ಬೆಂಗಳೂರು: ಶಿಕ್ಷಕಿಯೊಬ್ಬರು ಬೈದರು ಎಂಬ ಕಾರಣಕ್ಕೆ ಮನನೊಂದ ವಿದ್ಯಾರ್ಥನಿಯೊಬ್ಬಳು ಆತ್ಮಹ** ಮಾಡಿಕೊಂಡ ಘಟನೆ ಆನೇಕಲ್‌ನ ಸೂರ್ಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆನೇಕಲ್‌ನ ಮರಸೂರು ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಎಂಟನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ನೇಣಿಗೆ ಶರಣಾದವಳು. ಆತ್ಮ**ಗೂ ಮುನ್ನ ಬಾಲಕಿ ಬರೆದಿಟ್ಟಿರುವ ಡೆತ್** ಲಭ್ಯವಾಗಿದೆ. ಸದ್ಯ ಸೂರ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಶಿಕ್ಷಕಿ ಬೈದರು ಎಂಬ ಕಾರಣಕ್ಕೆ ಆ ವಿದ್ಯಾರ್ಥಿನಿ ಮಧಶ್ರೀ ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ. ಬೆಳಗ್ಗೆ ಪೋಷಕರು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿನಿ ಬರೆದ ಡೆತ್ನೋಟ್ ಕೂಡ ಲಭ್ಯವಾಗಿದೆ. ಇದರಲ್ಲಿ ಹಲವು ವಿಚಾರಗಳನ್ನು ಆಕೆ ಉಲ್ಲೇಖಿಸಿದ್ದಾಳೆ. ಶಾಲೆಯಲ್ಲಿ ನಡೆದ ಘಟನೆ ತನಗೆ ಬಹಳ ನೋವು ತಂದಿದೆ. ತನ್ನ ಮೇಲೆ ಇಲ್ಲಸಲ್ಲದ ಅಪರಾಧ ಹೊರಿಸಿದ್ದಾರೆ. ಈ ಅವಮಾನವನ್ನು ಸಹಿಸಿಕೊಂಡು ಬದುಕಲು ತನ್ನಿಂದ ಆಗುತ್ತಿಲ್ಲ. ಮನಸ್ಸಿಗೆ ತೀವ್ರ ನೋವಾಗಿರುವ ಕಾರಣ, ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾಳೆ.

ಈ ವಿಚಾರದಲ್ಲಿ ಅಮ್ಮ, ಅಕ್ಕ, ತಂಗಿ ಮತ್ತು ತಮ್ಮ ಯಾರದ್ದು ಕೂಡ ತಪ್ಪಿಲ್ಲ. ಅವರನ್ನು ಚೆನ್ನಾಗಿ ನೋಡಿಕೊಳ್ಳಿ. ಅಮ್ಮನನ್ನು ಯಾರು ಕೂಡ ಬೈಯ್ಯಬೇಡಿ. ತನಗೆ ಈ ಭೂಮಿ ಮೇಲೆ ಬದುಕಲು ಆರ್ಹತೆ ಇಲ್ಲ. ಅಮ್ಮ ಮತ್ತು ಎಲ್ಲರೂ ನನ್ನನ್ನ ಕ್ಷಮಿಸಿ ಎಂದು ವಿಧ್ಯಾರ್ಥಿನಿ ಮಧುಶ್ರೀ ಡೆ** ನೋಟ್ನಲ್ಲಿ ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






