• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, September 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ1ಕೋಟಿ ರೂ ಅನುದಾನ: ಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
July 9, 2026
in Top Story, ಕರ್ನಾಟಕ, ರಾಜಕೀಯ
0
ಕುಡಿಯುವ ನೀರು ಪೂರೈಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ1ಕೋಟಿ ರೂ ಅನುದಾನ: ಸಿಎಂ
Share on WhatsAppShare on FacebookShare on Telegram

ಬೆಳಗಾವಿ: ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ADVERTISEMENT
DkShivakumar  : ಕರ್ನಾಟಕದ ಗಡಿ ಭಾಗದ ಹಿತ ಕಾಪಾಡಲು ನಮ್ಮ ಸರ್ಕಾರ ಬದ್ಧವಾಗಿದೆ.. #pratidhvani

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಲ್ಲಾ ಶಾಸಕರು, ಸಂಸದರು ಈ ಸಭೆಯಲ್ಲಿ ಭಾಗವಹಿಸಿದ್ದರು. ಬಸವಣ್ಣನ ನಾಡು ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದಿಂದ ನನ್ನ ಉತ್ತರ ಕರ್ನಾಟಕ ಜಿಲ್ಲೆಗಳ ಪ್ರವಾಸ ಆರಂಭಿಸಿದ್ದೇನೆ. ಈ ಸಭೆಯಲ್ಲಿ ಅನೇಕ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದಲ್ಲಿ ಸ್ವಲ್ಪ ಮಳೆಯಾಗಿದೆ. ಕೇಂದ್ರ ಸರ್ಕಾರ ದೇಶದಲ್ಲಿ ಭೀಕರ ಬರಗಾಲದ ಎಚ್ಚರಿಕೆ ರವಾನಿಸಿದ್ದು, ನಮ್ಮಲ್ಲೂ ವಾಡಿಕೆ ಮಳೆ ಆಗಿಲ್ಲ” ಎಂದರು.

“ಬರಗಾಲ ಪರಿಸ್ಥಿತಿಯಲ್ಲಿ ಕಲಬುರಗಿ ಹಾಗೂ ಬೆಳಗಾವಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದೇವೆ. ಸುಮಾರು 50ಕ್ಕೂ ಹೆಚ್ಚು ಶಾಸಕರು, ಸಂಸದರು ಅನೇಕ ಸಲಹೆ ನೀಡಿದ್ದಾರೆ. ಬಿತ್ತನೆ ಬೀಜ, ಗೊಬ್ಬರ ಪೂರೈಕೆಗೆ ಅಗತ್ಯ ತಯಾರಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ನಮ್ಮ ಸರ್ಕಾರ ಉಪಆಯುಕ್ತರಿಗೆ ಅನುದಾನ ನೀಡಿದೆ. ಕೇಂದ್ರ ಸರ್ಕಾರದ ಅನುದಾನಕ್ಕೆ ಕಾಯದೆ ನಮ್ಮ ಸರ್ಕಾರ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಈ ತೀರ್ಮಾನ ಮಾಡಲಾಗಿದೆ. ಸ್ಥಳೀಯ ಶಾಸಕರು ಈ ಬಗ್ಗೆ ಅಧ್ಯಯನ ಮಾಡಿ ಯೋಜನೆ ರೂಪಿಸಬೇಕು. ಮುಂದಿನ ದಿನಗಳಲ್ಲಿ ನೀರಾವರಿಗೆ ನೀರು ಲಭ್ಯವಾಗುತ್ತದೆಯೋ ಇಲ್ಲವೋ, ಕುಡಿಯುವ ನೀರಿನ ಪೂರೈಕೆಗೆ ಅಣೆಕಟ್ಟಿನಲ್ಲಿ ನೀರು ಸಂಗ್ರಹಿಸಲು ಸೂಚಿಸಲಾಗಿದೆ” ಎಂದು ತಿಳಿಸಿದರು.

DkShivakumar  : ಬೆಳಗಾವಿ ಸಾಹುಕಾರ್ ಸತೀಶ್ ಜಾರಕಿಹೊಳಿ ಮೇಲೆ ಡಿಕೆಶಿ ಪ್ರೀತಿ ನೋಡಿ..! #pratidhvani

ರಸಗೊಬ್ಬರ ದಾಸ್ತಾನಿಗೆ ಅಧಿಕಾರಿಗಳಿಗೆ ಸೂಚನೆ

“ರಸಗೊಬ್ಬರ ವಿಚಾರವಾಗಿ ಬೆಂಗಳೂರಿನಲ್ಲಿ ಸಭೆ ಮಾಡಲಾಗುವುದು. ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ಮಾಡುತ್ತೇನೆ. ಕೇಂದ್ರ ಸರ್ಕಾರ ಕೇವಲ 50% ಗೊಬ್ಬರ ಪೂರೈಕೆ ಮಾಡಿದ್ದು, ರಸಗೊಬ್ಬರ ದಾಸ್ತಾನಿಗೆ ಸೂಚಿಸಲಾಗಿದೆ. ಕುಡಿಯುವ ನೀರು ಹಾಗೂ ನೀರಾವರಿ ಯೋಜನೆಗಳಿಗೆ ಅರಣ್ಯ ಇಲಾಖೆಯಿಂದ ಅಡ್ಡಿಯಾಗುತ್ತಿದೆ ಎಂಬ ಅಹವಾಲು ಕೇಳಿಬಂದವು. 60 ಕ್ಕೂ ಹೆಚ್ಚು ಜಾಗಗಳಲ್ಲಿ ಪೈಪ್ ಲೈನ್ ಎಳೆಯಲು ಸಮಸ್ಯೆಯಾಗಿದೆ ಎಂದು ತಿಳಿದು ಬಂದಿದ್ದು, ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಪೂರೈಕೆಗೆ ತೊಂದರೆ ನೀಡಬಾರದು ಎಂದು ಸೂಚಿಸಿದ್ದೇನೆ” ಎಂದು ಮಾಹಿತಿ ನೀಡಿದರು.

HD Kumaraswamy : ಡಿಕೆಶಿ ಆಡಳಿತದಲ್ಲಿ ಸಿದ್ದರಾಮಯ್ಯಗೆ ದಳಪತಿ ಬಹುಪರಾಕ್..! #pratidhvani

“ಅರಣ್ಯ ಹಕ್ಕು ವಿಚಾರವಾಗಿ ಯಾರನ್ನೂ ಒಕ್ಕಲೆಬ್ಬಿಸಬಾರದು. ಕಾನೂನು ಚೌಕಟ್ಟಿನಲ್ಲಿ, ಅವರಿಗೆ ಸಿಗಬೇಕಾದ ಹಕ್ಕು ನೀಡಬೇಕು. ತಲತಲಾಂತರದಿಂದ ಅರಣ್ಯ ಪ್ರದೇಶದಲ್ಲಿ ವಾಸ ಮಾಡಿರುವವರನ್ನು ರಕ್ಷಣೆ ಮಾಡುವುದು ನಮ್ಮ ಸಂಕಲ್ಪ” ಎಂದು ತಿಳಿಸಿದರು.

ರಾಜ್ಯದ ಮುಜರಾಯಿ ದೇವಾಲಯಗಳ ಹುಂಡಿ ರಕ್ಷಣೆಗೆ ಸಿಸಿಟಿವಿ

“ರಾಮ ಮಂದಿರ ವಿಚಾರದಲ್ಲಿ ನಡೆದಿರುವ ಅಕ್ರಮ ಭಕ್ತರಿಗೆ ಅಗೌರವ ತಂದಿದೆ. ಜನರು ಭಕ್ತಿಯಿಂದ ದೇಣಿಗೆ ನೀಡಿದ್ದು, ಧರ್ಮದ ಹೆಸರಿನಲ್ಲಿ ಲೂಟಿ ಮಾಡಲಾಗಿದೆ. ಹೀಗಾಗಿ ನಮ್ಮ ಸರ್ಕಾರ ರಾಜ್ಯದ ಎಲ್ಲಾ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಕಡ್ಡಾಯವಾಗಿ ಹುಂಡಿಯ ಮುಂದೆ ಸಿಸಿಟಿವಿ ಅಳವಡಿಕೆಗೆ ತೀರ್ಮಾನಿಸಿದೆ. ಹುಂಡಿ, ಹಣ ತೆಗೆಯುವ ಹಾಗೂ ಅದನ್ನು ಎಣಿಸುವ ಜಾಗದ ಸಿಸಿಟಿವಿ ದೃಶ್ಯಾವಳಿಗಳನ್ನು ಎಸ್ ಪಿ ಕಚೇರಿಗೆ, ಉಪ ಆಯುಕ್ತರ ಕಚೇರಿಗೆ ರವಾನೆಯಾಗುವ ವ್ಯವಸ್ಥೆ ಮಾಡಲಾಗುವುದು” ಎಂದು ವಿವರಿಸಿದರು.

DkShivakumar  :ಅರಣ್ಯವಾಸಿಗಳನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು.. #pratidhvani

“ಎಸ್ ಐಆರ್ ವಿಚಾರವಾಗಿ ಮಾರ್ಗದರ್ಶನ ನೀಡಲಾಗಿದೆ. ಮತದಾನದ ಹಕ್ಕು, ಬದುಕಿನ ಹಕ್ಕು. ಇದನ್ನು ಉಳಿಸಿಕೊಳ್ಳಲು ಅಗತ್ಯ ಇರುವವರಿಗೆ 10 ವರ್ಷ ವಾಸ ಇರುವವರಿಗೆ ನಿವಾಸ ದೃಢೀಕರಣ ಪತ್ರ ನೀಡಲಾಗುವುದು. 4.50 ಕೋಟಿ ಜಾತಿ ಪ್ರಮಾಣ ಪತ್ರ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರತಿ ಬೂತ್ ನಲ್ಲಿ ಸಹಾಯ ಕೇಂದ್ರ ತೆರೆಯಲಾಗುವುದು. ಎಲ್ಲರ ಮತದಾನದ ಹಕ್ಕು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ” ಎಂದು ತಿಳಿಸಿದರು.

ಅವನ ಬಗ್ಗೆ ಏನು ಮಾತಾಡ್ತೀರಾ ಬಿಟ್ಟಾಕಿ..? #pratidhvani

ಗ್ಯಾರಂಟಿ ಯೋಜನೆ ನಿಲ್ಲಲ್ಲ, ಅಕ್ರಮ ತಡೆಯಲು ಪರಿಶೀಲನೆ

“ಸಿಎಜಿ ವರದಿಯಲ್ಲಿ ಗ್ಯಾರಂಟಿ ಯೋಜನೆ ದುರ್ಬಳಕೆಯಾಗುತ್ತಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳ ಪರಿಶೀಲನೆ ಮಾಡುತ್ತಿದ್ದೇವೆ. ಸತ್ತವರ ಹೆಸರಿನಲ್ಲಿ ನೂರಾರು ಕೋಟಿ ಹಣ ಪಡೆದಿದ್ದಾರೆ. ಇದನ್ನು ತಡೆಯಲು, ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಫಲಾನುಭವಿಗಳ ಮಾಹಿತಿ ಮರುಸಂಗ್ರಹ ಮಾಡಲಾಗುತ್ತಿದೆ. ನಾವು ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ. ಅರ್ಹ ಫಲಾನುಭವಿಗಳಿಗೆ ಯೋಜನೆ ತಲುಪಲಿದೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ನಾವು ತೀರ್ಮಾನ ಮಾಡಿದ ಯಾವುದೇ ಕಾರ್ಯಕ್ರಮ ನಿಲ್ಲಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

“ರೈತರ ಕೃಷಿ ವಿಮೆ ವಿಚಾರದಲ್ಲಿ ಮೋಸ ನಡೆಯುತ್ತಿದೆ ಎಂದು ಶಾಸಕರು ನಮ್ಮ ಗಮನ ಸೆಳೆದಿದ್ದಾರೆ. ಕಲಬುರ್ಗಿಯಲ್ಲಿ ನಮಗೆ ಮಾಹಿತಿ ಬಂದಿದೆ. ರೈತರಿಗೆ ಹಣ ಸಿಗುತ್ತಿದೆಯೇ ಅಥವಾ ಮಧ್ಯವರ್ತಿಗಳ ಹಾವಳಿ ಇದೆಯೇ ಎಂದು ಪರಿಶೀಲನೆ ಮಾಡಲು ಬೆಂಗಳೂರಿನಲ್ಲಿ ಸಭೆ ಮಾಡುತ್ತೇವೆ” ಎಂದು ಹೇಳಿದರು.

Radha Mohan Das : ಗೃಹ ಸಚಿವರ ವಿರುದ್ಧ ರಾಧಾ ಮೋಹನ್‌ ಅಗರ್ವಾಲ್ ವಾಗ್ದಾಳಿ.. #pratidhvani

“ಮೋಡ ಬಿತ್ತನೆ ವಿಚಾರವನ್ನು 10ಕ್ಕೂ ಹೆಚ್ಚು ಶಾಸಕರು ಪ್ರಸ್ತಾಪಿಸಿದ್ದು, ಇತ್ತೀಚೆಗೆ ಕೆಲವು ಶಾಸಕರು ತಾವೇ ಹಣ ಹಾಕಿ ಈ ಪ್ರಯೋಗ ಮಾಡಿದ್ದು, ಇದು ಯಶಸ್ವಿಯಾಗಿದೆ ಎಂದು ಹೇಳಿದ್ದಾರೆ. ಈ ಬಗ್ಗೆ ವರದಿ ತರಿಸಿಕೊಂಡು ಬೆಂಗಳೂರಿನಲ್ಲಿ ಸಭೆ ನಡೆಸಿ ತೀರ್ಮಾನಿಸಲಾಗುವುದು” ಎಂದು ಮಾಹಿತಿ ನೀಡಿದರು.

“ಕಂದಾಯ ಇಲಾಖೆಯಿಂದ ಭೂ ದಾಖಲೆ ನೀಡುವ ಯೋಜನೆ ಮಾಡಲಾಗಿದ್ದು, ಇದು ನಮ್ಮ ಸರ್ಕಾರದ ಪ್ರಿಯವಾದ ಯೋಜನೆ. ಇಡೀ ದೇಶದಲ್ಲಿ ಎಲ್ಲರ ಆಸ್ತಿ ದಾಖಲೆಗಳನ್ನು ಸರಿಪಡಿಸಿ ಕೊಡುವ ಭೂಮಿ ಗ್ಯಾರಂಟಿಯನ್ನು ನೀಡಲು ಮುಂದಾಗಿದೆ. ಇ ಖಾತಾ ನೀಡಲು ಸರ್ಕಾರ ತೀರ್ಮಾನಿಸಿದೆ. ಇನ್ನು ಒಸಿ ಸಿಸಿ ವಿಚಾರದಲ್ಲಿ 40×60 ವಸತಿ ಕಟ್ಟಡಗಳಿಗೆ ವಿನಾಯಿತಿ ನೀಡಲಾಗಿದೆ. ಇದಕ್ಕೆ ಅರ್ಜಿ ಹಾಕುವ ದಿನಾಂಕ ಆಗಸ್ಟ್ 15ರ ವರೆಗೆ ವಿಸ್ತರಣೆ ಮಾಡಲಾಗಿದೆ.

Priyank kharge on RSS: ಕಾನೂನು ಕ್ರಮಕೈಗೊಳ್ತೀರಾ? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ತುಂಗಭದ್ರಾ ವಿಚಾರವಾಗಿ ಐತಿಹಾಸಿಕ ತೀರ್ಮಾನ

“ಕಳೆದ ವರ್ಷ ತುಂಗಭದ್ರಾ ಅಣೆಕಟ್ಟಿನ ಗೇಟ್ ತುಂಡರಿಸಿತ್ತು. ಆಗ ನಾವು ಒಂದೇ ವಾರದಲ್ಲಿ ಪರಿಸ್ಥಿತಿ ನಿಭಾಯಿಸಿದೆವು. ನಂತರ ನಾವು ಎಲ್ಲಾ 33 ಗೇಟ್ ಬದಲಾವಣೆ ಮಾಡಿದ್ದೇವೆ. ರೈತರನ್ನು ಬದುಕಿಸಬೇಕು. ಟಿಬಿ ಅಣೆಕಟ್ಟಿನಲ್ಲಿ ಹೂಳು ತುಂಬಿರುವುದರಿಂದ 33 ಟಿಎಂಸಿ ನೀರು ನಷ್ಟವಾಗುತ್ತಿದೆ. ಹೀಗಾಗಿ ಈ ಸಮಸ್ಯೆಗೆ ಪರಿಹಾರ ನೀಡಲು, ಕೇಂದ್ರ ಜಲಶಕ್ತಿ ಸಚಿವರಾದ ಸಿಆರ್ ಪಾಟೀಲ್ ಅವರ ನೇತೃತ್ವದಲ್ಲಿ ಕರ್ನಾಟಕ, ತೆಲಂಗಾಣ, ಆಂಧ್ರ ಪ್ರದೇಶ ಸಿಎಂಗಳು ಮೊದಲ ಬಾರಿಗೆ ಸಭೆ ಮಾಡಿ ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ. ನಾವು ಪರಸ್ಪರ ಕಿತ್ತಾಟಡದೇ ರೈತರ ಬದುಕು ರಕ್ಷಣೆಗೆ ಕೇಂದ್ರದ ತಾಂತ್ರಿಕ ಸಮಿತಿ ಅಧ್ಯಯನ ಮಾಡಿ ವರದಿ ಸಲ್ಲಿಸಲಿದ್ದು, ನಂತರ ನಾವು ಏನು ಮಾಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುವುದು. ಈ ಮಧ್ಯೆ ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ” ಎಂದು ವಿವರಿಸಿದರು.

Lakshmi Hebbalkar: ಕೃಷಿ ಸಚಿವರು ಇಲ್ಲ ಎಂದು ಟೀಕಿಸಿದ ಬಿಜೆಪಿ ನಾಯಕರಿಗೆ ಹೆಬ್ಬಾಳ್ಕರ್ ಟಾಂಗ್!

“ಈ ಮಧ್ಯೆ ಕೃಷ್ಣ, ಕಾವೇರಿ ಹಾಗೂ ಗೋದಾವರಿ ನದಿ ಜೋಡಣೆಗೆ ತೀರ್ಮಾನಿಸಲಾಗಿದ್ದು, ಕೇಂದ್ರಕ್ಕೆ ನಮ್ಮ ಸಮ್ಮತಿ ಸೂಚಿಸಿದ್ದೇವೆ. ಕೇಂದ್ರ ಸರ್ಕಾರ ಇದನ್ನು ರಾಷ್ಟ್ರೀಯ ಯೋಜನೆಯಾಗಿ ಮಾಡಿ, 1 ಲಕ್ಷ ಕೋಟಿ ಯೋಜನೆ ಮಾಡಲಿದೆ. ಇದರಲ್ಲಿ 10% ರಾಜ್ಯ ಸರ್ಕಾರದ್ದಾಗಿದ್ದು, 90% ಕೇಂದ್ರ ಸರ್ಕಾರ ಭರಿಸಲಿದೆ” ಎಂದರು.

Tags: BJPcongressDK ShivakumarJDSKarnatakaKarnataka Politics
Previous Post

BREAKING NEWS : ದೀದಿಗೆ ಬಿಗ್‌ ಶಾಕ್‌ : ಟಿಎಂಸಿಗೆ ಗುಡ್‌ ಬೈ ಹೇಳಿದ್ದ ಸಂಸದರು ಬಿಜೆಪಿ ಸೇರ್ಪಡೆ

Next Post

ರಾಜಕೀಯ ಅಧಿಕಾರ ಮತ್ತು ದಲಿತ ಪ್ರಜ್ಞೆ- ಭಾಗ 2

Related Posts

ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?
Top Story

ಸತೀಶ್ ಜಾರಕಿಹೊಳಿ ಕುಟುಂಬದ ಸ್ಥಳಗಳಲ್ಲಿ ಇಡಿ ಶೋಧ; ₹3.3 ಕೋಟಿ ನಗದು, ವಿದೇಶಿ ಕರೆನ್ಸಿ ಪತ್ತೆ?

by ಪ್ರತಿಧ್ವನಿ
September 11, 2026
0

ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಅವರ ಪುತ್ರಿ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಆಪ್ತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ (ED) ನಡೆಸಿದ...

Read moreDetails
‘ರಾಜಕೀಯದಿಂದ ಹಿಂದೆ ಸರಿಯಬೇಡಿ’; ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತು? ಹೇಳಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ ರಾಗಾ

‘ರಾಜಕೀಯದಿಂದ ಹಿಂದೆ ಸರಿಯಬೇಡಿ’; ಸಿದ್ದರಾಮಯ್ಯಗೆ ರಾಹುಲ್ ಗಾಂಧಿ ಕಿವಿಮಾತು? ಹೇಳಿಕೆಗಳ ಬಗ್ಗೆ ಎಚ್ಚರಿಕೆ ನೀಡಿದ ರಾಗಾ

September 11, 2026
ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

ಗಣೇಶ ಹಬ್ಬದಿಂದ ಯಾರಿಗೆ ಎಷ್ಟು ಲಾಭ?; ₹30 ಸಾವಿರ ಕೋಟಿಯ ವಹಿವಾಟಿನ ಸಂಪೂರ್ಣ ಲೆಕ್ಕ ಇಲ್ಲಿದೆ

September 11, 2026
ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

ಪಂಚಾಯಿತಿಯಿಂದ ಸಂಸತ್ ವರೆಗೆ ಹೊಸ ನಾಯಕತ್ವ ಅಗತ್ಯ : ಸಿಎಂ ಡಿ ಕೆ ಶಿವಕುಮಾರ್..

September 11, 2026
ವಿಜಯೇಂದ್ರ ನೇತೃತ್ವದ ಪಾದಯಾತ್ರೆಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲವೇ?

ವಿಜಯೇಂದ್ರ ನೇತೃತ್ವದ ಪಾದಯಾತ್ರೆಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲವೇ?

September 11, 2026
Next Post
ರಾಜಕೀಯ ಅಧಿಕಾರ ಮತ್ತು ದಲಿತ ಪ್ರಜ್ಞೆ

ರಾಜಕೀಯ ಅಧಿಕಾರ ಮತ್ತು ದಲಿತ ಪ್ರಜ್ಞೆ- ಭಾಗ 2

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada