ಅವರ ಕೌಶಲ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದರು. ಇಂತಹ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಕಲ್ಪಿಸುವ ಮೂಲಕ ಬಿಡುಗಡೆಯ ನಂತರವೂ ಕೈದಿಗಳು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವಾಗುವ ಯೋಜನೆಗಳನ್ನು ರೂಪಿಸುವ ಅಗತ್ಯವಿದೆ ಎಂದು ಹೇಳಿದರು.

SARA Mahesh On Yathindra Siddaramaiah | ಸಿದ್ದು ಪುತ್ರನ ಮೇಲೆ ಮುಗಿಬಿದ್ದ ಸಾರಾ ಮಹೇಶ್ #pratidhvani

ಅಲ್ಲದೆ, ಕಾರಾಗೃಹದಲ್ಲಿರುವ ಕೈದಿಗಳ ಮಕ್ಕಳಿಗಾಗಿ ಸ್ಥಾಪಿಸಲಾಗಿರುವ ಕಲಿಕಾ ಕೇಂದ್ರಕ್ಕೂ ಭೇಟಿ ನೀಡಿ ಮಕ್ಕಳೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದರು. ಮಕ್ಕಳ ಶಿಕ್ಷಣ ಮತ್ತು ಭವಿಷ್ಯ ಯಾವುದೇ ಕಾರಣಕ್ಕೂ ಹಿನ್ನಡೆಯಾಗಬಾರದು ಎಂಬುದು ಸರ್ಕಾರದ ಆದ್ಯತೆಯಾಗಿದ್ದು, ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

HD Kumaraswamy : Ramanagaraದಲ್ಲಿ ಕಳ್ಳ ಮತ ಸೃಷ್ಟಿ ಮಾಡೋಕೆ ಯಾರು ಕಾರಣ? | CM DK Shivakumar #pratidhvani

ಕಾರಾಗೃಹಗಳನ್ನು ತಾಂತ್ರಿಕವಾಗಿ ಹಾಗೂ ಉದ್ಯೋಗ ಪರವಾಗಿ ಇನ್ನಷ್ಟು ಸಬಲಗೊಳಿಸಲು ಸಮಗ್ರ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಮಾಹಿತಿ ತಂತ್ರಜ್ಞಾನ, ಡಿಜಿಟಲ್ ಕೌಶಲ್ಯ, ವೃತ್ತಿಪರ ತರಬೇತಿ ಮತ್ತು ಉದ್ಯೋಗಮುಖಿ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಿ, ಬಿಡುಗಡೆಯಾದ ನಂತರ ಖೈದಿಗಳು ಗೌರವಯುತ ಜೀವನ ನಡೆಸಲು ಅಗತ್ಯ ಸಾಮರ್ಥ್ಯವನ್ನು ಬೆಳೆಸುವ ದಿಸೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

Priyank Kharge: ಮೇಕೆದಾಟು ಯೋಜನೆಗೆ 1 ಇಟ್ಟಿಗೆ ಹಾಕಲು ಬಿಡಲ್ಲ ಅಂತ ತ.ಳುನಾಡು ಕಾಂಗ್ರೆಸ್ ಅಧ್ಯಕ್ಷರು ಹೇಳವ್ರೆ!

ಸನ್ನಡತೆಯಿಂದ ಬಿಡುಗಡೆಯಾದ ಎಲ್ಲರೂ ತಮ್ಮ ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸಬೇಕು. ಸಮಾಜದ ವಿಶ್ವಾಸವನ್ನು ಮರುಗಳಿಸಿ, ತಮ್ಮ ಜೀವನದ ಮೂಲಕವೇ ಇತರರಿಗೆ ಉತ್ತಮ ಸಂದೇಶ ನೀಡಬೇಕು ಎಂದು ಅವರು ಕರೆ ನೀಡಿದರು.

Previous Post

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Next Post

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

Related Posts

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ
Top Story

ಕೃಷಿ ಇಲಾಖೆ ಮಿಂಚಿನ ಕಾರ್ಯಾಚರಣೆ: ಹಲವೆಡೆ ಅಕ್ರಮ ಬೀಜ ದಾಸ್ತಾನು ಜಪ್ತಿ

by ಪ್ರತಿಧ್ವನಿ
July 5, 2026
0

ಬೆಂಗಳೂರು: ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದ ಪ್ರತ್ಯೇಕ ತಂಡಗಳು ರಾಜ್ಯದ ಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ವಿವಿಧ ರಸಗೊಬ್ಬರ ಮಾರಾಟ ಕೇಂದ್ರಗಳಿಗೆ ಭೇಟಿ...

Read moreDetails
ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

ಬೆಳಗಾವಿಯಲ್ಲಿ RSS ಶಕ್ತಿ ಪ್ರದರ್ಶನ: ಪ್ರಿಯಾಂಕ್ ಖರ್ಗೆಗೆ ಪರೋಕ್ಷ ಟಾಂಟ್‌..?

July 5, 2026
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

July 5, 2026
Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

Karnataka SIR: ಕಾಂಗ್ರೆಸ್‌ ಅಕ್ರಮ ಮತಗಳನ್ನು ಉಳಿಸಿಕೊಳ್ಳಲು ಹರಸಹಾಸ ಮಾಡ್ತಿದೆ: ಕುಮಾರಸ್ವಾಮಿ

July 5, 2026
ಪೊಲೀಸ್ ಇಲಾಖೆ-ಮಾಧ್ಯಮಗಳಿಗೆ ಹೊಸ ನಿಯಮ: ಅನುಮತಿ ಇಲ್ಲದೆ ಮಾಹಿತಿ ಹಂಚಿದರೆ ಕ್ರಮ

ಪೊಲೀಸ್ ಇಲಾಖೆ-ಮಾಧ್ಯಮಗಳಿಗೆ ಹೊಸ ನಿಯಮ: ಅನುಮತಿ ಇಲ್ಲದೆ ಮಾಹಿತಿ ಹಂಚಿದರೆ ಕ್ರಮ

July 4, 2026
Next Post
Rain Damage

ಮಳೆಯ ಅವಾಂತರಕ್ಕೆ ಮನೆಯ ಮೇಲೆ ಬಿದ್ದ ಉರುಳಿಬಿದ್ದ ಬೃಹತ್‌ ಮರ : ಅಪಾರ ಹಾನಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada