• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಐಸ್‌ಕ್ರೀಮ್ ಆಸೆ… ಎಡಗಾಲನ್ನೇ ಕಿತ್ತುಕೊಂಡ ಲಾರಿ! ಇಂದು ಕಾಮನ್‌ವೆಲ್ತ್‌ನಲ್ಲಿ ಕರ್ನಾಟಕದ ಮಗಳಿಗೆ ಕಂಚು

ಪ್ರತಿಧ್ವನಿ by ಪ್ರತಿಧ್ವನಿ
July 28, 2026
in Top Story, ಕರ್ನಾಟಕ, ಕ್ರೀಡೆ, ದೇಶ
0
ಐಸ್‌ಕ್ರೀಮ್ ಆಸೆ… ಎಡಗಾಲನ್ನೇ ಕಿತ್ತುಕೊಂಡ ಲಾರಿ! ಇಂದು ಕಾಮನ್‌ವೆಲ್ತ್‌ನಲ್ಲಿ ಕರ್ನಾಟಕದ ಮಗಳಿಗೆ ಕಂಚು
Share on WhatsAppShare on FacebookShare on Telegram
ಐಸ್‌ಕ್ರೀಮ್ ತಿನ್ನುವ ಆಸೆ..ಪುಟ್ಟ ಬಾಲಕಿಯ ಎಡಗಾಲನ್ನು ಕಿತ್ತುಕೊಂಡ ಯಮದೂತ ಲಾರಿ.. ಸಾವನ್ನೇ ಗೆದ್ದ ಹುಡುಗಿಗೆ ಕಾಮನ್‌ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ಪದಕ..ಗ್ಲಾಸ್ಗೋ ಪೋಡಿಯಂನಲ್ಲಿ ಕರುನಾಡಿನ ರೈತನ ಮಗಳ ಕೋಲ್ಮಿಂಚು..!
ಆಕೆಯ ಮುಖದಲ್ಲಿ ಮೂಡಿದ್ದವು ವರ್ಣನೆಗೆ ನಿಲುಕದ ಭಾವತರಂಗಗಳು. ಪದಕದ ಮೆಟ್ಟಿಲೇರಿದಾಗ ಆಕೆಯ ಕಣ್ಣಂಚಿನಲ್ಲಿ ಧಾರೆಯಾಗಿ ಸುರಿಯುತ್ತಿತ್ತು ಆನಂದಬಾಷ್ಪ. ಕೊರಳಿಗೆ ಹಾರವಾಗಿ ಮಿನುಗುತ್ತಿತ್ತು ಆಕೆ ಗೆದ್ದ ಕಂಚಿನ ಪದಕ. ಆಕೆಯ ಹೆಗಲಿನ ಮೇಲೆ ಕಂಗೊಳಿಸುತ್ತಿತ್ತು ಭಾರತದ ರಾಷ್ಟ್ರ ಧ್ವಜ. ಇವು ಕರುನಾಡಿನ ರೈತನ ಮಗಳು ಕಾಮನ್‍ವೆಲ್ತ್ ಗೇಮ್ಸ್ ನ ಪೋಡಿಯಂ ಮೇಲೆ ನಿಂತಾಗ ಕಂಡ ಅದ್ಭುತ ಕ್ಷಣಗಳು.
ಹೌದು, ಆ ಕ್ಷಣವನ್ನು ವರ್ಣಿಸಲು ಅಸಾಧ್ಯ. ಯಾಕಂದ್ರೆ ಅದು ವರ್ಣಮಾಲೆಗಳಿಗೂ ನಿಲುಕದ ಸಂತೋಷದ ಸಮಯ. ಸ್ವತಃ ಅನುಭವಿಸಿದವರಿಗೂ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಾಗದ ಅಪರೂಪದ ಘಳಿಗೆ. ಇಂತಹ ಅವಿಸ್ಮರಣೀಯ ಕ್ಷಣಕ್ಕೆ ಸಾಕ್ಷಿಯಾದವಳು ನಮ್ಮ ಕರ್ನಾಟಕದ ಹೆಮ್ಮೆಯ ಹುಡುಗಿ.ಆಕೆಯ ಹೆಸರು – ಶಿಲ್ಪಾ ಶೈಲಾ.. ಹುಟ್ಟೂರು – ಮೈಸೂರು ಜಿಲ್ಲೆಯ ಕೆ.ಆರ್.ನಗರದ ಕಂಚು ಗಾರನ ಕೊಪ್ಪಲು ಗ್ರಾಮ.
ಗ್ಲಾಸ್ಗೋ ಕಾಮನ್‍ವೆಲ್ಸ್ ಗೇಮ್ಸ್ ನ ಪ್ಯಾರಾ ಅಥ್ಲೇಟಿಕ್ಸ್‍ನ ಮಹಿಳೆಯರ ಎಫ್-57 ವಿಭಾಗದ ಶಾಟ್‍ಪುಟ್‍ನಲ್ಲಿ ಕಂಚು ಗೆದ್ದ ಅಥ್ಲೀಟ್.
ಹಾಗೇ ನೋಡಿದ್ರೆ ನಿಯಮಾನುಸಾರವಾಗಿಯೇ ಶಿಲ್ಪಾ ಶೈಲಾಗೆ ಒಲಿದಿರುವ ಕಂಚಿನ ಪದಕ. 7.26 ಮೀಟರ್ ದೂರ ಎಸೆದು ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದುಕೊಂಡಿದ್ದಳು. ಆದ್ರೆ ನೈಜಿರಿಯಾದ ಯುಚರಿಯಾ ಇಯಾಜಿ ಸ್ಪರ್ಧೆಯಲ್ಲಿ ಅನರ್ಹಗೊಂಡಿದ್ದರಿಂದ ಶಿಲ್ಪಾಗೆ ಕಂಚಿನ ಪದಕ ಲಭಿಸಿತ್ತು.
ಐಸ್‍ಕ್ರೀಮ್ ಆಸೆ.. ಎಡಗಾಲನ್ನೇ ಕಿತ್ತುಕೊಂಡ ಯಮದೂತ ಲಾರಿ..!
ನಾಲ್ಕನೇ ವಯಸ್ಸಿನಲ್ಲಿ ರಸ್ತೆ ಅಪಘಾತದಲ್ಲಿ ಶಿಲ್ಪಾ ಎಡಗಾಲನ್ನು ಕಳೆದುಕೊಂಡಿದ್ದಳು. ಆದ್ರೂ ಎದೆಗುಂದಲಿಲ್ಲ. ಛಲ ಬಿಡಲಿಲ್ಲ. ಕೃತಕ ಕಾಲಿನ ಸಹಾಯದಿಂದ ಆತ್ಮವಿಶ್ವಾಸದಿಂದಲೇ ಸಾಧನೆಯ ಹಾದಿಯಲ್ಲಿ ಹೆಜ್ಜೆ ಹಾಕಿದ್ದಳು. ಓದಿನಲ್ಲೂ ಬುದ್ಧಿವಂತೆಯಾಗಿದ್ದ ಶೈಲಾ ಡಬಲ್ ಡಿಗ್ರಿಯನ್ನು ಪಡೆದುಕೊಂಡಿದ್ದಾಳೆ. ಅಲ್ಲದೆ ಮೈಸೂರಿನಲ್ಲಿ ಶಿಕ್ಷಕಿಯಾಗಿಯೂ ಸೇವೆ ಸಲ್ಲಿಸಿದ್ದಳು.
ಆರಂಭದಲ್ಲಿ ಸಿಟ್ಟಿಂಗ್ ವಾಲಿಬಾಲ್ ಆಡುತ್ತಿದ್ದ ಶಿಲ್ಪಾ, ರಾಜ್ಯ ತಂಡವನ್ನು ಪ್ರತಿನಿಧಿಸಿದ್ದಳು. ಬಳಿಕ ಕೋಚ್‍ಗಳ ಸಲಹೆಯಂತೆ ಶಾಟ್‍ಪುಟ್, ಜಾವೆಲಿನ್, ಡಿಸ್ಕಸ್ ತ್ರೋ ಕಡೆಗೆ ಗಮನ ಹರಿಸಿದ್ದಳು. ಹೆಚ್ಚಿನ ತರಬೇತಿಗಾಗಿ ಉದ್ಯೋಗಕ್ಕೆ ರಾಜೀನಾಮೆ ಕೊಟ್ಟು ಬೆಂಗಳೂರಿನಲ್ಲಿ ಅಭ್ಯಾಸ ನಡೆಸುತ್ತಿದ್ದಳು. ಹಾಗೇ ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಪ್ಯಾರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕಗಳನ್ನು ಗೆದ್ದುಕೊಂಡಿದ್ದಳು. ಇದೀಗ ಚೊಚ್ಚಲ ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಕಂಚಿನ ನಗೆ ಬೀರಿದ್ದಾಳೆ.
“ನನ್ನ ಖುಷಿಗೆ ಇತಿಮಿತಿಯೇ ಇಲ್ಲ. ನನಗೆ ಹೇಗೆ ಅನ್ನಿಸುತ್ತಿದೆ ಎಂಬುದನ್ನು ವರ್ಣಿಸಲು ಸಾಧ್ಯವಿಲ್ಲ. ಇದು ನನ್ನ ಮೊದಲ ಕಾಮನ್‍ವೆಲ್ತ್ ಗೇಮ್ಸ್.. ಮೊದಲ ಸ್ಪರ್ಧೆಯಲ್ಲಿ ಕಂಚಿನ ಪದಕ ಸಿಕ್ಕಿದೆ. ಈ ಕ್ಷಣವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ” ಎಂದು ಶಿಲ್ಪಾ ಭಾವುಕಳಾಗಿ ಹೇಳಿದ್ದಾಳೆ.
ನನಗೆ ಸಹಕರಿಸಿದ ಹಾಗೂ ಬೆಂಬಲಿಸಿದ ಪ್ರತಿಯೊಬ್ಬರಿಗೂ ಧನ್ಯವಾದಗಳು. ಪ್ಯಾರಾ ಕ್ರೀಡೆಗೆ ಪರಿಚಯಿಸಿ ನನ್ನ ಬದುಕಿನ ದಿಕ್ಕನ್ನೇ ಬದಲಾಯಿಸಿದ್ದು ಸ್ನೇಹಿತೆ ಗೀತಾ. ಅವಳ ಬೆಂಬಲ, ಪ್ರೋತ್ಸಾಹಕ್ಕೆ ಚಿರಋಣಿಯಾಗಿದ್ದೇನೆ. ಇನ್ನು, ಸತ್ಯಪಾಲ್ ಸರ್ ನನಗೆ ಬಹಳಷ್ಟು ಸಹಾಯ ಮಾಡಿದ್ದಾರೆ. ಹಾಗೇ ತರಬೇತುದಾರರಾದ ಎಸ್.ಡಿ.ಈಶನ್ ಸರ್, ರಾಘವೇಂದ್ರ ಸರ್ ಹಾಗೂ ಮುಖ್ಯ ತರಬೇತುದಾರರಾದ ಸತ್ಯನಾರಾಯಣ ಸರ್, ಪುಷ್ಪಾ ಮೇಡಮ್ ಅವರ ಮಾರ್ಗದರ್ಶನ, ಪ್ರೇರಣೆ, ಸ್ಪೂರ್ತಿ ನೀಡಿರುವುದನ್ನು ಮರೆಯಲು ಸಾಧ್ಯವಿಲ್ಲ ಅಂತಾಳೆ ಶಿಲ್ಪಾ ಶೈಲಾ.
“ಅದು 1993. ಅಂಗಡಿಯಿಂದ ಐಸ್ ಕ್ರೀಮ್ ಪಡೆದು ಮನೆಯ ಕಡೆಗೆ ಓಡುತ್ತಿದ್ದಾಗ, ಯಮದೂತನಂತೆ ಬಂದ ಲಾರಿಯೊಂದು ಆಕೆಯ ಎಡಗಾಲನ್ನು ಜಖಂಗೊಳಿಸಿತ್ತು. ಕಾಲನ್ನು ಕಳೆದುಕೊಂಡ ನಂತರ ಆಕೆ ಪಡುತ್ತಿದ್ದ ನೋವು, ವೇದನೆಯನ್ನು ನಮ್ಮ ಕಣ್ಣಿಂದ ನೋಡಲು ಆಗುತ್ತಿರಲಿಲ್ಲ. ನಾಲ್ಕೈದು ವರ್ಷದ ಪುಟಾಣಿ ಬಾಲೆ ಆ ನೋವನ್ನು ಹೇಗೆ ಸಹಿಸಿಕೊಂಡಿತ್ತೋ ಗೊತ್ತಿಲ್ಲ. ಕೆಲವೊಂದು ಬಾರಿ ಅನ್ನಿಸುತ್ತಿತ್ತು. ಈ ನರಕಯಾತನೆ ಅನುಭವಿಸುವ ಬದಲು ಸಾ****ತ್ತಿದ್ದರೆ ಒಳ್ಳೆಯದಿತ್ತು ಅಂತ. ನಾವು ರೈತರು. ಆಕೆಯ ವೈದ್ಯಕೀಯ ವೆಚ್ಚವನ್ನು ಭರಿಸಲು ಸಾಕಷ್ಟು ಪರದಾಟ ನಡೆಸಿದ್ದೇವು. ಅಲ್ಲದೆ ಶಾಲೆಗೆ ಎತ್ತಿಕೊಂಡು ಹೋಗುತ್ತಿದ್ದೇವು. ಅವಳ ಸಂಕಟ ಮನಸ್ಸಿಗೆ ಘಾಸಿಯನ್ನುಂಟು ಮಾಡುತ್ತಿತ್ತು. ಆದರೆ ಅವಳು ನಮಗೆ ಯಾವತ್ತೂ ಭಾರ ಆಗಿರಲಿಲ್ಲ. ಹಠಮಾರಿಯಾಗಿದ್ದ ಶಿಲ್ಪಾ ತುಂಬಾ ಧೈರ್ಯವಂತೆ. ತಾನು ಅಂದುಕೊಂಡಿರುವುದನ್ನು ಸಾಧಿಸುವ ಛಲ ಆಕೆಯಲ್ಲಿತ್ತು. ಹಾಗಾಗಿಯೇ ಇವತ್ತು ಅವಳು ಈ ಮಟ್ಟಕ್ಕೆ ಏರಿದ್ದಾಳೆ” ಅಂತ ಹೆಮ್ಮೆಯಿಂದ ಹೇಳ್ತಾರೆ ಶಿಲ್ಪಾ ತಾಯಿ ಶಾಂತ.
ಇನ್ನು ಶಿಲ್ಪಾ ಕೃತಕ ಕಾಲಿನ ನೆರವಿನಿಂದ ಅಭ್ಯಾಸ ನಡೆಸುತ್ತಿದ್ದಾಳೆ. ಎಡಗಾಲಿಗೆ ಶಕ್ತಿ ನೀಡುತ್ತಿರುವುದು ಜೈಪುರ ಫುಟ್. ಸಾಮಾನ್ಯವಾಗಿ ಪ್ಯಾರ ಅಥ್ಲೀಟ್‍ಗಳು ದುಬಾರಿ ಮೊತ್ತದ ಕೃತಕ ಕಾಲುಗಳನ್ನು ಬಳಸಿಕೊಂಡು ಸ್ಪರ್ಧೆ ಮಾಡುತ್ತಾರೆ. ಆದ್ರೆ ಆರ್ಥಿಕ ತೊಂದರೆಯಿಂದ ಶಿಲ್ಪಾಗೆ ಯಾವುದೇ ರೀತಿ ಅತ್ಯಾಧುನಿಕ ಮಾದರಿಯ ಸೌಲಭ್ಯಗಳು ಸಿಗಲಿಲ್ಲ. ಗುಣಮಟ್ಟದ ಕೃತಕ ಕಾಲನ್ನ ಪಡೆಯಲು ಸಾಧ್ಯವಾಗಲಿಲ್ಲ. ಆದ್ರೆ ಇವತ್ತು ಜೈಪುರ ಫುಟ್‍ನಲ್ಲೇ ಅಂತಾರಾಷ್ಟ್ರೀಯ ಸ್ಪರ್ಧಿಯಾಗಿ ಹಲವು ಪದಕಗಳನ್ನು ಗೆದ್ದಿದ್ದಾಳೆ.
ಒಟ್ಟಿನಲ್ಲಿ ಶಿಲ್ಪಾ ಶೈಲಾ ಅವರ ನೈಜ ಕಥೆ ಕೇವಲ ಕಂಚಿನ ಪದಕದ ಕಥೆಯಲ್ಲ. ಸಾವು -ನೋವನ್ನು ಗೆದ್ದ ಹೋರಾಟದ ಕಥೆ. ರೈತನ ಮಗಳಾಗಿ, ಶಿಕ್ಷಕಿಯಾಗಿ, ಪ್ಯಾರಾ ಅಥ್ಲೀಟ್ ಆಗಿ ತನ್ನ ಬದುಕನ್ನು ತಾನೇ ರೂಪಿಸಿಕೊಂಡ ಗಟ್ಟಿಗಿತ್ತಿಯ ಕಥೆ. ಕಾಲು ಕಳೆದುಕೊಂಡರೂ ಕನಸುಗಳನ್ನು ಕಳೆದುಕೊಳ್ಳಲಿಲ್ಲ. ಸೌಲಭ್ಯಗಳು ಇಲ್ಲದಿದ್ರೂ ಸಾಧಿಸುವ ಹಠ, ಛಲವನ್ನು ಕೈಬಿಡಲಿಲ್ಲ. ಶಿಲ್ಪಾ ಸಾಧನೆಗೆ ಒಂದು ಸಲಾಂ..!
 ವಿಶೇಷ ವರದಿ: ಸನತ್ ರೈ.
ADVERTISEMENT
Previous Post

ಬಡತನದ ಹಾದಿಯಿಂದ ಪದಕದ ವೇದಿಕೆಗೆ: ಭಾರತಕ್ಕೆ ಬೆಳ್ಳಿ ತಂದ ರಿಷಿಕಾಂತ್ ಸಿಂಗ್ ಯಶೋಗಾಥೆ

Next Post

EXclusive : ಕೃಷ್ಣ ಭೈರೇಗೌಡ್ರೇ ಇಲ್ನೋಡಿ ಅಪಾಯಕ್ಕೆ ಆಹ್ವಾನ ನೀಡ್ತಿದೆ ಗುಂಡಿ : ಪ್ರತಿಷ್ಠಿತ ಹೋಟೆಲ್‌ ಮುಂದೆ ಅವ್ಯವಸ್ಥೆ..!

Related Posts

ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ
ಕರ್ನಾಟಕ

ಮಹಿಳೆಯರ ಆರೋಗ್ಯಕ್ಕೆ ರಾಜ್ಯ ಸರ್ಕಾರದ ಹೊಸ ಹೆಜ್ಜೆ: ‘ಋತುತಾರೆ’ ಯೋಜನೆಗೆ ಚಾಲನೆ

by ಪ್ರತಿಧ್ವನಿ
August 5, 2026
0

ಮಹಿಳೆಯರ ಆರೋಗ್ಯ ಮತ್ತು ಋತುಬಂಧ (ಮೆನೋಪಾಸ್) ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, 'ಋತುತಾರೆ' ಎಂಬ ವಿಶೇಷ ಯೋಜನೆಯನ್ನು ಆರಂಭಿಸಿದೆ. ಮಹಿಳೆಯರು...

Read moreDetails
ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

ನೂತನ ಸಚಿವರು, ಶಾಸಕರಿಗೆ ಕೊಠಡಿ ಹಂಚಿಕೆ: ಯಾರು ಯಾವ ರೂಮ್ ಪಡೆದರು? ಇಲ್ಲಿದೆ ಸಂಪೂರ್ಣ ಪಟ್ಟಿ

August 5, 2026
 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

 ‘ಜಸ್ಟಿಸ್ ಫಾರ್ ಮಾನಸ’ ಅಭಿಯಾನ ಆರಂಭ:ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಹೋರಾಟ

August 5, 2026
ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

ವಿದ್ಯಾರ್ಥಿಗಳ ವಿರುದ್ಧ ಪ್ರಭುತ್ವ-ಕಲಿಯಬೇಕಾದ ಪಾಠಗಳು

August 5, 2026
ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

ಕೆಂಪು ಸಮುದ್ರದಲ್ಲಿ ಭಾರತೀಯ ಹಡಗಿನ ಮೇಲೆ ದಾಳಿ!

August 5, 2026
Next Post
EXclusive : ಕೃಷ್ಣ ಭೈರೇಗೌಡ್ರೇ ಇಲ್ನೋಡಿ ಅಪಾಯಕ್ಕೆ ಆಹ್ವಾನ ನೀಡ್ತಿದೆ ಗುಂಡಿ : ಪ್ರತಿಷ್ಠಿತ ಹೋಟೆಲ್‌ ಮುಂದೆ ಅವ್ಯವಸ್ಥೆ..!

EXclusive : ಕೃಷ್ಣ ಭೈರೇಗೌಡ್ರೇ ಇಲ್ನೋಡಿ ಅಪಾಯಕ್ಕೆ ಆಹ್ವಾನ ನೀಡ್ತಿದೆ ಗುಂಡಿ : ಪ್ರತಿಷ್ಠಿತ ಹೋಟೆಲ್‌ ಮುಂದೆ ಅವ್ಯವಸ್ಥೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada